ವಿಮಾನಯಾನ ಆರಂಭ ಹುಸಿ ಭರವಸೆ


Team Udayavani, Mar 9, 2019, 10:58 AM IST

bid-1.jpg

ಬೀದರ: ದಶಕದಿಂದ ನನೆಗುದಿಗೆ ಬಿದ್ದಿರುವ ನಾಗರಿಕ ವಿಮಾನಯಾನ ಸೇವೆಯನ್ನು 2018-19ನೇ ಸಾಲಿನಲ್ಲಿ ಪ್ರಾರಂಭಿಸುವುದಾಗಿ ಭರವಸೆ ನೀಡಿದ್ದ ಜನ ಪ್ರತಿನಿಧಿಗಳ ಭರವಸೆ ಮತ್ತೆ ಹುಸಿಯಾಗಿದೆ.

2018-19ನೇ ಸಾಲಿನಲ್ಲಿ ಖಂಡಿತವಾಗಿ ವಿಮಾನ ಹಾರಾಟ ಶುರುವಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು ಹಾಗೂ ಇತರೆ ಜನ ಪ್ರತಿನಿಧಿಗಳು ವಿವಿಧೆಡೆ ನಡೆದ ಕಾರ್ಯಕ್ರಮಗಳಲ್ಲಿ ದೊಡ್ಡ ಭರವಸೆಗಳನ್ನು ನೀಡಿ ಜನರಲ್ಲಿ ಹೊಸ ಕನಸು ಹುಟ್ಟಿಸಿದ್ದರು. ಆದರೆ, ನೀಡಿದ ಭರವಸೆಯಂತೆ ಜನಪ್ರತಿನಿಧಿಗಳು ಮಾತ್ರ ಕೆಲಸ ಮಾಡುತ್ತಿಲ್ಲ ಎಂಬ ಆರೋಪ ಜಿಲ್ಲೆಯ ಜನರದಾಗಿದೆ.
 
ಟರ್ಮಿನಲ್‌ ಕಟ್ಟಡ: ನಗರದ ಹೊರವಲಯದ ಚಿದ್ರಿ ಸಮೀಪದ ವಾಯು ನೆಲೆ ತರಬೇತಿ ಕೇಂದ್ರದಲ್ಲಿ ನಾಗರಿಕ ವಿಮಾನಯಾನ ಸೇವೆ ಆರಂಭಿಸುವ ನಿಟ್ಟಿನಲ್ಲಿ ಭೂಸ್ವಾಧೀನ ಇತರೆ ಕಾಮಗಾರಿಗಳಿಗೆ 2007ರಲ್ಲಿ ಸರ್ಕಾರ ಅನುಮೋದನೆ ನೀಡಿತ್ತು. ಅಂದಾಜು 3 ಕೋಟಿ ರೂ. ವೆಚ್ಚದಲ್ಲಿ ಪ್ರತ್ಯೇಕ ಟರ್ಮಿನಲ್‌ ಕಟ್ಟಡ ನಿರ್ಮಿಸಲಾಗಿತ್ತು.

ಭೂ ಸ್ವಾಧೀನಕ್ಕೆ ರಾಜ್ಯ ಸರ್ಕಾರದಿಂದ 5.35 ಕೋಟಿಗೂ ಅಧಿಕ ಹಣ ಭರಿಸಲಾಗಿತ್ತು. ನಂತರ ಕಸ್ಟಮ್‌ ಅಧಿಕಾರಿಗಳ ಹಾಲ್‌, ಟ್ರಾಕ್‌ ಆಪರೇಟರ್‌ ಕೊಠಡಿ, ವಿಶ್ರಾಂತಿ ಕೋಣೆ ಹೊಂದಿರುವ ಟರ್ಮಿನಲ್‌ ನಿರ್ಮಿಸಲಾಗಿತ್ತು. ಆದರೆ, ಒಂದು ದಶಕದಲ್ಲಿಯೇ ಟರ್ಮಿನಲ್‌ ಕಟ್ಟಡ ಹಾಳಾಗಿದ್ದು, ಅನೇಕ ಅನುಮಾನಕ್ಕೆ ಕಾರಣವಾಗಿದೆ. ಬಳಕೆ ಮಾಡದ ಕಟ್ಟಡ ಹೇಗೆ ಹಾಳಾಯ್ತು ಎಂಬ ಪ್ರಶ್ನೆ ಜನರನ್ನು ಕಾಡುತ್ತಿದ್ದು, ಈ ಕುರಿತು ತನಿಖೆ ನಡೆಸುವುದು ಸೂಕ್ತ ಎಂಬ ಅಭಿಪ್ರಾಯಗಳು ಕೇಳಿ ಬರುತ್ತಿವೆ.

ರಾಜಕೀಯಕ್ಕೆ ಸೀಮಿತ: ಪ್ರಸಕ್ತ ವರ್ಷದಲ್ಲಿ ವಿಮಾನ ಹಾರಾಟ ಶುರುವಾಗುತ್ತದೆ ಎಂದು ಹೇಳುತ್ತಿದ್ದ ಜಿಲ್ಲೆಯ ಜನ ಪ್ರತಿನಿಧಿಗಳು ರಾಜಕೀಯ ಮಾಡುತ್ತಿದ್ದಾರೆ ಎಂಬ ಆರೋಪಗಳು ಕೇಳಿ ಬರುತ್ತಿವೆ. ಚುನಾಯಿತ ಜನಪ್ರತಿನಿಧಿಗಳು ಜಿಲ್ಲೆಯ ಜನರಿಗೆ ಹಗಲ ಕನಸು ತೋರಿಸುತ್ತಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಮನ್ವಯದಿಂದ ಕೆಲಸ ಮಾಡಿದ್ದರೆ ಜಿಲ್ಲೆಯಲ್ಲಿ ಕೂಡ ಸಾರ್ವಜನಿಕರಿಗೆ ವಿಮಾನ ಸೇವೆ ದೊರೆಯುತ್ತಿತ್ತು. ಜನ ಪ್ರತಿನಿಧಿಗಳು ಪ್ರಾಮಾಣಿಕತೆಯಿಂದ ಸರ್ಕಾರದ ಮೇಲೆ ಒತ್ತಡ ಹೇರಿದ್ದರೆ ಈ ವರೆಗೆ ತಾತ್ಕಾಲಿಕ ವಿಮಾನ ಸೇವೆ ಆರಂಭಗೊಳ್ಳುತ್ತಿತ್ತು. ರಾಜಕಾರಣಿಗಳ ಇಚ್ಛಾಶಕ್ತಿ ಕೊರತೆಯಿಂದ ಒಂದು ದಶಕದಿಂದ ಯೋಜನೆ ನನೆಗುದಿಗೆ ಬಿದ್ದಿದೆ ಎಂಬುದು ಜನರ ಮಾತು.

ವಿಮಾನಯಾನಕ್ಕೆ ಬೇಕಿರುವ ಭೂಸ್ವಾ ಧೀನ ಪ್ರಕ್ರಿಯೆಗಳು ನಡೆದಿದೆ. ಜಿಎಂಆರ್‌ ಕಂಪನಿಯೊಂದಿಗೆ ಒಪ್ಪಂದ ಮಾಡಿಕೊಳ್ಳುವ ಪ್ರಕ್ರಿಯೆ ಸರ್ಕಾರ ಮಟ್ಟದಲ್ಲಿ ಇದೆ.  ಡಾ| ಎಚ್‌.ಆರ್‌. ಮಹಾದೇವ, ಜಿಲ್ಲಾಧಿಕಾರಿ ಬಳಕೆಯಾಗದ ಬೀದರ್‌ ನಾಗರಿಕ ವಿಮಾನಯಾನ ಟರ್ಮಿನಲ್‌ ಕಟ್ಟಡ ಅಭಿವೃದ್ಧಿಗಾಗಿ ಪ್ರಸಕ್ತ ಸಾಲಿನ ರಾಜ್ಯ ಬಜೆಟ್‌ನಲ್ಲಿ 32 ಕೋಟಿ ಅನುದಾನ ಘೊಷಣೆ ಮಾಡಲಾಗಿದೆ. ವಿಮಾನಯಾನ ಶುರು ಮಾಡಬೇಕಾದರೆ ಹೆಚ್ಚು ಭೂಮಿ ಬೇಕು ಎಂದು ಜಿಎಂಆರ್‌ ಕಂಪನಿ ಜಿಲ್ಲಾಡಳಿತಕ್ಕೆ 8 ತಿಂಗಳ ಹಿಂದೆ ಪ್ರಸ್ತಾವನೆ ಸಲ್ಲಿಸಿತ್ತು. ಇದೀಗ ಸುತ್ತಲ್ಲಿನ 13.03 ಎಕರೆ ಭೂಮಿಯನ್ನು ಜಿಲ್ಲಾಡಳಿತ ಗುರುತಿಸಿದೆ. ಇದಕ್ಕಾಗಿ ಈಗಾಗಲೇ ಸರ್ಕಾರ 15 ಕೋಟಿ ಅನುದಾನ ಕೂಡ ಬಿಡುಗಡೆ ಮಾಡಿದೆ. ಮುಂದಿನ ಒಂದು ವಾರದಲ್ಲಿ ಭೂಮಿ ಖರೀದಿ ಪ್ರಕ್ರಿಯೆಗಳು ಪೂರ್ಣಗೊಳ್ಳಲಿವೆ.
 ಬಲಭೀಮ ಕಾಂಬಳೆ, ಯೋಜನಾಧಿಕಾರಿ

ದುರ್ಯೋಧನ ಹೂಗಾರ

ಟಾಪ್ ನ್ಯೂಸ್

UI Movie: ಉಪ್ಪಿ ಯುಐ ಮೆಚ್ಚಿದ ಯಶ್‌

UI Movie: ಉಪ್ಪಿ ಯುಐ ಮೆಚ್ಚಿದ ಯಶ್‌

Rajasthan:150 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಮಗು; 3 ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯ

Rajasthan:150 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಮಗು; 3 ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯ

Shivaraj Kumar: ಶಿವರಾಜ್‌ ಕುಮಾರ್‌ ಅವರ ಆಪರೇಷನ್‌ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ

Shivaraj Kumar: ಶಿವರಾಜ್‌ ಕುಮಾರ್‌ ಅವರ ಆಪರೇಷನ್‌ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ

5-mudigere

Mudigere: ಆಕಸ್ಮಿಕ ಬೆಂಕಿ ತಗುಲಿ ಕಟ್ಟಡದಲ್ಲಿದ್ದ ಫೈನಾನ್ಸ್ ಕಚೇರಿಗೆ ಬೆಂಕಿ ಸುಟ್ಟು ಭಸ್ಮ

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 25ಕ್ಕೂ ಅಧಿಕ ಸಾ*ವು

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು

4-max

Max: ಇಂದು ಸುದೀಪ್‌ ಮ್ಯಾಕ್ಸ್‌ ತೆರೆಗೆ; ಆ್ಯಕ್ಷನ್‌ ಅಡ್ಡದಲ್ಲಿ ಕಿಚ್ಚ ಮಿಂಚು

3-

Gundlupete: ಬೋನಿಗೆ ಬಿದ್ದ ಗಂಡು ಚಿರತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

police

Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು

ಮಾಜಿ ಉಪ ಸಭಾಪತಿ ಶತಾಯುಷ್ಸಿ ಕೇಶವರಾವ ನಿಟ್ಟೂರಕರ ಅಸ್ತಂಗತ

Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ

police

Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ

ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ

Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

UI Movie: ಉಪ್ಪಿ ಯುಐ ಮೆಚ್ಚಿದ ಯಶ್‌

UI Movie: ಉಪ್ಪಿ ಯುಐ ಮೆಚ್ಚಿದ ಯಶ್‌

Rajasthan:150 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಮಗು; 3 ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯ

Rajasthan:150 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಮಗು; 3 ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯ

Shivaraj Kumar: ಶಿವರಾಜ್‌ ಕುಮಾರ್‌ ಅವರ ಆಪರೇಷನ್‌ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ

Shivaraj Kumar: ಶಿವರಾಜ್‌ ಕುಮಾರ್‌ ಅವರ ಆಪರೇಷನ್‌ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ

5-mudigere

Mudigere: ಆಕಸ್ಮಿಕ ಬೆಂಕಿ ತಗುಲಿ ಕಟ್ಟಡದಲ್ಲಿದ್ದ ಫೈನಾನ್ಸ್ ಕಚೇರಿಗೆ ಬೆಂಕಿ ಸುಟ್ಟು ಭಸ್ಮ

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 25ಕ್ಕೂ ಅಧಿಕ ಸಾ*ವು

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.