ಜೆಡಿಎಸ್‌ ಬೆಂಬಲವಿಲ್ಲದಿದ್ದರೂ ಗೆಲ್ಲುತ್ತಿದ್ದೆ


Team Udayavani, Mar 10, 2019, 7:48 AM IST

m4-jdss.jpg

ತಿ.ನರಸೀಪುರ: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕೊಳ್ಳೇಗಾಲ ಕ್ಷೇತ್ರದಲ್ಲಿ ಜೆಡಿಎಸ್‌ ಜೊತೆ ಮೈತ್ರಿ ಮಾಡಿಕೊಳ್ಳದಿದ್ದರೂ, ಆ ಪಕ್ಷದ ಬೆಂಬಲವಿಲ್ಲದೆ ಗೆಲ್ಲುತ್ತಿದ್ದೆ. ಮೈತಿಯಿಂದಾಗಿ ಬಿಎಸ್ಪಿ ಮತಗಳಿಕೆ ಪ್ರಮಾಣ ಇಲ್ಲವಾಗಿದೆ. ರಾಜ್ಯದಲ್ಲಿ ಈ ಬಾರಿ ಬಿಎಸ್ಪಿ 28 ಲೋಕಸಭಾ ಕ್ಷೇತ್ರದಲ್ಲೂ ಸ್ಪರ್ಧಿಸಲಿದೆ ಎಂದು ಬಿಎಸ್ಪಿ ರಾಜ್ಯ ಸಂಯೋಜಕ, ಕೊಳ್ಳೇಗಾಲ ಶಾಸಕ ಎನ್‌.ಮಹೇಶ್‌ ತಿಳಿಸಿದರು.

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ನಡೆದ ಬಹುಜನ ಸಮಾಜ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು,  ಈಗಾಗಲೇ ರಾಜ್ಯ ಉಸ್ತುವಾರಿಗಳ ಹೆಸರನ್ನು ಪ್ರಕಟಿಸಲಾಗಿದ್ದು, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ಸಿ.ಎಸ್‌.ದ್ವಾರಕನಾಥ್‌ ಹೆಸರು ಅಂತಿಮಗೊಳಿಸಲಾಗಿದೆ. ಚಾಮರಾಜನಗರ ಮೀಸಲು ಕ್ಷೇತ್ರದ ಅಭ್ಯರ್ಥಿ ಹೆಸರು ಮಾ.15ರ ಸಮಾವೇಶದಲ್ಲಿ ಪ್ರಕಟಗೊಳ್ಳಲಿದೆ ಎಂದರು. 

ನಂಜನಗೂಡು ವಿಧಾನಸಭೆ ಉಪ ಚುನಾವಣೆಯಲ್ಲಿ ಅಂದಿನ ಕಾಂಗ್ರೆಸ್‌ ಸರ್ಕಾರ ಅಭಿವೃದ್ಧಿ ನಿಗಮಗಳನ್ನು ದುರ್ಬಳಕೆ ಮಾಡಿಕೊಂಡು ಜನರಿಗೆ ಆಮಿಷವೊಡ್ಡಿ, ದಲಿತ ನಾಯಕ ಶ್ರೀನಿವಾಸ್‌ಪ್ರಸಾದ್‌ ಅವರ ವರ್ಚಸ್ಸಿಗೆ ಮಸಿ ಬಳಿದು ಗೆದ್ದಿತ್ತು. ಇದೇ ರೀತಿ ಕೇಂದ್ರದ ಬಿಜೆಪಿ ಸರ್ಕಾರ ವಚನಭ್ರಷ್ಟತೆಯಿಂದ ತಪ್ಪಿಸಿಕೊಳ್ಳಲು ಕಿಸಾನ್‌ ಸಮ್ಮಾನ್‌ ಯೋಜನೆಯಡಿ ರೈತರಿಗೆ ವರ್ಷಕ್ಕೆ 6 ಸಾವಿರ ರೂ.ಗಳನ್ನು ಖಾತೆಗೆ ಹಾಕುವ ಮೂಲಕ ಚುನಾವಣಾ ಆಮಿಷವೊಡ್ಡಿ, ಜನರನ್ನು ತಾಲೂಕು ಕಚೇರಿಗೆ ಅಲೆಯುವಂತೆ ಮಾಡಿದೆ ಎಂದು ಕಿಡಿಕಾರಿದರು. 

ರಾಮನನ್ನು ಬಿಟ್ಟು ಗನ್‌ ಹಿಡಿದ ಮೋದಿ: ಪ್ರತಿ ಚುನಾವಣೆಯಲ್ಲೂ ರಾಮಮಂದಿರ ನಿರ್ಮಾಣ ನೆಪದಲ್ಲಿ ಜನರನ್ನು ಧಾರ್ಮಿಕವಾಗಿ ಕೆರಳಿಸಿ ಬಿಜೆಪಿ ಅಧಿಕಾರ ಹಿಡಿಯುತ್ತಿತ್ತು. ಆದರೆ, ಈ ಬಾರಿ ಪ್ರಧಾನಿ ನರೇಂದ್ರ ಮೋದಿ ರಾಮನನ್ನು ಬದಿಗೆ ಬಿಟ್ಟು ಗನ್‌ ಹಿಡಿದು ಚುನಾವಣೆಗೆ ಹೊರಟಿದ್ದಾರೆ.

ಚುನಾವಣೆಯ ಪೂರ್ವದಲ್ಲೇ ಪುಲ್ವಾಮ ಘಟನೆ ನಡೆದಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ದೇಶದಲ್ಲಿ ಯಾರೇ ಪ್ರಧಾನಿಯಾದರೂ ದೇಶವನ್ನು ಸೈನಿಕರು ಕಾಯುವ ಕಾಯಕವನ್ನು ಮಾಡುತ್ತಾರೆ. ಆದರೆ, ಈ ಬಾರಿ ಪ್ರಧಾನಿ ಮೋದಿ ಚುನಾವಣೆಗೆ ಪಾಕ್‌ ದಾಳಿಯ ನೆಪದಲ್ಲಿ ಸೈನಿಕರನ್ನು ಬಳಸಿಕೊಳ್ಳುತ್ತಿದ್ದಾರೆ ಎಂದು ಬಿಜೆಪಿ ವಿರುದ್ಧ ವಾಗ್ಧಾಳಿ ನಡೆಸಿದರು.

ಅತಂತ್ರ ಸ್ಥಿತಿ: ಲೋಕಸಭಾ ಚುನಾವಣೆಯಲ್ಲಿ ಕೇಂದ್ರದಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾಗಲಿದ್ದು, ಉತ್ತರ ಪ್ರದೇಶವೊಂದರಲ್ಲಿಯೇ 31 ಬಿಎಸ್ಪಿ ಸಂಸದರು ಗೆಲ್ಲುವುದರಿಂದ ಈ ಬಾರಿ ಪಕ್ಷದ ವರಿಷ್ಠೆ ಮಾಯಾವತಿ ಪ್ರಧಾನ ಆಗುವುದು ಬಹುತೇಕ ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬಿಎಸ್ಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಾದೇಶ್‌ ಉಪ್ಪಾರ್‌ ಮಾತನಾಡಿ, ಲೋಕಸಭಾ ಚುನಾವಣೆಯನ್ನು ಕಾರ್ಯಕರ್ತರು ಹಾಗೂ ಮುಖಂಡರು ಸವಾಲಾಗಿ ಸ್ವೀಕರಿಸಿ ನರಸೀಪುರ ಹಾಗೂ ವರುಣಾ ವಿಧಾನಸಭಾ ಎರಡೂ ಕ್ಷೇತ್ರಗಳಿಂದ 1 ಲಕ್ಷ ಮತವನ್ನು ಪಕ್ಷಕ್ಕೆ ಕೊಡಿಸಬೇಕು. ಕಾಂಗ್ರೆಸ್‌ ಹಾಗೂ ಬಿಜೆಪಿ ನಾಟಕಗಳನ್ನು ಜನರಿಗೆ ತಿಳಿಸುವ ಮೂಲಕ ಮತದಾರರನ್ನು ಜಾಗೃತಿಗೊಳಿಸಿ ಚಾಮರಾಜನಗರ ಕ್ಷೇತ್ರದಲ್ಲಿ ಬಿಎಸ್ಪಿ ಸಂಸದರು ಆಯ್ಕೆಗೊಳ್ಳಲು ಶ್ರಮಿಸಬೇಕು ಎಂದು ಕೋರಿದರು.

ಕ್ಷೇತ್ರಾಧ್ಯಕ್ಷ ಬಿ.ಆರ್‌.ಪುಟ್ಟಸ್ವಾಮಿ ಮಾತನಾಡಿದರು. ಸಭೆಯಲ್ಲಿ ಬಿಎಸ್ಪಿ ವಿಭಾಗದ ಉಸ್ತುವಾರಿ ಸೋಸಲೆ ಸಿದ್ದರಾಜು, ಜಿಲ್ಲಾಧ್ಯಕ್ಷ ಕೆ.ಎನ್‌.ಪ್ರಭುಸಾಮಿು, ವರುಣಾ ಬ್ಲಾಕ್‌ ಅಧ್ಯಕ್ಷ ಸುರೇಶ್‌, ತಾಪಂ ಮಾಜಿ ಸದಸ್ಯ ಕುಕ್ಕೂರು ಪುಟ್ಟಣ್ಣ, ಕ್ಷೇತ್ರ ಉಸ್ತುವಾರಿ ಯರಗನಹಳ್ಳಿ ಬಿ.ಮಹದೇವಸ್ವಾಮಿ, ಪ್ರಧಾನ ಕಾರ್ಯದರ್ಶಿ ಪುಟ್ಟಮರುಡಯ್ಯ, ಮುಖಂಡರಾದ ಸೀನಪ್ಪ, ಸೋಮೇಶ, ಮನ್ನೇಹುಂಡಿ ನಾಗರಾಜು, ಕೈಯಂಬಳ್ಳಿ ಪುಟ್ಟಸ್ವಾಮಿ ಸೇರಿದಂತೆ ಹೋಬಳಿವಾರು ಮುಖಂಡರು ಹಾಗೂ ಕಾರ್ಯಕರ್ತರು ಹಾಜರಿದ್ದರು.

ಪ್ರತಿ ಬೂತ್‌ನಲ್ಲೂ  300 ಮತ ಪಡೆಯಿರಿ: ಬೂತ್‌ವಾರು ಜನರೊಂದಿಗೆ ಬೆರೆತು ಮತದಾರರನ್ನು ಜಾಗೃತಗೊಳಿಸುವ ಕೆಲಸವನ್ನು ಈಗಿನಿಂದ ಕಾರ್ಯಕರ್ತರು ಮಾಡಬೇಕು. ಮುಂದಿನ ಸ್ಥಳೀಯ ಚುನಾವಣೆಯಲ್ಲಿ ಆನೆ ಚಿಹ್ನೆಯನ್ನು ಉಳಿಸಿಕೊಳ್ಳಲು ಹಾಗೂ ಬಿಎಸ್ಪಿ ರಾಷ್ಟ್ರೀಯ ಪಕ್ಷದ ಮಾನ್ಯತೆ ಉಳಿಸಿಕೊಳ್ಳಬೇಕಾದರೆ 8 ಲಕ್ಷ ಮತಗಳನ್ನು ಗಳಿಸಲೇಬೇಕು ಎಂದು ಶಾಸಕ ಎನ್‌. ಮಹೇಶ್‌ ಎಚ್ಚರಿಸಿದರು.

ರಾಜ್ಯದಿಂದ ಕನಿಷ್ಠ ಇಬ್ಬರು ಸಂಸದರನ್ನು ಆಯ್ಕೆ ಮಾಡಬೇಕಾದ ಜವಾಬ್ದಾರಿ ಕಾರ್ಯಕರ್ತರ ಮೇಲಿದ್ದು, ಚಿಕ್ಕಬಳ್ಳಾಪುರ ಹಾಗೂ ಚಾಮರಾಜನಗರ ಲೋಕಸಭಾ ಕ್ಷೇತ್ರಗಳೆರಡನ್ನೂ ಈ ಬಾರಿ ಗೆಲ್ಲಲೇಬೇಕು. ಪ್ರತಿಯೊಂದು ಬೂತ್‌ನಲ್ಲಿ 300 ಮತಗಳು ಪಡೆಯಬೇಕು ಎಂದು ಮನವಿ ಮಾಡಿದರು. 

ಟಾಪ್ ನ್ಯೂಸ್

1-reee

Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್

baby 2

Hospital ನಿಂದ ಶಿಶುವಿನ ಅಪಹರಣ: ರೈಲು ನಿಲ್ದಾಣದಲ್ಲಿ ರಕ್ಷಣೆ: ಇಬ್ಬರ ಬಂಧನ

Nirmala 2 a

Middle class; ಮಧ್ಯಮ ವರ್ಗದವರಿಗೆ ಪರಿಹಾರ: ಎಕ್ಸ್ ಬಳಕೆದಾರಗೆ ನಿರ್ಮಲಾ ಪ್ರತಿಕ್ರಿಯೆ

arrested

Big Boss ಸ್ಪರ್ಧಿಯಾಗಿದ್ದ ನಟ-ಗಾಯಕ ಮಾದಕ ವಸ್ತು ಸಹಿತ ಬಂಧನ

Pushpa 2 trailer: ಪೈಸಾ ವಸೂಲ್‌ ಅವತಾರದಲ್ಲಿ ʼಪುಷ್ಪರಾಜ್‌ʼ; ಅಲ್ಲು ಭರ್ಜರಿ ಆ್ಯಕ್ಷನ್

Pushpa 2 trailer: ಪೈಸಾ ವಸೂಲ್‌ ಅವತಾರದಲ್ಲಿ ʼಪುಷ್ಪರಾಜ್‌ʼ; ಅಲ್ಲು ಭರ್ಜರಿ ಆ್ಯಕ್ಷನ್

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

1-balaaaa

Raj Thackeray ಮಹಾ ಫಲಿತಾಂಶದ ನಂತರ ಪ್ರಮುಖ ಪಾತ್ರ ವಹಿಸಲಿದ್ದಾರೆ: ನಂದಗಾಂವ್ಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

2-hunsur

Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ

1-amudaa

MUDA: ಇ.ಡಿ.ಯಿಂದ ಮಾಜಿ ಅಧ್ಯಕ್ಷ ಮರಿಗೌಡ ಸುದೀರ್ಘ‌ 9 ಗಂಟೆ ವಿಚಾರಣೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರMUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

1-reee

Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್

byndoor

Karkala: ಕೀಟ ನಾಶಕ ಸೇವಿಸಿ ವ್ಯಕ್ತಿ ಸಾವು

baby 2

Hospital ನಿಂದ ಶಿಶುವಿನ ಅಪಹರಣ: ರೈಲು ನಿಲ್ದಾಣದಲ್ಲಿ ರಕ್ಷಣೆ: ಇಬ್ಬರ ಬಂಧನ

Nirmala 2 a

Middle class; ಮಧ್ಯಮ ವರ್ಗದವರಿಗೆ ಪರಿಹಾರ: ಎಕ್ಸ್ ಬಳಕೆದಾರಗೆ ನಿರ್ಮಲಾ ಪ್ರತಿಕ್ರಿಯೆ

ಪಾಠ ಮಾಡಿದೆವು… ಸರಿ, ಬದುಕಲು ಕಲಿಸಿದೆವಾ?

ಪಾಠ ಮಾಡಿದೆವು… ಸರಿ, ಬದುಕಲು ಕಲಿಸಿದೆವಾ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.