ಫೋಟೋ ವೋಟರ್‌ ಸ್ಲಿಪ್‌ ಪರಿಗಣನೆಯಿಲ್ಲ !


Team Udayavani, Mar 12, 2019, 1:00 AM IST

vote-sweeper.jpg

ಮಂಗಳೂರು/ಉಡುಪಿ: ಈ ಬಾರಿ “ಫೋಟೋ ವೋಟರ್‌ ಸ್ಲಿಪ್‌’ ಗುರುತಿನ ಚೀಟಿ ಯಾಗಿ ಪರಿಗಣಿಸಲ್ಪಡುವುದಿಲ್ಲ. ಮತದಾರರ ಪಟ್ಟಿಯಲ್ಲಿ ಹೆಸರು ಇರುವುದು ಕಡ್ಡಾಯವಾಗಿರುವ ಜತೆಗೆ, ಮತದಾರರು ಮತದಾನದ ವೇಳೆ ಮತದಾರರ ಗುರುತಿನ ಚೀಟಿ ಅಥವಾ ಚುನಾವಣಾ ಆಯೋಗ ನಿಗದಿಪಡಿಸಿರುವ ಇತರ 11 ಗುರುತಿನ ದಾಖಲೆ ಹೊಂದಿರಬೇಕಾಗುತ್ತದೆ. ಮತದಾರರ ಪಟ್ಟಿಗೆ ಹೆಸರು ಸೇರಿಸಲು ಬಾಕಿ ಇರುವವರು ನಾಮಪತ್ರ ಸಲ್ಲಿಸುವ ಕೊನೆಯ ದಿನದ ಒಳಗೆ ಸೇರಿಸಬಹುದು ಎಂದು ಉಭಯ ಜಿಲ್ಲಾಧಿಕಾರಿಗಳು ತಿಳಿಸಿದರು.

ಇವಿಎಂ ಜತೆ ವಿವಿ ಪ್ಯಾಟ್‌
ಕುಡಿಯುವ ನೀರು, ತಂಗುದಾಣ, ಶೌಚಾಲಯ ಹಾಗೂ ಅಂಗವಿಕಲರಿಗೆ ಅನುಕೂಲವಾಗುವಂತೆ ರ್‍ಯಾಂಪ್‌ ವ್ಯವಸ್ಥೆ ಮಾಡಲಾಗುವುದು. ಇವಿಎಂ ಯಂತ್ರಗಳ ಜತೆ ಈ ಬಾರಿಯೂ ವಿವಿ ಪ್ಯಾಟ್‌ಗಳನ್ನು ಉಪಯೋಗಿಸಲಾಗುತ್ತಿದ್ದು, ನಿಗದಿಗಿಂ ತಲೂ ಹೆಚ್ಚುವರಿ ಯಂತ್ರಗಳು ಲಭ್ಯವಿವೆ. ಜಿಪಿಎಸ್‌ ವ್ಯವಸ್ಥೆಯ ಮೂಲಕ ಇವಿಎಂ ಹಾಗೂ ವಿವಿ ಪ್ಯಾಟ್‌ಗಳ ಚಲನವಲದ ಕುರಿತಂತೆ ಮಾಹಿತಿ ಲಭ್ಯವಾಗಲಿದೆ.

ಫಲಕ-ಬ್ಯಾನರ್‌ಗೆ ಮುಕ್ತಿ
ನೀತಿ ಸಂಹಿತೆಗೆ ಅನುಗುಣವಾಗಿ ಬ್ಯಾನರ್‌, ಪೋಸ್ಟರ್‌, ಫಲಕಗಳನ್ನು ತೆರವುಗೊಳಿಸಲಾಗುತ್ತಿದೆ. ಖಾಸಗಿ ಸ್ಥಳಗಳಲ್ಲಿ ಹಾಕಿರುವುದನ್ನೂ ತೆರವುಗೊಳಿಸಬೇಕು. ಯಾವುದೇ ಧಾರ್ಮಿಕ ಕಾರ್ಯಕ್ರಮಗಳಿಗೆ ಸಂಬಂಧಿಸಿ ಸ್ಥಳೀಯ ಸಂಸ್ಥೆಗಳ ಅನುಮತಿ ಪಡೆಯಬೇಕಾಗುತ್ತದೆ. ಸಂಬಂಧಪಟ್ಟವರು ತೆರವುಗೊಳಿಸದಿದ್ದರೆ 24 ಗಂಟೆಯೊಳಗೆ ನಾವೇ ತೆರವುಗೊಳಿಸುತ್ತೇವೆ ಎಂದರು.

ಹಣ ವರ್ಗಾವಣೆ-ಸಾಗಾಟ ಎಚ್ಚರ!
ಯಾವುದೇ ವ್ಯಕ್ತಿ ಅಥವಾ ಪಕ್ಷದವರು ಅಕೌಂಟ್‌ ಮೂಲಕ ಹಣ ವರ್ಗಾವಣೆ ಅಥವಾ ನಗದನ್ನು ಕೊಂಡೊಯ್ಯುವ ಬಗ್ಗೆ ನಿಗಾ ಇರಿಸಲಾಗುತ್ತದೆ. ಚೆಕ್‌ಪೋಸ್ಟ್‌, ಫ್ಲೆಯಿಂಗ್‌ ಸ್ಕ್ವಾಡ್‌, ಮೇಲ್ವಿಚಾರಣ ತಂಡಗಳು, ವೀಡಿಯೋ ಮೇಲ್ವಿಚಾರಣಾ ತಂಡಗಳು ಕಾರ್ಯನಿರ್ವಹಿಸಲಿವೆ. ನಿಗದಿಗಿಂತ ಅಧಿಕ ಮೊತ್ತದ ಹಣವನ್ನು ಆಯೋಗದ ಅಧಿಕಾರಿಗಳು ಪರಿಶೀಲಿಸಿ, ತನಿಖೆ ನಡೆಸಲಿದ್ದಾರೆ. ಹಣ ಚುನಾವಣೆಗೆ ಸಂಬಂಧಿಸಿದ್ದಲ್ಲ ವಾಗಿದ್ದಲ್ಲಿ ಮತ್ತು ಸೂಕ್ತ ದಾಖಲೆಗಳನ್ನು ಒದಗಿಸಿದರೆ 24 ಗಂಟೆಯೊಳಗೆ ಜಿ.ಪಂ. ಸಿಇಒ ಅಧ್ಯಕ್ಷತೆಯ ಸಮಿತಿಯು ಮರಳಿಸಲಿದೆ. ಅಭ್ಯರ್ಥಿಯ 10,000 ರೂ.ಗಿಂತ ಅಧಿಕ ಮೊತ್ತದ ಹಣ ವರ್ಗಾವಣೆಯ ಬಗ್ಗೆ ಆಯೋಗ ನಿಗಾ ಇರಿಸುತ್ತದೆ. 10 ಲ.ರೂ.ಗಿಂತ ಹೆಚ್ಚಿನ ಮೊತ್ತ ಸಾಗಿಸಿದರೆ ಆದಾಯ ತೆರಿಗೆ ಅಧಿಕಾರಿಗಳು ತನಿಖೆ ನಡೆಸಲಿದ್ದಾರೆ.

ಜಾತ್ರೆ, ಯಕ್ಷಗಾನಕ್ಕೂ ನಿಯಮದ ಬಿಸಿ ಚುನಾವಣೆ ಪ್ರಚಾರಕ್ಕೆ ಸಂಬಂಧಿಸಿ ಸಭೆ ಸಮಾರಂಭಗಳಿಗೆ ಅನುಮತಿ ಪಡೆಯಬೇಕು. ಧ್ವನಿವರ್ಧಕದ ಅನುಮತಿಯನ್ನು ಪೊಲೀಸ್‌ ಇಲಾಖೆಯಿಂದ ಪಡೆಯಬೇಕು. ಧ್ವನಿವರ್ಧಕವನ್ನು ಬೆಳಗ್ಗೆ 6ರಿಂದ ರಾತ್ರಿ 10 ಗಂಟೆವರೆಗೆ ಮಾತ್ರ ಉಪಯೋಗಿಸಲು ಅವಕಾಶವಿದೆ. ಇದು ಯಕ್ಷಗಾನಕ್ಕೂ ಅನ್ವಯವಾಗುತ್ತದೆ. ಧ್ವನಿವರ್ಧಕದ ನಿಯಮ ಚುನಾವಣೆಗೆ ಮಾತ್ರವಲ್ಲ, ಇದೊಂದು ಸಾಮಾನ್ಯ ನಿಯಮ ಎಂದು ಉಡುಪಿ ಎಸ್‌ಪಿ ನಿಶಾ ಜೇಮ್ಸ್‌ ತಿಳಿಸಿದರು. ಯಕ್ಷಗಾನಕ್ಕೆ ಅಳವಡಿಸಿದರೆ ತೊಂದರೆಯಾಗುತ್ತದೆ ಎಂದು ಪತ್ರಕರ್ತರು ಜಿಲ್ಲಾಧಿಕಾರಿಯವರ ಗಮನ ಸೆಳೆದಾಗ, ಇದು ಇಡೀ ದೇಶಕ್ಕೆ ಅನ್ವಯವಾದ ಕಾನೂನು. ನಿರ್ದಿಷ್ಟ ಪ್ರಕರಣಕ್ಕೆ ಸಂಬಂಧಿಸಿ ಪರಿಗಣಿಸಲಾಗುವುದು ಎಂದರು. ದೇವಸ್ಥಾನದೊಳಗೆ ನಡೆಯುವ ಕಾರ್ಯಕ್ರಮಗಳಿಗೆ ಅನುಮತಿ ಅಗತ್ಯವಿಲ್ಲ, ಆದರೆ ಜಾತ್ರೆಗೆ ಅನುಮತಿ ಅಗತ್ಯ ಎಂದು ಜಿಲ್ಲಾಧಿಕಾರಿ ತಿಳಿಸಿದರು. 

ಅಭ್ಯರ್ಥಿ ವೆಚ್ಚ 70 ಲ.ರೂ.
ಅಭ್ಯರ್ಥಿ 70 ಲ.ರೂ.ಗಳನ್ನು ಮಾತ್ರ ವೆಚ್ಚ ಮಾಡಲು ಅವಕಾಶವಿದೆ. ಪಕ್ಷಗಳ ಖರ್ಚಿನ ಮೇಲೆ
ನಿಗಾ ಇರಿಸಲು ವೆಚ್ಚ ಮೇಲ್ವಿಚಾರಣಾ ಘಟಕ ಮತ್ತು ಕ್ಷೇತ್ರವಾರು ಸಹಾಯಕ ವೆಚ್ಚ ವೀಕ್ಷಕರನ್ನು ನೇಮಿಸಲಾಗಿದೆ. ಮಾಧ್ಯಮಗಳು ಪ್ರಕಟಿಸುವ ಸುದ್ದಿ, ಜಾಹೀರಾತಿನ ಕುರಿತು ಜಿ.ಪಂ. ಮುಖ್ಯ ಯೋಜನಾಧಿಕಾರಿ ಅಧ್ಯಕ್ಷತೆಯ ಮಾಧ್ಯಮ ಮೇಲ್ವಿಚಾರಣಾ ಸಮಿತಿ ಇದೆ. ಜಿಪಿಎಸ್‌ ಅಳವಡಿಸಿದ ವಾಹನಗಳಲ್ಲಿ ವಿದ್ಯುನ್ಮಾನ ಮತಯಂತ್ರ, ವಿವಿ ಪ್ಯಾಟ್‌ಗಳನ್ನು ಸಾಗಿಸಲಾಗುವುದು. 

ವೇಳಾಪಟ್ಟಿ
ಮಾ. 19ರಂದು ಚುನಾವಣೆ ನೋಟಿಸ್‌ ಹೊರಡಿಸಲಾಗುತ್ತದೆ. ಮಾ. 26ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕ, ಮಾ. 27ರಂದು ನಾಮಪತ್ರ ಪರಿಶೀಲನೆ, ಮಾ. 29ರಂದು ನಾಮಪತ್ರ ಹಿಂದೆೆಗೆದುಕೊಳ್ಳಲು ಕೊನೆಯ ದಿನಾಂಕ, ಎ. 18ರಂದು ಚುನಾವಣೆ, ಮೇ 23ರಂದು ಮತ ಎಣಿಕೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Darshan (3)

Renukaswamy ಹ*ತ್ಯೆ ಸ್ಥಳದಲ್ಲಿ ದರ್ಶನ್‌ ಇದ್ದ ಚಿತ್ರ ಲಭ್ಯ: ಪರಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ullala-Auto-Accident

Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು

9-someshwara

Someshwara: ಸಮುದ್ರಕ್ಕೆ ಹಾರಿದ ಯುವತಿಯ ರಕ್ಷಣೆ

Chrmadi-Ghat

Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ

Dawwod-Arrest

Mangaluru: ಕುಖ್ಯಾತ ರೌಡಿಶೀಟರ್‌ ದಾವೂದ್‌ ಬಂಧಿಸಿದ ಸಿಸಿಬಿ ಪೊಲೀಸರು

NITK-Padavi-pradana

Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್‌ ರಂಗರಾಜನ್‌

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

1-ewew

ಸಂಗೀತ ವಿವಿಯಲ್ಲಿ ಕೋರ್ಸ್‌ ಆರಂಭ: ಕುಲಪತಿ ನಾಗೇಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.