ನಾಳೆ ಬಿಎಸ್‌ವೈ ದಿಲ್ಲಿ ಭೇಟಿ
Team Udayavani, Mar 7, 2019, 1:22 AM IST
ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಶುಕ್ರವಾರ ದೆಹಲಿಗೆ ತೆರಳಿ ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಕುರಿತಂತೆ ಪಕ್ಷದ ರಾಷ್ಟ್ರೀಯ ನಾಯಕರೊಂದಿಗೆ ಚರ್ಚೆ ನಡೆಸಲಿದ್ದು, ತೀವ್ರ ಕುತೂಹಲ ಮೂಡಿಸಿದೆ.
ರಾಜ್ಯದಲ್ಲಿ ಸದ್ಯ 15 ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಸಂಸದರಿದ್ದಾರೆ (ಕೇಂದ್ರ ಸಚಿವರಾಗಿದ್ದ ಅನಂತ ಕುಮಾರ್ ಅವರ ಅಕಾಲಿಕ ನಿಧನದಿಂದ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ ತೆರವಾಗಿದೆ). ಹಾಲಿ ಬಿಜೆಪಿ ಸಂಸದರಿರುವ ಕ್ಷೇತ್ರಗಳ ಪೈಕಿ ಕೆಲ ಕ್ಷೇತ್ರಗಳಲ್ಲಿ ಬದಲಾವಣೆ ಬಗ್ಗೆ ಪಕ್ಷದ ನಾಯಕರು ಈ ಹಿಂದೆ ಸುಳಿವು ನೀಡಿದ್ದರು. ಹಾಗಾಗಿ, ಹಾಲಿ ಸಂಸದರಿರುವ ಕ್ಷೇತ್ರ ಹಾಗೂ ಬಿಜೆಪಿ ಸಂಸದರಿಲ್ಲದ ಕ್ಷೇತ್ರಗಳಲ್ಲಿ ಕಾಂಗ್ರೆಸ್-ಜೆಡಿಎಸ್‌ನ ಒಮ್ಮತದ ಅಭ್ಯರ್ಥಿಗಳು ಯಾರಾಗಲಿದ್ದಾರೆ ಎಂಬುದನ್ನು ಗಮನದಲ್ಲಿಟ್ಟುಕೊಂಡು ಅವರು, ಅಭ್ಯರ್ಥಿಗಳ ಆಯ್ಕೆ ಬಗ್ಗೆ ಚರ್ಚೆ ನಡೆಸುವ ಸಂಭವವಿದೆ. ಈಗಾಗಲೇ ವಿಭಾಗ, ಜಿಲ್ಲಾಮಟ್ಟದ ಪದಾಧಿಕಾರಿಗಳು, ಲೋಕಸಭಾ ಕ್ಷೇತ್ರವಾರು ಪ್ರಭಾರಿಗಳು ಪ್ರತ್ಯೇಕವಾಗಿ ಸಂಭಾವ್ಯ ಅಭ್ಯರ್ಥಿಗಳ ವಿವರ ಸಲ್ಲಿಸಿದ್ದಾರೆ.
ಈ ನಡುವೆ ಬಿ.ಎಸ್.ಯಡಿಯೂರಪ್ಪ ಅವರು ರಾಜ್ಯಾದ್ಯಂತ ವಿಜಯ ಸಂಕಲ್ಪ ಯಾತ್ರೆ ನಡೆಸಿ, ಪಕ್ಷದ ಹಾಲಿ ಸಂಸದರ ಬಗೆಗಿನ ಅಭಿಪ್ರಾಯ ಹಾಗೂ ಇತರ ಪಕ್ಷಗಳ ಸಂಸದರಿರುವ ಕ್ಷೇತ್ರದಲ್ಲಿನ ಸಮರ್ಥ ಅಭ್ಯರ್ಥಿಗಳು, ಆಕಾಂಕ್ಷಿಗಳ ಬಗ್ಗೆ ಮಾಹಿತಿ ಕಲೆ ಹಾಕಿದ್ದು, ಅದರ ಆಧಾರದ ಮೇಲೆ ಸಂಭಾವ್ಯ ಅಭ್ಯರ್ಥಿಗಳ ವಿವರದೊಂದಿಗೆ ದೆಹಲಿಗೆ ತೆರಳಿ, ರಾಷ್ಟ್ರೀಯ ನಾಯಕರೊಂದಿಗೆ ಚರ್ಚಿಸಲಿದ್ದಾರೆಎಂದು ಮೂಲಗಳು ಹೇಳಿವೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.