64,85,980 ಮಕ್ಕಳಿಗೆ ಪೋಲಿಯೋ ಲಸಿಕೆ ಗುರಿ
Team Udayavani, Mar 11, 2019, 12:29 AM IST
ಬೆಂಗಳೂರು : ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಭಾನುವಾರ ಮಕ್ಕಳಿಗೆ ಪೋಲಿಯೋ
ಲಸಿಕೆ ಹಾಕುವ ಮೂಲಕ ರಾಜ್ಯದಲ್ಲಿ ಪೋಲಿಯೋ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿದರು. ಈ ವೇಳೆ ಮಾತನಾಡಿ, ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ ದೇಶಾದ್ಯಂತ ನಡೆಯುತ್ತಿದೆ. ಮುಂದೆ ಮಕ್ಕಳಿಗೆ ಅಂಗವೈಕಲ್ಯದಂತಹ ಯಾವುದೇ ತೊಂದರೆ ಆಗಬಾರದು. ಈ ಬಾರಿ ರಾಜ್ಯದಲ್ಲಿ ಒಟ್ಟು 64,85,980 ಮಕ್ಕಳಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದೆ. 32,571 ಬೂತ್, 51,918 ತಂಡ, 1,10,351 ಕಾರ್ಯಕರ್ತರು, 7,827 ಮೇಲ್ವಿಚಾರಕರು, 2,481 ಸಂಚಾರಿ ತಂಡ, 4,300 ಟ್ರಾನ್ಸಿಟ್ ತಂಡಗಳನ್ನು ನಿಯೋಜನೆ ಮಾಡಲಾಗಿದೆ. ಸೋಮವಾರದಿಂದ ಮನೆಮನೆಗೆ ತೆರಳಿ ಲಸಿಕೆ ಹಾಕಲಾಗುತ್ತದೆ ಎಂದು ತಿಳಿಸಿದರು. ಮಂಗನ ಕಾಯಿಲೆ ಬಗ್ಗೆ ಭಯ ಬೇಡ: ಮಲೆನಾಡಿನ ಭಾಗದಲ್ಲಿ ಮಂಗನ ಕಾಯಿಲೆ ಹೆಚ್ಚಾಗುತ್ತಿರುವ ಕುರಿತು ಆರೋಗ್ಯ ಇಲಾಖೆ ಬಳಿ ಚರ್ಚೆ ನಡೆಸಲಾಗಿದೆ.
ಈಗಾಗಲೇ ಉಚಿತ ವ್ಯಾಕ್ಸಿನೇಷನ್ ಹಂಚಲಾಗುತ್ತಿದ್ದು ಕೆಲವೆಡೆ ವ್ಯಾಕ್ಸಿನೇಷನ್ ಕೊರತೆ ಇದೆ ಎಂದು ಸುಳ್ಳು ವದಂತಿ ಹಬ್ಬಿಸಲಾಗಿದೆ. ಬೆಂಗಳೂರಿನ ಹೆಬ್ಟಾಳದಲ್ಲಿ ಮಾತ್ರ ಈ ವ್ಯಾಕ್ಸಿನೇಷನ್ ತಯಾರಿಸಲಾಗುತ್ತಿದ್ದು, ಒಂದು ವ್ಯಾಕ್ಸಿನೇಷನ್ ತಯಾರಿಗೆ 70 ದಿನ ಕಾಲಾವಕಾಶಬೇಕು. ಈ ಬಾರಿ 1ಲಕ್ಷದ 20 ಸಾವಿರ ವ್ಯಾಕ್ಸಿನೇಷನ್ ಪಡೆದು 60 ಸಾವಿರ ಮಂದಿಗೆ ನೀಡಲಾಗಿದೆ. ಮುಂದಿನ ವರ್ಷಕ್ಕೆ 4.5 ಲಕ್ಷ ವ್ಯಾಕ್ಸಿನೇಷನ್‌ಗೆ ಆರ್ಡ್‌ರ್ ಮಾಡಲಾಗಿದೆ ಎಂದರು.
ಮಂಗನ ಕಾಯಿಲೆ ಮುಂಜಾಗ್ರತೆಗೆ 10 ಕೋಟಿ ರೂ. ಅನುದಾನ ಇಡಲಾಗಿದ್ದು, ಇದನ್ನು ಸಂಶೋಧನೆ ಸೇರಿ ಇತರೆ ಕೆಲಸಕ್ಕೆ ಬಳಕೆ ಮಾಡಲಾಗುತ್ತದೆ. ಮಲೆನಾಡಿನ ಸ್ಥಳೀಯ ಶಾಸಕರು ಸಾವನ್ನಪ್ಪಿದವರಿಗೆ ಪರಿಹಾರ ಕೊಡಿ ಎಂದು ಕೇಳುತ್ತಿದ್ದು, ಸಾಂಕ್ರಾಮಿಕ ರೋಗಗಳಿಗೆ ಪರಿಹಾರ ಕೊಡಲು ಬರಲ್ಲ. ಆದರೆ, ಮಾನವೀಯತೆ ದೃಷ್ಟಿಯಿಂದ ಕುಟುಂಬದ ಸ್ಥಿತಿಗತಿ ಬಗ್ಗೆ ಪರಿಶೀಲಿಸಿ ಪರಿಹಾರ ನೀಡಲು ಕ್ರಮವಹಿಸುತ್ತೇವೆ ಎಂದರು.
ಹಣ ಬಿಡುಗಡೆ ಆಗಿಲ್ಲ
ಮುಂಗಾರು- ಹಿಂಗಾರು ಮಳೆ ಕೊರತೆಯಿಂದ ರೈತರಿಗೆ ಆದ ಬೆಳೆ ನಷ್ಟ ಪರಿಹಾರಕ್ಕಾಗಿ ಕೇಂದ್ರ ಸರ್ಕಾರಕ್ಕೆ ಮೊದಲ ಹಂತದಲ್ಲಿ 2,000 ಕೋಟಿ ರೂ. ಪರಿಹಾರ ಕೇಳಿದ್ದೇವೆ. ಅದರಲ್ಲಿ 949 ಕೋಟಿ ರೂ. ಕೇಂದ್ರ ಪರಿಹಾರ ಘೋಷಣೆ ಮಾಡಿದ್ದರೂ ರಾಜ್ಯಕ್ಕೆ ಬಂದಿರುವುದು 400 ಕೋಟಿ ರೂ.ಮಾತ್ರ. ಇನ್ನು ನರೇಗಾ ಯೋಜನೆ ಹಣ ರಾಜ್ಯಕ್ಕೆ ಕೇಂದ್ರ ಬಿಡುಗಡೆ ಮಾಡಿಲ್ಲ. ತಕ್ಷಣ ಬಿಡುಗಡೆ ಮಾಡುವಂತೆ ಶನಿವಾರ ಪ್ರಧಾನಿ ನರೇಂದ್ರ ಮೋದಿ ಭೇಟಿಯಾಗಿ ಮನವಿ ಮಾಡಿದ್ದೇನೆಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Bidar: ವಕ್ಫ್ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.