ಮತ್ತೆ ಸೋತ ಮಹಿಳೆಯರು: ಸರಣಿ ವಶಪಡಿಸಿಕೊಂಡ ಇಂಗ್ಲೆಂಡ್


Team Udayavani, Mar 7, 2019, 10:31 AM IST

englandw.jpg

ಗುವಾಹಟಿ: ಪ್ರವಾಸಿ ಇಂಗ್ಲೆಂಡ್ ವಿರುದ್ಧದ ದ್ವಿತೀಯ ಚುಟುಕು ಪಂದ್ಯದಲ್ಲೂ ಭಾರತೀಯ ಮಹಿಳೆಯರು ಮುಗ್ಗರಿಸಿದ್ದಾರೆ. ಸ್ಮೃತಿ ಮಂಧನಾ ನಾಯಕತ್ವದ ಟೀಂ ಇಂಡಿಯಾವನ್ನು ಎರಡೂ ಪಂದ್ಯವನ್ನು ಸೋಲಿಸಿದ ಇಂಗ್ಲೆಂಡ್ ವನಿತೆಯರು ಸರಣಿಯಲ್ಲಿ ಒಂದು ಪಂದ್ಯ ಬಾಕಿ ಇರುವಂತೆ ಸರಣಿಯನ್ನು 2-0 ಅಂತರದಿಂದ ಗೆದ್ದು ಬೀಗಿದೆ. 

ಇಲ್ಲಿನ ಬರ್ಸಾಪುರ ಕ್ರಿಕೆಟ್ ಮೈದಾನದಲ್ಲಿ ಗುರುವಾರ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ಭಾರತ ತಂಡವನ್ನು ಮೊದಲು ಬ್ಯಾಟಿಂಗ್ ಗೆ ಆಹ್ವಾನಿಸಿತು. ಇಂಗ್ಲೆಂಡ್ ನಾಯಕಿ ಹೀತರ್ ನೈಟ್ಸ್ ಈ ಲೆಕ್ಕಚಾರ ವಿಫಲವಾಗಲಿಲ್ಲ. ಭಾರತ 34 ರನ್ ಗಳಿಸಿಕೊಳ್ಳುವಷ್ಟರಲ್ಲಿ ಮೊದಲ ಮೂರು ವಿಕೆಟ್ ಕಳೆದುಕೊಂಡಾಗಿತ್ತು. 
ಹರ್ಮನ್ ಪ್ರೀತ್ ಅನುಪಸ್ಥಿತಿಯಲ್ಲಿ ತಂಡದ ನಾಯಕಿಯಾಗಿರುವ ಸ್ಮೃತಿ ಮಂಧನಾ ಈ ಪಂದ್ಯದಲ್ಲೂ ವಿಫಲಾರದರು. ಮಂಧನಾ ಗಳಿಸಿದ್ದು ಕೇವಲ 12 ರನ್. ಜೆಮಿಮಾ ರೋಡ್ರಿಗಸ್ ತನ್ನ ಖಾತೆಗೆ ಎರಡು ರನ್ ಸೇರಿಸಿ ಪೆವಿಲಿಯನ್ ಗೆ ಸೇರಿದರು. ಮೊದಲ ಸರಣಿ ಆಡುತ್ತಿರುವ ಹರ್ಲಿನ್ ಡಿಯೋಲ್ ಕೂಡಾ 14 ರನ್ ಗಳಿಸಲಷ್ಟೇ ಶಕ್ತರಾದರು. 

ಮಧ್ಯಮ ಕ್ರಮಾಂಕದಲ್ಲಿ ಮಿಥಾಲಿ ರಾಜ್ 20 ರನ್ ಗಳಿಸಿದರೆ, ದೀಪ್ತಿ ಶರ್ಮಾ ಮತ್ತು ಭಾರತಿ ಫುಲ್ಮಾಲಿ ತಲಾ 18 ರನ್ ಗಳಿಸಿದರು. ಅಂತಿಮವಾಗಿ ಭಾರತ ನಿಗದಿತ 20 ಓವರ್ ಗಳಲ್ಲಿ 111  ರನ್ ಗಳಿಸಿತು. ಇಂಗ್ಲೆಂಡ್ ಪರ ಕ್ಯಾಥರಿನ್ ಬ್ರಂಟ್ ಮೂರು ವಿಕೆಟ್ ಪಡೆದರೆ, ಲಿನ್ಸೆ ಸ್ಮಿತ್ ಎರಡು ವಿಕೆಟ್ ಪಡೆದರು. 

ಆಂಗ್ಲರ ಆಧರಿಸಿದ ಡೇನಿಯಲ್ ವ್ಯಾಟ್: ಭಾರತ ನೀಡಿದ ಸಾಧಾರಣ ಗುರಿಯನ್ನು ಬೆನ್ನತ್ತಿದ ಇಂಗ್ಲೆಂಡ್ ಕೂಡಾ ಸ್ವಲ್ಪ ತಿಣುಕಾಡಿತು. ಟಾಮಿ ಬೇಮಂಟ್, ಆಮಿ ಜೋನ್ಸ್, ನಥಾಲಿ ಶಿವರ್  ಮತ್ತು ನಾಯಕಿ ಹೇತರ್ ನೈಟ್ ಎರಡಂಕಿ ರನ್ ಗಳಿಸಲೂ ವಿಫಲರಾದರು. ಆದರೆ ಮತ್ತೊಂದೆಡೆ ಕ್ರೀಸ್ ಕಚ್ಚಿ ನಿಂತು ಭಾರತೀಯ ಬೌಲರ್ ಗಳನ್ನು ಕಾಡಿದ ಡ್ಯಾನಿಯೆಲ್ ವ್ಯಾಟ್ ಅಜೇಯ ಅರ್ಧಶತಕ ಬಾರಿಸಿದರು. 55 ಎಸೆತ ಎದುರಿಸಿದ ವ್ಯಾಟ್ 64 ರನ್ ಗಳಿಸಿದರು. ಅವರಿಗೆ ಉತ್ತಮ ಸಾಥ್ ನೀಡಿದ ಲಾರೆನ್ ವಿನ್ ಫೀಲ್ಡ್ 29 ರನ್ ಗಳಿಸಿದರು.

ಅಂತಿಮವಾಗಿ ಇಂಗ್ಲೆಂಡ್ 19.1 ಓವರ್ ನಲ್ಲಿ ಐದು ವಿಕೆಟ್ ಕಳೆದುಕೊಂಡು 114  ರನ್ ಗಳಿಸಿ ಗೆಲುವಿನ ಗೆರೆ ದಾಟಿತು. ಭಾರತದ ಪರ ಏಕ್ತಾ ಬಿಷ್ಟ್ ಎರಡು ವಿಕೆಟ್ ಪಡೆದರು. ಉತ್ತಮ ಇನ್ನಿಂಗ್ಸ್ ಆಡಿದ ಡ್ಯಾನಿಯೆಲ್ ವ್ಯಾಟ್ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು. 

ಟಾಪ್ ನ್ಯೂಸ್

8-bntwl

Sajipamunnur: ಅಪಘಾತದ ವೇಳೆ ಗೋಮಾಂಸ ಸಾಗಾಟ ಪತ್ತೆ; ಪ್ರಕರಣ ದಾಖಲು

7-dvg

Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ

Laxmi-Minister

ಸಿ.ಟಿ.ರವಿ ಆ ಪದ ಬಳಸಿಲ್ಲವಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಸಚಿವೆ ಲಕ್ಷ್ಮೀ

6-aranthodu

Aranthodu: ಲಾರಿ-ಸ್ಕೂಟಿ ಅಪಘಾತ; ಸವಾರರಿಬ್ಬರು ಮೃತ್ಯು

SriLanka ನೌಕಾಪಡೆಯಿಂದ 17 ತಮಿಳುನಾಡಿನ ಮೀನುಗಾರರ ಬಂಧನ; ಬಿಡುಗಡೆಗೆ ಸ್ಟಾಲಿನ್ ಮನವಿ

SriLanka ನೌಕಾಪಡೆಯಿಂದ ತಮಿಳುನಾಡಿನ 17 ಮೀನುಗಾರರ ಬಂಧನ; ಬಿಡುಗಡೆಗೆ ಸ್ಟಾಲಿನ್ ಮನವಿ

12-google-search

Year Ender 2024: ಗೂಗಲ್ ನಲ್ಲಿ ಈ ವರ್ಷ ಅತೀ ಹೆಚ್ಚು ಹುಡುಕಲ್ಪಟ್ಟ ವಿಷಯ ಯಾವುದು ಗೊತ್ತಾ?

Jaipur: 13 ಮಂದಿಯನ್ನು ಬಲಿ ಪಡೆದ ದುರಂತದಲ್ಲಿ LPG ಟ್ಯಾಂಕರ್ ಚಾಲಕ ಬದುಕುಳಿದಿದ್ದೇ ರೋಚಕ

ಪಾರ್ಟಿಗೆ ಕರೆದು ಬಟ್ಟೆ ಬಿಚ್ಚಿಸಿ, ಮೂತ್ರ ವಿಸರ್ಜಿಸಿ ಅವಮಾನ… ಮನನೊಂದ ಬಾಲಕ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Viral Photos: ದುಬೈನಲ್ಲಿ ಸಾನಿಯಾ ಮಿರ್ಜಾ – ಮೊಹಮ್ಮದ್ ಶಮಿ ಜಾಲಿ ಮೂಡ್..‌ ಫೋಟೋ ವೈರಲ್.!

Viral Photos: ದುಬೈನಲ್ಲಿ ಸಾನಿಯಾ ಮಿರ್ಜಾ – ಮೊಹಮ್ಮದ್ ಶಮಿ ಜಾಲಿ ಮೂಡ್..‌ ಫೋಟೋ ವೈರಲ್.!

2nd ODI: ವನಿತಾ ಏಕದಿನ ಸರಣಿ: ಇಂದು ಭಾರತ-ವಿಂಡೀಸ್‌ 2ನೇ ಪಂದ್ಯ

2nd ODI: ವನಿತಾ ಏಕದಿನ ಸರಣಿ: ಇಂದು ಭಾರತ-ವಿಂಡೀಸ್‌ 2ನೇ ಪಂದ್ಯ

ಕರಾವಳಿಯಲ್ಲಿ “ಕರ್ನಾಟಕ ಕೂಟ’: ಜ. 17-23ರ ವರೆಗೆ ಮಂಗಳೂರು, ಉಡುಪಿಯಲ್ಲಿ

ಕರಾವಳಿಯಲ್ಲಿ “ಕರ್ನಾಟಕ ಕೂಟ’: ಜ. 17-23ರ ವರೆಗೆ ಮಂಗಳೂರು, ಉಡುಪಿಯಲ್ಲಿ

Vijay Hazare Trophy: ಕರ್ನಾಟಕಕ್ಕೆ ಸತತ 2ನೇ ಗೆಲುವಿನ ಸಿಹಿVijay Hazare Trophy: ಕರ್ನಾಟಕಕ್ಕೆ ಸತತ 2ನೇ ಗೆಲುವಿನ ಸಿಹಿ

Vijay Hazare Trophy: ಕರ್ನಾಟಕಕ್ಕೆ ಸತತ 2ನೇ ಗೆಲುವಿನ ಸಿಹಿ

Pro Kabaddi League: ಗುಜರಾತ್‌ ಜೈಂಟ್ಸ್‌ ವಿರುದ್ಧದಬಾಂಗ್‌ ಡೆಲ್ಲಿಗೆ ಗೆಲುವುPro Kabaddi League: ಗುಜರಾತ್‌ ಜೈಂಟ್ಸ್‌ ವಿರುದ್ಧದಬಾಂಗ್‌ ಡೆಲ್ಲಿಗೆ ಗೆಲುವು

Pro Kabaddi League: ಗುಜರಾತ್‌ ಜೈಂಟ್ಸ್‌ ವಿರುದ್ಧದಬಾಂಗ್‌ ಡೆಲ್ಲಿಗೆ ಗೆಲುವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

8-bntwl

Sajipamunnur: ಅಪಘಾತದ ವೇಳೆ ಗೋಮಾಂಸ ಸಾಗಾಟ ಪತ್ತೆ; ಪ್ರಕರಣ ದಾಖಲು

7-dvg

Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ

ಸರಣಿ ರಜೆ-ವಿಶ್ವವಿಖ್ಯಾತ ಹಂಪಿಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಳ

ಸರಣಿ ರಜೆ-ವಿಶ್ವವಿಖ್ಯಾತ ಹಂಪಿಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಳ

Laxmi-Minister

ಸಿ.ಟಿ.ರವಿ ಆ ಪದ ಬಳಸಿಲ್ಲವಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಸಚಿವೆ ಲಕ್ಷ್ಮೀ

ವಿದೇಶಿ ಹಕ್ಕಿಗಳ ಕಲರವ- ಕುಷ್ಟಗಿಯ ನಿಡಶೇಸಿ ಕೆರೆಗೆ ಬಂದ ಬಾನಾಡಿಗಳು!

ವಿದೇಶಿ ಹಕ್ಕಿಗಳ ಕಲರವ- ಕುಷ್ಟಗಿಯ ನಿಡಶೇಸಿ ಕೆರೆಗೆ ಬಂದ ಬಾನಾಡಿಗಳು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.