ಕಾಂಗ್ರೆಸ್ ಪ್ರಚಾರಕ್ಕೆ ಮುಹೂರ್ತ ಫಿಕ್ಸ್
Team Udayavani, Mar 9, 2019, 1:40 AM IST
ಹಾವೇರಿ: ಲೋಕಸಭಾ ಚುನಾವಣೆಗೆ ದಿನಗಣನೆ ಶುರುವಾದ ಬೆನ್ನಲ್ಲೇ ಪ್ರಚಾರದ ಕಾವೂ ಜೋರಾಗಿದೆ. ಕಾಂಗ್ರೆಸ್ ಪ್ರಾಬಲ್ಯವಿರುವ ಹೈದರಾಬಾದ್-ಕರ್ನಾಟಕ ಭಾಗದ ಕಲಬುರಗಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ರಣಕಹಳೆ ಮೊಳಗಿಸಿದ ಬಳಿಕ ಶನಿವಾರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬಿಜೆಪಿ ಪ್ರಾಬಲ್ಯವಿರುವ ಮುಂಬಯಿ-ಕರ್ನಾಟಕದ ಹಾವೇರಿಯಲ್ಲಿ ಕಾಂಗ್ರೆಸ್ ಪರಿವರ್ತನಾ ರ್ಯಾಲಿ ಮೂಲಕ ಚುನಾವಣಾ ಪ್ರಚಾರದ ಅಖಾಡಕ್ಕೆ ರಂಗೇರಿಸಲಿದ್ದಾರೆ.
ಬೆಳಗ್ಗೆ 11ಕ್ಕೆ ನಗರಕ್ಕೆ ಆಗಮಿಸುವ ರಾಹುಲ್, ಕಾಂಗ್ರೆಸ್ ಚುನಾವಣ ಪ್ರಚಾರ ರ್ಯಾಲಿಗೆ ಚಾಲನೆ ನೀಡಲಿದ್ದಾರೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ಮಾಜಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಪರಮೇಶ್ವರ್, ಲೋಕಸಭೆಯಲ್ಲಿ ಕಾಂಗ್ರೆಸ್ ಪಕ್ಷದ ನಾಯಕರಾಗಿರುವ ಮಲ್ಲಿಕಾರ್ಜುನ ಖರ್ಗೆ ಸಹಿತ ರಾಜ್ಯ ನಾಯಕರು ಭಾಗವಹಿಸಲಿದ್ದಾರೆ.
ಬೃಹತ್ ವೇದಿಕೆ ಸಜ್ಜು
ನಗರದ ಮುನ್ಸಿಪಲ್ ಮೈದಾನದಲ್ಲಿ ಬೃಹತ್ ವೇದಿಕೆ ನಿರ್ಮಿಸಲಾಗಿದ್ದು, ಒಂದು ಲಕ್ಷಕ್ಕೂ ಅಧಿಕ ಮಂದಿ ಸೇರುವ ನಿರೀಕ್ಷೆ ಇದೆ. ಸುಮಾರು 50 ಸಾವಿರ ಜನರಿಗೆ ಆಸನದ ವ್ಯವಸ್ಥೆ ಮಾಡಲಾಗಿದೆ. ರಾಹುಲ್ ಆಗಮನಕ್ಕಾಗಿ ಸಮಾವೇಶ ಸ್ಥಳದ ಪಕ್ಕದಲ್ಲೇ ಇರುವ ಕ್ರೀಡಾಂಗಣದಲ್ಲಿ ಹೆಲಿಪ್ಯಾಡ್ ನಿರ್ಮಾಣ ಮಾಡಲಾಗಿದ್ದು, ಶುಕ್ರವಾರ 2-3 ಬಾರಿ ತಾಲೀಮು ನಡೆಯಿತು. ಪೊಲೀಸರಿಗೆ ಹಿರಿಯ ಅಧಿ ಕಾರಿಗಳು ಭದ್ರತೆ ಬಗ್ಗೆ ಮಾರ್ಗದರ್ಶನ ನೀಡಿದರು. ಸಮಾವೇಶದ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷರಾದಿಯಾಗಿ ಹಲವು ರಾಜ್ಯ ನಾಯಕರು ನಗರದಲ್ಲಿ ಬೀಡು ಬಿಟ್ಟಿದ್ದು, ಸಮಾವೇಶದ ಸಕಲ ಸಿದ್ಧತೆ ಮೇಲೆ ನಿಗಾ ವಹಿಸಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಅವರು ಸಮಾವೇಶದ ಸಿದ್ಧತೆಯ ನೇತೃತ್ವ ವಹಿಸಿದ್ದಾರೆ.
ರಾಹುಲ್ ಸಮಾವೇಶ ಇನ್ನೆಲ್ಲಿ ?
ಮಾ.10ರಂದು ಉಡುಪಿ ಮತ್ತು ಮಾ.18ರಂದು ಕಲಬುರಗಿಯಲ್ಲಿ ರಾಹುಲ್ ರ್ಯಾಲಿ ನಡೆಸಲಿದ್ದಾರೆ. ಚುನಾವಣೆ ಘೋಷಣೆಯಾದ ಅನಂತರ ಮತ್ತೆ ಅವರು ಪ್ರಚಾರಕ್ಕೆ ಬರಲಿದ್ದಾರೆ.
ಕೇಂದ್ರದಲ್ಲಿ ಪ್ರಧಾನಿ ಮೋದಿ ಏನೂ ಮಾಡಿಲ್ಲ. ಇಲ್ಲಿಯ ಸಂಸದರೂ ಏನೂ ಕೆಲಸ ಮಾಡಿಲ್ಲ. ಈ ಬಾರಿ ಜನ ಬದಲಾವಣೆ ಬಯಸಿ ದ್ದಾರೆ. ಕಳೆದ ಮೂರು ಚುನಾವಣೆಗಳಲ್ಲಿ ನಾವು ಹಾವೇರಿ ಕ್ಷೇತ್ರದಲ್ಲಿ ಸೋತಿ¨ªೇವೆ. ಹಾವೇರಿ ಜನ ಈ ಬಾರಿ ನಮ್ಮನ್ನು ಗೆಲ್ಲಿಸುವ ವಿಶ್ವಾಸವಿದೆ. ಅದಕ್ಕಾಗಿಯೇ ರಾಹುಲ್ ಇಲ್ಲಿಗೆ ಬರುತ್ತಿದ್ದಾರೆ. ಈ ಬಾರಿ ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ 22ಕ್ಕೂ ಅಧಿಕ ಸ್ಥಾನಗಳಲ್ಲಿ ಗೆಲ್ಲಲಿದೆ.
-ದಿನೇಶ್ ಗುಂಡೂರಾವ್, ಕೆಪಿಸಿಸಿ ಅಧ್ಯಕ್ಷ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
IPL Auction: ಸಂಪೂರ್ಣ ಐಪಿಎಲ್ ಹರಾಜು ನಡೆಸಲಿದ್ದಾರೆ ಮಲ್ಲಿಕಾ ಸಾಗರ್
Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ
Bhairathi Ranagal Review: ರೋಣಾಪುರದ ರಣಬೇಟೆಗಾರ
Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.