ಲೋಕ ಸಮರಕ್ಕೂ ಮೊದಲು ದಳದಿಂದ ದೂರ ಸರಿದ ಆನೆ

Team Udayavani, Mar 7, 2019, 1:17 AM IST

10.jpg

ಚಿಕ್ಕಬಳ್ಳಾಪುರ: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್‌ಗೆ ಆನೆ ಬಲ ತಂದುಕೊಟ್ಟಿದ್ದ ಬಹುಜನ ಸಮಾಜ ಪಕ್ಷ (ಬಿಎಸ್ಪಿ) ಇದೀಗ ಲೋಕ ಸಮರಕ್ಕೂ ಮೊದಲೇ ತನ್ನ ಮಿತ್ರ ಪಕ್ಷವಾದ ಜೆಡಿಎಸ್‌ನಿಂದ ದೂರ ಸರಿದು, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲು ಸಜ್ಜಾಗಿದೆ. ಇದು ಸಹಜವಾಗಿಯೆ ಕಾಂಗ್ರೆಸ್‌ನಿಂದ ಚಿಕ್ಕಬಳ್ಳಾಪುರ ಕ್ಷೇತ್ರವನ್ನು ಬಿಟ್ಟು ಕೊಡುವಂತೆ ಪಟ್ಟು ಹಿಡಿದು ಕೂತಿರುವ ಜೆಡಿಎಸ್‌ಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ.

ಕಳೆದ ಮೇ ತಿಂಗಳಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಹುಜನ ಸಮಾಜ ಪಕ್ಷದೊಂದಿಗೆ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡಿದ್ದ ಜೆಡಿಎಸ್‌ಗೆ, ರಾಜ್ಯದ ಹಲವು ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಸಾಕಷ್ಟು ಲಾಭವಾಗಿತ್ತು. ಆದರೆ, ಇದೀಗ ಬಹುಜನ ಸಮಾಜ ಪಕ್ಷ ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ತನ್ನ ಅಭ್ಯರ್ಥಿಯನ್ನಾಗಿ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ  ದ್ವಾರಕನಾಥ್‌ರನ್ನು ಕಣಕ್ಕೆ ಇಳಿಸುವ ನಿಟ್ಟಿನಲ್ಲಿ ಎಲ್ಲಾ ಸಿದ್ದತೆಗಳನ್ನು ಮಾಡಿಕೊಂಡಿದೆ. ಈಗಾಗಲೇ ಡಾ.ಸಿ.ಎಸ್‌.ದ್ವಾರಕನಾಥ್‌ ಅವರು ಕ್ಷೇತ್ರದ ಉದ್ದಗಲಕ್ಕೂ ಬಿರುಸಿನ ಚುನಾವಣಾ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಇದು ಜೆಡಿಎಸ್‌ಗೆ ಬಿಸಿ ತುಪ್ಪವಾಗಿದೆ. 

ರಾಜ್ಯದಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್‌ ಹಾಗೂ ಬಹುಜನ ಸಮಾಜ ಪಕ್ಷಗಳು ಹೊಂದಾಣಿಕೆ ಮಾಡಿಕೊಂಡು ಒಗ್ಗಟ್ಟಾಗಿ ಚುನಾವಣೆ ಎದುರಿಸಲಿವೆ ಎಂದೇ ರಾಜ್ಯ ರಾಜಕೀಯ ವಲಯದಲ್ಲಿ ಭಾವಿಸಲಾಗಿತ್ತು. ಆದರೆ, ಇತ್ತೀಚೆಗೆ ಚಿಕ್ಕಬಳ್ಳಾಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಡಾ.ಸಿ.ಎಸ್‌. ದ್ವಾರಕನಾಥ್‌ರನ್ನು ಬಹುಜನ ಸಮಾಜ ಪಕ್ಷದ ರಾಷ್ಟ್ರೀಯ ಹಾಗೂ ರಾಜ್ಯ ನಾಯಕರು ತಮ್ಮ ಪಕ್ಷಕ್ಕೆ ಸೇರ್ಪಡೆಗೊಳಿಸಿಕೊಳ್ಳುವ ಮೂಲಕ, ಅವರೇ ಬಹುಜನ ಸಮಾಜ ಪಕ್ಷದ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಎಂದು ಘೋಷಿಸಿದರು. ಇದನ್ನು ನೋಡಿದರೆ ಲೋಕ ಸಮರದಲ್ಲಿ ಜೆಡಿಎಸ್‌ನಿಂದ ಬಿಎಸ್ಪಿ ದೂರ ಸರಿಯುವ ಎಲ್ಲಾ ಲಕ್ಷಣಗಳು ಕಾಣಿಸುತ್ತಿವೆ. ಆದರೆ, ಬಿಎಸ್ಪಿ ಸ್ಪರ್ಧೆ ಚಿಕ್ಕಬಳ್ಳಾಪುರಕ್ಕೆ ಮಾತ್ರ ಸೀಮಿತವೇ ಅಥವಾ ರಾಜ್ಯದ ಇತರ ಕ್ಷೇತ್ರಗಳಿಗೂ ಇರಲಿದೆಯೆ ಅಥವಾ ಇತರ ಕ್ಷೇತ್ರಗಳಲ್ಲಿ ಜೆಡಿಎಸ್‌ಗೆ ಬೆಂಬಲ ಕೊಡುತ್ತಾ ಎನ್ನುವುದು ಇದೀಗ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.

ಕ್ಷೇತ್ರದಲ್ಲಿ ಅಹಿಂದ ನಿರ್ಣಾಯಕ, ಅಹಿಂದ ವರ್ಗದವರೇ ನಾಯಕ
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಹಿಂದುಳಿದ ವರ್ಗಗಳ ಮತಗಳು ಹೆಚ್ಚಿನ ಪ್ರಮಾಣದಲ್ಲಿವೆ. ಪ್ರತಿ ಚುನಾವಣೆಯಲ್ಲಿ ಗೆಲುವನ್ನು ನಿರ್ಣಯಿಸುವ ನಿಟ್ಟಿನಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ, ಹಿಂದುಳಿದ ಹಾಗೂ ಅಲ್ಪಸಂಖ್ಯಾತರ ಮತಗಳು ಪ್ರಮುಖ ಪಾತ್ರ ವಹಿಸುತ್ತವೆ. ಹೀಗಾಗಿ, ಈ ಬಾರಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಬಹುಜನ ಸಮಾಜ ಪಕ್ಷ ಸ್ಪರ್ಧಿಸುತ್ತಿರುವುದು ಯಾರಿಗೆ ಲಾಭ, ಯಾರಿಗೆ ನಷ್ಟ ಎಂಬ ರಾಜಕೀಯ ಲೆಕ್ಕಾಚಾರ ಕೂಡ ಶುರುವಾಗಿದೆ. ಕ್ಷೇತ್ರದ ರಾಜಕೀಯ ಇತಿಹಾಸವನ್ನು ಒಮ್ಮೆ ತಿರುಗಿ ನೋಡಿದರೆ ಇಲ್ಲಿ ಅಹಿಂದ ವರ್ಗದ ನಾಯಕರೇ ಹೆಚ್ಚು ಬಾರಿ ಗೆಲುವು ಸಾಧಿಸಿ, ಸಂಸತ್ತನ್ನು ಪ್ರವೇಶಿಸಿದ್ದಾರೆ. ಅದರಲ್ಲೂ ಪ್ರತಿ ಲೋಕಸಭಾ ಚುನಾವಣೆಯಲ್ಲಿ ಕ್ಷೇತ್ರದ ಮತದಾರರು ಅಹಿಂದ ವರ್ಗದ ನಾಯಕರ ಕೈ ಹಿಡಿರುವುದು ಎದ್ದು ಕಾಣುತ್ತಿದೆ. ಹೀಗಾಗಿ, ಬಹುಜನ ಸಮಾಜ ಪಕ್ಷ ಇಲ್ಲಿನ ಅಹಿಂದ ವರ್ಗದ ಮತಗಳ ಮೇಲೆ ಕಣ್ಣಿಟ್ಟು, ಈ ಬಾರಿ ಚುನಾವಣೆಗೆ ಸ್ಪರ್ಧಿಸುತ್ತಿದೆ. ಅದರಲ್ಲೂ ಕ್ಷೇತ್ರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿರುವ ಬಲಿಜ ಸಮುದಾಯಕ್ಕೆ ಸೇರಿದ ಡಾ.ಸಿ.ಎಸ್‌.ದ್ವಾರಕನಾಥ್‌ರನ್ನು ಕಣಕ್ಕೆ ಇಳಿಸುತ್ತಿದ್ದು, ಕೇವಲ ಅಂತಿಮ ಘೋಷಣೆಯಷ್ಟೆ ಬಾಕಿ ಉಳಿದಿದೆ.

ಟಾಪ್ ನ್ಯೂಸ್

1-ree

Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು

ec-aa

Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ

Gundlupet-Arrest

Gundlupet: ಜಿಂಕೆ ಮಾಂಸ ಸಾಗಾಣೆ: ಐವರ ಬಂಧಿಸಿದ ಅರಣ್ಯಾಧಿಕಾರಿಗಳು

amit Shah (2)

Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

1-ree

Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು

Omission in egg distribution, head teacher, physical education teacher suspended

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.