ಪ್ರಧಾನಿ ಶ್ರಮಯೋಗಿ ಯೋಜನೆ ಸದ್ಬಳಕೆಯಾಗಲಿ
Team Udayavani, Mar 6, 2019, 7:28 AM IST
ವಿಜಯಪುರ: ಜಿಲ್ಲಾ ಅಸಂಘಟಿತ ಕೂಲಿ ಕಾರ್ಮಿಕರು, ಬಡತನ ರೇಖೆಗಿಂತ ಕೆಳಗಿರುವ ಕಾರ್ಮಿಕರು ಆರ್ಥಿಕವಾಗಿ ಸಬಲರಾಗಲು ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಶ್ರಮಯೊಗಿ ಮನ-ಧನ ಯೋಜನೆ ಸಹಕಾರಿಯಾಗಿದೆ ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.
ಮಂಗಳವಾರ ನಗರದ ಕಾರ್ಮಿಕ ಸಮುದಾಯ ಭವನದಲ್ಲಿ ಅಸಂಘಟಿತ ಕಾರ್ಮಿಕರ ಪಿಂಚಣಿ ಯೋಜನೆಯ ಸೌಲಭ್ಯ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ದೇಶದಲ್ಲಿ ಬಡತನ ಹೋಗಲಾಡಿಸಲು ಇಂತಹ ಅತ್ಯುತ್ತಮ ಯೋಜನೆಗಳ ಅವಶ್ಯಕತೆ ಇದೆ. ಅರ್ಹ ಅಸಂಘಟಿತ ಬಡ ಕಾರ್ಮಿಕರಿಗೆ ನೇರವಾಗಿ ಸೌಲಭ್ಯ ತಲುಪಲು ಪ್ರಧಾನಿಗಳ ಯೋಜನೆ ಸಹಕಾರಿಯಾಗಿವೆ ಎಂದರು.
ಇದಲ್ಲದೇ ಪ್ರಧಾನ ಮಂತ್ರಿ ಜನಧನ್ ಯೋಜನೆ, ಜನ ಔಷಧಿ ಯೋಜನೆ , ಪ್ರಧಾನ ಮಂತ್ರಿ ಕೌಶಲ್ಯ ಅಭಿವೃದ್ಧಿ ಯೋಜನೆ ಇನ್ನೂ ಮುಂತಾದ ಯೋಜನೆಗಳು ಬಡವರ ಹಿತರಕ್ಷಣೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ ಎಂದರು.
ಪ್ರಧಾನ ಮಂತ್ರಿಗಳ ಯೋಜನೆಗಳು ಬಡವರ ಪರವಾಗಿದ್ದು ಕೂಲಿಕಾರ್ಮಿಕರು ವಿಕಲಚೇತನರು, ವಿಧವೆಯರು, ಮುಂತಾದ ಅಸಂಘಟಿತರು ಎಲ್ಲರಂತೆ ಉತ್ತಮ ಜೀವನ ನಡೆಸಲು ಸರ್ವೋತೋಮುಖ ಅಭಿವೃದ್ಧಿಗೆ ಸಹಕಾರಿಯಾಗಿವೆ.
ಈ ನಿಟ್ಟಿನಲ್ಲಿ ಬಡವರು ಅಧಿಕಾರಿಗಳ ಬಳಿ ಸಹಕಾರಕ್ಕಾಗಿ ಬಂದರೆ ತಾತ್ಸಾರ ಮನೋಭಾವದಿಂದ ನೋಡಿದರೆ ಅಂತಹ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಹೇಳಿದರು.
ಸಹಾಯಕ ಭವಿಷ್ಯನಿಧಿ ಆಯುಕ್ತ ಪಿ.ಗೋಪಾಲಸಿಂಗ್ ಮಾತನಾಡಿ, ಅಸಂಘಟಿತ ಕಾರ್ಮಿಕರಿಗೆ 60 ವರ್ಷದ ನಂತರ ತಿಂಗಳಿಗೆ 3000 ರೂ. ಪಿಂಚಣಿ ನೀಡುವ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಗೆ ದೇಶಾದ್ಯಂತ ನೋಂದಣಿ ಆರಂಭವಾಗಿದ್ದು, ಪ್ರಧಾನ ಮಂತ್ರಿ ಶ್ರಮಯೋಗಿ ಮಾನ್-ಧನ್ (ಪಿಎಂಎಸ್‌ವೈಎಂ) ಹೆಸರಿನ ಈ ಯೋಜನೆಗೆ ದೇಶದಲ್ಲೆಡೆ ಇರುವ 3.13 ಲಕ್ಷ ಸರ್ವ ಸೇವಾ ಕೇಂದ್ರಗಳಲ್ಲಿ ಕಾರ್ಮಿಕರು ನೋಂದಣಿ ಮಾಡಿಸಿಕೊಳ್ಳಬಹುದು.
18ರಿಂದ 40 ವರ್ಷದ ನಡುವಿನ ಮನೆಗೆಲಸದವರು, ಬೀದಿ ಬದಿ ವ್ಯಾಪಾರಿಗಳು, ಬಿಸಿಯೂಟದ ಕೆಲಸದವರು, ಚರ್ಮಕಾರರು, ಇಟ್ಟಿಗೆ-ಗಾರೆ ಕೆಲಸದವರು, ಚರ್ಮಕಾರರು, ಚಿಂದಿ ಆಯುವವರು, ಅಗಸರು, ರಿಕ್ಷಾ ಎಳೆಯುವರು, ಭೂರಹಿತ ಕಾರ್ಮಿಕರು, ಕೃಷಿ ಕಾರ್ಮಿಕರು ಕಟ್ಟಡ ಕಾರ್ಮಿಕರು ಹೀಗೆ ಎಲ್ಲ ಬಗೆಯ ಅಸಂಘಟಿತ ಕಾರ್ಮಿಕರು ಈ ಯೋಜನೆಗೆ ಅರ್ಹರಾಗಿದ್ದಾರೆ. ಕಾರ್ಮಿಕರು ತಮ್ಮ ಆಧಾರ್ ಕಾರ್ಡ್, ಬ್ಯಾಂಕ್ ಉಳಿತಾಯ ಖಾತೆ ಪಾಸ್‌ಬುಕ್ ತೆಗೆದುಕೊಂಡು ಸರ್ವ ಸೇವಾ ಕೇಂದ್ರಗಳಿಗೆ ತೆರಳಿ ನೋಂದಣಿ ಮಾಡಿಸಿಕೊಳ್ಳಬಹುದು ಎಂದರು.
ಇದೇ ವೇಳೆ ಅರ್ಹ ಕೆಲ ಕಾರ್ಮಿಕರಿಗೆ ಪಿಂಚಣಿ ನೊಂದಣಿ ಕಾರ್ಡ್ ವಿತರಿಸಲಾಯಿತು. ಜಗದೇವಿ, ಪ್ರಭುಗೌಡ ಪಾಟೀಲ, ಅಶೋಕ ಬಾಳಿಕಟ್ಟಿ, ಅರುಣಕುಮಾರ, ಶ್ರೀಧರ, ಅಜೇಜಾ ಕುಮಾರ, ವಿಜಯಕುಮಾರ ಸೇರಿದಂತೆ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Kumble: ಹೆತ್ತವರನ್ನೇ ಕೊಠಡಿಯಲ್ಲಿ ಕೂಡಿ ಹಾಕಿದ ಪುತ್ರಿ
Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ
Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ
Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್ 8, ಬಿಜೆಪಿ 3, ಪಕ್ಷೇತರ 1
Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.