ಕನ್ನಡ ಸಾಹಿತ್ಯ ಸಂಸ್ಕೃತಿಯ ಬೆಳವಣಿಗೆ : ದತ್ತಿ ಉಪನ್ಯಾಸ
Team Udayavani, Mar 10, 2019, 1:00 AM IST
ಗೋಣಿಕೊಪ್ಪಲು: ಕೆಲವರು ಕನ್ನಡದ ನೆಲ ಹಾಗೂ ಭಾಷೆಯ ಬಗೆ ಬಂಡವಾಳ ವಾಗಿಸಿಕೊಂಡು ಕನ್ನಡ ಅಳಿದು ಹೋಗುತ್ತದೆ ಎಂಬ ಆತಂಕಕಾರಿ ಹೇಳಿಕೆಗಳನ್ನು ನೀಡುತ್ತಾ ಕನ್ನಡದ ಮನಸ್ಸುಗಳ ಮೇಲೆ ಅಘಾತವನ್ನು ನೀಡುತ್ತಿದ್ದಾರೆ. ಎಂದು ಕವಿ,ಸಾಹಿತಿ ಜಗದೀಶ್ ಜೋಡುಬೀಟಿ ವಿಷಾದ ವ್ಯಕ್ತಪಡಿಸಿದರು.
ಪೊನ್ನಂಪೇಟೆ ಅರಣ್ಯ ಮಹಾ ವಿದ್ಯಾಲಯದಲ್ಲಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಹಾಗೂ ಅರಣ್ಯ ಮಹಾ ವಿದ್ಯಾಲಯದ ಸಹಯೋಗದಲ್ಲಿ ನಡೆದ ದಿ. ಎಂ.ಜಿ. ಪದ್ಮನಾಭ ಕಾಮತ್ ದತ್ತಿ ಉಪನ್ಯಾಸ ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ವಾಣಿಜ್ಯೋದ್ಯಮಿಗಳ ಕೊಡುಗೆ ಎಂಬ ವಿಚಾರವಾಗಿ ಮಾತನಾಡಿದರು.
ಚಕ್ಕೇರ ಮುತ್ತಣ್ಣ, ಚರಿಯಪಂಡ ಕುಶಾಲಪ್ಪ, ಡಾ. ಮೇಚಿರ ನಾಣಯ್ಯ ಹಾಗೂ ಮಲ್ಲಂಡ ನಂಜಪ್ಪ ಅವರ ಕನ್ನಡ ಪರ ಚಟುವಟಿಕೆ ಮತ್ತು ಜೀವನ ಆಧರಿತ ವಿಚಾರಗಳನ್ನು ವಿದ್ಯಾರ್ಥಿಗಳಿಗೆ ಉಪನ್ಯಾಸ ನೀಡಿದರು.
ಕಾರ್ಯಕ್ರಮವನ್ನು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಲೋಕೇಶ್ ಸಾಗರ್ ಜ್ಯೋತಿ ಬೆಳಗುವ ಮೂಲಕ ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು ವಿದ್ಯಾರ್ಥಿಗಳು ಕನ್ನಡದ ಇತಿಹಾಸದ ಬಗೆ ತಿಳಿದುಕೊಂಡು ಕನ್ನಡದ ಬಗೆ ಅಭಿಮಾನ ಮೂಡಿಸಿಕೊಳ್ಳಬೇಕು. ಶಿಕ್ಷಣದೊಂದಿಗೆ ಸಾಹಿತ್ಯ ಪರ ಚಟುವಟಿಕೆಗಳಲ್ಲಿಯೂ ತೊಡಗಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮುಲ್ಲೇಂಗಡ ಮಧೋಶ್ ಪೂವಯ್ಯ ಅರಣ್ಯ ಮಹಾ ವಿದ್ಯಾಲಯದ ಡೀನ್, ಚೆಪ್ಪುಡೀರ ಕುಶಾಲಪ್ಪ ಮಾತನಾಡಿದರು.
ಜಿಲ್ಲಾ ಲೇಖಕರ ಸಂಘದ ಅಧ್ಯಕ್ಷ ಹಾಗೂ ದತ್ತಿ ದಾನಿಗಳಾದ ಎಂ.ಪಿ. ಕೇಶವ ಕಾಮತ್ ಮಾತನಾಡಿ ಸಮಾಜಕ್ಕೆ ನಮ್ಮ ಕೊಡುಗೆಯ ಬಗೆ ನಮ್ಮ ಮುಂದಿನ ತಲೆಮಾರಿನವರು ನೆನೆಸಿಕೊಳ್ಳುವ ಕಾರ್ಯ ಮಾಡಬೇಕು. ಹೀಗಾಗಿ ಸಾಹಿತ್ಯ ಪರಿಷತ್‌ನಲ್ಲಿ ದತ್ತಿ ಇಡುವ ಮೂಲಕ ನಮ್ಮ ತಂದೆ, ಮುತ್ತಾಂದಿರ ನೆನಪಿಕೊಳ್ಳುವ ಕಾರ್ಯವಾಗುತ್ತಿದೆ ಎಂದು ತಿಳಿಸಿದರು.
ತಾ.ಕ.ಸ.ಪ. ಕಾರ್ಯದರ್ಶಿ ನಳಿನಾಕ್ಷಿ, ನಿರ್ದೇಶಕ ವೈಲೇಶ್,ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Ullala: ಗ್ಯಾಸ್ ಸಿಲಿಂಡರ್ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ
Actress: ರೊಮ್ಯಾನ್ಸ್ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.