ನೀತಿ ಸಂಹಿತೆ:  ಇರಲಿ ತಿಳಿವಳಿಕೆ-ಎಚ್ಚರಿಕೆ


Team Udayavani, Mar 11, 2019, 1:00 AM IST

sasikant.jpg

ಮಂಗಳೂರು: ಲೋಕಸಭಾ ಚುನಾವಣೆಗೆ ಘೋಷಣೆಯಾಗಿದೆ. ನೀತಿ ಸಂಹಿತೆ ತತ್‌ಕ್ಷಣದಿಂದಲೇ ಜಾರಿ ಯಾಗಿದ್ದು, ಎಲ್ಲ ಕಾರ್ಯಕಲಾಪಗಳ ಬಗ್ಗೆ ಚುನಾವಣಾ ಆಯೋಗ ಹದ್ದಿನ ಕಣ್ಣಿಡಲಿದೆ.

ಕಳೆದ ವಿಧಾನಸಭಾ ಚುನಾವಣೆ ಸಂದರ್ಭ ಬಿಗಿ ಕಣ್ಗಾವಲಿನಿಂದಾಗಿ ಹಲವು ರೀತಿಯ ಪ್ರಕರಣಗಳು ದಾಖಲಾಗಿದ್ದವು. ಬಂಟ್ವಾಳ ತಾಲೂಕಿನ ಮನೆಯೊಂದರಲ್ಲಿ ಮದುವೆ ಕಾರ್ಯಕ್ರಮ ನಿಮಿತ್ತ ಮದ್ಯ ತಂದಿರಿಸಿದ್ದು, ಪೂರ್ವಾನುಮತಿ ಇರಲಿಲ್ಲ ಎಂಬ ಕಾರಣಕ್ಕೆ ಅಧಿಕಾರಿಗಳು ಮನೆ ಮಾಲಕನನ್ನೇ ಬಂಧಿಸಿದ್ದರು. ಮಾಹಿತಿ, ಅರಿವಿನ ಕೊರತೆಯಿಂದಾಗಿ ಈ ಎಡವಟ್ಟಾಗಿತ್ತು.

ರಾಜಕೀಯ ವ್ಯಕ್ತಿಯೊಬ್ಬರ ಹೇಳಿಕೆಯನ್ನು ಯಕ್ಷಗಾನದಲ್ಲಿ ಪ್ರಯೋಗಿಸಲಾಗಿದೆ ಎಂದು ಕಲಾವಿದನ ಮೇಲೆ ದೂರು ದಾಖಲಾಗಿತ್ತು. ಕೆಲವೆಡೆ ಯಕ್ಷಗಾನ ಪ್ರದರ್ಶನಕ್ಕೂ ಆಯೋಗದಿಂದ ಅಡ್ಡಿಯಾಗಿತ್ತು. ಅಡಿಕೆ ಮಾರಾಟ ಮಾಡಿ ಹಣ ಒಯ್ಯುತ್ತಿದ್ದಾಗ ದಾಖಲೆಗಳೆಲ್ಲಿ ಎಂದು ವ್ಯಕ್ತಿಯೊಬ್ಬರನ್ನು ಆಯೋಗ ಪ್ರಶ್ನಿಸಿತ್ತು. ಈ ಬಾರಿಯೂ ಇಂತಹುದೇ ಕಟ್ಟುನಿಟ್ಟಿನ ನಿಯಮಗಳು ಜಾರಿಯಲ್ಲಿರುವುದು ಸಹಜ.

ಯಕ್ಷಗಾನ ಸಹಿತ ಯಾವುದೇ ಖಾಸಗಿ ಕಾರ್ಯಕ್ರಮದಲ್ಲಿ ಊಟ ನೀಡುವಾಗ ರಾಜಕೀಯ ವ್ಯಕ್ತಿಗಳ ಪಾಲ್ಗೊಳ್ಳುವಿಕೆ, ಊಟೋಪಚಾರದ ಖರ್ಚು ಅವರು ನಿಭಾಯಿಸುವುದು ಸಹಿತ ಎಲ್ಲ ವಿಚಾರಗಳ ಬಗ್ಗೆ ಪರಿಶೀಲನೆ ಈ ಬಾರಿಯೂ ನಡೆಯಲಿರುವುದರಿಂದ ಎಚ್ಚರಿಕೆ ಅಗತ್ಯ.

ದುಡ್ಡಿನ ಲೆಕ್ಕಾ ಪಕ್ಕಾ ಇರಲಿ!
ಎಲ್ಲ ರೀತಿಯ ಹಣದ ವ್ಯವಹಾರಗಳ ಬಗ್ಗೆ ಆಯೋಗ ವಿಶೇಷ ಕಣ್ಣಿಡಲಿದೆ. ನಿಗದಿತ ಮೊತ್ತಕ್ಕಿಂತ ಅಧಿಕ ಹಣವನ್ನು ತೆಗೆದುಕೊಂಡು ಹೋಗುವುದಾದರೆ ಸಮರ್ಪಕ ದಾಖಲೆ ಬೇಕೇಬೇಕು. ಇಲ್ಲವಾದರೆ ಅಂಥ ಹಣ ಆಯೋಗದ ವಶವಾಗಲಿದೆ. ಚಿನ್ನ ಖರೀದಿಸುವಾಗಲೂ ಎಚ್ಚರ ವಹಿಸಬೇಕು. ನಿಗದಿಗಿಂತ ಅಧಿಕ ಮೊತ್ತದ ಚಿನ್ನ ಖರೀದಿ ಮಾಡುವುದಾದರೂ ಸೂಕ್ತ ದಾಖಲೆ ನೀಡಬೇಕಾಗುತ್ತದೆ. ಅಡಿಕೆ ಅಥವಾ ಇತರ ಮಾರಾಟ ಮೂಲಗಳಿಂದ ಹಣ ಪಡೆಯುವವರು ಸೂಕ್ತ ದಾಖಲೆ ಇಟ್ಟುಕೊಂಡಿರಬೇಕು.

ಸಭೆ-ಸಮಾರಂಭಕ್ಕೆ ಅನುಮತಿ ಕಡ್ಡಾಯ
ಯಾವುದೇ ಪಕ್ಷವಾಗಲಿ ರಾಜಕೀಯ ವ್ಯಕ್ತಿಗಳಾಗಲಿ; ಧರ್ಮ ಹಾಗೂ ಜಾತಿಗಳ ನಡುವೆ ಸಂಘರ್ಷ ಉಂಟು ಮಾಡುವ ಹೇಳಿಕೆ ನೀಡುವಂತಿಲ್ಲ. ವೈಯಕ್ತಿಕ ನಿಂದನೆ ಮಾಡು ವಂತಿಲ್ಲ. ಧರ್ಮದ ಆಧಾರದಲ್ಲಿ ಮತ ಕೇಳುವಂತಿಲ್ಲ. ದೇವಸ್ಥಾನ, ಮಸೀದಿ, ಚರ್ಚ್‌ಗಳನ್ನು ರಾಜಕೀಯ ಪ್ರಚಾರಕ್ಕಾಗಿ ಬಳಸುವಂತಿಲ್ಲ. ಮತದಾರರಿಗೆ ಹಣದ ಆಮಿಷ, ಪ್ರಭಾವ ಬೀರುವಂತಿಲ್ಲ. ಪಕ್ಷಗಳ ಸಭೆ/ಮೆರವಣಿಗೆ ಸ್ಥಳ, ಸಮಯ, ಸೇರುವ ಜನ, ಬರುವ ರಾಜಕೀಯ ನಾಯಕರು ಸೇರಿದಂತೆ ಎಲ್ಲ ವಿವರಗಳನ್ನು ಪೊಲೀಸರಿಗೆ ಮೊದಲೇ ನೀಡಬೇಕು. ಅವರು ಸೂಚಿಸುವ ನಿಬಂಧನೆಗಳನ್ನು ರಾಜಕೀಯ ಪಕ್ಷಗಳು ಕಡ್ಡಾಯವಾಗಿ ಪಾಲಿಸಬೇಕು. ಧ್ವನಿವರ್ಧಕಗಳ ಬಳಕೆಗೆ ಅನುಮತಿ ಕಡ್ಡಾಯ.

ಸಾಮಾಜಿಕ ಜಾಲದ ಮೇಲೂ ಕಣ್ಣು
ಈ ಬಾರಿಯ ಚುನಾವಣೆಯಲ್ಲಿ ಆಯೋಗವು ವ್ಯಾಟ್ಸ್‌ ಆ್ಯಪ್‌, ಫೇಸ್‌ಬುಕ್‌, ಟ್ವಿಟರ್‌ ಸೇರಿದಂತೆ ಸಾಮಾಜಿಕ ಜಾಲತಾಣಗಳ ಮೇಲೂ ಹದ್ದಿನ ಕಣ್ಣು ಇರಿಸಿದೆ. ರಾಜಕೀಯವಾಗಿ ಯಾವುದೇ ಪಕ್ಷ ಅಥವಾ ಅಭ್ಯರ್ಥಿಗಳಿಗೆ ಲಾಭವಾಗುವ ದೃಷ್ಟಿಯಲ್ಲಿ ಬರಹ, ಫೋಟೋ, ವೀಡಿಯೋ ಅಥವಾ ಇನ್ನಿತರ ಮಾಹಿತಿಗಳನ್ನು ಹಾಕುವುದು ನೀತಿ ಸಂಹಿತೆಯ ಉಲ್ಲಂಘನೆಯಾಗುತ್ತದೆ.

ಸರಕಾರಿ ಕಾರು ವಾಪಸ್‌
ನೀತಿಸಂಹಿತೆ ಹಿನ್ನೆಲೆಯಲ್ಲಿ ಎಲ್ಲ ಜನಪ್ರತಿನಿಧಿಗಳ ಸರಕಾರಿ ಕಾರುಗಳನ್ನು ವಾಪಸ್‌ ಪಡೆಯಲಾಗುತ್ತದೆ. ಈಗಾಗಲೇ ಆರಂಭವಾಗಿರುವ ಕಾಮಗಾರಿಗಳನ್ನು ಮುಂದುವರಿಸಲು ಆಕ್ಷೇಪವಿಲ್ಲ. ಹೊಸ ಕಾಮಗಾರಿ ಕೈಗೆತ್ತಿಕೊಳ್ಳುವಂತಿಲ್ಲ.

ಡಿಸಿ ಸೆಂಥಿಲ್‌ಗೆ ಎರಡನೇ ಚುನಾವಣೆ!
ಚುನಾವಣೆಗೂ ಮುನ್ನ ಅಧಿಕಾರಿಗಳ ವರ್ಗಾವಣೆ ನಡೆಯುತ್ತದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲೂ ಹಲವು ಅಧಿಕಾರಿಗಳ ವರ್ಗಾವಣೆ ನಡೆದಿದೆ. ಆದರೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಶಶಿಕಾಂತ ಸೆಂಥಿಲ್‌ ಮುಂದುವರಿದಿದ್ದು, ಅವರು ಎರಡನೇ ಬಾರಿಗೆ ಜಿಲ್ಲೆಯಲ್ಲಿ ಚುನಾವಣಾಧಿಕಾರಿಯಾಗಿ ಜವಾಬ್ದಾರಿ ನಿರ್ವಹಿಸುತ್ತಿರುವುದು ವಿಶೇಷ.

ಕಳೆದ ವಿಧಾನಸಭಾ ಚುನಾವಣೆಯನ್ನು ಶಶಿಕಾಂತ ಸೆಂಥಿಲ್‌ ಅವರೇ ನಿಭಾಯಿಸಿದ್ದರು.

ಅನಧಿಕೃತ ಫಲಕಗಳ ತೆರವು
ನೀತಿಸಂಹಿತೆ ಜಾರಿಗೆ ಬಂದಿರುವ ಕಾರಣ ಎಲ್ಲ ರೀತಿಯ ಹಣಕಾಸು ವ್ಯವಹಾರ, ರಾಜಕೀಯ ಪಕ್ಷಗಳ ಚಟುವಟಿಕೆಗಳ ಬಗ್ಗೆ ಆಯೋಗವು ಕಣ್ಣಿಡಲಿದೆ. ರಾಜಕೀಯ ಬ್ಯಾನರ್‌, ಫಲಕ ತೆರವು ಮಾಡುವ ಜತೆಗೆ ಅನಧಿಕೃತವಾದ ಎಲ್ಲ ರೀತಿಯ ಬ್ಯಾನರ್‌, ಹೋರ್ಡಿಂಗ್‌ಗಳನ್ನು ತೆರವು ಮಾಡಲು ಸೂಚಿಸಲಾಗಿದೆ.
– ಶಶಿಕಾಂತ್‌ ಸೆಂಥಿಲ್‌, ದ.ಕ. ಜಿಲ್ಲಾಧಿಕಾರಿ

ಟಾಪ್ ನ್ಯೂಸ್

5-bng

Bengaluru: 7 ಮದುವೆ ಮುಚ್ಚಿಟ್ಟು 8ನೇ ಮದುವೆಯಾಗಿ ಪತಿಗೆ ವಂಚನೆ!

ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರಕಟ: ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರಿಗೆ ಪಾರ್ತಿಸುಬ್ಬ ಪ್ರಶಸ್ತಿ

Udupi: 2024ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿಗೆ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಆಯ್ಕೆ

Renukaswamy Case: All accused including Darshan appear in court; hearing adjourned

RenukaswamyCase: ದರ್ಶನ್‌ ಸೇರಿ ಎಲ್ಲಾ ಆರೋಪಿಗಳು ಕೋರ್ಟ್‌ಗೆ ಹಾಜರು; ವಿಚಾರಣೆ ಮುಂದೂಡಿಕೆ

Mangaluru: Bangladeshi national arrested for illegally residing in the city

Mangaluru: ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ಪ್ರಜೆಯ ಬಂಧನ

Real estate businessman shot while traveling in car

Belagavi: ಕಾರಿನಲ್ಲಿ ಹೋಗುತ್ತಿದ್ದ ರಿಯಲ್‌ ಎಸ್ಟೇಟ್‌ ಉದ್ಯಮಿ ಮೇಲೆ ಗುಂಡಿನ ದಾಳಿ

Sandalwood: ಹೊಸ ವರ್ಷ ಹಳೇ ಸಮಸ್ಯೆ… ಮತ್ತೆ ಥಿಯೇಟರ್‌ ರಗಳೆ

Sandalwood: ಹೊಸ ವರ್ಷ ಹಳೇ ಸಮಸ್ಯೆ… ಮತ್ತೆ ಥಿಯೇಟರ್‌ ರಗಳೆ

3-dog

German Shepherd: ಕೋಳಿ ತಿಂದಿದ್ದಕ್ಕೆ ಜರ್ಮನ್‌ ಶೆಫ‌ರ್ಡ್‌ ನಾಯಿ ಕೊಂದ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: Bangladeshi national arrested for illegally residing in the city

Mangaluru: ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ಪ್ರಜೆಯ ಬಂಧನ

vaman

Mangaluru: ವಾಮಂಜೂರು ಗುಂಡು ಹಾರಾಟ ಪ್ರಕರಣ: ಇಬ್ಬರು ಕುಖ್ಯಾತರ ಬಂಧನ

Mangaluru: ಹೈಡ್ರೋ ವೀಡ್‌ ಗಾಂಜಾ ಸಹಿತ ಓರ್ವನ ಬಂಧನ

Mangaluru: ಹೈಡ್ರೋ ವೀಡ್‌ ಗಾಂಜಾ ಸಹಿತ ಓರ್ವನ ಬಂಧನ

Mangaluru ಕಮಿಷನ್‌ ಆಮಿಷವೊಡ್ಡಿ 9 ಲ. ರೂ. ವಂಚನೆMangaluru ಕಮಿಷನ್‌ ಆಮಿಷವೊಡ್ಡಿ 9 ಲ. ರೂ. ವಂಚನೆ

Mangaluru ಕಮಿಷನ್‌ ಆಮಿಷವೊಡ್ಡಿ 9 ಲ. ರೂ. ವಂಚನೆ

Kulai: ನೀರುಪಾಲಾದವರ ಶವ ಹಸ್ತಾಂತರ

Kulai: ನೀರುಪಾಲಾದವರ ಶವ ಹಸ್ತಾಂತರ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

5-bng

Bengaluru: 7 ಮದುವೆ ಮುಚ್ಚಿಟ್ಟು 8ನೇ ಮದುವೆಯಾಗಿ ಪತಿಗೆ ವಂಚನೆ!

ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರಕಟ: ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರಿಗೆ ಪಾರ್ತಿಸುಬ್ಬ ಪ್ರಶಸ್ತಿ

Udupi: 2024ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿಗೆ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಆಯ್ಕೆ

Renukaswamy Case: All accused including Darshan appear in court; hearing adjourned

RenukaswamyCase: ದರ್ಶನ್‌ ಸೇರಿ ಎಲ್ಲಾ ಆರೋಪಿಗಳು ಕೋರ್ಟ್‌ಗೆ ಹಾಜರು; ವಿಚಾರಣೆ ಮುಂದೂಡಿಕೆ

4-bng

Bengaluru: ಮಲಗಿದ ನಾಯಿ ಮೇಲೆ ಕಾರು ಹತ್ತಿಸಿದ ಚಾಲಕ!

Mangaluru: Bangladeshi national arrested for illegally residing in the city

Mangaluru: ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ಪ್ರಜೆಯ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.