“ಮಾನಸಿಕ ಮಾಲಿನ್ಯ ದೂರವಾದಾಗ ವಿಶ್ವಶಾಂತಿ’
Team Udayavani, Mar 10, 2019, 12:30 AM IST
ಬೆಳ್ತಂಗಡಿ: ಬಾಹುಬಲಿ ತನ್ನ ಜೀವನದಲ್ಲಿ ಸಾಧಿಸಿ ತೋರಿಸಿದ ಅಹಿಂಸೆ, ತ್ಯಾಗ, ವೈರಾಗ್ಯ ಮೊದಲಾದ ಮೌಲ್ಯಗಳಿಂದ ಶಾಂತಿ, ಸಾಮರಸ್ಯ ಸಾಧ್ಯವಾಗುತ್ತದೆ ಎಂದು ಕನಕಗಿರಿ ಜೈನ ಮಠದ ಭುವನಕೀರ್ತಿ ಭಟ್ಟಾರಕ ಸ್ವಾಮೀಜಿ ಹೇಳಿದರು.
ಧರ್ಮಸ್ಥಳದ ರತ್ನಗಿರಿಯಲ್ಲಿ ಭಗವಾನ್ ಶ್ರೀ ಬಾಹುಬಲಿ ಸ್ವಾಮಿಗೆ ಶನಿವಾರ ಮೈಸೂರು ಮತ್ತು ಚಾಮರಾಜನಗರ ಜೈನ ಸಮಾಜದ ವತಿಯಿಂದ ನಡೆದ ಮಹಾಮಸ್ತಕಾಭಿಷೇಕ ಸಂದರ್ಭದಲ್ಲಿ ಅವರು ಮಾತನಾಡಿದರು.
ಮಾನಸಿಕ ಮಾಲಿನ್ಯ, ವಿಕಾರಗಳು ದೂರವಾದಾಗ ವಿಶ್ವಶಾಂತಿಯೊಂದಿಗೆ ಲೋಕ ಕಲ್ಯಾಣವಾಗುತ್ತದೆ. ತ್ಯಾಗದ ಸಂಕೇತವಾಗಿ ಬಾಹುಬಲಿಗೆ ಮಹಾ ಮಸ್ತಕಾಭಿಷೇಕ ನಡೆಸಲಾಗುತ್ತದೆ. ದೇವರು, ಗುರುಗಳು, ಶಾಸ್ತ್ರದ ಸಾಕ್ಷಿಯಾಗಿ ಎಲ್ಲರ ಅನುಗ್ರಹಕ್ಕಾಗಿ ಭಕ್ತಿಯ ಸೇವೆ ಮಾಡಲಾಗುತ್ತದೆ. ನಿತ್ಯ ಜೀವನದಲ್ಲಿ ಪಂಚಾಣುವ್ರತಗಳ ಪಾಲನೆ ಮಾಡಬೇಕು. ತನ್ನ ಆತ್ಮನನ್ನು ನೋಡಿ ಸಂತೋಷ ಪಡುವುದು ಅಂದರೆ ಆತ್ಮಾವಲೋಕನವೇ ಸಮ್ಯಕ್ ದರ್ಶನವಾಗಿದೆ. ಇದರಿಂದ ಆತ್ಮ ಶುದ್ಧಿಯಾಗಿ ಆತ್ಮಶಕ್ತಿ ಜಾಗೃತವಾಗುತ್ತದೆ ಎಂದರು.
ಧರ್ಮದ ನೆಲೆ
ಧರ್ಮಸ್ಥಳವು ಧರ್ಮದ ನೆಲೆವೀಡಾಗಿದ್ದು, ಇಲ್ಲಿ ಮನ, ವಚನ, ಕಾಯದಿಂದ ಧರ್ಮ ಸದಾ ಜಾಗೃತವಾಗಿರುತ್ತದೆ. ಧರ್ಮದ ಅನುಷ್ಠಾನವಾಗುತ್ತಿದೆ. ಸ್ವ-ಪರ ಹಿತಕ್ಕಾಗಿ ಶ್ರಮಿಸುವವರೆ ಸತು³ರುಷರು. ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ರತ್ನತ್ರಯ ಧರ್ಮ ಪಾಲನೆಯೊಂದಿಗೆ ಲೋಕಕಲ್ಯಾಣಕ್ಕಾಗಿ ಸದಾ ಶ್ರಮಿಸು ತ್ತಿದ್ದಾರೆ ಎಂದು ಸ್ವಾಮೀಜಿ ಹೇಳಿದರು.
1,008 ಕಲಶಗಳಿಂದ ಮಹಾಮಸ್ತಕಾಭಿಷೇಕ
ನೀರು, ಹಾಲು, ಎಳನೀರು, ಅರಿಶಿನ, ಕೇಸರಿ, ಕಷಾಯ, ಕಬ್ಬಿನ ರಸ, ಕಲ್ಕಚೂರ್ಣ, ಶ್ರೀಗಂಧ, ಚಂದನ ಅಷ್ಟಗಂಧ ಮೊದಲಾದ ಮಂಗಲ ದ್ರವ್ಯಗಳಿಂದ ಬಾಹುಬಲಿ ಸ್ವಾಮಿಗೆ 1,008 ಕಲಶಗಳಿಂದ ಮಹಾಮಸ್ತಕಾಭಿಷೇಕ ನಡೆಯಿತು.
ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಅವರು ಕನಕಗಿರಿ ಭುವನಕೀರ್ತಿ ಸ್ವಾಮೀಜಿಯವರನ್ನು ಗೌರವಿಸಿದರು. ಪೂಜ್ಯ ಮುನಿಗಳಾದ ಆದಿತ್ಯ ಸಾಗರ್ ಮುನಿ ಮಹಾರಾಜ್ ಮತ್ತು ಸಹಜ ಸಾಗರ್ ಮುನಿ ರಾಜರು ಉಪಸ್ಥಿತರಿದ್ದರು.
ಸೋಂದಾ ಮಠದ ಭಟ್ಟಾಕಲಂಕ ಸ್ವಾಮೀಜಿ ಮತ್ತು ತಮಿಳುನಾಡು ಅರಿಹಂತಗಿರಿಯ ಧವಳಕೀರ್ತಿ ಭಟ್ಟಾರಕರು ಉಪಸ್ಥಿತರಿದ್ದರು. ಹೇಮಾವತಿ ವೀ. ಹೆಗ್ಗಡೆ, ಡಿ. ಹಷೇìಂದ್ರ ಕುಮಾರ್, ಸುಪ್ರಿಯಾ ಹಷೇìಂದ್ರ ಕುಮಾರ್ ಇದ್ದರು.
ಇಂದು ಮಹಾಮಸ್ತಕಾಭಿಷೇಕ
ತಮಿಳುನಾಡು ಜೈನ ಸಮಾಜದ ವತಿಯಿಂದ ಅರಿಹಂತಗಿರಿ ಧವಳಕೀರ್ತಿ ಭಟ್ಟಾರಕರ ನೇತೃತ್ವದಲ್ಲಿ ಮಾ. 10ರಂದು ಬಾಹುಬಲಿ ಸ್ವಾಮಿಗೆ 1,008 ಕಲಶಗಳಿಂದ ಮಹಾಮಸ್ತಕಾಭಿಷೇಕ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Madarsa Act: ಯುಪಿ ಮದರಸಾ ಕಾಯ್ದೆ ಸಿಂಧುತ್ವ ಎತ್ತಿಹಿಡಿದ ಸುಪ್ರೀಂ
Kharge: ಬೆಂಗಳೂರಿಗೆ ಬಂದು ನನ್ನ ಜತೆ ಚರ್ಚೆಗೆ ನಿಲ್ಲಿ: ಪ್ರಧಾನಿ ಮೋದಿಗೆ ಖರ್ಗೆ ಸವಾಲು
IPL Mega Auction: ನ.24 ಮತ್ತು 25 ಜೆಡ್ಡಾದಲ್ಲಿ ಐಪಿಎಲ್ ಹರಾಜು
Gautam Adani: ಯುಪಿಎ ಅವಧಿಯಲ್ಲಿ ರಾಹುಲ್ ಭೇಟಿಗೆ ಯತ್ನಿಸಿದ್ದರೇ ಅದಾನಿ?
Sharad Pawar: ಚುನಾವಣಾ ರಾಜಕೀಯ ನಿವೃತ್ತಿ ಸುಳಿವು ನೀಡಿದ ಎನ್‌ಸಿಪಿ ವರಿಷ್ಠ ಶರದ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.