ರಾಜಕೀಯ, ಜಾತಿ ಆಧರಿತ ಗುಂಪಿನಿಂದ ದೂರವಿರಿ


Team Udayavani, Mar 10, 2019, 7:48 AM IST

m3-rajakiya.jpg

ಹುಣಸೂರು: ಲೋಕಸಭಾ ಚುನಾವಣೆ ಮಾದರಿ ನೀತಿ ಸಂಹಿತೆ ಜಾರಿಯಾದಾಗಿನಿಂದ ಭದ್ರತೆಗಾಗಿ ನಿಯೋಜನೆಗೊಳ್ಳುವ ಪೊಲೀಸ್‌ ಸಿಬ್ಬಂದಿ ರಾಜಕೀಯ ಹಾಗೂ ಜಾತಿ ಆಧರಿತ ವ್ಯಾಟ್ಸಾಪ್‌ ಗ್ರೂಪ್‌ಗ್ಳಿಂದ ದೂರವಿರಬೇಕು. ಲೈಕ್‌, ಶೇರ್‌ ಮಾಡುವ ಬಗ್ಗೆ ನಿಗಾ ಇಡಲಾಗುವುದೆಂದು ಎಂದು ಸಹಾಯಕ ಚುನಾವಣಾಧಿಕಾರಿ ಚಂದ್ರಶೇಖರಯ್ಯ ಎಚ್ಚರಿಸಿದರು.

ನಗರದಲ್ಲಿ ಹುಣಸೂರು ವೃತ್ತದ ಪೊಲೀಸರಿಗೆ ಆಯೋಜಿಸಿದ್ದ ತರಬೇತಿ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ಆಯೋಗದ ಸೂಚನೆಯಂತೆ ಕರ್ತವ್ಯ ನಿರ್ವಹಿಸಬೇಕು. ವ್ಯಾಟ್ಸಾಪ್‌ ಗ್ರೂಪ್‌ ರಚಿಸಿಕೊಂಡು ರಾಜಕೀಯ ನಾಯಕರ ಅಥವಾ ಒಂದು ಜನಾಂಗ, ಪಕ್ಷಗಳ ಪರ ಹೇಳಿಕೆ, ಪ್ರಜೋದಿಸುವಂತ ಸಂದೇಶಗಳನ್ನು ಲೈಕ್‌ ಮಾಡುವುದು-ಶೇರ್‌ ಮಾಡುವುದನ್ನು ನಿಷೇಧಿಸಲಾಗಿದೆ.

ಫೇಸ್‌ಬುಕ್‌, ವ್ಯಾಟ್ಸಾಪ್‌ ಮತ್ತಿತರ ಸಾಮಾಜಿಕ ಜಾಲತಾಣಗಳ ಮೇಲೆ ನಿಗಾ ಇಡಲು ಸಮಿತಿ ರಚಿಸಿದ್ದು, ಕಾನೂನು ಕ್ರಮ ಎದುರಿಸಬೇಕಾದೀತೆಂದು ಎಚ್ಚರಿಸಿದರು. ತಾಪಂ ಇಒ ಕೃಷ್ಣಕುಮಾರ್‌ ಮಾತನಾಡಿ, ಚುನಾವಣೆ ಘೋಷಣೆಯಾದಾಗಿನಿಂದ ಕಡೆತನಕ ಯಾವುದೇ ಹೊಸ ಅಭಿವೃದ್ಧಿ ಕಾಮಗಾರಿ ಘೋಷಣೆ ಅಥವಾ ಕೈಗೊಳ್ಳುವಂತಿಲ್ಲ. ಟೆಂಡರ್‌ ಪ್ರಕ್ರಿಯೆ ಆಗಿದ್ದಲ್ಲಿ ಮಾತ್ರ ಚುನಾವಣಾಧಿಕಾರಿಗಳ ಗಮನಕ್ಕೆ ತಂದು ನಡೆಸಲು ಅವಕಾಶ ನೀಡಬಹುದು ಎಂದರು.

ಬೀಟ್‌ ಪೊಲೀಸರೇ ಹೊಣೆ: ವೃತ್ತ ನಿರೀಕ್ಷಕ ಶಿವಕುಮಾರ್‌ ಮಾತನಾಡಿ, ಸುಧಾರಿತ ಬೀಟ್‌ಗೆ ನಿಯೋಜನೆಗೊಂಡಿರುವ ಪೊಲೀಸರಲ್ಲಿ ತಮ್ಮ ವ್ಯಾಪ್ತಿಯ ಮತಗಟ್ಟೆಗಳು, ಸಮಾಜಘಾತುಕ ಶಕ್ತಿಗಳ ಬಗ್ಗೆ ಹಾಗೂ ಎಲ್ಲಾ ವಿಷಯಗಳ ಬಗ್ಗೆ ಪೂರ್ವ ಮಾಹಿತಿ ಪಡೆಯುತ್ತಿರಬೇಕು. ಸಂಬಂಧಿಸಿದ ಅಧಿಕಾರಿಗಳಿಗೆ  ಅಪ್‌ಡೇಟ್‌ ಮಾಡುತ್ತಿರಬೇಕು ಎಂದರು.

ಕಾರ್ಯಾಗಾರದಲ್ಲಿ ಪ್ರೊಬೇಷನರಿ ಡಿವೈಎಸ್ಪಿ ವೆಂಕಟೇಶ್‌, ತಹಶೀಲ್ದಾರ್‌ ಬಸವರಾಜು, ಎಸ್‌ಐ.ಗಳಾದ ಮಹೇಶ್‌, ಶಿವಪ್ರಕಾಶ್‌ ಮಾತನಾಡಿದರು. ನಗರ, ಬಿಳಿಕೆರೆ, ಗ್ರಾಮಾಂತರ ಠಾಣೆಗಳ ಎಎಸ್‌ಐಗಳು ಸೇರಿದಂತೆ 120ಕ್ಕೂ ಹೆಚ್ಚು ಪೊಲೀಸರು ಭಾಗವಹಿಸಿದ್ದರು.

ಹಣ ಸಾಗಾಣಿಕೆ ಬಗ್ಗೆ ಕಟ್ಟೆಚ್ಚರ: ಚೆಕ್‌ಪೋಸ್ಟ್‌, ಫ್ಲೆಯಿಂಗ್‌ ಸ್ಕ್ವಾಡ್‌ನ‌ವರ ಜವಾಬ್ದಾರಿ ಹೆಚ್ಚಿದ್ದು, ಒಬ್ಬ ವ್ಯಕ್ತಿ 50 ಸಾವಿರಕ್ಕಿಂತ ಹೆಚ್ಚಿನ ಹಣ ಸಾಗಿಸುವಂತಿಲ್ಲ. 10 ಲಕ್ಷ ರೂ.ಗಿಂತ ಹೆಚ್ಚಿನ ಹಣ ಸಾಗಾಟದ ಮಾಹಿತಿ ಸಿಕ್ಕಲ್ಲಿ ಆದಾಯ ತೆರಿಗೆ ಅಧಿಕಾರಿಗಳಿಂದಲೇ ತಪಾಸಣೆ ಮಾಡಿಸಬೇಕು. ಅನುಮತಿ ಇಲ್ಲದ ವಾಹನಗಳ ಮೇಲೆ ನಿಗಾ ಇಡಬೇಕು.

ಚುನಾವಣೆಗೂ 48 ಗಂಟೆಗೆ ಮುನ್ನಾ ಯಾವುದೇ ರಾಜಕೀಯ ಮುಖಂಡರ, ಮಂತ್ರಿಗಳ ಭಾವಚಿತ್ರವಿರುವ ಫ್ಲೆಕ್ಸ್‌, ಪೋಸ್ಟರ್‌ಗಳನ್ನು ತೆರವುಗೊಳಿಸಬೇಕು. ಮತಗಟ್ಟೆ ಸುತ್ತ ನಿಗದಿತ ದೂರದಲ್ಲಿ ಮಾತ್ರ ಏಜೆಂಟರಿಗೆ ಅವಕಾಶ ಕಲ್ಪಿಸಬೇಕು. ಮತಗಟ್ಟೆಯೊಳಗೆ ಯಾವುದೇ ಪಕ್ಷಗಳ ಚಿಹ್ನೆ, ಮುಖಂಡರ ಭಾವಚಿತ್ರ ತೆಗೆದುಕೊಂಡು ಹೋಗುವಂತಿಲ್ಲ. ಈ ಬಗ್ಗೆಯೂ ಎಚ್ಚರವಹಿಸಬೇಕು ಎಂದು ಸಹಾಯಕ ಚುನಾವಣಾಧಿಕಾರಿ ಚಂದ್ರಶೇಖರಯ್ಯ ಸೂಚಿಸಿದರು.

ಟಾಪ್ ನ್ಯೂಸ್

ತನಿಖೆಗೆ ನನ್ನ ಸಹಕಾರವಿದೆ… ಈ ವಿಚಾರದಲ್ಲಿ ಪತ್ನಿ ಹೆಸರು ತರಬೇಡಿ: ರಾಜ್ ಕುಂದ್ರಾ

ತನಿಖೆಗೆ ನನ್ನ ಸಹಕಾರವಿದೆ… ಈ ವಿಚಾರದಲ್ಲಿ ಪತ್ನಿ ಹೆಸರು ತರಬೇಡಿ: ರಾಜ್ ಕುಂದ್ರಾ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

Former South Africa’s No. 1 bowler jailed in fixing case

S.Africa: ಫಿಕ್ಸಿಂಗ್‌ ಕೇಸ್‌ನಲ್ಲಿ ಜೈಲು ಪಾಲಾದ ದ. ಆಫ್ರಿಕಾದ ಮಾಜಿ ನಂಬರ್‌ 1 ಬೌಲರ್‌

7-wedding

Wedding Story: ಕಂಕಣ ಕಾಲ-3: ವಿವಾಹ ಭೋಜನವಿದು.. ನಾರ್ತ್‌ ಭಕ್ಷ್ಯಗಳಿವು…

ಸಂಬಂಧಗಳಲ್ಲಿ ಮಾಯವಾದ ಸಹಿಷ್ಣುತೆ : ಸಹಿಷ್ಣು ಗುಣದಿಂದಲೇ ಬಾಂಧವ್ಯದ ಪ್ರಗತಿ

Relationships: ಸಂಬಂಧಗಳಲ್ಲಿ ಮಾಯವಾದ ಸಹಿಷ್ಣುತೆ : ಸಹಿಷ್ಣು ಗುಣದಿಂದಲೇ ಬಾಂಧವ್ಯದ ಪ್ರಗತಿ

Sirsi: ಹೃದಯಾಘಾತದಿಂದ ಮಾರಿಕಾಂಬಾ ಸರಕಾರಿ ಪ್ರೌಢ ಶಾಲೆಯ ಉಪ ಪ್ರಾಂಶುಪಾಲ ನಿಧನ

Sirsi: ಹೃದಯಾಘಾತದಿಂದ ಮಾರಿಕಾಂಬಾ ಸರಕಾರಿ ಪ್ರೌಢ ಶಾಲೆಯ ಉಪ ಪ್ರಾಂಶುಪಾಲ ನಿಧನ

Fire Temple: ಅಜರ್ಬೈಜಾನ್‌ನಲ್ಲಿದೆ ಪುರಾತನ ಹಿಂದೂ ದೇವಾಲಯ-ಬೆಂಕಿಯುಗುಳುವ ಸಪ್ತರಂಧ್ರಗಳು

Fire Temple: ಅಜರ್ಬೈಜಾನ್‌ನಲ್ಲಿದೆ ಪುರಾತನ ಹಿಂದೂ ದೇವಾಲಯ-ಬೆಂಕಿಯುಗುಳುವ ಸಪ್ತರಂಧ್ರಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-hunsur

Hunsur: ಖಾಸಗಿ ಪೈನಾನ್ಸ್ ನ ಕಿರುಕುಳಕ್ಕೆ ಗೃಹಿಣಿ ಆತ್ಮಹತ್ಯೆಗೆ ಶರಣು

BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ

BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ

3-hunsur

Hunsur: ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು

MUDA: ಆಸ್ತಿ ಪಾಲಿಗೆ ಸಿಎಂ ಪತ್ನಿ ಸೇರಿ 12 ಮಂದಿಯ ವಿರುದ್ಧ ದಾವೆ

MUDA: ಆಸ್ತಿ ಪಾಲಿಗೆ ಸಿಎಂ ಪತ್ನಿ ಸೇರಿ 12 ಮಂದಿಯ ವಿರುದ್ಧ ದಾವೆ

mysore

Mysore: ಪತ್ನಿ, ತಾಯಿ, ಇಬ್ಬರು ಮಕ್ಕಳ ಹತ್ಯೆ… ಅಪರಾಧಿಗೆ ಮರಣದಂಡನೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Desi Swara: ಮುದ್ದಣ್ಣನ ಶ್ರೀ ರಾಮಾಶ್ವಮೇಧಂ ಪುಸ್ತಕ ಸಮರ್ಪಣೆ

Desi Swara: ಮುದ್ದಣ್ಣನ ಶ್ರೀ ರಾಮಾಶ್ವಮೇಧಂ ಪುಸ್ತಕ ಸಮರ್ಪಣೆ

ತನಿಖೆಗೆ ನನ್ನ ಸಹಕಾರವಿದೆ… ಈ ವಿಚಾರದಲ್ಲಿ ಪತ್ನಿ ಹೆಸರು ತರಬೇಡಿ: ರಾಜ್ ಕುಂದ್ರಾ

ತನಿಖೆಗೆ ನನ್ನ ಸಹಕಾರವಿದೆ… ಈ ವಿಚಾರದಲ್ಲಿ ಪತ್ನಿ ಹೆಸರು ತರಬೇಡಿ: ರಾಜ್ ಕುಂದ್ರಾ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

8-cubbon-park-3

Bengaluru: ಕಬ್ಬನ್‌ ಪಾರ್ಕ್‌ನಲ್ಲಿ ಪುಷ್ಪ ಪ್ರದರ್ಶನ

Former South Africa’s No. 1 bowler jailed in fixing case

S.Africa: ಫಿಕ್ಸಿಂಗ್‌ ಕೇಸ್‌ನಲ್ಲಿ ಜೈಲು ಪಾಲಾದ ದ. ಆಫ್ರಿಕಾದ ಮಾಜಿ ನಂಬರ್‌ 1 ಬೌಲರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.