ಕರ್ನಾಟಕದಲ್ಲಿ 2 ಹಂತದ ಚುನಾವಣೆ ; ಯಾವ ಕ್ಷೇತ್ರದಲ್ಲಿ ಯಾವಾಗ ?
Team Udayavani, Mar 10, 2019, 2:34 PM IST
ಬೆಂಗಳೂರು : 17ನೇ ಲೋಕಸಭೆಗಾಗಿ ಚುನಾವಣಾ ದಿನಾಂಕಗಳನ್ನು ಕೇಂದ್ರ ಚುನಾವಣಾ ಆಯೋಗವು ಇಂದು ಭಾನುವಾರ ದಿನಾಂಕಗಳನ್ನು ಘೋಷಿಸಿದ್ದು, ಕರ್ನಾಟಕದ ವಿವರಗಳನ್ನು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಸಂಜೀವ್ ಕುಮಾರ್ ಅವರು ಸುದ್ದಿಗೋಷ್ಠಿ ನಡೆಸಿ ವಿವರ ನೀಡಿದರು.
ರಾಜ್ಯದಲ್ಲಿ 2 ಮತ್ತು 3 ನೇ ಹಂತದಲ್ಲಿ ಎಪ್ರಿಲ್ 18 ಮತ್ತು 23 ರಂದು ತಲಾ 14 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಮೇ 23 ರಂದು ಮತ ಎಣಿಕೆ ನಡೆದು ಫಲಿತಾಂಶ ಹೊರ ಬೀಳಲಿದೆ. ದೇಶದಲ್ಲಿ ಒಟ್ಟು 7 ಹಂತದಲ್ಲಿ ಚುನಾವಣೆ ನಡೆಯುತ್ತಿದೆ. ಇಂದಿನಿಂದಲೆ ಚುನಾವಣಾ ನೀತಿ ಸಂಹಿತೆ ಅನ್ವಯವಾಗಲಿದೆ.
ಎಪ್ರಿಲ್ 18 ರಂದು ಮೊದಲ ಹಂತದಲ್ಲಿ ಚುನಾವಣೆ ನಡೆಯುವ ಕ್ಷೇತ್ರಗಳು
ಬೆಂಗಳೂರು ದಕ್ಷಿಣ, ಬೆಂಗಳೂರು ಸೆಂಟ್ರಲ್, ಬೆಂಗಳೂರು ಗ್ರಾಮಾಂತರ, ಮಂಡ್ಯ, ಚಿಕ್ಕಬಳ್ಳಾಪುರ, ಕೋಲಾರ , ಚಾಮರಾಜನಗರ, ಮೈಸೂರು-ಕೊಡಗು, ಹಾಸನ, ತುಮಕೂರು, ಚಿತ್ರದುರ್ಗ, ದಕ್ಷಿಣ ಕನ್ನಡ , ಉಡುಪಿ -ಚಿಕ್ಕಮಗಳೂರು
ಎಪ್ರಿಲ್ 23 ರಂದು ಎರಡನೇ ಹಂತದಲ್ಲಿ ಚುನಾವಣೆ ನಡೆಯುವ ಕ್ಷೇತ್ರಗಳು
ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ, ರಾಯಚೂರು, ಬೀದರ್, ಕೊಪ್ಪಳ, ಬೆಳ್ಳಾರಿ, ಹಾವೇರಿ, ಉತ್ತರ ಕನ್ನಡ, ಶಿವಮೊಗ್ಗ, ಧಾರವಾಡ, ದಾವಣಗೆರೆ
ರಾಜ್ಯದಲ್ಲಿ ಒಟ್ಟು 5ಕೋಟಿ 34 ಲಕ್ಷದ 6 ಸಾವಿರದ 721 ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದಾರೆ.
ಸಿ ವಿಜಿಲ್ ಆ್ಯಪ್ ಮೂಲಕ ಅಕ್ರಮಗಳ ಕುರಿತಾಗಿ ಸಾರ್ವಜನಿಕರು ದೂರನ್ನು ಸಲ್ಲಿಸಬಹುದಾಗಿದೆ.
ಓರ್ವ ಅಭ್ಯರ್ಥಿಗೆ 70 ಲಕ್ಷ ರೂಪಾಯಿ ಮಾತ್ರ ಚುನಾವಣ ವೆಚ್ಚ ದ ಮಿತಿ ಇಡಲಾಗಿದೆ.
ಪೇಯ್ಡ ನ್ಯೂಸ್ ಮತ್ತು ಫೇಕ್ ನ್ಯೂಸ್ ತಡೆಯುವಲ್ಲಿ ಕ್ರಮ ಕೈಗೊಳ್ಳಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ
BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್ ಮಾದರಿಯಲ್ಲಿ ವಿಶೇಷ ಪೊಲೀಸ್ ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.