ಕೋರ್ಟ್ ನಿಗಾವಣೆಯ ಅಯೋಧ್ಯೆ ಮಧ್ಯಸ್ಥಿಕೆ: ಆದೇಶ ಕಾದಿರಿಸಿದ ಸುಪ್ರೀಂ
Team Udayavani, Mar 6, 2019, 11:04 AM IST
ಹೊಸದಿಲ್ಲಿ : ಅಯೋಧ್ಯೆ ವಿವಾದವನ್ನು ಪರಿಹರಿಸುವ ನಿಟ್ಟಿನಲ್ಲಿ ಕೋರ್ಟ್ ನಿಗಾವಣೆಯ ಮಧ್ಯಸ್ಥಿಕೆಯನ್ನು ನಡೆಸುವ ಕುರಿತ ಆದೇಶವನ್ನು ಸುಪ್ರೀಂ ಕೋರ್ಟ್ ಕಾದಿರಿಸಿತು.
ವರಿಷ್ಠ ನ್ಯಾಯಮೂರ್ತಿ ರಂಜನ್ ಗೊಗೋಯ್, ಜಸ್ಟಿಸ್ ಗಳಾದ ಎಸ್ ಎ ಬೋಬಡೆ, ಡಿವೈ ಚಂದ್ರಚೂಡ್, ಅಶೋಕ್ ಭೂಷಣ್ ಮತ್ತು ಎಸ್ ಅಬ್ದುಲ್‌ನಜೀರ್ ಅವರನ್ನು ಒಳಗೊಂಡ ಐವರು ನ್ಯಾಯಮೂರ್ತಿಗಳ ಪೀಠವು ಇಂದು ಬುಧವಾರ ಅಯೋಧ್ಯೆ ಭೂ ವಿವಾದದ ವಿಚಾರಣೆ ನಡೆಸಿತು.
ದಶಕಗಳಷ್ಟು ಹಳೆಯ ಬಾಬರಿ ಮಸೀದಿ – ರಾಮಜನ್ಮಭೂಮಿಯ ಒಡೆತನಕ್ಕೆ ಸಂಬಂಧಿಸಿದ ವಿವಾದವನ್ನು ಕೋರ್ಟ್ ನಿಗಾವಣೆಯ ಮಧ್ಯಸ್ಥಿಕೆ ಮೂಲಕ ಬಗೆಹರಿಸಲು ಯತ್ಸಿಸುವುದಕ್ಕೆ ಅವಕಾಶ ಕಲ್ಪಿಸುವ ಸಿವಿಲ್ ಪ್ರೊಸೀಜರ್ ಕೋಡ್ ನ ಸೆ.89ನ್ನು ಬಳಸಬಹುದೇ ಎಂಬುದನ್ನು ಐವರು ನ್ಯಾಯಮೂರ್ತಿಗಳ ಸುಪ್ರೀಂ ಪೀಠ ಇಂದು ವಿಶ್ಲೇಷಿಸಿತು.
ಅಯೋಧ್ಯೆ ಭೂವಿವಾದಕ್ಕೆ ಸಂಬಂಧಿಸಿ ಸುಪ್ರೀಂ ಕೋರ್ಟ್ ನೀಡುವ ಆದೇಶಕ್ಕೆ ತಾವು ಬದ್ಧರಿರುವುದಾಗಿ ಮುಸ್ಲಿಂ ಅರ್ಜಿದಾರರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.