ಬೋಯಿಂಗ್ ಸೇವೆ ರದ್ದು?
Team Udayavani, Mar 12, 2019, 12:30 AM IST
ಹೊಸದಿಲ್ಲಿ: ಇಥಿಯೋಪಿಯಾ ವಿಮಾನ ದುರಂತದಲ್ಲಿ 157 ಮಂದಿ ಮೃತಪಟ್ಟ ಬೆನ್ನಲ್ಲೇ, ಸುರಕ್ಷತೆಯ ದೃಷ್ಟಿಯಿಂದ ಬೋಯಿಂಗ್ 737 ಮ್ಯಾಕ್ಸ್ 8 ವಿಮಾನಗಳ ಬಳಕೆಯನ್ನೇ ನಿಲ್ಲಿಸಲು ಹಲವು ದೇಶಗಳು ಮುಂದಾಗಿವೆ. ಈಗಾಗಲೇ ಇಥಿಯೋಪಿಯಾ, ಚೀನ, ಇಂಡೋನೇಷ್ಯಾ ಸೇರಿದಂತೆ ಕೆಲವು ರಾಷ್ಟ್ರಗಳು ಈ ವಿಮಾನಗಳ ಕಾರ್ಯ ನಿರ್ವಹಣೆಯನ್ನು ಸ್ಥಗಿತಗೊಳಿಸಿದ್ದು, ಭಾರತದಲ್ಲೂ ಈ ಕುರಿತು ಸದ್ಯದಲ್ಲೇ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬೋಯಿಂಗ್ 737 ವಿಮಾನಗಳನ್ನು ಬಳಸುವುದೋ, ಬೇಡವೋ ಎಂಬ ಬಗ್ಗೆ ಸೋಮವಾರ ನಾಗರಿಕ ವಿಮಾನಯಾನ ಸಚಿವಾಲಯ ಮತ್ತು ವಿಮಾನಯಾನ ಮಹಾ ನಿರ್ದೇಶನಾಲಯವು ಚರ್ಚಿಸಿದೆ. ಸದ್ಯದಲ್ಲೇ ಅಂತಿಮ ನಿರ್ಧಾರ ಪ್ರಕಟವಾಗಲಿದೆ. ದೇಶೀಯ ವಿಮಾನಯಾನ ಸಂಸ್ಥೆಗಳಿಗೂ ಬೋಯಿಂಗ್ 737ಗೆ ಸಂಬಂಧಿಸಿ ಹೆಚ್ಚುವರಿ ಸುರಕ್ಷತಾ ಕ್ರಮಗಳನ್ನು ಪ್ರಕಟಿಸಲು ನಿರ್ಧರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇಥಿಯೋಪಿಯಾ, ಇಂಡೋನೇಷ್ಯಾದಲ್ಲಿ ಈ ವಿಮಾನಗಳ ಸೇವೆ ರದ್ದಾದ ಬೆನ್ನಲ್ಲೇ ಚೀನದಲ್ಲಿ ಸುಮಾರು 100ರಷ್ಟು ಬೋಯಿಂಗ್ ವಿಮಾನಗಳ ಬಳಕೆಗೆ ನಿರ್ಬಂಧ ಹೇರಿ ಸೋಮವಾರ ಆದೇಶ ಹೊರಡಿಸಲಾಗಿದೆ.
ಕುಟುಂಬ ಪತ್ತೆಗೆ ನೆರವು ಕೋರಿದ ಸುಷ್ಮಾ: ಈ ನಡುವೆ, ವಿಮಾನ ದುರಂತದಲ್ಲಿ ಅಸುನೀಗಿದ ನಾಲ್ವರು ಭಾರತೀಯರ ಕುಟುಂಬಗಳಿಗೆ ಅಗತ್ಯ ನೆರವು ನೀಡುವುದಾಗಿ ವಿದೇಶಾಂಗ ಸಚಿವೆ ಸುಷ್ಮಾ ಹೇಳಿದ್ದಾರೆ. ಅಲ್ಲದೆ, ಮೃತ ಭಾರತೀಯರ ಪೈಕಿ ವಿಶ್ವಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಶಿಖಾ ಗರ್ಗ್ ಕೂಡ ಸೇರಿದ್ದು, ಅವರ ಕುಟುಂಬವನ್ನು ಸಂಪರ್ಕಿಸಲು ನೆರವಾಗಿ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಸುಷ್ಮಾ ಕೇಳಿಕೊಂಡಿದ್ದಾರೆ. ಶಿಖಾರ ಪತಿಗೆ ಎಷ್ಟೇ ಕರೆ ಮಾಡಿದರೂ, ಸಂಪರ್ಕ ಸಿಗದ ಹಿನ್ನೆಲೆ ಸುಷ್ಮಾ ಈ ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PAN 2.0 ಗೆ ಸಂಪುಟ ಅನುಮೋದನೆ: ಏನಿದು ಪ್ಯಾನ್ 2.0? ಇದರ ವೈಶಿಷ್ಟ್ಯವೇನು?
Essar Group: ಎಸ್ಸಾರ್ ಗ್ರೂಪ್ ನ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ
RBI ಗವರ್ನರ್ ಶಕ್ತಿಕಾಂತ್ ದಾಸ್ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್ ಚಾರ್ಜ್
26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ
Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
PAN 2.0 ಗೆ ಸಂಪುಟ ಅನುಮೋದನೆ: ಏನಿದು ಪ್ಯಾನ್ 2.0? ಇದರ ವೈಶಿಷ್ಟ್ಯವೇನು?
Bangla:ಬಂಧನಕ್ಕೊಳಗಾದ ಇಸ್ಕಾನ್ ನ ಕೃಷ್ಣದಾಸ್ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್
Udupi: ಭಿಕ್ಷಾಟನೆ, ಅಪೌಷ್ಟಿಕತೆ ವಿರುದ್ಧ ಯುವಕನ ಬರಿಗಾಲ ಜಾಗೃತಿ
Udupi: ಬಿಎಸ್ಸೆನ್ನೆಲ್ ಟವರ್ ನಿರ್ವಹಣೆ ಹೊಣೆ ಪಂಚಾಯತ್ ಹೆಗಲಿಗೆ
Rapper Badshah: ಗಾಯಕ ಬಾದ್ಶಾ ಒಡೆತನದ ಬಾರ್ & ಕ್ಲಬ್ ಹೊರಗೆ ಬಾಂ*ಬ್ ಸ್ಪೋ*ಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.