ಕಾಮಗಾರಿಯಲ್ಲಿ ಗುಣಮಟ್ಟ ಕಾಯ್ದುಕೊಳ್ಳಲು ಸೂಚನೆ
Team Udayavani, Mar 11, 2019, 10:33 AM IST
ಸಾಗರ: ಗುಣಮಟ್ಟದ ಕಾಮಗಾರಿ ನನ್ನ ಮೊದಲ ಆದ್ಯತೆ. ಕಳಪೆ ಕಾಮಗಾರಿ ಮಾಡಿ ಸಾರ್ವಜನಿಕ ಹಣ ಪೋಲು ಮಾಡಲು ಪ್ರಯತ್ನ ಮಾಡಿದರೆ ಅಂತಹವರ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಶಾಸಕ ಎಚ್. ಹಾಲಪ್ಪ ಎಚ್ಚರಿಕೆ ನೀಡಿದ್ದಾರೆ.
ನಗರದ ಲೋಕೋಪಯೋಗಿ ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ವತಿಯಿಂದ 1.20 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರರ ನೂತನ ಕಚೇರಿ ಲೋಕಾರ್ಪಣೆ ಗೊಳಿಸಿ ಅವರು ಮಾತನಾಡಿದರು.
ಲೋಕೋಪಯೋಗಿ ಇಲಾಖೆ ಸೇರಿದಂತೆ ನಿರ್ಮಾಣ ಕಾಮಗಾರಿಯಲ್ಲಿ ತೊಡಗಿಕೊಂಡಿರುವ ಇಲಾಖೆಗಳು ಸರ್ಕಾರದಿಂದ ಹಣ ಬಂದಿದೆ ಎಂದು ಖರ್ಚು ಮಾಡಲು ಕಾಮಗಾರಿ ಮಾಡಬೇಡಿ. ನೀವು ಮಾಡುವ ಕಾಮಗಾರಿ ಮುಂದಿನ 100 ವರ್ಷಗಳವರೆಗೆ ಸುರಕ್ಷಿತವಾಗಿರುವಂತೆ ಯೋಜನೆ ರೂಪಿಸಿ. ಈ ಹಿಂದೆ ಸಾಗರದಲ್ಲಿ ನಿರ್ಮಾಣ ಮಾಡಿದ ಅನೇಕ ಕಟ್ಟಡ, ವಾಟರ್ ಟ್ಯಾಂಕ್ ಅವ ಗಿಂತ ಮೊದಲೇ ಕುಸಿದು ಬಿದ್ದಿದೆ. ಇದಕ್ಕೆ ಯಾರನ್ನು ಹೊಣೆಗಾರರನ್ನಾಗಿ ಮಾಡುವುದು ಎಂದು ಪ್ರಶ್ನಿಸಿದ ಹಾಲಪ್ಪ, ನನ್ನ ಅವಧಿಯಲ್ಲಿ ಅಂತಹದ್ದಕ್ಕೆ ಅವಕಾಶ ನೀಡುವುದಿಲ್ಲ ಎಂದರು.
ಸರ್ಕಾರಿ ಜಾಗದ ಕೊರತೆ ಇರುವ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ನಿರ್ಮಾಣ ಮಾಡುವ ಶಾಲಾ-ಕಾಲೇಜು, ಸರ್ಕಾರಿ
ಕಟ್ಟಡಗಳನ್ನು ಬಹುಮಹಡಿ ಕಟ್ಟಡವಾಗಿ ನಿರ್ಮಾಣ ಮಾಡುವತ್ತ ಗಮನ ಹರಿಸಿ, ಅದಕ್ಕೆ ಲಿಫ್ಟ್ ವ್ಯವಸ್ಥೆಯನ್ನು ಇರಿಸಿಕೊಳ್ಳುವ ಚಿಂತನೆ ನಡೆಸಲಾಗಿದೆ. ನೂತನವಾಗಿ ನಿರ್ಮಾಣ ಮಾಡುವ ಕಾಮಗಾರಿಗಳನ್ನು ಮಲೆನಾಡು ಪರಿಸರಕ್ಕೆ ಪೂರಕವಾಗುವಂತೆ ನಿರ್ಮಾಣ ಮಾಡಿ ಎಂದು ಸಲಹೆ ನೀಡಿದರು.
ತಾಪಂ ಅಧ್ಯಕ್ಷ ಬಿ.ಎಚ್. ಮಲ್ಲಿಕಾರ್ಜುನ ಹಕ್ರೆ ಮಾತನಾಡಿ, ತಾಲೂಕಿನ ಕೆಲವು ಭಾಗದಲ್ಲಿ ಸಿಗುವುದು ಮರಳು ಮಿಶ್ರಿತ ಮಣ್ಣು ಎನ್ನುವುದನ್ನು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ದೃಢೀಕರಿಸಿದೆ. ಇಂತಹ ಮರಳಿನಲ್ಲಿ, ಎಂ- ಸ್ಯಾಂಡ್‌ನಲ್ಲಿ ನಿರ್ಮಾಣ ಮಾಡುವ ಕಟ್ಟಡದ ಗುಣಮಟ್ಟ ಪ್ರಶ್ನಾರ್ಹವಾಗಿರುತ್ತದೆ.
ಜೊತೆಗೆ ಗುತ್ತಿಗೆದಾರರು ಶೇ. 40ರಷ್ಟು ಕಡಿಮೆ ಬಿಡ್‌ನಲ್ಲಿ ಕಾಮಗಾರಿ ಗುತ್ತಿಗೆ ಪಡೆಯುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ
ಗುಣಮಟ್ಟದ ಕಾಮಗಾರಿ ಪ್ರಶ್ನಾರ್ಹ. ಈ ಬಗ್ಗೆ ಅಧಿಕಾರಿಗಳು ಹೆಚ್ಚು ನಿಗಾ ವಹಿಸಬೇಕು ಎಂದರು.
ಜಿಪಂ ಸದಸ್ಯ ಭೀಮನೇರಿ ಶಿವಪ್ಪ, ತಾಪಂ ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ಕಲಸೆ ಚಂದ್ರಪ್ಪ ಇತರರು ಇದ್ದರು. ಡಯಾಸ್ ಬಾಬು ಪ್ರಾರ್ಥಿಸಿದರು. ಜಿ. ಪರಮೇಶ್ವರಪ್ಪ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!
CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ
Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.