ದೇವೇಗೌಡರು 28 ಮಕ್ಕಳಿಲ್ಲವಲ್ಲಾ ಎಂದು ಕೊರಗುತ್ತಿದ್ದಾರೆ: ಈಶ್ವರಪ್ಪ
Team Udayavani, Mar 9, 2019, 12:26 PM IST
ಬಾಗಲಕೋಟೆ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು 28 ಮಕ್ಕಳಿಲ್ಲವಲ್ಲಾ ಎಂದು ಕೊರಗುತ್ತಿದ್ದಾರೆ. ಇದ್ದಿದ್ದರೆ ರಾಜ್ಯದ ಎಲ್ಲಾ ಕ್ಷೇತ್ರಗಳಿಗೂ ಅಭ್ಯರ್ಥಿಗಳನ್ನಾಗಿಸುತ್ತಿದ್ದರು. 14 ಮಕ್ಕಳಿದ್ದರೂ ಉಳಿದ 14 ಕ್ಷೇತ್ರಗಳಿಗೆ ಸೊಸೆಯಂದಿರನ್ನು ನಿಲ್ಲಿಸುತ್ತಿದ್ದರು ಎಂದು ಬಿಜೆಪಿ ನಾಯಕ ಕೆ.ಎಸ್.ಈಶ್ವರಪ್ಪ ಶುಕ್ರವಾರ ಲೇವಡಿ ಮಾಡಿದ್ದಾರೆ.
ಸಿದ್ದರಾಮಯ್ಯ ಕ್ರಿಮಿನಲ್ ಎನ್ನುವುದರಲ್ಲಿ ಯಾವುದೇ ಅನುಮಾನವಿಲ್ಲ .ಸೋನಿಯಾ ಗಾಂಧಿ,ರಾಹುಲ್ ಗಾಂಧಿ ಅವರೂ ಕುಂಕುಮ ಇಟ್ಟುಕೊಳ್ಳುತ್ತಾರೆ. ಅವರೆಲ್ಲ ಕ್ರಿಮಿನಲ್ಗಳಾ ? ಕುಂಕುಮಕ್ಕೆ ಪಾವಿತ್ರ್ಯತೆ ಇದೆ ಎಂದು ಕಿಡಿ ಕಾರಿದರು.
ಸಿದ್ದರಾಮಯ್ಯ ಅವರು ಅಧಿಕಾರದಲ್ಲಿದ್ದಾಗ ಹಿಂದೂಪರ ಕಾರ್ಯಕರ್ತರ ಕೊಲೆಗಡುಕರಿಗೆ ರಕ್ಷಣೆ ನೀಡಿದ್ದರು. ಸಿಎಂ ಸ್ಥಾನ ಹೋದ ಮೇಲೂ ಬಿಜೆಪಿಯನ್ನು ಟೀಕಿಸಿತ್ತಿದ್ದು , ನಿದ್ರೆಯಲ್ಲೂ ಅವರಿಗೆ ಕುಂಕುಮ ಕಾಣುತ್ತಿದೆ.ಸಿದ್ದರಾಮಯ್ಯ ಕಾಂಗ್ರೆಸ್ನ ಬಂಡುಕೋರರ ನಾಯಕ ಎಂದು ಕಿಡಿ ಕಾರಿದರು.
ಸುಮಲತಾ ಅಂಬರೀಶ್ ಅವರು ನನಗೆ ಸಹೋದರಿಗೆ ಸಮಾನ. ಅವರ ವಿರುದ್ಧ ಅವಮಾನಕರ ಹೇಳಿಕೆ ನೀಡಿದ ಸಚಿವ ರೇವಣ್ಣ ಕ್ಷಮೆ ಕೇಳಬೇಕು. ಅಲ್ಲವಾದಲ್ಲಿ ತೆನೆ ಹೊತ್ತ ಮಹಿಳೆ ಚಿಹ್ನೆಯನ್ನು ಬಳಸಿಕೊಳ್ಳುವ ಹಕ್ಕು ಜೆಡಿಎಸ್ಗೆ ಇರುವುದಿಲ್ಲ ಎಂದರು.
ಇದೇ ವೇಳೆ ನನಗೆ ಲೋಕಸಭಾ ಚುನಾವಣೆಯಲ್ಲಿ ಆಸಕ್ತಿ ಇಲ್ಲ. ತಾಕತ್ ಇದ್ದರೆ ಸಿದ್ದರಾಮಯ್ಯ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಾಗಲಕೋಟೆಯಿಂದ ಸ್ಪರ್ಧಿಸಲಿ ಎಂದು ಸವಾಲು ಹಾಕಿದರು.
ರಾಹುಲ್ ಗಾಂಧಿ ಅವರು ಬಾಗಲಕೋಟೆಗೆ ಬಂದು ಹೋದರೆ ಬಿಜೆಪಿಗೆ ಅನುಕೂಲವಾಗುತ್ತದೆ. ನಾನು ಇಲ್ಲಿನ ಉಸ್ತುವಾರಿ ಇದ್ದೇನೆ, ಅವರು ಬಂದರೆ ನಮ್ಮ ಗೆಲುವಿಗೆ ಅನುಕೂಲವಾಗುತ್ತದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ
Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ
Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್
Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ
Tragedy: ಭೀಕರ ಬೈಕ್ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.