ಬೆಂ. ದಕ್ಷಿಣ ಲೋಕಸಭಾ ಕ್ಷೇತ್ರ; BJPಯಿಂದ ತೇಜಸ್ವಿನಿ ಅನಂತ್ ಕುಮಾರ್?
Team Udayavani, Mar 11, 2019, 8:36 AM IST
ಬೆಂಗಳೂರು:ಲೋಕಸಭಾ ಚುನಾವಣೆ ಘೋಷಣೆಯಾಗುತ್ತಿದ್ದಂತೆಯೇ ರಾಜಕೀಯ ಪಕ್ಷಗಳಲ್ಲಿ ಬಿರುಸಿನ ಚಟುವಟಿಕೆ ನಡೆಯತೊಡಗಿದ್ದು, ಬೆಂಗಳೂರು ದಕ್ಷಿಣ ಕ್ಷೇತ್ರ ಲೋಕಸಭಾ ಕ್ಷೇತ್ರಕ್ಕೆ ದಿ.ಅನಂತ್ ಕುಮಾರ್ ಅವರ ಪತ್ನಿ ಡಾ.ತೇಜಸ್ವಿನಿ ಅನಂತ್ ಕುಮಾರ್ ಅವರನ್ನು ಕಣಕ್ಕಿಳಿಸಲು ಬಿಜೆಪಿ ಸಿದ್ಧತೆ ನಡೆಸಿದೆ.
ಬೆಂಗಳೂರು ದಕ್ಷಿಣ ಕ್ಷೇತ್ರವನ್ನು ಬಿಜೆಪಿ ಹಿರಿಯ ಮುಖಂಡ ಅನಂತ್ ಕುಮಾರ್ ಅವರು ಪ್ರತಿನಿಧಿಸುತ್ತಿದ್ದು, ಸತತ ಗೆಲುವು ಸಾಧಿಸುತ್ತಿದ್ದರು. ಇದೀಗ ಅನಂತ್ ಕುಮಾರ್ ಅವರು ವಿಧಿವಶರಾಗಿದ್ದಾರೆ. ಈ ನಿಟ್ಟಿನಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಯಾರನ್ನು ಅಖಾಡಕ್ಕಿಳಿಸಬೇಕು ಎಂಬ ಬಗ್ಗೆ ಕಾಂಗ್ರೆಸ್, ಬಿಜೆಪಿ ರಣತಂತ್ರ ರೂಪಿಸತೊಡಗಿವೆ.
ಬಿಜೆಪಿ ಮುಖಂಡ ಆರ್.ಅಶೋಕ್ ಅವರು ಸೋಮವಾರ ಸಂಜೆ ಬೆಂಗಳೂರು ದಕ್ಷಿಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಶಾಸಕರು ಹಾಗೂ ಕಾರ್ಪೋರೇಟರ್ ಗಳ ಜೊತೆ ಚರ್ಚೆ ನಡೆಸಿ, ಡಾ.ತೇಜಸ್ವಿನಿ ಅನಂತ್ ಕುಮಾರ್ ಅವರನ್ನು ಕಣಕ್ಕಿಳಿಸುವ ಬಗ್ಗೆ ನಿರ್ಧಾರ ಪ್ರಕಟಿಸುವ ಸಾಧ್ಯತೆ ಇದೆ.
ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರಕ್ಕೆ ಗೋವಿಂದರಾಜ ನಗರ, ವಿಜಯನಗರ, ಚಿಕ್ಕಪೇಟೆ, ಬಸವನಗುಡಿ, ಪದ್ಮನಾಭ ನಗರ, ಬಿಟಿಎಂ ಲೇಔಟ್, ಜಯನನಗರ ಹಾಗೂ ಬೊಮ್ಮನಹಳ್ಳಿ ಸೇರಿದಂತೆ ಎಂಟು ವಿಧಾನಸಭಾ ಕ್ಷೇತ್ರಗಳಿವೆ.
ಸತತ ಗೆಲುವು ಸಾಧಿಸಿದ್ದ ಅನಂತ್ ಕುಮಾರ್:
ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಕೆಲವು ಕಾಂಗ್ರೆಸ್ ನ ಭದ್ರಕೋಟೆಯಾಗಿತ್ತು. ಆದರೆ 1989ರಲ್ಲಿ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಿದ ಬಳಿಕ 1996ರಿಂದ 2014ರವರೆಗೂ ಅನಂತ್ ಕುಮಾರ್ ಅವರು ಸತತವಾಗಿ 6 ಬಾರಿ ಜಯಭೇರಿ ಬಾರಿಸುವ ಮೂಲಕ ಸಂಸದರಾಗಿ ಆಯ್ಕೆಯಾಗಿದ್ದರು. ಇದೀಗ ಬೆಂಗಳೂರು ದಕ್ಷಿಣ ಕ್ಷೇತ್ರದತ್ತ ಕಾಂಗ್ರೆಸ್ ಮತ್ತು ಬಿಜೆಪಿ ರಣತಂತ್ರ ರೂಪಿಸುವ ಮೂಲಕ ಲೋಕಸಮರಕ್ಕೆ ಸಜ್ಜಾಗುತ್ತಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
IFFI 2024: ಅಜ್ಜನ ಸಿನಿಮಾಗಳು ಡಿಸೆಂಬರ್ ನಲ್ಲಿ ಚಿತ್ರಮಂದಿರದಲ್ಲಿ ಬಿಡುಗಡೆ: ರಣಬೀರ್ ಕಪೂರ್
ಕಡಬ, ಬೆಳ್ತಂಗಡಿ ಸೇರಿದಂತೆ ಹಲವೆಡೆ ಮಾದಕವಸ್ತು, ಅಕ್ರಮ ಮದ್ಯ ಮಾರಾಟ ವಿರುದ್ಧ ಕಾರ್ಯಾಚರಣೆ
IPL Mega Auction: ಮೊದಲ ದಿನದ ಹರಾಜಿನ ಬಳಿಕ ಎಲ್ಲಾ 10 ತಂಡಗಳು ಹೀಗಿವೆ ನೋಡಿ
Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ
Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್ ಷೇರು ಮೌಲ್ಯ ಏರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.