![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Mar 9, 2019, 6:27 AM IST
ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಹಾಲಿ ಸಂಸದರಿಗೆ ಬಿಜೆಪಿ ಟಿಕೆಟ್ ಖಚಿತವಾಗಿದ್ದು, ಇದು ಉಡುಪಿ-ಚಿಕ್ಕಮಗಳೂರು ಕ್ಷೇತ್ರಕ್ಕೂ ಅನ್ವಯಿಸುತ್ತದೆ. ಗೋ ಬ್ಯಾಕ್ ಶೋಭಾ ಅಭಿಯಾನ ನಡೆಸಿದವರು ಪಕ್ಷದಲ್ಲಿರುವ ಟಿಕೆಟ್ ಆಕ್ಷಾಂಕಿಗಳು ಮತ್ತು ಅವರ ಬೆಂಬಲಿಗರ ಕುತಂತ್ರ ಇರಬೇಕು ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಹಿಂದೆಂದಿಗಿಂತಲೂ ಹೆಚ್ಚಿನ ಅಭಿವೃದ್ಧಿ ಕಾರ್ಯ ನಡೆದಿದೆ. ಟಿಕೆಟ್ ಹಂಚಿಕೆ ವಿಚಾರದಲ್ಲಿ ಅಮಿತ್ ಶಾ ರಾಜ್ಯ ನಾಯಕರೊಂದಿಗೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲಿದ್ದಾರೆ ಎಂದರು.
ಸಿಎಂ ವಿರುದ್ಧ ವಾಗ್ಧಾಳಿ: ಜಂತಕಲ್ ಮೈನಿಂಗ್ ಪ್ರಕರಣದಲ್ಲಿ ಷರತ್ತು ಬದ್ಧ ಜಾಮೀನು ಪಡೆದುಕೊಂಡಿರುವ ಮುಖ್ಯಮಂತ್ರಿ ಕುಮಾರಸ್ವಾಮಿ ನ್ಯಾಯಾಂಗದ ನಿಯಮ ಉಲ್ಲಂಘಿಸಿ 7 ಬಾರಿ ವಿದೇಶಿ ಪ್ರವಾಸ ಮಾಡಿದ್ದಾರೆ. ಕೇಂದ್ರ ಸರ್ಕಾರದ ಅನುದಾನವನ್ನು ಸರಿಯಾಗಿ ಬಳಸಿಕೊಳ್ಳದೆ ಉಡಾಫೆ ಮಾತಾಡುತ್ತಾ ಕಾಲಹರಣ ಮಾಡುತ್ತಿದ್ದಾರೆ ಎಂದರು.
ಕಾಂಗ್ರೆಸ್ ಹತಾಶ ರಾಜಕಾರಣ ಮಾಡುತ್ತಿದೆ. ಇಷ್ಟು ಸಾಲದು ಎನ್ನುವಂತೆ ತಿಲಕ ಕಂಡರೆ ಭಯವಾಗಲಿದೆ ಎಂದು ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ. ಅವರಿಗೆ ನಿಜಕ್ಕೂ ಭಯ ಆಗಲೇಬೇಕು. ಟಿಪ್ಪು ಸಲುವಾಗಿ ಅವರು ಕೆಲಸ ಮಾಡಿದ್ದರಿಂದ ಭಯ ಸಹಜ. ಸಿದ್ದರಾಮಯ್ಯ ಅವರ ಧರ್ಮದ ಓಲೈಕೆ ರಾಜಕಾರಣಕ್ಕೆ ಇದು ಸಾಕ್ಷಿ ಎಂದರು.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.