ಕನ್ನಡಿಗ ಕಲಾವಿದರ ಪರಿಷತ್ತು ಮಹಾರಾಷ್ಟ್ರ:ಸಾಂಸ್ಕೃತಿಕ ಕಲಾಮಹೋತ್ಸವ


Team Udayavani, Mar 9, 2019, 9:55 PM IST

0903mum07.jpg

ಮುಂಬಯಿ: 12 ವರ್ಷದ ಪ್ರೌಢ ಕನ್ನಡಿಗ ಕಲಾವಿದರ ಸಂಸ್ಥೆಗೆ ವರ್ಷ ಹೆಚ್ಚಾದಂತೆ ಗೌರವ ಹೆಚ್ಚಾಗುತ್ತಿದೆ. ಇದು ಮೆಚ್ಚುವಂಥದ್ದು. ಯೌವನಕ್ಕೆ ಕಾಲಿಡುವ ಸಂಭ್ರಮ. ರಾಷ್ಟ್ರವನ್ನು ನರೇಂದ್ರ, ಮಹಾರಾಷ್ಟ್ರವನ್ನು ದೇವೇಂದ್ರ, ಕಲಾ ಪರಿಷತ್ತನ್ನು ಸುರೇಂದ್ರ ನಡೆಸುತ್ತಿದ್ದಾರೆ. ಅಂತೆಯೇ ಇಂದ್ರನಿಲ್ಲದೆ ಯಾವುದೂ ಅಸಾಧ್ಯ ಎಂಬುವುದಕ್ಕೆ ಈ ಕಾರ್ಯಕ್ರಮ ಸಾಕ್ಷಿಯಾಗಿದೆ. ಬೆಳಗುವುದಕ್ಕೆ ಇಂದ್ರನಂಥವರ ಅಗತ್ಯವಿದೆ. ಇಂತಹ ಗಣ್ಯರ ಮುನ್ನಡೆಯಿಂದ ಈ ಸಂಸ್ಥೆ ಕಾರ್ಯ ನೆರವೇರಿಸುತ್ತಿದೆ. ಶ್ರೀಕೃಷ್ಣನ ಅನುಗ್ರಹದಿಂದ ಸಂಸ್ಥೆ ಬೆಳೆದು ಶತಮಾನ ಕಾಣಲಿ ಎಂದು ಶ್ರೀ ಪೇಜಾವರ ಮಠದ ಮುಂಬಯಿ ಶಾಖೆಯ ಆಡಳಿತಾಧಿಕಾರಿ ವಿದ್ವಾನ್‌ ಡಾ| ರಾಮದಾಸ ಉಪಾಧ್ಯಾಯ ರೆಂಜಾಳ ತಿಳಿಸಿದರು.
ಮಾ. 9 ರಂದು ಸಂಜೆ ಸಾಂತಾಕ್ರೂಜ್‌ ಪೂರ್ವದ ಬಿಲ್ಲವ ಭವನದ ಸಭಾಗೃಹದಲ್ಲಿ ಕರ್ನಾಟಕ ಸರಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರದೊಂದಿಗೆ ಕನ್ನಡಿಗ ಕಲಾವಿದರ ಪರಿಷತ್ತು ಮಹಾರಾಷ್ಟ್ರ ಇದರ ವಾರ್ಷಿಕ ಸಾಂಸ್ಕೃತಿಕ  ಕಲಾ ಮಹೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕಲಾವಿದರೆಲ್ಲರನ್ನು ಒಂದೇ ವೇದಿಕೆಯಡಿಯಲ್ಲಿ ಒಗ್ಗೂಡಿ ಸುತ್ತಿರುವ ಈ ಸಂಸ್ಥೆಯ ಕಾರ್ಯವೈಖರಿ ಅಭಿನಂದನೀಯವಾಗಿದೆ ಎಂದರು.

ಪರಿಷತ್ತಿನ ಅಧ್ಯಕ್ಷ ಸುರೇಂದ್ರ ಕುಮಾರ್‌ ಹೆಗ್ಡೆ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಫೋರ್‌ಕಾಸ್ಟ್‌ ಎಡ್ವರ್‌ಟೈಸಿಂಗ್‌ ಪ್ರೈವೇಟ್‌ ಲಿಮಿಟೆಡ್‌  ಕಾರ್ಯ ನಿರ್ದೇಶಕ ಗಣೇಶ್‌ ಶ್ಯಾನ್‌ಬಾಗ್‌, ಗೌರವ ಅತಿಥಿಗಳಾಗಿ  ಕನ್ನಡ ಸೇವಾ ಸಂಘ ಪೊವಾಯಿ ಅಧ್ಯಕ್ಷ ಕರುಣಾಕರ ವಿ. ಶೆಟ್ಟಿ, ಮುಲುಂಡ್‌ ಫ್ರೆಂಡ್ಸ್‌ ಅಧ್ಯಕ್ಷ ಸುರೇಶ್‌ ಶೆಟ್ಟಿ ಯೆಯ್ನಾಡಿ, ಖಾರ್‌ಘರ್‌  ಕನ್ನಡ ಸಂಘ ಅಧ್ಯಕ್ಷೆ ನಳಿನಾ ಪ್ರಸಾದ್‌, ಉದ್ಯಮಿ ಹಾಗೂ ಸಮಾಜ ಸೇವಕ  ಆರ್‌. ಕೆ. ನಾಯರ್‌, ರಾಧಾಕೃಷ್ಣ ಆಕಾಡೆಮಿಯ  ಸ್ಥಾಪಕ ನಿರ್ದೇಶಕಿ ಸುಕನ್ಯಾ ಸುಬ್ರಹ್ಮಣ್ಯ ಭಟ್‌ ಉಪಸ್ಥಿತರಿದ್ದು ಸಾಂದರ್ಭಿಕವಾಗಿ ಮಾತನಾಡಿ ಶುಭಹಾರೈಸಿದರು.

ಮುಖ್ಯ ಅತಿಥಿ ಗಣೇಶ್‌ ಶ್ಯಾನ್‌ಬಾಗ್‌ ಅವರು ಮಾತನಾಡಿ,  ನನ್ನನ್ನು ನಿಮ್ಮಂತಹ ಕಲಾವಿದರೊಂದಿಗೆ ಸೇರಿಸಿಕೊಂಡು ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಅವಕಾಶವನ್ನು ನೀಡಿದ್ದು ಅತೀವ ಸಂತೋಷ ತಂದುಕೊಟ್ಟಿದೆ. ಕಲೆಗೆ ಅಂತ್ಯವಿಲ್ಲ, ಆದರೆ ಯುವ ಜನಾಂಗವನ್ನು ಕಲೆಯತ್ತ ಸೇರಿಸಿಕೊಳ್ಳುವ ಕೆಲಸ ನಮ್ಮಿಂದಾಗಬೇಕು. ಇವತ್ತು ಮಾಧ್ಯಮ ಮತ್ತು ತಾಂತ್ರಿಕ ವ್ಯವಸ್ಥೆ ಮೇಲ್ಮಟ್ಟಕ್ಕೆ ತಲುಪಿದ್ದು, ಆದರ ಸದುಪಯೋಗವನ್ನು ಇಂದಿನ ಕಲಾವಿದರು ಪಡೆದುಕೊಳ್ಳಬೇಕು. ವಿಶೇಷವಾಗಿ ಯುವ ಜನಾಂಗ ಪಡೆದುಕೊಳ್ಳುವಂತೆ ನಾವೂ ಮಾರ್ಗದರ್ಶಕರಾಗಬೇಕು ಎಂದರು.

ಅಪರ್ಣಾ ಭಟ್‌ ಪ್ರಾರ್ಥನೆಗೈದರು. ಉಪಾಧ್ಯಕ್ಷ ಕಮಲಾಕ್ಷ ಜಿ. ಸರಾಫ್‌ ಸ್ವಾಗತಿಸಿ ಅತಿಥಿಗಳನ್ನು ಪರಿಚಯಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಉಪಾಧ್ಯಕ್ಷ ಅರವಿಂದ ಶೆಟ್ಟಿ ಕೊಜಕೊಳಿ,  ಗೌರವ ಪ್ರಧಾನ  ಕೋಶಾಧಿಕಾರಿ ಪಿ. ಬಿ, ಚಂದ್ರಹಾಸ್‌, ಜೊತೆ ಕಾರ್ಯದರ್ಶಿ ಚಂದ್ರಾವತಿ ದೇವಾಡಿಗ,  ಜೊತೆ ಕೋಶಾಧಿಕಾರಿ ನವೀನ್‌ ಶೆಟ್ಟಿ ಇನ್ನಬಾಳಿಕೆ, ಸಂಚಾಲಕ ರಮೇಶ್‌ ಶಿವಪುರ,  ಸಂಚಾಲಕಿ ಕುಸುಮಾ  ಸಿ. ಪೂಜಾರಿ, ಮಾಜಿ ಕಾರ್ಯದರ್ಶಿ ರಾಜು ಶ್ರೀಯಾನ್‌ ನಾವುಂದ ಅವರು ಅತಿಥಿಗಳನ್ನು ಪುಷ್ಪಗುಚ್ಚ, ಸ್ಮರಣಿಕೆಯನ್ನಿತ್ತು  ಗೌರವಿಸಿದರು. ವಿಜಯ ಶೆಟ್ಟಿ ಕುತ್ತೆತ್ತೂರು ಸಭಾ ಕಾರ್ಯಕ್ರಮ ನಿರೂಪಿಸಿದರು. ಗೌರವ  ಪ್ರಧಾನ  ಕಾರ್ಯದರ್ಶಿ ಬಾಬಾಪ್ರಸಾದ್‌ ಅರಸ ವಂದಿಸಿದರು.

ಸಾಂಸ್ಕೃತಿಕ ಕಲಾಮಹೋತ್ಸವವಾಗಿ ವಿವಿಧ ಕಲಾ ಸಂಸ್ಥೆಗಳಿಂದ “ನೃತ್ಯಸಂಗಮ’ ಮತ್ತು ಕಲಾ ಸೌರಭ ತಂಡದ ನಿರ್ದೇಶಕ ಪದ್ಮನಾಭ ಸಸಿಹಿತ್ಲು ನಿರ್ದೇಶನದಲ್ಲಿ “ಗಾನ ಸಂಭ್ರಮ’ ಕಾರ್ಯಕ್ರಮನ್ನು ಹಾಗೂ ಪರಿಷತ್ತಿನ ಸದಸ್ಯರಿಂದ   ರಂಗ ಕಲಾವಿದ ರಮೇಶ್‌ ಶಿವಪುರ ನಿರ್ದೇಶನದಲ್ಲಿ “ತಾಳಮದ್ದಲೆ’ ಕನ್ನಡ ನಾಟಕ ಪ್ರದರ್ಶನಗೊಂಡಿತು. ಸಾಂಸ್ಕೃತಿಕ  ಕಾರ್ಯಕ್ರಮವನ್ನು ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ತಾರಾ ಬಂಗೇರ ನಿರ್ವಹಿಸಿದರು. ಸಂಸ್ಥೆಯ ಸದಸ್ಯ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.       

ಕನ್ನಡಿಗ ಕಲಾವಿದರ ಪರಿಷತ್ತು  ಕಲೆಗೆ ಮತ್ತು ಕಲಾವಿದರಿಗೆ ಪ್ರೋತ್ಸಾಹ ನೀಡುವುದರ ಜತೆಗೆ ಅವರ ಸಮಸ್ಯೆಗಳಿಗೆ ಸದಾ ಸ್ಪಂದಿಸುತ್ತಿದೆ. ಕಲಾವಿದರಿಗೆ ವೈದ್ಯಕೀಯ ನೆರವು, ಮಕ್ಕಳಿಗೆ ಶೈಕ್ಷಣಿಕ ನೆರವು ನೀಡಲಾಗುತ್ತಿದೆ. ಇಂದಿನ ಸಮಾರೋಪ ಸಮಾರಂಭದಲ್ಲಿಯೂ ಕಲಾವಿದರಿಗೆ ಧನ ಸಹಾಯ ನೀಡಲಿದ್ದೇವೆ. ಓರ್ವ ವ್ಯಕ್ತಿಗೆ ಮನೆ ಇಲ್ಲದಿದ್ದರೆ ಸಮಾಧಾನದಿಂದ ಇರಲು ಸಾಧ್ಯವಿಲ್ಲ.  ಅದೇ ರೀತಿಯಲ್ಲಿ ಸಂಸ್ಥೆಯೊಂದು ಸ್ವಂತ ಮನೆಯ ಆವಶ್ಯಕತೆಯಿದೆ. ಪರಿಷತ್ತು ಕೂಡ ವೃಕ್ಷವಾಗಿ ಬೆಳೆಯುತ್ತಿದ್ದು, ಇದಕ್ಕಾಗಿ ಸ್ವಂತ ಕಚೇರಿಯ ಅಗತ್ಯವಿದೆ. ಅದಕ್ಕಾಗಿ ಎಲ್ಲರೂ ಒಂದುಗೂಡಿ ಸ್ಪಂದಿಸಬೇಕು.
 – ಡಾ| ಸುರೇಂದ್ರ ಕುಮಾರ್‌ ಹೆಗ್ಡೆ 
            
ಚಿತ್ರ-ವರದಿ: ರೋನ್ಸ್‌  ಬಂಟ್ವಾಳ್‌

ಟಾಪ್ ನ್ಯೂಸ್

Anthyarambha: ನ.28ರಂದು ಕೊಂಕಣಿ ಚಲನಚಿತ್ರ “ಅಂತ್ಯಾರಂಭ’ ಪ್ರದರ್ಶನ

Anthyarambha: ನ.28ರಂದು ಕೊಂಕಣಿ ಚಲನಚಿತ್ರ “ಅಂತ್ಯಾರಂಭ’ ಪ್ರದರ್ಶನ

Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್

Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್

4-bharamasagara

Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್‌ ಆದ ಯುವಕನ ಹತ್ಯೆ

ಸಿಎಸ್‌ ಕೆ ಮಾಲಿಕ ಶ್ರೀನಿವಾಸನ್‌ ವಿರುದ್ದ ಫಿಕ್ಸಿಂಗ್‌ ಆರೋಪ ಮಾಡಿದ ಲಲಿತ್ ಮೋದಿ

IPL : ಸಿಎಸ್‌ಕೆ ಮಾಲಿಕ ಶ್ರೀನಿವಾಸನ್‌ ವಿರುದ್ದ ಫಿಕ್ಸಿಂಗ್‌ ಆರೋಪ ಮಾಡಿದ ಲಲಿತ್ ಮೋದಿ

Ranchi

Ranchi: ಪ್ರೇಯಸಿಯನ್ನು ಕೊಂದು 40ರಿಂದ 50 ತುಂಡು ಮಾಡಿದ ಕಟುಕ!

ICC Champions Trophy to be completely moved from Pakistan?: Decision will be taken at ICC meeting

ICC ಚಾಂಪಿಯನ್ಸ್‌ ಟ್ರೋಫಿ ಪಾಕಿಸ್ತಾನದಿಂದ ಸಂಪೂರ್ಣ ಸ್ಥಳಾಂತರ?: ಐಸಿಸಿ ಸಭೆಯಲ್ಲಿ ನಿರ್ಧಾರ

Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ

Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

5-koratagere

ಇಸ್ಪೀಟ್ ಅಡ್ಡೆಯ ಮೇಲೆ ಡಿವೈಎಸ್ಪಿ ದಾಳಿ; ಮಾಜಿ ಅಧ್ಯಕ್ಷ-ಹಾಲಿ ಉಪಾಧ್ಯಕ್ಷ ಸೇರಿ 8 ಜನರ ಬಂಧನ

Anthyarambha: ನ.28ರಂದು ಕೊಂಕಣಿ ಚಲನಚಿತ್ರ “ಅಂತ್ಯಾರಂಭ’ ಪ್ರದರ್ಶನ

Anthyarambha: ನ.28ರಂದು ಕೊಂಕಣಿ ಚಲನಚಿತ್ರ “ಅಂತ್ಯಾರಂಭ’ ಪ್ರದರ್ಶನ

Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್

Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್

4-bharamasagara

Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್‌ ಆದ ಯುವಕನ ಹತ್ಯೆ

Kiccha Sudeep’s max movie releasing on Dec 25th

Kiccha Sudeepa: ಕ್ರಿಸ್ಮಸ್‌ ಗೆ ಬರುತ್ತಿದೆ ʼಮ್ಯಾಕ್ಸ್‌ʼ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.