ಲೋಕಸಭೆ ಚುನಾವಣೆ: ದೇಶಕ್ಕೆ 7, ರಾಜ್ಯಕ್ಕೆ 2 ಹಂತ


Team Udayavani, Mar 11, 2019, 12:30 AM IST

pti3102019000134a.jpg

ನವದೆಹಲಿ: ಜಗತ್ತಿನ ಅತ್ಯಂತ ದೊಡ್ಡ ಪ್ರಜಾಪ್ರಭುತ್ವ ದೇಶವಾಗಿರುವ ಭಾರತದ ಮಹಾ ಲೋಕಸಭೆ ಚುನಾವಣೆಗೆ ದಿನಾಂಕ ನಿಗದಿಯಾಗಿದೆ. 

ಏಪ್ರಿಲ್‌ 11 ರಿಂದ ಮೇ 19ರ ವರೆಗೆ ಒಟ್ಟಾರೆ ಏಳು ಹಂತಗಳಲ್ಲಿ 543 ಕ್ಷೇತ್ರಗಳಿಗೆ ಮತದಾನ ನಡೆಯಲಿದ್ದು, ಮೇ 23ಕ್ಕೆ ಫ‌ಲಿತಾಂಶ ಪ್ರಕಟವಾಗಲಿದೆ. ಕರ್ನಾಟಕದಲ್ಲಿ ಎರಡು ಹಂತದ ಚುನಾವಣೆ ನಡೆಯಲಿದೆ. ಏಪ್ರಿಲ್‌ 18 ಉತ್ತರ ಕರ್ನಾಟಕ ಮತ್ತು ಏಪ್ರಿಲ್‌ 23 ದಕ್ಷಿಣ ಕರ್ನಾಟಕದ ಜಿಲ್ಲೆಗಳಲ್ಲಿ ಮತದಾನವಾಗಲಿದೆ. ಕೇಂದ್ರ ಚುನಾವಣಾ ಆಯುಕ್ತ ಸುನಿಲ್‌ ಅರೋರಾ ಅವರು, ಭಾನುವಾರ ಸಂಜೆ ದೆಹಲಿಯ ವಿಜ್ಞಾನ ಭವನದಲ್ಲಿ ಚುನಾವಣಾ ವೇಳಾಪಟ್ಟಿ ಪ್ರಕಟಿಸಿದ್ದಾರೆ. ಅತ್ತ ದಿನಾಂಕ ಘೋಷಿಸುತ್ತಿದ್ದಂತೆ, ದೇಶಾದ್ಯಂತ ನೀತಿ ಸಂಹಿತೆಯೂ ಜಾರಿಯಾಗಿದೆ. 

ಏಪ್ರಿಲ್‌ 11, ಏಪ್ರಿಲ್‌ 18, ಏಪ್ರಿಲ್‌ 23, ಏಪ್ರಿಲ್‌ 29, ಮೇ 6, ಮೇ 12, ಮೇ 19 ರಂದು ಕ್ರಮವಾಗಿ ಒಂದರಿಂದ ಏಳು ಹಂತಗಳ ಚುನಾವಣೆ ನಡೆಯಲಿದೆ. ಒಟ್ಟಾರೆ 90 ಕೋಟಿ ಮತದಾರರು ಈ ಚುನಾವಣೆಯಲ್ಲಿ ಹಕ್ಕು ಚಲಾಯಿಸಲಿದ್ದಾರೆ ಎಂದು ಅರೋರಾ ತಿಳಿಸಿದ್ದಾರೆ. ಒಟ್ಟು 10 ಲಕ್ಷ ಮತಗಟ್ಟೆಗಳನ್ನು ಸ್ಥಾಪಿಸಲಾಗುತ್ತಿದೆ ಎಂದಿದ್ದಾರೆ. ಈ ಬಾರಿ ಎಲ್ಲಾ ಮತ ಕೇಂದ್ರಗಳಲ್ಲೂ ಮತ ದೃಢೀಕರಣ ಯಂತ್ರ(ವಿವಿಪ್ಯಾಟ್‌)ವನ್ನು ಬಳಸಲಾಗುತ್ತದೆ ಎಂದೂ ಹೇಳಿದ್ದಾರೆ. ಮೊದಲ ಹಂತದಲ್ಲಿ 91, ದ್ವಿತೀಯ ಹಂತದಲ್ಲಿ 97, ತೃತೀಯ ಹಂತದಲ್ಲಿ 115, ನಾಲ್ಕನೇ ಹಂತದಲ್ಲಿ 71, ಐದನೇ ಹಂತದಲ್ಲಿ 59, ಆರನೇ ಹಂತದಲ್ಲಿ 59 ಮತ್ತು ಏಳನೇ ಹಂತದಲ್ಲೂ 59 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. 

ಲೋಕಸಭೆ ಚುನಾವಣೆ ಜತೆ ಜತೆಗೇ ಆಂಧ್ರ ಪ್ರದೇಶ, ಸಿಕ್ಕಿಂ, ಅರುಣಾಚಲ ಪ್ರದೇಶ ಮತ್ತು ಒಡಿಶಾ ವಿಧಾನಸಭೆಗಳ ಚುನಾವಣೆಯೂ ನಡೆಯಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಸದ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಯಲ್ಲಿದ್ದು, ಇಲ್ಲೂ ಚುನಾವಣೆ ನಡೆಯಲಿದೆ ಎಂದೇ ಹೇಳಲಾಗಿತ್ತು. ಆದರೆ, ಈ ರಾಜ್ಯದ ಚುನಾವಣಾ ದಿನಾಂಕ ಘೋಷಣೆ ಮಾಡಿಲ್ಲ. ಆದರೆ, ಇದೇ ರಾಜ್ಯದ ಅನಂತನಾಗ್‌ ಲೋಕಸಭಾ ಕ್ಷೇತ್ರದ ಚುನಾವಣೆ ಮೂರು ಹಂತಗಳಲ್ಲಿ ನಡೆಯಲಿದೆ. ಭದ್ರತಾ ದೃಷ್ಟಿಯಿಂದ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಸಿಇಸಿ ಹೇಳಿದೆ.

ಸಾಮಾಜಿಕ ಜಾಲತಾಣದ ಮಾಹಿತಿ ಬೇಕು
ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿರುವ ಎಲ್ಲ ಅಭ್ಯರ್ಥಿಗಳು ತಮ್ಮ ತಮ್ಮ ಸಾಮಾಜಿಕ ಜಾಲತಾಣ ಖಾತೆಗಳ‌ ಮಾಹಿತಿಯನ್ನು ನೀಡಬೇಕು. ಜತೆಗೆ ಈ ಜಾಲತಾಣಗಳಲ್ಲಿ ಜಾಹೀರಾತು ನೀಡುವ ಮುನ್ನ ಚುನಾವಣಾ ಆಯೋಗದ ಒಪ್ಪಿಗೆ ಪಡೆಯಬೇಕು ಎಂದು ಖಡಕ್ಕಾಗಿ ಸೂಚನೆ ನೀಡಲಾಗಿದೆ. ಈ ಮಧ್ಯೆ, ನಾಮಪತ್ರ ಸಲ್ಲಿಕೆ ವೇಳೆ ಫಾರ್ಮ್ 26 ಅನ್ನು ಪೂರ್ಣಗೊಳಿಸದೇ ಸಲ್ಲಿಸಿದಲ್ಲಿ ಅಂಥವುಗಳನ್ನು ತಿರಸ್ಕರಿಸಲಾಗುವುದು ಎಂದೂ ಇಸಿಐ ಸ್ಪಷ್ಟವಾಗಿ ಹೇಳಿದೆ.

ಸಿ-ವಿಜಿಲ್‌ ಆ್ಯಪ್‌
ಯಾರಾದರೂ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದಲ್ಲಿ ಇಂಥವರ ವಿರುದ್ಧ ಸಾರ್ವಜನಿಕರೇ ದೂರು ನೀಡಬಹುದಾಗಿದೆ. ಇದಕ್ಕಾಗಿಯೇ ಚುನಾವಣಾ ಆಯೋಗ ಇ-ವಿಜಿಲ್‌ ಎಂಬ ಆ್ಯಪ್‌ ಪರಿಚಯಿಸಿದೆ. ಎಲ್ಲಾ ಮತಗಟ್ಟೆಗಳ ವ್ಯಾಪ್ತಿಯಲ್ಲಿನ ಮತದಾರರು ಈ ಆ್ಯಪ್‌ ಬಳಕೆ ಮಾಡಿಕೊಂಡು ದೂರು ನೀಡಿದಲ್ಲಿ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಸಿಇಸಿ ಹೇಳಿದೆ. ಇದು ಜನರಿಗೆ ನೀಡಲಾದ ದೊಡ್ಡ ಸ್ವಾವಲಂಬಿ ಸಾಧನ ಎಂದು ಸಿಇಸಿ ಬಣ್ಣಿಸಿದ್ದಾರೆ. 

18ರಿಂದಲೇ ನಾಮಪತ್ರ ಸಲ್ಲಿಕೆ
ಇದೇ ತಿಂಗಳ 18 ರಿಂದಲೇ ಚುನಾವಣಾ ಹಬ್ಬ ಶುರುವಾಗಲಿದೆ. ಏಪ್ರಿಲ್‌ 11 ರಂದು ನಡೆಯಲಿರುವ ಮೊದಲ ಹಂತದ ಚುನಾವಣೆಗಾಗಿ ಮಾ.18 ರಂದು ಅಧಿಸೂಚನೆ ಹೊರಬೀಳಲಿದೆ. ನಾಮಪತ್ರ ಸಲ್ಲಿಕೆಗೆ ಮಾ. 25 ಕಡೇ ದಿನವಾಗಿದ್ದರೆ, ವಾಪಸ್‌ ಪಡೆಯಲು ಮಾ. 28 ಅಂತಿಮ ದಿನವಾಗಿದೆ. ಕರ್ನಾಟಕದಲ್ಲಿ ಏಪ್ರಿಲ್‌ 18ರ ಎರಡನೇ ಹಂತದಲ್ಲಿ 14 ಕ್ಷೇತ್ರಗಳ ಚುನಾವಣೆ ನಡೆಯಲಿದ್ದು, ನಾಮಪತ್ರ ಸಲ್ಲಿಕೆಗೆ ಮಾ. 26 ಕಡೇ ದಿನವಾಗಿದೆ. ನಾಮಪತ್ರ ವಾಪಸ್‌ ಪಡೆಯಲು ಮಾ. 29 ಅಂತಿಮ ದಿನವಾಗಿದೆ.

ಎಲ್ಲಿ, ಹೇಗೆ?
ಒಂದು ಹಂತ: 
ಆಂಧ್ರ ಪ್ರದೇಶ, ಅರುಣಾಚಲ ಪ್ರದೇಶ,ಗೋವಾ, ಗುಜರಾತ್‌, ಹರ್ಯಾಣ,ಹಿಮಾಚಲ ಪ್ರದೇಶ, ಕೇರಳ, ಮೇಘಾಲಯ,ಮಿಜೋರಾಂ, ನಾಗಾಲ್ಯಾಂಡ್‌, ಪಂಜಾಬ್‌,ಸಿಕ್ಕಿಂ, ತೆಲಂಗಾಣ, ತಮಿಳುನಾಡು,ಉತ್ತರಾಖಂಡ, ಅಂಡಮಾನ್‌ ಆ್ಯಂಡ್‌ ನಿಕೋಬಾರ್‌, ದಾದ್ರಾ ಮತ್ತು ನಗರ್‌ಹವೇಲಿ,ದಮನ್‌ ಆ್ಯಂಡ್‌ ದಿಯು, ಲಕ್ಷ್ಯದ್ವೀಪ್‌, ದೆಹಲಿ, ಪುದುಚೇರಿ, ಚಂಡೀಗಡ.
ಎರಡು ಹಂತ:ಕರ್ನಾಟಕ, ಮಣಿಪುರ, ರಾಜಸ್ಥಾನ, ತ್ರಿಪುರ
ಮೂರು ಹಂತ: ಅಸ್ಸಾಂ, ಛತ್ತೀಸ್‌ಗಡ
ನಾಲ್ಕು ಹಂತ:  ಜಾರ್ಖಂಡ್‌, ಮಧ್ಯಪ್ರದೇಶ,ಮಹಾರಾಷ್ಟ್ರ, ಒಡಿಶಾ
ಐದು ಹಂತ: ಜಮ್ಮು ಮತ್ತು ಕಾಶ್ಮೀರ
ಏಳು ಹಂತ: ಉತ್ತರ ಪ್ರದೇಶ, ಬಿಹಾರ, ಪಶ್ಚಿಮ ಬಂಗಾಳ
(ಯಾವ ರಾಜ್ಯದಲ್ಲೂ 6 ಹಂತಗಳಲ್ಲಿ ಚುನಾವಣೆ ಇಲ್ಲ)

ಟಾಪ್ ನ್ಯೂಸ್

1-aaccc

PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ

Ashok-1

Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್‌.ಅಶೋಕ್‌

HDK (4)

50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ

1-kangu

‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್

1-ssss

J-K: ಭೀಕರ ಅಪಘಾ*ತದಲ್ಲಿ SUV ಚಲಾಯಿಸುತ್ತಿದ್ದ 17 ರ ಹುಡುಗರಿಬ್ಬರು ಮೃ*ತ್ಯು

Maharashtra Election: Election officials checked Amit Shah’s bag

Maharashtra Election: ಅಮಿತ್‌ ಶಾ ಅವರ ಬ್ಯಾಗ್‌ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು

Anmol Buffalo: The price of this Buffalo weighing 1500 kg is Rs 23 crore!

Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!

Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್‌ ಗೆ 10 ಕೋಟಿ ರೂಪಾಯಿ ಪಂಗನಾಮ!

Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್‌ ಗೆ 10 ಕೋಟಿ ರೂಪಾಯಿ ಪಂಗನಾಮ!

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

1-aaccc

PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ

Ashok-1

Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್‌.ಅಶೋಕ್‌

HDK (4)

50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ

1-kangu

‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ

4

Udupi: ಮೀನುಗಾರಿಕೆ ಕಾರ್ಮಿಕ ಸಾವು; ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.