ರೋಡ್ ಶೋ, ಬೈಕ್ ರಾಲಿ ನಿಷೇಧಕ್ಕೆ ಸುಪ್ರೀಂ ಕೋರ್ಟಿಗೆ ಮನವಿ
Team Udayavani, Mar 11, 2019, 12:07 PM IST
ಹೊಸದಿಲ್ಲಿ : ಚುನಾವಣಾ ಪ್ರಚಾರಾರ್ಥವಾಗಿ ನಡೆಸಲಾಗುವ ರೋಡ್ ಶೋ ಮತ್ತು ಬೈಕ್ ರಾಲಿಗಳು ಶಬ್ದ ಮಾಲಿನ್ಯ, ವಾಯು ಮಾಲಿನ್ಯ, ಟ್ರಾಫಿಕ್ ಜಾಮ್ ಮತ್ತು ಸಾರ್ವಜನಿಕ ತೊಂದರೆಗೆ ಕಾರಣವಾಗುವುದರಿಂದ ಅವುಗಳನ್ನು ನಿಷೇಧಿಸುವಂತೆ ಚುನಾವಣಾ ಆಯೋಗಕ್ಕೆ ಸೂಕ್ತ ನಿರ್ದೇಶ ನೀಡಬೇಕೆಂದು ಕೋರಿ ಉತ್ತರ ಪ್ರದೇಶದ ಮಾಜಿ ಪೊಲೀಸ್ ಮಹಾ ನಿರ್ದೇಶಕ ವಿಕ್ರಂ ಸಿಂಗ್ ಮತ್ತು ಪರಿಸರವಾದಿ ಶೈವಿಕ ಅಗ್ರವಾಲ್ ಅವರು ಸುಪ್ರೀಂ ಕೋರ್ಟಿಗೆ ಮನವಿ ಸಲ್ಲಿಸಿದ್ದಾರೆ.
ಮನವಿಯನ್ನು ತುರ್ತು ನೆಲೆಯಲ್ಲಿ ವಿಚಾರಣೆಗೆ ಎತ್ತಿಕೊಳ್ಳಬೇಕೆಂಬ ಅರ್ಜಿದಾರರ ಕೋರಿಕೆಯನ್ನು ಸಿಜೆಐ ರಂಜನ್ ಗೊಗೊಯ್ ಮತ್ತು ಜಸ್ಟಿಸ್ಗಳಾದ ದೀಪಕ್ ಗುಪ್ತಾ ಮತ್ತು ಸಂಜೀವ್ ಖನ್ನಾ ಅವರನ್ನು ಒಳಗೊಂಡ ಪೀಠ ತಿರಸ್ಕರಿಸಿದೆ. ಅಂತೆಯೇ ಅರ್ಜಿಯ ವಿಚಾರಣೆ ಕ್ರಮ ಪ್ರಕಾರವಾಗಿ ನಡೆಯಲಿದೆ.
ಅರ್ಜಿದಾರರ ಮನವಿಯನ್ನು ಸಿದ್ಧಪಡಿಸಿ ಸಲ್ಲಿಸಿರುವ ವಕೀಲ್ ವಿರಾಗ್ ಗುಪ್ತಾ ಅವರು ರಾಜಕೀಯ ಪಕ್ಷಗಳ ರೋಡ್ ಶೋ ನಲ್ಲಿ ಹತ್ತಕ್ಕಿಂತ ಹೆಚ್ಚು ವಾಹನಗಳ ಬಳಕೆಯಾಗದಂತೆ ಆದೇಶಿಸಬೇಕೆಂದು ಕೋರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
MUST WATCH
ಹೊಸ ಸೇರ್ಪಡೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್ ಟೂರಿಸಂ ಹಬ್ಬ!
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.