ಸಮಯ ವ್ಯರ್ಥ ಮಾಡದೆ ಓದಿ
Team Udayavani, Mar 8, 2019, 7:04 AM IST
ಕೂಡ್ಲಿಗಿ: ವಿಜ್ಞಾನ ಜಗತ್ತಿನ ವಿಕಾಸಕ್ಕೆ ನಾಂದಿಯಾಗುವ ಬದಲು ನಾಶ ಮಾಡುವತ್ತ ಸಾಗಿರುವುದು ದುರಂತವೇ ಸರಿ ಎಂದು ದಾವಣಗೆರೆ ಜಿಲ್ಲಾ ಕರ್ನಾಟಕ ವಿಜ್ಞಾನ ಪರಿಷತ್ ಕಾರ್ಯಕಾರಿ ಕಾರ್ಯದರ್ಶಿ ಗುರುಸಿದ್ದಯ್ಯ ಸ್ವಾಮಿ ಆತಂಕವ್ಯಕ್ತಪಡಿಸಿದರು.
ತಾಲೂಕಿನ ನಿಂಬಳಗೆರೆ ಗ್ರಾಮದ ಸರ್ಕಾರಿ ಪ್ರೌಢಶಾಲೆ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ ಹಾಗೂ ಜಿಎಂಸಿ ಟ್ರಸ್ಟ್ ಮಂಗಾಪುರದ ಆಶ್ರಯದಲ್ಲಿ ಮಂಗಳವಾರ ಆಯೋಜಿಸಿದ್ದ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ವಿದ್ಯಾರ್ಥಿಗಳಲ್ಲಿ ಹುದುಗಿರುವ ಪ್ರತಿಭೆಯನ್ನು ಹೊರ ತರುವ ಕೆಲಸ ಶಿಕ್ಷಕರದಾಗಿದೆ. ವಿದ್ಯಾರ್ಥಿಗಳು ಸೃಜನಶೀಲತೆ ಮೈಗೂಡಿಸಿಕೊಂಡು ವೈಜ್ಞಾನಿಕವಾಗಿ ಅಭಿವೃದ್ಧಿಯಾಗಬೇಕಿದೆ ಎಂದರು.
ವಿಜ್ಞಾನ ಮತ್ತು ಧರ್ಮಗಳು ಎರಡು ಒಂದೆ. ಆದರೆ ದಾರಿಗಳು ಬೇರೆಯಾಗಿವೆ. ಧರ್ಮವೂ ಹಳೆಯ ವಿಷಯಗಳೊಂದಿಗೆ ಮುಂದುವರಿದರೆ, ವಿಜ್ಞಾನವೂ ಪ್ರಸ್ತುತ ವಿಷಯಗಳ ಕುರಿತು ಅಧ್ಯಯನ ಮಾಡುತ್ತಾ ಕಾಲಮಾನಕ್ಕೆ ತಕ್ಕಂತೆ ಬದಲಾಗುತ್ತ ಹೋಗುತದೆ ಎಂದರು. ಕಿರಿಯ ವಿಜ್ಞಾನಿ
ಪುರಸ್ಕೃತ ಡಾ|ಪ್ರವೀಣ್‌ಕುಮಾರ್ ಮಾತನಾಡಿ, ವಿದ್ಯಾರ್ಥಿಗಳು ಸಮಯ ವ್ಯರ್ಥ ಮಾಡದೆ ಅಧ್ಯಯನದ ಕಡೆ ಹೆಚ್ಚು ಗಮನ ಹರಿಸಬೇಕು.
ವೇಳಾಪಟ್ಟಿ ಸಿದ್ಧಪಡಿಸಿಕೊಂಡು ಅಭ್ಯಸಿಸುವುದನ್ನು ರೂಢಿಕೊಳಬೇಕು. ಪುಸ್ತಕವನ್ನು ಪ್ರೀತಿಸುವ ಜತೆಗೆ ಪುಸ್ತಕದ ಜತೆಗೆ ಸಂವಾದಕ್ಕಿಳಿದು ಅಭ್ಯಸಿಸಿದಾಗ ಯಶಸ್ಸು ಕಟ್ಟಿಟ್ಟ ಬುತ್ತಿಯಾಗಲಿದೆ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ವಿಜ್ಞಾನ ವಿಷಯವು ಅಷ್ಟೇ ಸುಲಭವಾಗಿದ್ದು, ಕುತೂಹಲ ಹಾಗೂ ಆಲೋಚನೆಯಿಂದ ವಿಮರ್ಶಿಸಿದರೆ ವಿಜ್ಞಾನ ಸರಳವಾಗಲಿದೆ. ಹೆಚ್ಚಿನದಾಗಿ ವಿಜ್ಞಾನಿಗಳು ಬಡತನದಿಂದ ಬಂದವರಾಗಿದ್ದಾರೆ. ಕಠಿಣ ಪರಿಶ್ರಮ, ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯವಾಗಲಿದೆ. ಅದರಂತೆ ಬದ್ಧತೆ ಮತ್ತು ಕುತೂಹಲ ಇರುವವರು ಸಂಶೋಧನೆ ಮಾಡಲು ದಾರಿಯಾಗುತ್ತದೆ ಎಂದರು.
ಮುಖ್ಯ ಶಿಕ್ಷಕ ಫಕ್ಕೀರಪ್ಪ ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ವಿಜ್ಞಾನ ಪರಿಷತ್ ಕಾರ್ಯಕಾರಿ ಸದಸ್ಯ ಎಸ್.ಎಂ.ಕೊಟ್ರಸ್ವಾಮಿ, ಜೆಎಂಸಿ ಟ್ರಸ್ಟ್‌ನ ಎಂ.ಅಶೋಕ, ಗ್ರಾಪಂ ಅಧ್ಯಕ್ಷ ಮಹಾಂತೇಶ, ಗ್ರಾಪಂ ಸದಸ್ಯರಾದ ಗುರುಬಸವರಾಜ, ವಿ.ಎಂ.ವೀರೇಶಕುಮಾರ್, ನಿಲಯ ಪಾಲಕ ಬಸವರಾಜ, ಶಿಕ್ಷಕರಾದ ಪತ್ರೇಶ್, ಮಹಾಂತೇಶ್, ನಾಗರಾಜ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್ ನ ಅನ್ನಪೂರ್ಣ
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Siruguppa: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.