ಜಲಸುರಂಗ ಮಾರ್ಗ ದುರಸ್ತಿಯಾಗಲಿ

Team Udayavani, Mar 11, 2019, 7:42 AM IST

vij-2.jpg

ವಿಜಯಪುರ: ನಗರದಲ್ಲಿ ಪರ್ಶಿಯಾದಲ್ಲಿ ಕಂಡುಬರುವ ಸುಧಾರಿತ ತಾಂತ್ರಿಕತೆಯ ಆದಿಲ್‌ಶಾಹಿ ಸುಲ್ತಾನರ ಕಾಲದ ಜಲಸುರಂಗ ಮಾರ್ಗ ದುರಸ್ತಿ ಕಾಮಗಾರಿ ಅರ್ಧಕ್ಕೆ ನಿಂತಿದ್ದು, ಕಾಮಗಾರಿಯನ್ನು ತ್ವರಿತಗೊಳಿಸುವಂತೆ ಸಂಶೋಧಕ ಹಾಗೂ ಸಿಕ್ಯಾಬ್‌ ಮಹಿಳಾ ಪದವಿ ಕಾಲೇಜಿನ ಇತಿಹಾಸ ಪ್ರಾಧ್ಯಾಪಕ ಡಾ| ಮುಸ್ತಾಕ್‌ ಅಹ್ಮದ್‌ ಜಿಲ್ಲಾಡಳಿತವನ್ನು ಆಗ್ರಹಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ನಗರದಲ್ಲಿ ಆದಿಲ್‌ಶಾಹಿ ಸುಲ್ತಾನರ ಕಾಲದಲ್ಲಿ ರಾಜಧಾನಿ ವಿಜಯಪುರ ನಗರಕ್ಕೆ ಸುಸ್ಥಿರವಾದ ನೀರು ಸರಬರಾಜು ವ್ಯವಸ್ಥೆ ಕಲ್ಪಿಸಿದ್ದರು. ಆದಿಲ್‌ ಶಾಹಿ ಸುಲ್ತಾನರ ಜಲತಾಂತ್ರಿಕತೆ ಜಗತ್ತಿನಲ್ಲಿಯೇ ವಿಶಿಷ್ಟವಾದ ತಂತ್ರಜ್ಞಾನ ಎಂಬ ಹಿರಿಮೆ ಹೊಂದಿದೆ. 

ಇದರ ಒಂದು ಭಾಗವಾಗಿ ಸುರಂಗ ಮಾರ್ಗದ ಮೂಲಕ ರಾಜಧಾನಿ ನಗರದಲ್ಲಿ ಸುಮಾರು 10 ಲಕ್ಷ ಪ್ರಜೆಗಳಿಗೆ ನೀರಿನ ಕೊರತೆ ನೀಗಿಸುತ್ತಿದ್ದರು. ಸದರಿ ತಾಂತ್ರಿಕೆತ ಸುರಂಗ ಮಾರ್ಗ ತೊರವಿ ಕೆರೆಯಿಂದ ಕೊಳವೆಗಳ ಮೂಲಕ ಮಹಮ್ಮದ ಸರೋವರಗೆ ಸೇರಿ, ನಂತರ ಸುರಂಗ ಬಾವಿಗೆ ಸೇರುತ್ತಿತ್ತು. ಅಲ್ಲಿಂದ ಈ ಸುರಂಗ ಮಾರ್ಗ ಟ್ರೆಜರಿ ಕಾಲೋನಿ, ಸೈನಿಕ ಶಾಲೆ ಮೈದಾನ, ಸರಕಾರಿ ಆಸ್ಪತ್ರೆ ಆವರಣದಿಂದ ಸುಮಾರು 7 ಕಿ.ಮೀ. ಸಂಚರಿಸಿ, ಇಬ್ರಾಹಿಂ ರೋಜಾ ಸ್ಮಾರಕಕ್ಕೆ ಸೇರುತ್ತದೆ. ಸದರಿ ಸುರಂಗದಿಂದ ಸರಬರಾಜು ಮಾಡಲಾಗುವ ನೀರನ್ನು ಸ್ವತ್ಛಗೊಳಿಸಲು ಮತ್ತು ಉತ್ತಮ ಗಾಳಿಯಾಡಲು ಸುರಂಗ ಮಾರ್ಗದಲ್ಲಿ 35
ಕಿಂಡಿ ಬಿಡಲಾಗಿದ್ದು, ಈ ತಾಂತ್ರಿಕತೆ ಪರ್ಶಿಯನ್‌ ತಾಂತ್ರಿಕತೆ ಮೀರಿದೆ.

ಸದ್ಯ ದುಸ್ಥಿತಿಯಲ್ಲಿ ಸಿಲುಕಿದ್ದ ಈ ಅದ್ಬುತ ಸುರಂಗ ಪುನಶ್ಚೇತನಕ್ಕೆ ಡಾ| ಎಂ.ಬಿ. ಪಾಟೀಲ ಅವರು ಜಲಸಂಪನ್ಮೂಲ ಸಚಿವರಾಗಿದ್ದ ಸಂದರ್ಭದಲ್ಲಿ ಪ್ರವಾಸೋದ್ಯಮ ಇಲಾಖೆಯಿಂದ 8 ಕೋಟಿ ರೂ. ವೆಚ್ಚದಲ್ಲಿ ಯೋಜನೆ ರೂಪಿಸಿದ್ದರು. 

ಅಲ್ಲದೇ ಸದರಿ ಯೋಜನೆ ಅನುಷ್ಠಾನಕ್ಕೆ 3 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿತ್ತು. ಆದರೆ ಸುಮಾರು 30 ಆಡಿ ಪುನಶ್ಚೇತನದ ಬಳಿಕ ಕಳೆದ ಮಳೆಗಾಲದಲ್ಲಿ ಸದರಿ ಪುನರುಜ್ಜೀವನ ಕಾರ್ಯ ಸ್ಥಗಿತಗೊಳಿಸಲಾಗಿದೆ. ಇದರಿಂದ ಟ್ರೆಜರಿ ಕಾಲೋನಿ ನಿವಾಸಿಗಳ ಚರಂಡಿ ನೀರನ್ನು ಈ ಸುರಂಗ ಮಾರ್ಗಕ್ಕೆ ಸಂಪರ್ಕ ಕಲ್ಪಿಸಿದ್ದು, ಸುತ್ತಲ ಪರಿಸರ ದುರ್ವಾಸನೆ ಹರಡಲು ಕಾರಣವಾಗಿದೆ. ಅಲ್ಲದೇ ಐತಿಹಾಸಿಕ ಪರಂಪರೆಯ ಸ್ಮಾರಕಕ್ಕೆ ಅಪಮಾನ ಎಸಗುವ ಜೊತೆಗೆ, ಜಿಲ್ಲೆಯ ಪ್ರವಾಸಿ ತಾಣಗಳ ವೀಕ್ಷಣೆಗೆ ನಿತ್ಯ ಸಾವಿರಾರು ಜನರು ನಗರಕ್ಕೆ ಬರುತ್ತಿದ್ದು, ಈ ಪ್ರದೇಶಕ್ಕೆ ಭೇಟಿ ನೀಡಿ ಮೂಗು ಮುಚ್ಚಿಕೊಳ್ಳುತ್ತಿದ್ದಾರೆ ಎಂದು ದೂರಿದ್ದಾರೆ.

ಜಗತ್ತಿನಲ್ಲೇ ಆತ್ಯಂತ ಭವ್ಯ ಪರಂಪರೆ ಸಾರುವ ಹಾಗೂ ಅಪರೂಪದ ತಾಂತ್ರಿಕ ಶೈಲಿ ಹೊಂದಿರುವ ಈ ಸುರಂಗ ಮಾರ್ಗವನ್ನು ಮಳೆಗಾಲ ಆರಂಭಕ್ಕೆ ಮುನ್ನವೇ ಪೂರ್ಣಗೊಳಿಸಲು ಜಿಲ್ಲೆಯ ಸಚಿವರು, ಸರ್ಕಾರ, ಜಿಲ್ಲಾಡಳಿತ, ಪುರಾತತ್ವ ಇಲಾಖೆ ಹಾಗೂ ಮಹಾನಗರ ಪಾಲಿಕೆ ಅಧಿಕಾರಿಗಳು ಕಾಮಗಾರಿ ಆರಂಭಿಸಲು ಕ್ರಮಕ್ಕೆ ಮುಂದಾಗಬೇಕು. ಇದರಿಂದ ಭವಿಷ್ಯದ ಪೀಳಿಗೆಗೆ ನಮ್ಮ ಪುರಾತನರ ದೂರದೃಷ್ಟಿಯ ಸುಧಾರಿತ ತಾಂತ್ರಿಕತೆ ಮನವರಿಕೆ ಮಾಡಿಕೊಡಲು ನೆರವಾಲಿದೆ ಎಂದು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Darshan (3)

Renukaswamy ಹ*ತ್ಯೆ ಸ್ಥಳದಲ್ಲಿ ದರ್ಶನ್‌ ಇದ್ದ ಚಿತ್ರ ಲಭ್ಯ: ಪರಂ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: One-year-old child kidnapped from district hospital: Crime detected on CCTV

Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ

kolahara-TV

By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!

vijayapura-Police

Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ

Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

1-ewew

ಸಂಗೀತ ವಿವಿಯಲ್ಲಿ ಕೋರ್ಸ್‌ ಆರಂಭ: ಕುಲಪತಿ ನಾಗೇಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.