52ರಿಂದ 165ನೇ ಸ್ಥಾನಕ್ಕಿಳಿದ ಮಂಗಳೂರು!


Team Udayavani, Mar 9, 2019, 4:42 AM IST

9-march-1.jpg

ಮಹಾನಗರ: ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯವು ಸ್ವಚ್ಛ ಭಾರತ ಮಿಷನ್‌ ಅಡಿಯಲ್ಲಿ ಸ್ವಚ್ಛತೆಗಾಗಿ ನಗರಗಳಿಗೆ ನೀಡುವ ರೇಟಿಂಗ್‌ ನಲ್ಲಿ ಕಳೆದ ಬಾರಿ 52ನೇ ಸ್ಥಾನದಲ್ಲಿದ್ದ ಮಂಗಳೂರು ಮಹಾನಗರ ಪಾಲಿಕೆಯು ಈ ಬಾರಿ 165ನೇ ಸ್ಥಾನಕ್ಕಿಳಿಯುವ ಮೂಲಕ ನಿರಾಸೆ ಮೂಡಿಸಿದೆ.

ದೇಶದಲ್ಲಿಯೇ ಘನತಾಜ್ಯ ನಿರ್ವಹಣೆಯಲ್ಲಿ ಅತ್ಯುತ್ತಮ ನಗರ ಎಂಬ ಮನ್ನಣೆ ಪಡೆದುಕೊಂಡು ಕಳೆದ ವರ್ಷ ಮೊದಲ ಸ್ಥಾನ ಗಳಿಸಿದ್ದ ಮಂಗಳೂರು ಈ ಬಾರಿ ಯಾವುದೇ ವಿಭಾಗಗಳಲ್ಲಿ ಮೆಚ್ಚುಗೆ ಗಳಿಸುವುದಕ್ಕೆ ಸಫಲವಾಗದೆ ಕಳೆದ ಬಾರಿಗಿಂತಲೂ ಕಡಿಮೆ ಅಂಕಪಡೆದುಕೊಂಡಿದೆ. ಸ್ವಚ್ಛತೆಯ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದ ಪಾಲಿಕೆ ಸಮೀಕ್ಷೆಯಲ್ಲಿ ಕಡಿಮೆ ಅಂಕ ಪಡೆದುಕೊಳ್ಳಲು ಸಾರ್ವಜನಿಕರ ಪಾಲ್ಗೊಳ್ಳುವಿಕೆ ನಿರೀಕ್ಷೆಗೆ ತಕ್ಕಂತೆ ಇಲ್ಲದಿರುವುದೇ ಪ್ರಮುಖ ಕಾರಣವಾಗಿದೆ. 

ಸ್ವಚ್ಛ  ಸರ್ವೇಕ್ಷಣ-2016ರಲ್ಲಿ 10 ಲಕ್ಷಕ್ಕಿಂತ ಹೆಚ್ಚು ಜನಸಂಖ್ಯೆಯುಳ್ಳ ನಗರಗಳನ್ನು ಆಯ್ಕೆ ಮಾಡಲಾಗಿತ್ತು. 2017ರಲ್ಲಿ ಒಂದು ಲಕ್ಷಕ್ಕಿಂತ ಹೆಚ್ಚು ಜನಸಂಖ್ಯೆಯುಳ್ಳ ನಗರಗಳನ್ನು ಆಯ್ಕೆ ಮಾಡಲಾಗಿತ್ತು. 2018 ರಿಂದ ಭಾರತ ದೇಶದ ಎಲ್ಲ ನಗರಗಳನ್ನು ಆಯ್ಕೆ ಮಾಡಿ ಕೊಂಡಿದೆ. ನಗರಗಳ ಸಂಖ್ಯೆ ಹೆಚ್ಚಾಗುವುದರಿಂದ ಪೈಪೋಟಿ ಹೆಚ್ಚಿತ್ತು. ಆದರೂ 52ನೇ ಸ್ಥಾನಪಡೆದು ಕೊಂಡಿತ್ತು. 

ಸಾರ್ವಜನಿಕರ ಭಾಗವಹಿಸುವಿಕೆ ಕಡಿಮೆ
ಸ್ವಚ್ಛ  ಸರ್ವೇಕ್ಷಣಾ 2019 ಸಮೀಕ್ಷೆಯಲ್ಲಿ ಸಾರ್ವಜನಿಕರ ಪಾಲ್ಗೊಳ್ಳುವಿಕೆ ಅತ್ಯಂತ ಪ್ರಾಮುಖ್ಯವನ್ನು ಹೊಂದಿದೆ. ಹೀಗಾಗಿ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯವು ಸ್ವಚ್ಚ ಭಾರತ ಮಿಷನ್‌ ಅಡಿಯಲ್ಲಿ ಸಾರ್ವಜನಿಕರಿಗೆ ಕೇಳಲಾಗುವ ಅಥವಾ ಆನ್‌ಲೈನ್‌-ಆ್ಯಪ್‌ ಮುಖಾಂತರ ನಡೆಸಲಾಗುವ ಸಮೀಕ್ಷೆಯಲ್ಲಿ ಭಾಗವಹಿಸಬೇಕಾಗಿತ್ತು. ಒಟ್ಟು ಅಂಕಗಳು 5,000 ಅಂಕಗಳಲ್ಲಿ ಸಾರ್ವಜನಿಕರ ಭಾಗವಹಿಸುವಿಕೆಗೆ 1,250 ಅಂಕಗಳು ನಿಗದಿಯಾಗಿತ್ತು. ಆದರೆ ಈ ಬಾರಿ ಕಳೆದ ವರ್ಷಕ್ಕಿಂತ ಶೇ.50ರಷ್ಟು ಸಾರ್ವಜನಿಕರು ಭಾಗವಹಿಸದೆ ಇರುವುದರಿಂದ ಅಂಕ ಕಡಿಮೆ ಬರುವ ಮೂಲಕ ಮಂಗಳೂರು ನಗರವು ವಾಸ್ತವದಲ್ಲಿ ಸಚ್ಛತೆ ಕಾಪಾಡುವುದರಲ್ಲಿ ಅಗ್ರಪಂಕ್ತಿಯಲ್ಲಿ ಇದ್ದರು ಕೂಡ ಸರ್ವೇಕ್ಷಣಾ ರೇಟಿಂಗ್‌ನಲ್ಲಿ ಮುಂಚೂಣಿಯ ಸ್ಥಾನ ಕಾಪಾಡುವುದಕ್ಕೆ ಸಾಧ್ಯವಾಗಿಲ್ಲ ಎನ್ನಲಾಗುತ್ತಿದೆ.

ಅಧಿಕಾರಿಗಳ ನಿರಾಸಕ್ತಿ
ಕಳೆದ ಬಾರಿ ಸ್ವಚ್ಛ  ಸರ್ವೇಕ್ಷಣಾ ಅಭಿಯಾನದ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಅನೇಕ ಕಾರ್ಯ ಕ್ರಮಗಳನ್ನು ಪಾಲಿಕೆ ಆಯೋಜಿಸಿತ್ತು. ಆದರೆ ಈ ಬಾರಿ ಸಾರ್ವಜನಿಕರನ್ನು ಸ್ವಚ್ಛ  ಸರ್ವೇಕ್ಷಣಾ ಸಮೀಕ್ಷೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವುದಕ್ಕೆ ಪೂರಕವಾದ ಕಾರ್ಯಕ್ರಮಗಳನ್ನು ಪಾಲಿಕೆಯು ಮಾಡಿರಲಿಲ್ಲ.

ಹೀಗಾಗಿ, ನಗರವಾಸಿಗಳು ಕೂಡ ಸಮೀಕ್ಷೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವತ್ತ ತಮ್ಮ ಆಸಕ್ತಿ ತೋರಿಸಿರಲಿಲ್ಲ. ಈ ಕಾರಣದಿಂದ ನಗರಕ್ಕೆ ಅತ್ಯುತ್ತಮ ಸಚ್ಛತಾ ನಗರ ಎನ್ನುವ ಮನ್ನಣೆ ಕೈತಪ್ಪಿದೆ ಎನ್ನಲಾಗಿದೆ. ನಗರದಲ್ಲಿ ಸ್ವಚ್ಛತೆಗಾಗಿ ಕೈಗೊಂಡ ಅಂಶಗಳನ್ನು ಪರಿಶೀಲಿಸಲು ಕೇಂದ್ರದ ಉನ್ನತ ಮಟ್ಟದ ಅಧಿಕಾರಿಗಳ ತಂಡ ನಗರಕ್ಕೆ ಆಗಮಿಸಿ ನಗರದ ಸ್ವಚ್ಛತೆಯನ್ನು ಪರಿಶೀಲಿಸಿತ್ತು. ಈ ಸಂದರ್ಭದಲ್ಲೂ ನಗರದ ರಸ್ತೆ ಬದಿಯ ಡಿವೈಡರ್‌ಗಳಿಗೆ ಬಣ್ಣ ಬಳಿಯುವುದು, ಫುಟ್‌ ಪಾತ್‌ಗಳನ್ನು ಸ್ವಚ್ಛಗೊಳಿಸುವುದು, ಸಾರ್ವಜನಿಕರ ಸ್ಥಳಗಳ ಡಸ್ಟ್‌ಬಿನ್‌ಗಳ ಸ್ವಚ್ಚತೆಯನ್ನು ಪಾಲಿಕೆ ಮಾಡಿಲ್ಲ ಎನ್ನುವ ಆರೋಪಗಳು ಕೇಳಿಬರುತ್ತಿದೆ.

ಹಸಿ ಕಸ-ಒಣ ಕಸ ಪ್ರತ್ಯೇಕಿಸುವಲ್ಲಿ ವಿಫಲ
ಮನಪಾದಿಂದ ಹಸಿ ಮತ್ತು ಒಣ ಕಸ ಸಂಗ್ರಹಣೆಗೆ ಪ್ರತ್ಯೇಕ ವ್ಯವಸ್ಥೆಯನ್ನು ಮಾಡಿದ್ದರೂ ಅದು ಸಮರ್ಪಕವಾಗಿ ಅನುಷ್ಠಾನಗೊಳಿಸುವಲ್ಲಿ ಪಾಲಿಕೆ ವಿಫಲ ವಾಗಿತ್ತು. ಪಾಲಿಕೆ ಕಟ್ಟುನಿಟ್ಟಿನ ಆದೇಶ ನೀಡದೆ ಇರುವುದರಿಂದ ಸಾರ್ವಜನಿಕರು ಕೂಡ ಕಸ ವಿಂಗಡನೆ ಬಗ್ಗೆ ಅಷ್ಟು ಗಂಭೀರವಾಗಿ ಪರಿಗಣಿಸಿಲ್ಲ. ಜತೆಗೆ, ಪಚ್ಚ ನಾಡಿಯ ತ್ಯಾಜ್ಯ ನಿರ್ವಹಣೆ ಘಟಕದಲ್ಲಿಯೂ ಕಸ ವಿಲೇವಾರಿಯು ವೈಜ್ಞಾನಿಕವಾಗಿ ಆಗುತ್ತಿಲ್ಲ ಎನ್ನುವ ಆರೋಪಗಳಿವೆ ಇದರಿಂದಲೂ ಅಂಕ ಕಡಿಮೆಯಾಗಿರುವ ಸಾಧ್ಯತೆ ಇದೆ. 

 ಸಾರ್ವಜನಿಕರು ಪಾಲ್ಗೊಳ್ಳುವಿಕೆ
ಕುಂಠಿತದಿಂದ ಹಿನ್ನಡೆ ಸ್ವಚ್ಛ ನಗರದ ಹಣೆ ಪಟ್ಟಿಯಲ್ಲಿ ಮುಂಚೂಣಿ ಸ್ಥಾನ ಪಡೆದುಕೊಳ್ಳುವುದಕ್ಕೆ ಈ ಬಾರಿಯೂ ಮಂಗಳೂರು ಪಾಲಿಕೆ ಶ್ರಮ ವಹಿಸಿತ್ತು. ಆದರೆ, ಸಾರ್ವಜನಿಕರ ಪಾಲ್ಗೊಳ್ಳುವಿಕೆ ಇಲ್ಲದೆ ಇರುವುದರಿಂದ ಈ ಬಾರಿ ಅಂಕ ಕುಂಠಿತವಾಗಿದೆ.
– ಭಾಸ್ಕರ್‌ ಕೆ., ಮಾಜಿ ಮೇಯರ್‌

ಹೆಚ್ಚು ಆಸಕ್ತಿ ವಹಿಸಿಲ್ಲ
ಸ್ವಚ್ಛ  ನಗರ ಎಂಬ ಬಿರುದು ಪಡೆದುಕೊಳ್ಳುವ ನಿಟ್ಟಿನಲ್ಲಿ ವಿವಿಧ ನಗರಗಳು ಹಲವು ವರ್ಷಗಳಿಂದ ಅನೇಕ ಪರಿಣಾಮಕಾರಿ ಕಾರ್ಯಕ್ರಮಗಳನ್ನು ಆಯೋಜಿಸುತ್ತಾ ಬಂದಿವೆ. ಆದರೆ ಪಾಲಿಕೆಯು ಈ ಬಾರಿ ಸ್ವಚ್ಛತಾ ಸಮೀಕ್ಷಾ ಅಭಿಯಾನದಲ್ಲಿ ಜನರನ್ನು ಹೆಚ್ಚು ಪಾಲ್ಗೊಳ್ಳುವಂತೆ ಮಾಡುವಲ್ಲಿ ಆಸಕ್ತಿ ತೋರಿಸಿದಂತಿಲ್ಲ. ಪಾಲಿಕೆಯೊಂದಿಗೆ ರಾಮಕೃಷ್ಣ ಮಠ ಕೈ ಜೋಡಿಸಿ ತನ್ನ ಕಡೆಯಿಂದ ಎಲ್ಲ ರೀತಿಯ ಪ್ರಯತ್ನ ಮಾಡಿತ್ತು. ನಗರ ದೇಶಮಟ್ಟದಲ್ಲಿ ಗುರುತಿ ಸುವಂತೆ ಮಾಡುವುದಕ್ಕೆ ಸಾರ್ವಜನಿಕರು ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು.
– ಏಕಗಮ್ಯಾನಂದ ಸ್ವಾಮೀಜಿ,
ರಾಮಕೃಷ್ಣ ಮಠ

ವಿಶೇಷ ವರದಿ

ಟಾಪ್ ನ್ಯೂಸ್

NITK-Padavi-pradana

Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್‌ ರಂಗರಾಜನ್‌

Nalin-Kateel

Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್‌

Padmaraj–JPoojary

Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್‌

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Udupi-DC-Dr.-Vidya-kumari

Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ

adani (2)

Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

NITK-Padavi-pradana

Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್‌ ರಂಗರಾಜನ್‌

Nalin-Kateel

Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್‌

Padmaraj–JPoojary

Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್‌

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.