ಗೌಡ್ರ ಕುಟುಂಬ ರಾಜಕಾರಣಕ್ಕೆ ನೆಟ್ಟಿಗರ ಪೆಟ್ಟು 

Team Udayavani, Mar 6, 2019, 7:25 AM IST

gowdra.jpg

ಮಂಡ್ಯ: ಲೋಕಸಭಾ ಚುನಾವಣೆ ಹತ್ತಿರದಲ್ಲಿರುವಾಗಲೇ ದೇವೇಗೌಡರ ಕುಟುಂಬ ರಾಜಕಾರಣ ಪ್ರಮುಖ ರಾಜಕೀಯ ವಿಷಯವಾಗಿ ಎಲ್ಲೆಡೆ ಚರ್ಚೆಗೆ ಗ್ರಾಸವಾಗಿದೆ. ದೇವೇಗೌಡರ ರಾಜಕೀಯ ವೃಕ್ಷ, ವೋಟ್‌ ಫಾರ್‌ ಫ್ಯಾಮಿಲಿ ಸೇರಿದಂತೆ ಹಲವು ರೀತಿಯ ವ್ಯಂಗ್ಯ ಚಿತ್ರಗಳು ವಾಟ್ಸ್‌ ಆ್ಯಪ್‌, ಫೇಸ್‌ಬುಕ್‌, ಟ್ವಿಟರ್‌ ಸೇರಿದಂತೆ ಸಾಮಾಜಿಕ ಜಾಲ ತಾಣಗಳಲ್ಲಿ ಹರಿದಾಡುತ್ತಿವೆ.

ಗೌಡರ ಕುಟುಂಬದ ಅಧಿಕಾರ ವ್ಯಾಮೋಹ ಬಿಂಬಿಸುವಂತಹ ಚಿತ್ರಾವಳಿಗಳು ಮನರಂಜನೆ ನೀಡುತ್ತಿವೆ. ಚುನಾವಣೆ ಸಮಯದಲ್ಲಿ ದೇವೇಗೌಡರ ಕುಟುಂಬ ರಾಜಕಾರಣದ ವಿಷಯವನ್ನು ರಾಜಕೀಯವಾಗಿ ಎದುರಿಸುವುದು ಪಕ್ಷದ ಸ್ಥಳೀಯ ನಾಯಕರಿಗೂ ದೊಡ್ಡ ಸವಾಲಾಗಿ ಪರಿಣಮಿಸಿದೆ.

ಲೋಕಸಭಾ ಸದಸ್ಯ ಸ್ಥಾನದಲ್ಲಿ ದೇವೇಗೌಡರು, ಸಿಎಂ ಹುದ್ದೆಯಲ್ಲಿ ಎಚ್‌.ಡಿ.ಕುಮಾರಸ್ವಾಮಿ, ಸಚಿವ ಸ್ಥಾನದಲ್ಲಿ ಎಚ್‌.ಡಿ.ರೇವಣ್ಣ, ಅನಿತಾ ಶಾಸಕಿಯಾಗಿಯೂ ಹಾಗೂ ಭವಾನಿ ಜಿಪಂ ಸದಸ್ಯರಾಗಿರುವ ಸಂದರ್ಭದಲ್ಲೇ ಗೌಡರ ಮೊಮ್ಮಕ್ಕಳಾದ ಪ್ರಜ್ವಲ್‌ ಹಾಗೂ ನಿಖೀಲ್‌ ಒಟ್ಟಿಗೆ ರಾಜಕೀಯ ಪ್ರವೇಶ ಪಡೆಯುತ್ತಿರುವುದು ಕಾಂಗ್ರೆಸ್‌ ಹಾಗೂ ಬಿಜೆಪಿ ನಾಯಕರ ಕಣ್ಣನ್ನು ಕೆಂಪಗಾಗಿಸಿದೆ. ಅಲ್ಲದೆ, ಜೆಡಿಎಸ್‌ ಪಕ್ಷದ ಆಂತರಿಕ ವಲಯದಲ್ಲೇ ಮೊಮ್ಮಕ್ಕಳ ಸ್ಪರ್ಧೆಗೆ ಅತೃಪ್ತಿ, ಅಸಮಾಧಾನ ವ್ಯಕ್ತವಾಗಿದೆ.

ವ್ಯಂಗ್ಯಭರಿತ ಮಾತು: ದೇವೇಗೌಡರು ರಾಷ್ಟ್ರಪತಿ, ಕುಮಾರಸ್ವಾಮಿ ಪ್ರಧಾನಿ, ರೇವಣ್ಣ ಕೇಂದ್ರ ಗೃಹಮಂತ್ರಿ, ನಿಖೀಲ್‌ ಮುಖ್ಯಮಂತ್ರಿ, ಪ್ರಜ್ವಲ್‌ ಉಪ ಮುಖ್ಯಮಂತ್ರಿ, ಸೂರಜ್‌ ರಾಜ್ಯ ಗೃಹಮಂತ್ರಿ, ಅನಿತಾ ಕುಮಾರಸ್ವಾಮಿ ಉಪಪ್ರಧಾನಿ ದೇವೇಗೌಡರ ಮಗಳ ಮಕ್ಕಳು ಮಂತ್ರಿಯಾಗುವವರೆಗೂ ಜೆಡಿಎಸ್‌ ಕಾರ್ಯಕರ್ತರೇ ಏಳಿ ಎದ್ದೇಳಿ ನಿದ್ದೆ ಬಿಟ್ಟು ಕೈಯ್ಯಲ್ಲಿರುವ ಅಲ್ಪಸ್ವಲ್ಪ ಹಣವನ್ನು ಖಾಲಿ ಮಾಡಿ ಮನೆಯವರನ್ನು ಉಪವಾಸ ಕೆಡವಿ ಗೌಡರ ಕುಟುಂಬದ ರಾಜಕೀಯ ಏಳ್ಗೆಗೆ ಹೋರಾಡೋಣ ಎಂದೆಲ್ಲಾ ವಿಶ್ಲೇಷಣೆಯ ಕುಹಕವಾಡುತ್ತಾ ವ್ಯಂಗ್ಯಭರಿತ ಮಾತುಗಳಿಂದ ಚುಚ್ಚಿದ್ದಾರೆ.

ವೃಕ್ಷ ಚೆನ್ನಾಗಿ ಬೆಳೆಸಿ: ಜೆಡಿಎಸ್‌ ಪಕ್ಷದೊಳಗೆ ಅಥವಾ ಸಮ್ಮಿಶ್ರ ಸರ್ಕಾರದಲ್ಲಿ ವೃಕ್ಷದೊಳಗೆ ಮೂರ್‍ನಾಲ್ಕು ಸ್ಥಾನ ಖಾಲಿ ಇದೆ. ನನಗೆ ಸಿಕ್ಕರೂ ಸಿಗಬಹುದು ಎಂದು ಕನಸು ಕಾಣಬೇಡ. ಅದು ನನ್ನ ಮೊಮ್ಮಕ್ಕಳ ಹೆಂಡತಿ, ಮಕ್ಕಳಿಗೆ ಮೀಸಲಿಟ್ಟಿದ್ದೇವೆ. ನೀವು ವೃಕ್ಷಕ್ಕೆ ಚೆನ್ನಾಗಿ ನೀರೆರೆದು ಬೆಳೆಸಿ ಎಂಬ ವ್ಯಂಗ್ಯ ಚಿತ್ರಗಳು ಟ್ರೋಲ್‌ ಆಗಿ ಎಲ್ಲೆಡೆ ಹರಿದಾಡುತ್ತಿವೆ.

ಸಾರ್ವಜನಿಕ ವಲಯದಲ್ಲೂ ಕುಟುಂಬ ರಾಜಕಾರಣದ ಬಗ್ಗೆ ಸಾಕಷ್ಟು ಚರ್ಚೆಯಾಗುತ್ತಿದೆ. ಈ ಹಿಂದಿನ ಯಾವುದೇ ಚುನಾವಣೆ ಸಂದರ್ಭದಲ್ಲೂ ಗೌಡರ ಕುಟುಂಬದ ರಾಜಕೀಯ ವಿಷಯವಾಗಿ ಈ ಮಟ್ಟಿನ ಚರ್ಚೆಗಳು ನಡೆದಿರಲಿಲ್ಲ. ಆದರೆ, ಈಗ ಗೌಡರ ಕುಟುಂಬ ರಾಜಕಾರಣವನ್ನೇ ಪ್ರಮುಖ ಅಸ್ತ್ರವನ್ನಾಗಿ ಬಳಸಿಕೊಂಡು ಜೆಡಿಎಸ್‌ ಅನ್ನು ಮಂಡ್ಯ ಕ್ಷೇತ್ರದಲ್ಲಿ ನೆಲಕಚ್ಚುವಂತೆ ಮಾಡಲು ವಿರೋಧಿ ಗುಂಪಿನವರು ಪೂರ್ವ ತಯಾರಿ ಆರಂಭಿಸಿದಂತೆ ಕಂಡುಬರುತ್ತಿದ್ದಾರೆ. 

ಹಾಸನದಲ್ಲಿ ಪ್ರಜ್ವಲ್‌ ಹಾಗೂ ಮಂಡ್ಯದಲ್ಲಿ ನಿಖೀಲ್‌ ಯಾವ ಕಾರಣಕ್ಕೂ ಲೋಕಸಭೆ ಪ್ರವೇಶಿಸದಂತೆ ತಡೆಯಲು ಮೈತ್ರಿ ವಿರೋಧಿ ಗುಂಪಿನ ಕಾಂಗ್ರೆಸ್‌ ನಾಯಕರು ಹಾಗೂ ಬಿಜೆಪಿಯವರು ಆರಂಭದಲ್ಲೇ ಜೆಡಿಎಸ್‌ಗೆ ಕಡಿವಾಣ ಹಾಕಲು ನಿರ್ಧರಿಸಿ ಸಾಮಾಜಿಕ ಜಾಲ ತಾಣಗಳನ್ನು ಕುಟುಂಬ ರಾಜಕಾರಣದ ಟ್ರೋಲ್‌ಗ‌ಳನ್ನು ಹರಿಯಬಿಟ್ಟು ಜನಮಾನಸದಲ್ಲಿ ಜೆಡಿಎಸ್‌ ವಿರೋಧಿ ಭಾವನೆ ಹುಟ್ಟುಹಾಕುವ ಪ್ರಯತ್ನ ನಡೆಸುತ್ತಿದ್ದಾರೆ ಎಂದು ಹೇಳಲಾಗಿದೆ.

ಟಾಪ್ ನ್ಯೂಸ್

BGT 2024: Aussie squad announced for remaining two matches: Aussies make three changes

BGT 2024: ಉಳಿದೆರಡು ಪಂದ್ಯಗಳಿಗೆ ಆಸೀಸ್‌ ತಂಡ ಪ್ರಕಟ: ಮೂರು ಬದಲಾವಣೆ ಮಾಡಿದ ಆಸ್ಟ್ರೇಲಿಯಾ

Parcel: ಮಹಿಳೆಯ ಮನೆಗೆ ಬಂದ ಪಾರ್ಸೆಲ್ ನಲ್ಲಿತ್ತು ಮೃತದೇಹ… 1.3 ಕೋಟಿ ರೂ.ಗೆ ಬೇಡಿಕೆ

Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !

Mandya: ಬ್ರಹ್ಮ, ಶಿವನ ಪೂಜಿಸುವ ಏಕೈಕ ದೇಗುಲ ಬ್ರಹ್ಮಲಿಂಗೇಶ್ವರ

Mandya: ಬ್ರಹ್ಮ, ಶಿವನ ಪೂಜಿಸುವ ಏಕೈಕ ದೇಗುಲ ಬ್ರಹ್ಮಲಿಂಗೇಶ್ವರ

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

25-kota

CT Ravi ಬಂಧನ ಪ್ರಕರಣ; ಗೃಹ ಸಚಿವರು ಸ್ಪಷ್ಟನೆ ನೀಡಲಿ: ಕೋಟ

Mandya:ಕನ್ನಡ ಸಾಹಿತ್ಯ ಸಮ್ಮೇಳನ-ಕನ್ನಡ ಸಂಕಷ್ಟದಲ್ಲಿದೆ ಎಂಬುದಕ್ಕೆ ಕಾರಣ ತಿಳಿಯಬೇಕು: ಸಿಎಂ

Mandya:ಕನ್ನಡ ಸಾಹಿತ್ಯ ಸಮ್ಮೇಳನ-ಕನ್ನಡ ಸಂಕಷ್ಟದಲ್ಲಿದೆ ಎಂಬುದಕ್ಕೆ ಕಾರಣ ತಿಳಿಯಬೇಕು: ಸಿಎಂ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya:ಟಿಪ್ಪು ಆಳ್ವಿಕೆ- ಪ್ರವಾಸಿಗರ ಕಣ್ಮನ ಸೆಳೆಯುವ ಜಾಮೀಯಾ ಮಸೀದಿ, ಬೇಸಿಗೆ ಅರಮನೆ

Mandya:ಟಿಪ್ಪು ಆಳ್ವಿಕೆ- ಪ್ರವಾಸಿಗರ ಕಣ್ಮನ ಸೆಳೆಯುವ ಜಾಮೀಯಾ ಮಸೀದಿ, ಬೇಸಿಗೆ ಅರಮನೆ

Mandya: ಬ್ರಹ್ಮ, ಶಿವನ ಪೂಜಿಸುವ ಏಕೈಕ ದೇಗುಲ ಬ್ರಹ್ಮಲಿಂಗೇಶ್ವರ

Mandya: ಬ್ರಹ್ಮ, ಶಿವನ ಪೂಜಿಸುವ ಏಕೈಕ ದೇಗುಲ ಬ್ರಹ್ಮಲಿಂಗೇಶ್ವರ

Mandya:ಕನ್ನಡ ಸಾಹಿತ್ಯ ಸಮ್ಮೇಳನ-ಕನ್ನಡ ಸಂಕಷ್ಟದಲ್ಲಿದೆ ಎಂಬುದಕ್ಕೆ ಕಾರಣ ತಿಳಿಯಬೇಕು: ಸಿಎಂ

Mandya:ಕನ್ನಡ ಸಾಹಿತ್ಯ ಸಮ್ಮೇಳನ-ಕನ್ನಡ ಸಂಕಷ್ಟದಲ್ಲಿದೆ ಎಂಬುದಕ್ಕೆ ಕಾರಣ ತಿಳಿಯಬೇಕು: ಸಿಎಂ

6-mandya

Mandya; ಸಕ್ಕರೆ ನಾಡಿನಲ್ಲಿ ಇಂದಿನಿಂದ  87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನ

11-

ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Mandya:ಟಿಪ್ಪು ಆಳ್ವಿಕೆ- ಪ್ರವಾಸಿಗರ ಕಣ್ಮನ ಸೆಳೆಯುವ ಜಾಮೀಯಾ ಮಸೀದಿ, ಬೇಸಿಗೆ ಅರಮನೆ

Mandya:ಟಿಪ್ಪು ಆಳ್ವಿಕೆ- ಪ್ರವಾಸಿಗರ ಕಣ್ಮನ ಸೆಳೆಯುವ ಜಾಮೀಯಾ ಮಸೀದಿ, ಬೇಸಿಗೆ ಅರಮನೆ

BGT 2024: Aussie squad announced for remaining two matches: Aussies make three changes

BGT 2024: ಉಳಿದೆರಡು ಪಂದ್ಯಗಳಿಗೆ ಆಸೀಸ್‌ ತಂಡ ಪ್ರಕಟ: ಮೂರು ಬದಲಾವಣೆ ಮಾಡಿದ ಆಸ್ಟ್ರೇಲಿಯಾ

Parcel: ಮಹಿಳೆಯ ಮನೆಗೆ ಬಂದ ಪಾರ್ಸೆಲ್ ನಲ್ಲಿತ್ತು ಮೃತದೇಹ… 1.3 ಕೋಟಿ ರೂ.ಗೆ ಬೇಡಿಕೆ

Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !

KD

Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್‌

Mandya: ಬ್ರಹ್ಮ, ಶಿವನ ಪೂಜಿಸುವ ಏಕೈಕ ದೇಗುಲ ಬ್ರಹ್ಮಲಿಂಗೇಶ್ವರ

Mandya: ಬ್ರಹ್ಮ, ಶಿವನ ಪೂಜಿಸುವ ಏಕೈಕ ದೇಗುಲ ಬ್ರಹ್ಮಲಿಂಗೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.