ಮೈಸೂರನ್ನು ಜೆಡಿಎಸ್‌ಗೆ ಬಿಟ್ಟುಕೊಡಬೇಡಿ’
Team Udayavani, Mar 10, 2019, 1:22 AM IST
ಬೆಂಗಳೂರು: ಜೆಡಿಎಸ್, ಮೈಸೂರು ಕ್ಷೇತ್ರವನ್ನು ಬಿಟ್ಟು ಕೊಡುವಂತೆ ಪಟ್ಟು ಹಿಡಿದಿರುವ ಬೆನ್ನಲ್ಲೇ, ಮೈಸೂರು ಜಿಲ್ಲಾ ಕಾಂಗ್ರೆಸ್ ಮುಖಂಡರು ಶನಿವಾರ ಶಾಸಕಾಂಗ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ಯಾವುದೇ ಕಾರಣಕ್ಕೂ ಮೈಸೂರು-ಕೊಡಗು ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟು ಕೊಡಬಾರದು ಎಂದು ಒತ್ತಡ ಹೇರಿದ್ದಾರೆ. ಈ ಬಗ್ಗೆ ಹೈಕಮಾಂಡ್ ಜೊತೆ ಚರ್ಚಿಸಿ, ನಿರ್ಧಾರ ಕೈಗೊಳ್ಳುವುದಾಗಿ ಸಿದ್ದು ಭರವಸೆ ನೀಡಿದ್ದಾರೆ ಎನ್ನಲಾಗಿದೆ. ಮಾಜಿ ಸಚಿವರಾದ ಡಾ.ಎಚ್.ಸಿ.ಮಹದೇವಪ್ಪ, ಮಾಜಿ ಶಾಸಕ ವಾಸು, ಸೋಮಶೇಖರ್ ಸೇರಿದಂತೆ ಜಿಲ್ಲೆಯ ಮುಖಂಡರು ಸಿದ್ದು ಜೊತೆ ಚರ್ಚೆ ನಡೆಸಿದ್ದು, ಕ್ಷೇತ್ರದಲ್ಲಿ ಈ ಬಾರಿ ಕಾಂಗ್ರೆಸ್‌ಗೆ ಗೆಲ್ಲುವ ಅವಕಾಶ ಹೆಚ್ಚಿದ್ದು, ಜೆಡಿಎಸ್‌ಗೆ ಬಿಟ್ಟು ಕೊಟ್ಟರೆ, ಜಿಲ್ಲೆಯಲ್ಲಿ ಪಕ್ಷದ ಅಸ್ಥಿತ್ವಕ್ಕೆ ಧಕ್ಕೆಯಾಗುತ್ತದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kerala govt: ಶಬರಿಮಲೆ ವರ್ಚುವಲ್ ಕ್ಯೂ ಬುಕ್ಕಿಂಗ್ ಮಿತಿ ಹೆಚ್ಚಳ
Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು
G20 Leaders Summit: ಪ್ರಧಾನಿ ಮೋದಿ ನೈಜೀರಿಯಾ, ಬ್ರೆಜಿಲ್, ಗಯಾನಾ ಪ್ರವಾಸ ಶುರು
Chhattisgarh: ನೀರಿನ ಬಾವೀಲಿ ಪೆಟ್ರೋಲ್: ಸಂಗ್ರಹಕ್ಕೆ ಮುಗಿಬಿದ್ದ ಜನ
Manipur: ಸಿಎಂ ಬಿರೇನ್ ಸಿಂಗ್ ಮನೆಗೆ ನುಗ್ಗಲು ಯತ್ನಿಸಿದ ಗುಂಪು; ಹೆಚ್ಚಿದ ಹಿಂಸಾಚಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.