ತಾಯಿ-ಮಗು “ಸಹಾಯವಾಣಿ’ ಆರಂಭಕ್ಕೆ ಚಿಂತನೆ: ಪ್ರಿಯಾಂಕ್
Team Udayavani, Mar 10, 2019, 5:12 AM IST
ಕಲಬುರಗಿ: ರಾಜ್ಯ ಸರ್ಕಾರ ತಾಯಿ ಹಾಗೂ ಮಗುವಿನ ಆರೋಗ್ಯ ಕುರಿತು ಸಹಾಯವಾಣಿ ಆರಂಭಿಸುವ ಚಿಂತನೆ ಹೊಂದಿದ್ದು, ಈ ನಿಟ್ಟಿನಲ್ಲಿ ಕೆಲಸ ನಡೆಯುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
ನಗರದ ಬಿಗ್ ಬಜಾರ ಎದುರಿಗೆ ಆರಂಭವಾಗಿರುವ ಹೆಜಲ್ ಟ್ರಿ ಮದರ್ ಆಂಡ್ ಚೈಲ್ಡ್ ಹಾಸ್ಪಿಟಲ್‌ಗೆ ಭೇಟಿ ನೀಡಿ ಮಾತನಾಡಿ, ತಾಯಿ ಹಾಗೂ ಮಗುವಿನ ಆರೋಗ್ಯದ ಕುರಿತು ಒಂದೇ ಸೂರಿನಡಿ ಚಿಕಿತ್ಸೆ ನೀಡುವ ಪರಿಕಲ್ಪನೆ ಅದ್ಭುತವಾಗಿದೆ. ಅಲ್ಲದೇ ಆಸ್ಪತ್ರೆ ಸ್ವತ್ಛತೆ ಕಾರ್ಯ ಮೆಚ್ಚುವಂತದ್ದಾಗಿದೆ ಎಂದರು.
ಕಲಬುರಗಿ ನಗರ ಆರೋಗ್ಯ ವಿಭಾಗದಲ್ಲಿ ಮುಂದಿನ ದಿನಗಳಲ್ಲಿ ಪ್ರಾದೇಶಿಕ ಕೇಂದ್ರವಾಗಿ ಹೊಮ್ಮುತ್ತಿದೆ. ಸರ್ಕಾರದ ಹಿಂದಿನ ಪ್ರಯತ್ನದ ಫಲವಾಗಿ ಜಯದೇವ, ಕಿದ್ವಾಯಿ ಇತ್ಯಾದಿ ಸ್ಥಾಪನೆಯಾಗಿ ಕಾರ್ಯ ನಿರ್ವಹಿಸುತ್ತಿವೆ. ಇವುಗಳ ಸೇವೆ ಪಡೆದ ಜನರು ಸಂತಸ ವ್ಯಕ್ತಪಡಿಸುತ್ತಿದ್ದಾರೆ.
ಹೀಗಾಗಿ ಸರ್ಕಾರ ಎಂಎಂಆರ್ ಹಾಗೂ ಐಎಂಆರ್‌ನ್ನು ನಗರಕ್ಕೆ ತರಲು ಪ್ರಯತ್ನಿಸುತ್ತಿದೆ ಎಂದರು.
ರಾಜ್ಯ ಸರ್ಕಾರ ಯಶಸ್ವಿ ಯೋಜನೆಯಾದ ಯಶಸ್ವಿನಿ ಯೋಜನೆ ಜಾರಿಗೆ ತರಲಿದೆ. ಸರ್ಕಾರದೊಂದಿಗೆ ಸಾರ್ವಜನಿಕ ಆರೋಗ್ಯ ಯೋಜನೆಗಳನ್ನು ಖಾಸಗಿ ಸೆಕ್ಟರ್‌ನವರು ತಮ್ಮ ಕೊಡುಗೆ ನೀಡಬಹುದಾಗಿದೆ. ಅಲ್ಲದೇ ಜನೋಪಕಾರಿ ಹಾಗೂ ಜನಸ್ನೇಹಿಯಾದ ಯಶಸ್ವಿನಿ ಯೋಜನೆಯನ್ನು ಹಿಂದಿನ ಕಾಂಗ್ರೆಸ್ ಸರ್ಕಾರ 2001ರಲ್ಲಿ ಜಾರಿಗೆ ತಂದಿತ್ತು. ದೇಶದಲ್ಲಿಯೇ ಈ ತರಹದ್ದು ಪ್ರಥಮ ಯೋಜನೆಯಾಗಿದೆ ಎಂದು ಹೇಳಿದರು.
ಡಾ| ವಿಕ್ರಮ ಸಿದ್ದಾರೆಡ್ಡಿ, ಡಾ| ಪ್ರಶಾಂತ ಕುಲಕರ್ಣಿ, ಡಾ| ಮಮತಾ ಪಾಟೀಲ, ಡಾ| ಚಂದ್ರಿಕಾ ಲಾಖೆ, ಸಂತೋಷ ಪಾಟೀಲ, ಗಣೇಶ ವಂದನೆ ಹಾಗೂ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ
ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Madikeri: ಲಾರಿ ಡಿಕ್ಕಿಯಾಗಿ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಬಾಲಕಿ ಸಾವು
Mumbai Cricket: ಸಚಿನ್ ತೆಂಡೂಲ್ಕರ್ ಸಲಹೆಯನ್ನೂ ನಿರ್ಲಕ್ಷಿಸಿದರಾ ಪೃಥ್ವಿ ಶಾ..
Teacher: ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!
Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!
High Court: ಗುರು ರಾಘವೇಂದ್ರ ಬ್ಯಾಂಕ್ ಅಧ್ಯಕಗೆ ಜಾಮೀನು ನಿರಾಕರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.