ಮೈಸೂರು-ಕೊಡಗಿನಲ್ಲಿ ಅಭಿವೃದ್ಧಿಗಿಂತ ಭಾವನಾತ್ಮಕ ವಿಷಯಗಳಿಗೇ ಆದ್ಯತೆ


Team Udayavani, Mar 7, 2019, 1:40 AM IST

8.jpg

ಮೈಸೂರು: ವಿಭಿನ್ನ ಹವಾಗುಣ ಹಾಗೂ ಜನಜೀವನ ಹೊಂದಿರುವ ಎರಡು ಜಿಲ್ಲೆಗಳನ್ನು ಜೋಡಿಸಿ ರಚಿಸಿರುವ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ಕಾವೇರುತ್ತಿದೆ. ಎರಡು ವಿಭಿನ್ನ ಹವಾಗುಣದ ಜಿಲ್ಲೆಗಳನ್ನು ಹೊಂದಿರುವ ಕ್ಷೇತ್ರ ದಲ್ಲಿ ಆಯಾ ಜಿಲ್ಲೆಯದೇ ಪ್ರತ್ಯೇಕವಾದ ಸಮಸ್ಯೆಗಳಿವೆ. ಕೊಡಗು ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆ ಕಾಫಿ, ಮೈಸೂರು ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆ ತಂಬಾಕು. ಪ್ರತಾಪ್‌ಸಿಂಹ ರಾಜಕೀಯಕ್ಕೆ ಹೊಸಬರಾದ್ದರಿಂದ ಈ ಕ್ಷೇತ್ರಕ್ಕೆ ಹೊಂದಿಕೊಳ್ಳಲು ಸಾಕಷ್ಟು ಸಮಯ ಹಿಡಿಯಿತು. ಆರಂಭದಿಂದಲೂ ಸಂಸದರು ಅಭಿವೃದಿಟಛಿಗಿಂತಲೂ ತಮ್ಮ ರಾಜಕೀಯ ವಿರೋಧಿಗಳ ವಿರುದಟಛಿ ಆರೋಪಗಳನ್ನು ಮಾಡುವುದರಲ್ಲೇ ಸಮಯ ಕಳೆದರು ಎಂಬ ಆರೋಪಗಳಿವೆ. ನಂತರದ ದಿನಗಳಲ್ಲಿ ರಾಜ್ಯ ಬಿಜೆಪಿಯ ಯುವ ಮೋರ್ಚಾ ಅಧ್ಯಕ್ಷರಾಗಿ ಪಕ್ಷದ ಸಂಘಟನೆಯ ಜವಾಬ್ದಾರಿ ದೊರೆತ ನಂತರವಂತೂ ಸಂಸದರನ್ನು ಅವರು ಫೇಸ್‌ಬುಕ್‌ ಲೈವ್‌ ಬಂದಾಗ, ಇಲ್ಲವೇ ಮಾಧ್ಯಮಗಳಲ್ಲಿ ಅವರನ್ನು ನೋಡಬೇಕಾದ ಪರಿಸ್ಥಿತಿ ಬಂತು. ಪ್ರಧಾನಿ ಮೋದಿ ಹಾಗೂ ಬಿಜೆಪಿ ಅಧ್ಯಕ್ಷ ಅಮಿತ್‌ ಶಾಗೆ ಹತ್ತಿರದಲ್ಲಿರುವುದಾಗಿ ಬಿಂಬಿಸಿಕೊಂಡಿರುವ ಪ್ರತಾಪ್‌ಸಿಂಹ, ತಮ್ಮ 5 ವರ್ಷಗಳ ಅವಧಿಯಲ್ಲಿ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಎರಡೂ ಜಿಲ್ಲೆಗಳಲ್ಲಿ ರಸ್ತೆ, ರೈಲು ಹಾಗೂ ವಿಮಾನಯಾನ ಸೌಲಭ್ಯ ಉತ್ತಮಪಡಿಸಲು ಆದ್ಯತೆ ನೀಡಿ ಕೆಲಸ ಮಾಡಿದ್ದು, ಮೈಸೂರಿಗೆ ಪಾಸ್‌ಪೋರ್ಟ್‌ ಸೇವಾ ಕೇಂದ್ರ, ಆರು ಹೊಸ ರೈಲು ತಂದಿದ್ದೇನೆ. ನಾಗನಹಳ್ಳಿ ಬಳಿ ಸ್ಯಾಟಲೈಟ್‌ ರೈಲು ನಿಲ್ದಾಣ ಮಂಜೂರು ಮಾಡಿಸಿದ್ದೇನೆ. ಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯನ್ನು ದಶಪಥ ಹೆದ್ದಾರಿಯಾಗಿ ಮೇಲ್ದರ್ಜೆಗೇರಿಸುವ ಕಾಮಗಾರಿ ಹಾಗೂ ಮೈಸೂರು-ಮಡಿಕೇರಿ ಹೆದ್ದಾರಿಯನ್ನು ಚತುಷ್ಪಥ ಹೆದ್ದಾರಿಯಾಗಿಸುವ ಕಾಮಗಾರಿಗೆ ಮಂಜೂರಾತಿ ಕೊಡಿಸಿದ್ದೇನೆ. ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದ ವಿಸ್ತರಣೆ ಸೇರಿದಂತೆ ಸಂಪರ್ಕವನ್ನು ಉತ್ತಮಪಡಿಸಲು ಶ್ರಮಿಸಿರುವುಹೇಳುತ್ತಾರೆ. ರೈಲು ಸಂಪರ್ಕ ಹೊಂದಿಲ್ಲದ ರಾಜ್ಯದ ಏಕೈಕ ಜಿಲ್ಲೆ ಎಂಬ ಕೊಡಗಿನ ಹಣೆಪಟ್ಟಿಯನ್ನು ಕಳಚುವ ನಿಟ್ಟಿನಲ್ಲಿ ಮೈಸೂರಿನಿಂದ (ಬೆಳಗೊಳ) ಕುಶಾಲನಗರದವರೆಗೆ ಹೊಸ ರೈಲು ಮಾರ್ಗಕ್ಕೆ ಮಂಜೂರಾತಿ ತಂದಿದ್ದಾರಾದರೂ ಈ ಯೋಜನೆಗೆಕೊಡವರಲ್ಲೇ ಪರ-ವಿರೋಧವಿದೆ.

ಅತಿವೃಷ್ಟಿಯಿಂದ ಚೇತರಿಸಿಕೊಳ್ಳದ ಕೊಡಗು: ಇದೇ ವೇಳೆ, ಕಳೆದ ವರ್ಷ ಅತಿವೃಷ್ಟಿಗೆ ತುತ್ತಾಗಿ ಕೊಡವರು ಮನೆ, ಮಠ, ಜಮೀನು ಎಲ್ಲವನ್ನೂ ಕಳೆದುಕೊಂಡು ನಲುಗಿದಾಗ, ಸಂಸದರು ಸರಿಯಾಗಿ ಸ್ಪಂದಿಸಲಿಲ್ಲ ಎಂಬ ಆರೋಪ ಕೇಳಿ ಬಂತು. ಜೊತೆಗೆ, ಕೊಡಗಿನಲ್ಲಿ ನಿರೀಕ್ಷಿತ ಮಟ್ಟದಲ್ಲಿ ಪುನರ್ವಸತಿ ಕೆಲಸ-ಕಾರ್ಯಗಳು ನಡೆದಿಲ್ಲ. ಜನರ ಬದುಕು ಇನ್ನೂ ಸಾಮಾನ್ಯ ಸ್ಥಿತಿಗೆ ತಲುಪಿಲ್ಲ. ಪ್ರವಾಸೋ ದ್ಯಮ ಮೊದಲಿನ ವೈಭವಕ್ಕೆ ಮರಳಿಲ್ಲ ಎಂಬುದು ಕಟು ಸತ್ಯ.

ಇನ್ನು, ಮೈಸೂರು ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆಯಾದ ತಂಬಾಕು ಬೆಳೆಗಾರರ ಸಮಸ್ಯೆಗೆ ಸೂಕ್ತ ರೀತಿಯಲ್ಲಿ ಸ್ಪಂದಿಸದಿರುವುದು, ಸಂಸದರ ಆದರ್ಶ ಗ್ರಾಮ ಯೋಜನೆಯಡಿ ಆಯ್ಕೆ ಮಾಡಿಕೊಂಡಿದ್ದ ಹುಣಸೂರು ತಾಲೂಕಿನ ಕರೀಮುದ್ದನಹಳ್ಳಿ ಗ್ರಾಮವನ್ನು ನಿರೀಕ್ಷಿತ ಮಟ್ಟದಲ್ಲಿ ಅಭಿವೃದಿಟಛಿಪಡಿಸಲು ಸಾಧ್ಯವಾಗದಿರುವುದು, ಕೈಗಾರಿಕಾ ಬೆಳವಣಿಗೆಗೆ ಯಾವುದೇ ರೀತಿಯಲ್ಲೂ ಸ್ಪಂದಿಸದಿರುವ ಆರೋಪ ಅವರ ವಿರುದ್ಧವಿದೆ. ಈ ವಿಚಾರ ಕೂಡಾ ಕಾಂಗ್ರೆಸ್‌ ನಾಯಕರ ಪಾಲಿಗೆ ಚುನಾವಣೆಯ ಅಸ್ತ್ರ ವಾಗುವ ಸಾಧ್ಯತೆಯಿದೆ.

ಗಿರಿಜನರ ಸಮಸ್ಯೆ ಕೇಳಿಲ್ಲ: ಎಲ್ಲಕ್ಕಿಂತ ಮಿಗಿಲಾಗಿ ಎರಡೂ ಜಿಲ್ಲೆಯ ಅರಣ್ಯ ಪ್ರದೇಶಗಳ ಹಾಡಿಗಳಲ್ಲಿ ಸಾವಿರಾರು ಸಂಖ್ಯೆ ಯಲ್ಲಿ ಆದಿವಾಸಿ ಗಿರಿಜನರು ನೆಲೆಸಿದ್ದರೂ ಅವರ ಸಮಸ್ಯೆ ಆಲಿಸಿ,ಪರಿಹರಿಸುವ ಗೋಜಿಗೆ ಹೋಗಿಲ್ಲ. ಐಟಿಡಿಪಿ ಯೋಜನೆಯಡಿ ಕೇಂದ್ರ ಸರ್ಕಾರದಿಂದ ಗಿರಿಜನರ ಅಭಿವೃದಿಟಛಿಗಾಗಿ ಕೋಟ್ಯಾಂತರ ರೂ.ಅನುದಾನ ಬರುತ್ತದೆಯಾದರೂ ಅದನ್ನು ಸಮರ್ಪಕವಾಗಿ ಬಳಸಿಕೊಳ್ಳುವ ಕೆಲಸವಾಗಿಲ್ಲ.

ಮೈತ್ರಿಯಲ್ಲಿನ್ನೂ ಮುಂದುವರಿದಿದೆ ಗೊಂದಲ: ಇತ್ತ, ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ನಡೆಸುತ್ತಿರುವ ಕಾಂಗ್ರೆಸ್‌-ಜೆಡಿಎಸ್‌ ಪಕ್ಷಗಳಲ್ಲಿ ಇನ್ನೂ ಸ್ಥಾನ ಹೊಂದಾಣಿಕೆಯ ಗೊಂದಲ ಮುಂದುವರಿದಿರುವುದು ಸದ್ಯದ ಮಟ್ಟಿಗೆ ಬಿಜೆಪಿ ಪಾಲಿಗೆ ವರದಾನವಾಗಿ ಪರಿಣಮಿಸಿದೆ. ಆದರೆ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ತವರು ಜಿಲ್ಲೆಯನ್ನು ಉಳಿಸಿಕೊಳ್ಳಲೇಬೇಕಾದ ಅನಿವಾರ್ಯತೆ ಇದೆ. ಹೀಗಾಗಿ, ಕಡೆ ಗಳಿಗೆಯಲ್ಲಿ ಕಾಂಗ್ರೆಸ್‌-ಜೆಡಿಎಸ್‌ ನಾಯಕರು ಯಾವ ದಾಳ ಉರುಳಿಸುತ್ತಾರೆ ಎಂಬುದನ್ನು ಕಾದುನೋಡ ಬೇಕಿದೆ.

ಕ್ಷೇತ್ರ ವ್ಯಾಪ್ತಿ 

ಮೈಸೂರು ಜಿಲ್ಲೆಯ ಹುಣಸೂರು, ಪಿರಿಯಾಪಟ್ಟಣ, ಮೈಸೂರು ನಗರಕ್ಕೆ ಹೊಂದಿಕೊಂಡಿರುವ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರ ಹಾಗೂ ಮೈಸೂರು ನಗರದ ಕೃಷ್ಣರಾಜ, ಚಾಮರಾಜ ಹಾಗೂ ನರಸಿಂಹ ರಾಜ ವಿಧಾನಸಭಾ ಕ್ಷೇತ್ರಗಳು, ಕೊಡಗಿನ ಮಡಿಕೇರಿ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿರುವ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಎರಡೂ ಜಿಲ್ಲೆಗಳು ನೈಸರ್ಗಿಕ, ಶೈಕ್ಷಣಿಕವಾಗಿ ಮಾತ್ರವಲ್ಲ, ಭಾಷೆ, ಆಚಾರ-ವಿಚಾರ ಸೇರಿದಂತೆ ಜನ ಜೀವನ ಶೈಲಿಯಲ್ಲಿಯೂ ವಿಭಿನ್ನತೆ ಹೊಂದಿವೆ. ಈ ಹಿಂದೆ, ಮೈಸೂರು ಪ್ರತ್ಯೇಕ ಲೋಕಸಭಾ ಕ್ಷೇತ್ರವಾಗಿತ್ತು. 2007ರಲ್ಲಿ ಕ್ಷೇತ್ರ ಪುನರ್‌ ವಿಂಗಡಣೆ ಮಾಡಿದ ಸಂದರ್ಭದಲ್ಲಿ ಆವರೆಗೆ ದಕ್ಷಿಣ ಕನ್ನಡ (ಮಂಗಳೂರು) ಲೋಕಸಭಾ ಕ್ಷೇತ್ರದ ಜೊತೆಯಿದ ಕೊಡಗಿನ ಮಡಿಕೇರಿ, ವಿರಾಜಪೇಟೆ, ಸೋಮವಾರ ಪೇಟೆ ವಿಧಾನಸಭಾ ಕ್ಷೇತ್ರಗಳಪೈಕಿ ಸೋಮವಾರ ಪೇಟೆ ಕ್ಷೇತ್ರವನ್ನು ರದ್ದುಪಡಿಸಿ, ಇನ್ನುಳಿದ ಎರಡು ವಿಧಾನಸಭಾ ಕ್ಷೇತ್ರಗಳನ್ನು ಮೈಸೂರು ಕ್ಷೇತ್ರದ ಜೊತೆಗೆ ಜೋಡಿಸಿ, ಮೈಸೂರು-ಕೊಡಗು ಲೋಕಸಭಾ ಕ್ಷೇತ್ರ ಎಂದು ಹೆಸರಿಸಲಾಗಿದೆ.

ಗಿರೀಶ್‌ ಹುಣಸೂರು

ಟಾಪ್ ನ್ಯೂಸ್

Malai

Mangaluru: ಮಳಲಿ ಮಸೀದಿ ವಿವಾದ: ವಿಶ್ವ ಹಿಂದೂ ಪರಿಷತ್‌ ಅರ್ಜಿ ತಿರಸ್ಕೃತ

Kota-Meet

Udupi: ಜಿಲ್ಲೆಗೆ ಆಗಮಿಸುವ ಪ್ರವಾಸಿಗರಿಗೆ ಪೂರಕ ವಾತಾವರಣ ಕಲ್ಪಿಸಿ: ಸಂಸದ ಕೋಟ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Malai

Mangaluru: ಮಳಲಿ ಮಸೀದಿ ವಿವಾದ: ವಿಶ್ವ ಹಿಂದೂ ಪರಿಷತ್‌ ಅರ್ಜಿ ತಿರಸ್ಕೃತ

Kota-Meet

Udupi: ಜಿಲ್ಲೆಗೆ ಆಗಮಿಸುವ ಪ್ರವಾಸಿಗರಿಗೆ ಪೂರಕ ವಾತಾವರಣ ಕಲ್ಪಿಸಿ: ಸಂಸದ ಕೋಟ

Suside-Boy

Putturu: ನೇಣು ಬಿಗಿದು ಆತ್ಮಹತ್ಯೆ

Suside-Boy

Brahamavara: ಹಾರಾಡಿ: ಬಾವಿಗೆ ಹಾರಿ ಆತ್ಮಹ*ತ್ಯೆ

Arrest

Madikeri: ಕುಶಾಲನಗರ ಕಳವು ಪ್ರಕರಣ: ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.