ಜನತೆಗೆ ಕೇಂದ್ರದ ಯೋಜನೆಗಳ ಪ್ರದರ್ಶನ


Team Udayavani, Mar 11, 2019, 7:41 AM IST

m1-janatege.jpg

ಮೈಸೂರು: ಕೇಂದ್ರ ಸರ್ಕಾರದ ವಿವಿಧ ಜನಪರ ಯೋಜನೆಗಳ ಬಗ್ಗೆ ಜನತೆಗೆ ಮನವರಿಕೆ ಮಾಡಿಕೊಡುವ ನಿಟ್ಟಿನಲ್ಲಿ ಮೈಸೂರು ಜಿಲ್ಲೆಯಲ್ಲಿ ನವ ಭಾರತ ಚೌಪಾಲ್‌ ಕಾರ್ಯಕ್ರಮವನ್ನು ವಿವಿಧೆಡೆ ಪ್ರದರ್ಶಿಸಲಾಯಿತು.

ಮೈಸೂರಿನ ಹಿನಕಲ್‌, ಹೂಟಗಳ್ಳಿ, ಶ್ರೀರಾಂಪುರ, ಬೋಗಾದಿ, ಬೆಲವತ್ತ, ದಟ್ಟಗಳ್ಳಿ ಸೇರಿದಂತೆ ಹಲವೆಡೆಗಳಲ್ಲಿ ನವ ಭಾರತ ಚೌಪಾಲ್‌ ಕಾರ್ಯಕ್ರಮ ಆಯೋಜಿಸಿ ಕೇಂದ್ರ ಸರ್ಕಾರದ ಅನೇಕ ಯೋಜನೆಗಳ ಮಾಹಿತಿ ನೀಡಿದ್ದಲ್ಲದೆ, ಯೋಜನೆಗಳ ಫ‌ಲಾನುಭವಿಗಳನ್ನು ಸನ್ಮಾನಿಸಿ, ಈ ಯೋಜನೆಗಳಿಂದ ಫ‌ಲಾನುಭವಿಗಳು ಹೇಗೆ ಲಾಭ ಪಡೆದಿದ್ದಾರೆ ಎಂಬ ಬಗ್ಗೆ ವಾಹನಗಳಲ್ಲಿ ಎಲ್‌ಇಡಿ ಪರದೆಯ ಮೂಲಕ ವಿಡಿಯೋ ಪ್ರದರ್ಶನದ ಜೊತೆಗೆ ಸ್ಥಳೀಯ ಫ‌ಲಾನುಭವಿಗಳೂ ತಮ್ಮ ಅಭಿಪ್ರಾಯ ಹಂಚಿಕೊಳ್ಳಲು ವೇದಿಕೆ ಒದಗಿಸಲಾಯಿತು. 

ಜನ್‌ ಕೀ ಬಾತ್‌: ಸ್ಥಳೀಯ ಕಲಾವಿದರ ಪ್ರದರ್ಶನಗಳು, ಲಕ್ಕಿ ಡ್ರಾ ಮತ್ತು ಚಿತ್ರಕಲಾ ಸ್ಪರ್ಧೆ, ಮನರಂಜನೆ ಕಾರ್ಯಕ್ರಮಗಳನ್ನೂ ಈ ವೇಳೆ ಆಯೋಜಿಸಲಾಗಿತ್ತು. ಸ್ಥಳೀಯ ನಿವಾಸಿಗಳಿಗೆ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಬಗೆಗಿನ ಕೈಪಿಡಿಗಳು ಮತ್ತು ಮಾಹಿತಿ ಕಿರುಹೊತ್ತಿಗೆಯನ್ನು ವಿತರಿಸಲಾಯಿತು. ಈ ಕಾರ್ಯಕ್ರಮಕ್ಕೆ ಭೇಟಿ ನೀಡುವ ಜನರನ್ನು ಸರ್ಕಾರದ ವಿವಿಧ ಯೋಜನೆಗಳನ್ನು ತಿಳಿದುಕೊಳ್ಳುವ ಬಗ್ಗೆ ಉತ್ತೇಜಿಸಿದ್ದಲ್ಲದೆ, ಪ್ರಧಾನಮಂತ್ರಿಗಳಿಗಾಗಿ ಜನತೆ ತಮ್ಮ ಸಂದೇಶ ತಿಳಿಸಲು ಜನ್‌ ಕೀ ಬಾತ್‌ ಬೂತ್‌ ಸಹ ಸ್ಥಾಪಿಸಲಾಗಿತ್ತು. 

8 ಸಾವಿರ ಕಾರ್ಯಕ್ರಮ: ಭಾರತ ಸರ್ಕಾರದ ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಫೆಬ್ರವರಿಯಿಂದ ದೇಶಾದ್ಯಂತ 318 ಜಿಲ್ಲೆಗಳಲ್ಲಿ ನವಭಾರತ ಚೌಪಾಲ್‌ ಶೀರ್ಷಿಕೆಯ ಸುಮಾರು 8,000 ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ. ಜನ ಸಾಮಾನ್ಯರ  ಸಾಮಾಜಿಕ-ಆರ್ಥಿಕ ಬೆಳವಣಿಗೆಗೆ ಸಂಬಂಧಿಸಿದಂತೆ ಭಾರತ ಸರ್ಕಾರದ ಸಾಧನೆಗಳನ್ನು ಅದರ ವಿವಿಧ ಯೋಜನೆಗಳ ಮೂಲಕ ತೋರಿಸುವ ಉದ್ದೇಶದಿಂದ ರೂಪಿಸಿರುವ ಈ ಕಾರ್ಯಕ್ರಮವು ಯಶಸ್ಸಿನ ಕಥೆಗಳನ್ನು ಜನತೆಗೆ ತೋರಿಸುವ ಮೂಲಕ ವಿವಿಧ‌ ಯೋಜನೆಗಳ ಕಡೆಗೆ ಗಮನವನ್ನು ಸೆಳೆಯಲು ಮತ್ತು ಆ ಮೂಲಕ ಹೆಚ್ಚು ಜನರನ್ನು ವಿವಿಧ ಯೋಜನೆಗಳ ಪ್ರಯೋಜನ ಪಡೆಯುವಂತೆ ಉತ್ತೇಜಿಸುವಲ್ಲಿ ನವ ಭಾರತ ಚೌಪಾಲ್‌ ಉತ್ತಮ ವೇದಿಕೆಯಾಗಿದೆ.

ಯೋಜನೆಗಳ ಮನವರಿಕೆ: ಅಟಲ್‌ ಪೆನ್ಶನ್‌ ಯೋಜನೆ, ಪ್ರಧಾನಮಂತ್ರಿ ಜನಧನ ಯೋಜನೆ, ಪ್ರಧಾನಮಂತ್ರಿ ಜೀವನ ಜ್ಯೋತಿ ವಿಮೆ ಯೋಜನೆ, ಪ್ರಧಾನಮಂತ್ರಿ ಮುದ್ರಾ ಯೋಜನೆ, ಪ್ರಧಾನಮಂತ್ರಿ ಉಜ್ವಲ ಯೋಜನೆ, ಮಗಳನ್ನು ರಕ್ಷಿಸಿ-ಮಗಳನ್ನು ಓದಿಸಿ, ಸುಕನ್ಯ ಸಮೃದ್ಧಿ ಯೋಜನೆ, ಪ್ರಧಾನಮಂತ್ರಿ ಜನ ಆರೋಗ್ಯ ಕೇಂದ್ರ, ಪ್ರಧಾನಮಂತ್ರಿ ಫ‌ಸಲು ವಿಮೆ ಯೋಜನೆ,

ಪ್ರಧಾನಮಂತ್ರಿ ಕೌಶಲ್ಯಾಭಿವೃದ್ಧಿ ಯೋಜನೆ, ಸ್ಕಿಲ್‌ ಇಂಡಿಯಾ, ಪ್ರಧಾನಮಂತ್ರಿ ಸೌಭಾಗ್ಯ ಯೋಜನೆ, ಪ್ರಧಾನ ಮಂತ್ರಿ ಭಾರತೀಯ ಜನ ಔಷಧಿ ಪರಿಯೋಜನೆ, ಪ್ರಧಾನಮಂತ್ರಿ ವಸತಿ ಯೋಜನೆ, ಮೇಕ್‌ ಇನ್‌ ಇಂಡಿಯಾ ಸೇರಿದಂತೆ ಹಲವು ಯೋಜನೆಗಳ ಬಗ್ಗೆ ಜನತೆಗೆ ಮನವರಿಕೆ ಮಾಡಿಕೊಟ್ಟು, ಜನ ಸಾಮಾನ್ಯರ ಅಭಿಪ್ರಾಯ ಸಂಗ್ರಹಿಸಲಾಯಿತು.

ಟಾಪ್ ನ್ಯೂಸ್

ಅಡಿಕೆ ಬೆಳೆಗಾರರ ಜೀವನಕ್ಕೆ ಆಘಾತವಿಕ್ಕಿದ ಡಬ್ಲ್ಯೂಎಚ್‌ಒ ವಿರುದ್ಧ ಕ್ರಮಕ್ಕೆ ಒತ್ತಾಯ  

ಅಡಿಕೆ ಬೆಳೆಗಾರರ ಜೀವನಕ್ಕೆ ಆಘಾತವಿಕ್ಕಿದ ಡಬ್ಲ್ಯೂಎಚ್‌ಒ ವಿರುದ್ಧ ಕ್ರಮಕ್ಕೆ ಒತ್ತಾಯ  

Sagara-Minister-Dinesh

KFD Vaccine: ಮುಂಬರುವ ನವೆಂಬರ್‌ನಲ್ಲಿ ಮಂಗನ ಕಾಯಿಲೆಗೆ ಲಸಿಕೆ ಸಿದ್ಧ: ದಿನೇಶ್ ಗುಂಡೂರಾವ್

Gold price drops again: Rs 77240 per 10 grams!

Gold Rate: ಚಿನ್ನದ ಬೆಲೆ ಮತ್ತೆ ಇಳಿಕೆ: 10 ಗ್ರಾಂಗೆ 77240 ರೂ!

12-sirsi

Sirsi: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ ಪರಾರಿ; ಆರೋಪಿ ಬಂಧನ

EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್‌ ಟೀಕೆ

EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್‌ ಟೀಕೆ

11-sirsi

Sirsi: ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾದ ಸಂಸದ ಕಾಗೇರಿ

1

India: 68 ಮಿಲಿಯನ್‌ ಟನ್‌ ಆಹಾರ ಪೋಲು…ದೇಶದ ಅಭಿವೃದ್ಧಿ, ಜನರ ಸಾವು, ಆಹಾರ ಭದ್ರತೆಗೂ ಮಾರಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

Kamsale-kumaraswami

Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

GTD

Mysuru: ಜೆಡಿಎಸ್‌ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಅಡಿಕೆ ಬೆಳೆಗಾರರ ಜೀವನಕ್ಕೆ ಆಘಾತವಿಕ್ಕಿದ ಡಬ್ಲ್ಯೂಎಚ್‌ಒ ವಿರುದ್ಧ ಕ್ರಮಕ್ಕೆ ಒತ್ತಾಯ  

ಅಡಿಕೆ ಬೆಳೆಗಾರರ ಜೀವನಕ್ಕೆ ಆಘಾತವಿಕ್ಕಿದ ಡಬ್ಲ್ಯೂಎಚ್‌ಒ ವಿರುದ್ಧ ಕ್ರಮಕ್ಕೆ ಒತ್ತಾಯ  

12

Sullia: ಕನಕಮಜಲು; ಅಂಗಡಿ, ಹೊಟೇಲ್‌ನಿಂದ ಕಳವು

Sagara-Minister-Dinesh

KFD Vaccine: ಮುಂಬರುವ ನವೆಂಬರ್‌ನಲ್ಲಿ ಮಂಗನ ಕಾಯಿಲೆಗೆ ಲಸಿಕೆ ಸಿದ್ಧ: ದಿನೇಶ್ ಗುಂಡೂರಾವ್

Mallika Sherawat breaks up with French boyfriend

Actress: ಫ್ರೆಂಚ್‌ ಗೆಳೆಯನೊಂದಿಗೆ ಬ್ರೇಕ್‌ಅಪ್‌ ಆಗಿದೆ: ಮಲ್ಲಿಕಾ ಶೆರಾವತ್‌

Chhattisgarh: 20 coaches of goods train derail

Chhattisgarh: ಹಳಿ ತಪ್ಪಿದ  ಗೂಡ್ಸ್‌ ರೈಲಿನ 20 ಬೋಗಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.