ಲೋಕಸಭಾ ಚುನಾವಣೆ: ರಾಜ್ಯ ರಾಜಕೀಯಕ್ಕೆ ಹೊಸ ಭಾಷ್ಯ
Team Udayavani, Mar 11, 2019, 12:35 AM IST
ಬೆಂಗಳೂರು: ಲೋಕಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ರಾಜ್ಯದಲ್ಲಿ 2014ರಲ್ಲಿನ ರಾಜಕೀಯ ಪರಿಸ್ಥಿತಿಗೂ, ಈಗಿನ ಪರಿಸ್ಥಿತಿಗೂ ಅಜಗಜಾಂತರ ವ್ಯತ್ಯಾಸವಿದೆ.
ಆಗ ಸ್ವತಂತ್ರವಾಗಿ ಕಣಕ್ಕಿಳಿದಿದ್ದ ಕಾಂಗ್ರೆಸ್-ಜೆಡಿಎಸ್ ಇದೀಗ ಒಟ್ಟಾಗಿದ್ದರೆ, ಬಿಜೆಪಿ, ಎರಡೂ ಪಕ್ಷಗಳ ಮೈತ್ರಿ ಎದುರಿಸುವ ಹೊಸ ಸವಾಲು ಎದುರಿಸುತ್ತಿದೆ. ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಇರುವುದರಿಂದ ಲೋಕಸಭೆ ಚುನಾವಣೆಯಲ್ಲಿ ಎರಡೂ ಪಕ್ಷಗಳು ಹೆಚ್ಚಿನ ಸ್ಥಾನ ಗಳಿಸಿ ಆ ಮೂಲಕ ಸಮ್ಮಿಶ್ರ ಸರ್ಕಾರಕ್ಕೆ ತೊಂದರೆಯಾಗದಂತೆ ನೋಡಿಕೊಳ್ಳುವ ಗುರಿ ಕಾಂಗ್ರೆಸ್-ಜೆಡಿಎಸ್‌ನದ್ದಾಗಿದೆ. ಆದರೆ, ಎರಡೂ ಪಕ್ಷಗಳಿಗೆ ಒಂದು ಸೀಟನ್ನೂ ಹೆಚ್ಚಾಗಿ ಗೆಲ್ಲಲು ಬಿಡದೆ ಮೈತ್ರಿ ಸರ್ಕಾರಕ್ಕೆ ಸಂಚಕಾರ ತರುವ ದೂರಾಲೋಚನೆ ಬಿಜೆಪಿಯದು.
ಕಾಂಗ್ರೆಸ್ -ಜೆಡಿಎಸ್, ಸಮ್ಮಿಶ್ರ ಸರ್ಕಾರದ 9 ತಿಂಗಳ ಸಾಧನೆ ಹಾಗೂ ಐದು ವರ್ಷಗಳಲ್ಲಿ ಕೇಂದ್ರ ಸರ್ಕಾರದ ವೈಫಲ್ಯಗಳನ್ನು ಅಸ್ತ್ರ ಮಾಡಿಕೊಂಡು ಚುನಾವಣೆಗೆ ಸಿದಟಛಿವಾಗಿದ್ದರೆ, ಬಿಜೆಪಿ, ಕೇಂದ್ರದಲ್ಲಿ ಐದು ವರ್ಷ ಸುಭದ್ರ ಸರ್ಕಾರ ನೀಡಿದ್ದೇವೆ. ಉಗ್ರರ ವಿಚಾರದಲ್ಲಿ ಪಾಕ್ ವಿರುದ್ಧ ದಿಟ್ಟತನ ಪ್ರದರ್ಶಿಸಿದ್ದೇವೆ. ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಸದಾ ಅಸ್ಥಿರತೆಯಿಂದ ನರಳುತ್ತಿದೆ ಎಂಬ ಟೀಕಾಸ್ತ್ರ ಗಳನ್ನು ಮುಂದಿಟ್ಟುಕೊಂಡು ಚುನಾವಣೆ ಎದುರಿಸಲು ಸಜ್ಜಾಗಿದೆ.
ಈ ಚುನಾವಣೆ ಮಾಜಿ ಪ್ರಧಾನಿ ಎಚ್ .ಡಿ.ದೇವೇಗೌಡ, ಮುಖ್ಯಮಂತ್ರಿ ಎಚ್ .ಡಿ.ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ಭವಿಷ್ಯದ ರಾಜಕೀಯದ ಮೇಲೆ ಪರಿಣಾಮ ಬೀರುವುದಂತೂ ಹೌದು. ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವೆ ಸೀಟು ಹೊಂದಾಣಿಕೆ ಎರಡು, ಮೂರು ದಿನಗಳಲ್ಲಿ ಸ್ಪಷ್ಟಗೊಳ್ಳುವುದರಿಂದ, ಬಿಜೆಪಿಯಲ್ಲೂ ಎರಡು ದಿನಗಳಲ್ಲಿ ಮೊದಲ ಹಂತದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ನಿರೀಕ್ಷೆ ಇರುವುದರಿಂದ ರಾಜಕೀಯ ಚಟುವಟಿಕೆಗಳು ಗರಿಗೆದರಲಿವೆ. ಕಾಂಗ್ರೆಸ್- ಜೆಡಿ ಎಸ್, ಜತೆಗೂಡಿ ಚುನಾವಣೆ ಎದುರಿಸುವ ತೀರ್ಮಾನ ಮಾಡಿ ಮಾಡಿರುವುದರಿಂದ ಸಹಜವಾಗಿ ಬಿಜೆಪಿಗೆ ಸ್ವಲ್ಪ$ಆತಂಕವಂತೂ ಇದ್ದೇ ಇದೆ. ಆದರೆ, ಕಾಂಗ್ರೆಸ್-ಜೆಡಿಎಸ್ ನಡುವಿನ ಸೀಟು ಹೊಂದಾಣಿಕೆ ಬಿಕ್ಕಟ್ಟಾಗಿ ಪರಿಣಮಿಸಿರುವುದರಿಂದ ತಳಮಟ್ಟದ ಅಸಮಾಧಾನ ತನಗೆ ಲಾಭವಾಗಬಹುದು ಎಂಬ ನಿರೀಕ್ಷೆಯೂ ಬಿಜೆಪಿಯದ್ದಾಗಿದೆ.
ಬಿಜೆಪಿ ತೆಕ್ಕೆಯಲ್ಲಿರುವ ಮೈಸೂರು, ಬೆಂಗಳೂರು, ಉಡುಪಿ -ಚಿಕ್ಕಮಗಳೂರು, ಶಿವಮೊಗ್ಗ, ಬೆಂಗಳೂರು ಕೇಂದ್ರ, ಉತ್ತರ ಕನ್ನಡ, ಬೀದರ್, ವಿಜಯಪುರ, ಬಾಗಲಕೋಟೆ, ಬೆಳಗಾವಿ ಕ್ಷೇತ್ರಗಳನ್ನು ತಮ್ಮದಾಗಿಸಿಕೊಳ್ಳಲು ಕಾಂಗ್ರೆಸ್-ಜೆಡಿಎಸ್ ಕಾರ್ಯತಂತ್ರ ರೂಪಿಸಿವೆ. ಕಾಂಗ್ರೆಸ್ ಹಾಗೂ ಜೆಡಿಎಸ್ ಪ್ರತ್ಯೇಕವಾಗಿ ಸ್ಪರ್ಧೆ ಮಾಡಿದ್ದರಿಂದಲೇ ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗಗಳಲ್ಲಿ ಕಾಂಗ್ರೆಸ್ ಗೆಲುವು ಸಾಧ್ಯವಾಯಿತು. ಇದೀಗ ಎರಡೂ ಪಕ್ಷಗಳು ಒಟ್ಟಾಗಿ ಒಂದೇ ಆಭ್ಯರ್ಥಿ ಹಾಕಿದರೆ ತಮಗೆ ಲಾಭವಾಗಬಹುದು ಎಂಬ ನಿರೀಕ್ಷೆ ಬಿಜೆಪಿಯದು. ಏಕೆಂದರೆ, ಕಾಂಗ್ರೆಸ್ ಹಾಗೂ ಜೆಡಿಎಸ್ ಪ್ರತ್ಯೇಕವಾಗಿ ಸ್ಪರ್ಧೆ ಮಾಡಿದ್ದರಿಂದ ಬಿಜೆಪಿಗೆ ಕೋಲಾರ, ಚಿಕ್ಕಬಳ್ಳಾಪುರದಲ್ಲಿ ಸೋಲುಂಟಾಗಿತ್ತು.
ಇನ್ನು, ಜೆಡಿಎಸ್‌ಗೆ ಯಾವ ರೂಪದಲ್ಲಿ ನೋಡಿದರೂ ಲಾಭ. ಪ್ರತ್ಯೇಕವಾಗಿ ಸ್ಪರ್ಧೆ ಮಾಡಿದರೆ ಹಾಸನ, ಮಂಡ್ಯ ಈಗಲೂ ಉಳಿಸಿಕೊಳ್ಳಬಹುದು. ಕಾಂಗ್ರೆಸ್ ಬೆಂಬಲ ಸಿಕ್ಕರೆ ಶಿವಮೊಗ್ಗ ಹಾಗೂ ಸೀಟು ಹಂಚಿಕೆಯಡಿ ಕ್ಷೇತ್ರ ಬಿಟ್ಟು ಕೊಟ್ಟರೆ ಬೆಂಗಳೂರು ಉತ್ತರ, ಮೈಸೂರು, ವಿಜಯಪುರ ಕ್ಷೇತ್ರಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿ, ಹಾಲಿ ಇರುವ ಸಂಖ್ಯಾಬಲವನ್ನು 4 ಅಥವಾ 5ಕ್ಕೆ ಹೆಚ್ಚಿಸಿಕೊಳ್ಳುವ ತವಕ ಜೆಡಿಎಸ್‌ನದು. ಆದರೆ, ಸೀಟು ಹಂಚಿಕೆಯಡಿ ಜೆಡಿಎಸ್ ಬಯಸಿದಷ್ಟು ಸೀಟು ಸಿಗುವುದಾ? ಎಂಬುದನ್ನು ಕಾದು ನೋಡಬೇಕಾಗಿದೆ. ಕಳೆದ ಚುನಾವಣೆಯಲ್ಲಿ ಬಿಜೆಪಿ 17, ಕಾಂಗ್ರೆಸ್ 9 ಹಾಗೂ ಜೆಡಿಎಸ್ 2 ಸ್ಥಾನ ಗಳಿಸಿದ್ದವು. ನಂತರ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಬಳ್ಳಾರಿ ಸ್ಥಾನ ಕಳೆದುಕೊಂಡಿತು. ಬೆಂಗಳೂರು ದಕ್ಷಿಣ ಸಂಸದರಾಗಿದ್ದ ಕೇಂದ್ರ ಸಚಿವರೂ ಆಗಿದ್ದ ಅನಂತಕುಮಾರ್ ಅವರು ನಿಧನರಾಗಿರುವುದರಿಂದ ಆ ಸ್ಥಾನ ತೆರವಾಗಿದೆ. ಪ್ರಸ್ತುತ ಬಿಜೆಪಿ 15, ಕಾಂಗ್ರೆಸ್ 10, ಜೆಡಿಎಸ್ 2 ಸ್ಥಾನ ಹೊಂದಿವೆ.
ಹಿಂದೆ ಏನಾಗಿತ್ತು?
2013ರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಶಾಸಕರಾಗಿದ್ದ ಬಿ.ಎಸ್.ಯಡಿಯೂರಪ್ಪ, ಶ್ರೀರಾಮುಲು, ಪ್ರಕಾಶ್ ಹುಕ್ಕೇರಿಯವರು ಸಂಸದ ಸ್ಥಾನಕ್ಕೆ ಸ್ಪರ್ಧೆ ಮಾಡಿ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಮೂರು ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಎರಡು ಕಡೆ, ಬಿಜೆಪಿ ಒಂದು ಕಡೆ ಮಾತ್ರ ಗೆದ್ದಿತ್ತು. 2019ರ ವಿಧಾನಸಭೆ ಚುನಾವಣೆಯಲ್ಲಿ ಮತ್ತೆ ಯಡಿಯೂರಪ್ಪ, ಶ್ರೀರಾಮುಲು, ಪುಟ್ಟರಾಜು ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿ ವಿಧಾನಸಭೆಗೆ ಸ್ಪರ್ಧಿಸಿ, ಆಯ್ಕೆಯಾದರು. ನಂತರ, ನಡೆದ ಉಪಚುನಾವಣೆಯಲ್ಲಿ ಬಳ್ಳಾರಿಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದರೆ, ಮಂಡ್ಯದಲ್ಲಿ ಜೆಡಿಎಸ್, ಶಿವಮೊಗ್ಗದಲ್ಲಿ ಬಿಜೆಪಿ ತನ್ನ ಸ್ಥಾನ ಉಳಿಸಿಕೊಂಡಿದ್ದವು.
ಎಸ್.ಲಕ್ಷ್ಮೀ ನಾರಾಯಣ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
IPL Auction: ಕೇನ್, ಮಯಾಂಕ್, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್‌ಗಳು-ಕಡಲಾಮೆಗೆ ಅಪಾಯ!
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
BBK11: ಧರ್ಮ ಬಿಗ್ ಬಾಸ್ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್ ಹೀರೋʼ ಎಡವಿದ್ದೆಲ್ಲಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.