ಪ್ರಧಾನಿ ತವರಿನಿಂದ ‘ಲೋಕ ರಣಕಹಳೆ ‘ ಮೊಳಗಿಸಲಿರುವ ಕಾಂಗ್ರೆಸ್
Team Udayavani, Mar 12, 2019, 7:17 AM IST
ಅಹಮ್ಮದಾಬಾದ್: ಪ್ರಧಾನಿ ನರೇಂದ್ರ ಮೋದಿ ಅವರ ಸ್ವಂತ ನೆಲ ಗುಜರಾತ್ ನಿಂದಲೇ ಮುಂಬರುವ ಲೋಕಸಭಾ ಚುನಾವಣೆಯ ರಣಕಹಳೆಯನ್ನು ಮೊಳಗಿಸಲು ಯುವ ನಾಯಕತ್ವದ ಕಾಂಗ್ರೆಸ್ ಪಕ್ಷವು ಸರ್ವಸನ್ನದ್ಧವಾಗಿದೆ. ಮಂಗಳವಾರದಂದು ಗುಜರಾತಿನಲ್ಲಿ ಕಾಂಗ್ರೆಸ್ ಕಾರ್ಯನಿರ್ವಹಣಾ ಮಂಡಳಿಯ ಸಭೆ ನಡೆಯಲಿದೆ ಮತ್ತು ಸಾರ್ವಜನಿಕ ಸಭೆಗಳನ್ನು ಪಕ್ಷವು ಆಯೋಜಿಸಿದೆ. ‘ಜೈ ಜವಾನ್ ಜೈ ಕಿಸಾನ್’ ಎಂಬ ಘೋಷವಾಕ್ಯದಡಿಯಲ್ಲಿ ಪಕ್ಷವು ಇಂದು ಗಾಂಧಿನಗರ ಜಿಲ್ಲೆಯ ಅದಾಲಾಜ್ ನಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನೂ ಆಯೋಜಿಸಿದೆ. ಇನ್ನು ಈ ಸಭೆಯಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾಧ್ರಾ ಅವರು ಮಾತನಾಡುವ ನಿರೀಕ್ಷೆಯಿದೆ.
ಲೋಕಸಭಾ ಚುನಾವಣೆಯ ದಿನಾಂಕ ಘೋಷಣೆಗೊಂಡ ಎರಡು ದಿನಗಳ ಬಳಿಕ ಸಿ.ಡಬ್ಲ್ಯು.ಸಿ. ಸಭೆಯು ಪಕ್ಷಾಧ್ಯಕ್ಷ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ನಡೆಯಲಿದೆ. ಸೋನಿಯಾ ಗಾಂಧಿ, ಮಾಜೀ ಪ್ರಧಾನಿ ಮನಮೋಹನ್ ಸಿಂಗ್ ಮೊದಲಾದ ಉನ್ನತ ಸ್ತರದ ನಾಯಕರು ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ. 58 ವರ್ಷಗಳ ಬಳಿಕ ಸಿ.ಡಬ್ಲ್ಯು.ಸಿ. ಸಭೆಯು ಗುಜರಾತ್ ನಲ್ಲಿ ನಡೆಯುತ್ತಿರುವುದು ವಿಶೇಷ. ಈ ಹಿಂದೆ 1961ರಲ್ಲಿ ಭಾವನಗರದಲ್ಲಿ ಸಿ.ಡಬ್ಲ್ಯು.ಸಿ. ಸಭೆಯು ನಡೆದಿತ್ತು.
Ahmedabad: Former PM Manmohan Singh, UPA chairperson Sonia Gandhi, and Congress General Secretary for UP East Priyanka Gandhi Vadra at “Sardar Patel Smarak”. #Gujarat pic.twitter.com/JbhoszkTLa
— ANI (@ANI) March 12, 2019
ಒಂದೇ ವೇದಿಕೆಯಲ್ಲಿ ಅಮ್ಮ, ಮಗ, ಮಗಳು
ಇನ್ನು ಗುಜರಾತ್ ನಲ್ಲಿ ಇಂದು ನಡೆಯಲಿರುವ ಕಾಂಗ್ರೆಸ್ ಪಕ್ಷದ ಸಾರ್ವಜನಿಕ ಸಭೆಯು ಒಂದು ಕಾರಣಕ್ಕೆ ವಿಶೇಷತೆಯನ್ನು ಪಡೆದುಕೊಳ್ಳಲಿದೆ. ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ, ಪಕ್ಷಾದ್ಯಕ್ಷ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರು ಒಂದೇ ವೇದಿಕೆಯನ್ನು ಹಂಚಿಕೊಳ್ಳಲಿದ್ದಾರೆ.
ಮೋದಿ ಕಟ್ಟಿ ಹಾಕಲು ಕಾರ್ಯತಂತ್ರ
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ವೈಫಲ್ಯಗಳನ್ನು ದೇಶದ ಮತದಾರರ ಮುಂದಿಡುವ ಮೂಲಕ ಮೋದಿ-ಶಾ ಜೋಡಿಯನ್ನು ಕಟ್ಟಿಹಾಕಲು ಕಾರ್ಯತಂತ್ರವನ್ನು ಹೆಣೆಯುವ ಕುರಿತಾಗಿ ಇಂದಿನ ಸಭೆಯಲ್ಲಿ ಉನ್ನತಮಟ್ಟದ ‘ಕೈ’ ನಾಯಕರು ಚರ್ಚೆಯನ್ನು ನಡೆಸಲಿದ್ದಾರೆ. ಮೋದಿ ಅವರು ಕಳೆದ ನಾಲ್ಕೂವರೆ ವರ್ಷಗಳಲ್ಲಿ ದೇಶದ ಜನರಿಗೆ ನೀಡಿದ ಪೊಳ್ಳು ಭರವಸೆಗಳನ್ನೂ ಸಹ ಬಯಲು ಮಾಡುವ ಕಾರ್ಯತಂತ್ರವನ್ನು ಪಕ್ಷವು ಹೆಣೆಯಲಿದೆ ಎಂಬ ವಿಚಾರವನ್ನು ಗುಜರಾತ್ ಕಾಂಗ್ರೆಸ್ ಪಕ್ಷದ ಉಸ್ತುವಾರಿ ರಾಜೀವ್ ಸತಾವ್ ತಿಳಿಸಿದ್ದಾರೆ. ಇದೇ ಸಂದರ್ಭದಲ್ಲಿ ಪಟೇಲ್ ಮೀಸಲಾತಿ ಹೋರಾಟದ ರೂವಾರಿ ಹಾರ್ಧಿಕ್ ಪಟೇಲ್ ಅವರು ಅಧಿಕೃತವಾಗಿ ಕಾಂಗ್ರೆಸ್ ಪಕ್ಷವನ್ನು ಸೇರಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra: ಏಕ್‌ನಾಥ್ ಹೇ ತೋ ಸೇಫ್ ಹೇ: ಶಿಂಧೆ ಶಿವಸೇನೆ ಹೊಸ ಮಂತ್ರ
Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ
Maharaja: ಬಾಂಧವ್ಯವೃದ್ಧಿ ಬಳಿಕ 29ಕ್ಕೆ ಚೀನಾದಲ್ಲಿ ಮೊದಲ ಬಾರಿಗೆ ತಮಿಳು ಸಿನಿಮಾ ರಿಲೀಸ್!
Actress: ಫ್ರೆಂಚ್ ಗೆಳೆಯನೊಂದಿಗೆ ಬ್ರೇಕ್‌ಅಪ್ ಆಗಿದೆ: ಮಲ್ಲಿಕಾ ಶೆರಾವತ್
Chhattisgarh: ಹಳಿ ತಪ್ಪಿದ ಗೂಡ್ಸ್ ರೈಲಿನ 20 ಬೋಗಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
NH Highway Works: ಬಿ.ಸಿ.ರೋಡು: ಟ್ರಾಫಿಕ್ ಜಾಮ್
Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ
ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ
Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.