ನಾಯಕರು ಹೇಳಿಕೆ ನೀಡುವಾಗ ಎಚ್ಚರ ಅಗತ್ಯ

Team Udayavani, Mar 11, 2019, 7:41 AM IST

nayakaru.jpg

ಮಂಡ್ಯ: ಜೆಡಿಎಸ್‌ನಲ್ಲಿ ನಿಖಿಲ್ ಉಮೇದುವಾರಿಕೆ ಬಗ್ಗೆ ಯಾರಲ್ಲೂ ಅಪಸ್ವರವಿಲ್ಲ ಎಂದು ಶಾಸಕ ಕೆ.ಸುರೇಶ್‌ಗೌಡ ತಿಳಿಸಿದರು. ಮದ್ದೂರು ತಾಲೂಕಿನ ಕೊಪ್ಪ ಹೋಬಳಿ ನಂಬಿನಾಯಕನಹಳ್ಳಿ, ತರೀಕೆರೆ ಗ್ರಾಮದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಭಾನುವಾರ ಚಾಲನೆ ನೀಡಿ ಮಾತನಾಡಿ,

ಹಾಲಿ ಸಂಸದ ಎಲ್.ಆರ್‌.ಶಿವರಾಮೇಗೌಡರು ಸ್ಪರ್ಧಾಕಾಂಕ್ಷಿಯಾಗಿದ್ದರು. ಆನಂತರದಲ್ಲಿ ನಿಖಿಲ್ ಅಭ್ಯರ್ಥಿಯಾಗಬೇಕು ಎಂದು ಅವರೇ ವರಿಷ್ಠರನ್ನು ಒತ್ತಾಯಿಸಿದ್ದಾರೆ. ಅಲ್ಲದೆ, ಸಿಎಂ ಕುಮಾರಸ್ವಾಮಿ ಕರೆದಿದ್ದ ಸಭೆಯಲ್ಲೂ ಕೂಡ ಅಭ್ಯರ್ಥಿ ಯಾರಾಗಬೇಕೆಂಬ ವಿಷಯ ಪ್ರಸ್ತಾಪಕ್ಕೆ ಬಂದಾಗ ಎಲ್ಲರೂ ಒಕ್ಕೊರಲಿನಿಂದ ನಿಖಿಲ್ ಹೆಸರನ್ನು ಸೂಚಿಸಿದ್ದೇವೆ. ಹಾಗಾಗಿ ವಿರೋಧ ಎಲ್ಲಿಂದ ಬಂತು ಎಂದು ಪ್ರಶ್ನಿಸಿದರು.

ಬೆಂಬಲ ಅನಿವಾರ್ಯ: ರಾಜ್ಯದಲ್ಲಿ ಮೈತ್ರಿ ಸರ್ಕಾರ ಆಡಳಿತದಲ್ಲಿದೆ. ಎರಡೂ ಪಕ್ಷದ ವರಿಷ್ಠರು ಯಾವ ಯಾವ ಕ್ಷೇತ್ರದಲ್ಲಿ ಪಕ್ಷಗಳು ಗೆಲ್ಲಲಿವೆ ಎನ್ನುವುದರ ಆಧಾರದ ಮೇಲೆ ತೀರ್ಮಾನ ಕೈಗೊಳ್ಳಲಿದ್ದಾರೆ. ಅದರಂತೆ ಮಂಡ್ಯ ಲೋಕಸಭಾ ಕ್ಷೇತ್ರವನ್ನು ಜೆಡಿಎಸ್‌ ಪಕ್ಷಕ್ಕೆ ಬಿಟ್ಟುಕೊಡಲು ತೀರ್ಮಾನವಾಗಿದೆ. ಹಾಗಾಗಿ ಜೆಡಿಎಸ್‌- ಕಾಂಗ್ರೆಸ್‌ ಕಾರ್ಯಕರ್ತರು ಮೈತ್ರಿ ಅಭ್ಯರ್ಥಿಗೆ ಬೆಂಬಲ ಸೂಚಿಸುವುದು ಅನಿವಾರ್ಯ. ಅದರಂತೆ ಡಿ.ಕೆ.ಶಿವಕುಮಾರ್‌ ಪಕ್ಷದ ಮುಖಂಡರು-ಕಾರ್ಯಕರ್ತರ ಸಭೆ ಕರೆದು ಭಿನ್ನಮತ ಬಗೆಹರಿಸಿಕೊಳ್ಳುವ ಪ್ರಯತ್ನಕ್ಕೆ ಮುಂದಾಗಿದ್ದಾರೆ ಎಂದು ತಿಳಿಸಿದರು.

ತಿಂಡಿ ತಿಂದಿದ್ದೇನೆ: ಅಂಬರೀಶ್‌ ಮನೆಗೆ ನಾನು ಹೋದ ಸಂದರ್ಭದಲ್ಲೆಲ್ಲಾ ತಿಂಡಿ ಕೊಟ್ಟಿದ್ದಾರೆ ಎಂದು ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಅವರ ಹೇಳಿಕೆ ಬಗ್ಗೆ ಶಾಸಕ ಸುರೇಶ್‌ಗೌಡ ಪ್ರತಿಕ್ರಿಯೆ ನೀಡಿದರು. ಒಬ್ಬೊಬ್ಬರು ಹೋದ ಸಂದರ್ಭದಲ್ಲಿ ಒಂದೊಂದು ರೀತಿಯ ಅನುಭವವಾಗಿರಬಹುದು. ಆ ಅನುಭವ, ಅನಿಸಿಕೆಗಳನ್ನು ಹಂಚಿಕೊಂಡಿದ್ದಾರೆ. ನಾನೂ ಅಂಬರೀಶ್‌ ಮನೆಗೆ ಭೇಟಿ ನೀಡಿದ್ದೇನೆ, ತಿಂಡಿ ತಿಂದು ಬಂದಿದ್ದೇನೆ ಎಂದರು.

ಉದ್ವೇಗ ಸಲ್ಲ: ಜಿಲ್ಲೆಯ ಅಭಿವೃದ್ಧಿ ಕೆಲಸಗಳಿಗೆ ಕುಮಾರಸ್ವಾಮಿ ಸರ್ಕಾರದಿಂದ ಸಿಗುತ್ತಿರುವ ಸಹಕಾರ ಹಿಂದಿನ ಯಾವುದೇ ಸರ್ಕಾರದ ಅವಧಿಯಲ್ಲೂ ದೊರಕಿರಲಿಲ್ಲ. ಜಿಲ್ಲೆಯ ನೀರಾವರಿ, ಕುಡಿಯುವ ನೀರು ಸೇರಿದಂತೆ ಹಲವಾರು ಸಮಸ್ಯೆಗಳ ಶಾಶ್ವತ ಪರಿಹಾರಕ್ಕೆ ನಿಖಿಲ್ ಅವರನ್ನು ಬೆಂಬಲಿಸುವ ಅವಶ್ಯಕತೆ ಇದೆ. ನಾವು ಯಾವಾಗಲೂ ಅಭಿವೃದ್ಧಿ ಪರವಾಗಿರಬೇಕೇ ವಿನಃ ತಾತ್ಕಾಲಿಕ ಉದ್ವೇಗಕ್ಕೆ ಒಳಗಾಗಬಾರದು ಎಂದರು.

ಆಬಲವಾಡಿ ಗ್ರಾಪಂ ಅಧ್ಯಕ್ಷ ಸುರೇಶ, ಸದಸ್ಯರಾದ ಸುಶೀಲ್ಕುಮಾರ್‌, ತಾಪಂ ಮಾಜಿ ಉಪಾಧ್ಯಕ್ಷ ಎಚ್.ಜಿ. ರಾಮಚಂದ್ರ, ಮುಖಂಡರಾದ ನರಸೇಗೌಡ, ಕುಷಾ, ಚಿಕ್ಕೋನಹಳ್ಳಿ ಜಗದೀಶ ಇತರರಿದ್ದರು.

ಟಾಪ್ ನ್ಯೂಸ್

Ranchi

Ranchi: ಪ್ರೇಯಸಿಯನ್ನು ಕೊಂದು 40ರಿಂದ 50 ತುಂಡು ಮಾಡಿದ ಕಟುಕ!

ICC Champions Trophy to be completely moved from Pakistan?: Decision will be taken at ICC meeting

ICC ಚಾಂಪಿಯನ್ಸ್‌ ಟ್ರೋಫಿ ಪಾಕಿಸ್ತಾನದಿಂದ ಸಂಪೂರ್ಣ ಸ್ಥಳಾಂತರ?: ಐಸಿಸಿ ಸಭೆಯಲ್ಲಿ ನಿರ್ಧಾರ

Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ

Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ

2-bus

ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ವಿದ್ಯಾರ್ಥಿಗಳ ಬಸ್ ಪಲ್ಟಿ,ನಾಲ್ವರು ವಿದ್ಯಾರ್ಥಿಗಳಿಗೆ ಗಾಯ

Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್‌ ಅಮಾನತು

Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್‌ ಅಮಾನತು

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

Jasprit-Bumra

ICC World Rankings: ಟೆಸ್ಟ್‌ ಬೌಲಿಂಗ್‌ ರ್‍ಯಾಂಕಿಂಗ್‌ ಬುಮ್ರಾ ಮರಳಿ ನಂ.1

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya: ಕದ್ದ ಚಿನ್ನ ಮನೆ ಮುಂದೆ ಇಟ್ಟು ಹೋದ ಕಳ್ಳರು!

Mandya: ಕದ್ದ ಚಿನ್ನ ಮನೆ ಮುಂದೆ ಇಟ್ಟು ಹೋದ ಕಳ್ಳರು!

ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ

ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ

Cheluvaraya-swamy

By Election: ಮಗನ ಚುನಾವಣೆಗಾಗಿ ಎಚ್‌ಡಿಕೆ ಸಾವಿರಾರು ಕೋಟಿ ಸಂಗ್ರಹ: ಚಲುವರಾಯಸ್ವಾಮಿ

Mandya-Temple

Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!

Sumalatha

Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Ranchi

Ranchi: ಪ್ರೇಯಸಿಯನ್ನು ಕೊಂದು 40ರಿಂದ 50 ತುಂಡು ಮಾಡಿದ ಕಟುಕ!

3-hunsur

Hunsur: ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು

ICC Champions Trophy to be completely moved from Pakistan?: Decision will be taken at ICC meeting

ICC ಚಾಂಪಿಯನ್ಸ್‌ ಟ್ರೋಫಿ ಪಾಕಿಸ್ತಾನದಿಂದ ಸಂಪೂರ್ಣ ಸ್ಥಳಾಂತರ?: ಐಸಿಸಿ ಸಭೆಯಲ್ಲಿ ನಿರ್ಧಾರ

Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ

Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ

2-bus

ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ವಿದ್ಯಾರ್ಥಿಗಳ ಬಸ್ ಪಲ್ಟಿ,ನಾಲ್ವರು ವಿದ್ಯಾರ್ಥಿಗಳಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.