ಲೋಕ ಸಮರಕ್ಕೆ ಜಿಲ್ಲಾಡಳಿತ ಸಕಲ ಸಿದ್ಧತೆ


Team Udayavani, Mar 12, 2019, 7:43 AM IST

loka-samara.jpg

ಹಾಸನ: ಲೋಕಸಭಾ ಚುನಾವಣೆಗೆ ಹಾಸನ ಕ್ಷೇತ್ರದಲ್ಲಿ ಅಧಿಸೂಚನೆ ಮಾ.19ರಂದು ಹೊರ ಬೀಳಲಿದ್ದು, ಏ.18 ರಂದು 2,235 ಮತಗಟ್ಟೆಗಳಲ್ಲಿ ಮತದಾನ ನಡೆಯಲಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆದ ಜಿಲ್ಲಾಧಿಕಾರಿ ಅಕ್ರಂಪಾಷಾ ಅವರು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಚುನಾವಣಾ ಸಿದ್ಧತೆಯ ವಿವರ ನೀಡಿದ ಅವರು, ಚಿಕ್ಕಮಗಳೂರು ಜಿಲ್ಲೆ ಕಡೂರು ವಿಧಾನಸಭಾ ಕ್ಷೇತ್ರ ಒಳಗೊಂಡಂತೆ ಹಾಸನ ಕ್ಷೇತ್ರದಲ್ಲಿ 16,29,587 ಲಕ್ಷ ಮತದಾರರಿದ್ದು, ಇನ್ನೂ 20 ಸಾವಿರ ಮತದಾರರು ನೋಂದಾಯಿಸಿಕೊಳ್ಳುವ ನಿರೀಕ್ಷೆಯಿದೆ. ಮತದಾರರು ನೋಂದಾಯಿಸಿಕೊಳ್ಳಲು ಮಾ.26ರ ವರೆಗೂ ಕಾಲಾವಕಾಶವಿದೆ ಎಂದು ಹೇಳಿದರು.

ಜಿಲ್ಲಾದ್ಯಂತ ಮಾದರಿ ನೀತಿ ಸಂತೆ ಕಟ್ಟನಿಟ್ಟಾಗಿ ಜಾರಿಗೊಳಿಸಲು ವಿಧಾನಸಭಾ ಕ್ಷೇತ್ರಗಳ ಹಂತದಲ್ಲಿ ನೋಡಲ್ ಅಧಿಕಾರಿಗಳು, ಫ್ಲೈಯಿಂಗ್‌ ಸ್ಕ್ವಾಡ್‌, ವಿಚಕ್ಷಣಾ ದಳಗಳುನ್ನು ನೇಮಿಸಲಾಗಿದೆ. ಮಾದರಿ ನೀತಿ ಸಂತೆ ಮಾ. 10ರಿಂದಲೇ ಜಾರಿಯಲ್ಲಿದ್ದು, ಜೂನ್‌ 3 ರವರೆಗೆ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ.

ವೆಬ್‌ಸೈಟ್‌ನಲ್ಲಿ ಭಾವಚಿತ್ರ ತೆರವು: ನೀತಿ ಸಂಹಿತೆ ಜಾರಿ ಹಿನ್ನೆಲೆಯಲ್ಲಿ ಸರ್ಕಾರಿ ವೆಬ್‌ಸೈಟ್‌ನಲ್ಲಿ ಚುನಾ ಯಿತ ಜನಪ್ರತಿನಿಧಿಗಳ ಭಾವಚಿತ್ರವನ್ನು ತೆಗೆಯ ಲಾಗಿದೆ. ಸರ್ಕಾರಿ ವಾಹನವನ್ನು ಹಿಂಪಡೆಯಲಾಗಿದೆ. ಸರ್ಕಾರಿ ಕಚೇರಿ, ಸಾರ್ವಜನಿಕ ಸ್ಥಳಗಳಲ್ಲಿ ಜಾಹೀ ರಾತು ಫ‌ಲಕ ತೆರವುಗೊಳಿಸಲಾಗಿದೆ ಎಂದರು.

ಸಾಮಾಜಿಕ ಜಾಲತಾಣದ ದುರುಪಯೋಗ ತಡೆಗೆ ಪ್ರೊಬೇಷನರಿ ಐಎಎಸ್‌ ಅಧಿಕಾರಿ ಪ್ರಿಯಾಂಕ ನೇತೃತ್ವದ ತಂಡ ನಿಗಾವಹಿಸಲಿದೆ. ನೀತಿ ಸಂತೆ ಉಲ್ಲಂಘನೆ ಹಾಗೂ ಅಕ್ರಮ ತಡೆಗೆ 16 ನೋಡೆಲ್ ಅಧಿಕಾರಿಗಳ ನೇಮಕ ಮಾಡಲಾಗಿದೆ. ದಿನದ 24 ತಾಸು ಕಾರ್ಯನಿರ್ವಸುವ ಕಂಟ್ರೋಲ್ ರೂಂ 261111 ತೆರೆಯಲಾಗಿದ್ದು, ಸಾರ್ವಜನಿಕರು ಚುನಾವಣಾ ಮಾಹಿತಿ, ಹಣ ಹಂಚಿಕೆ ಇತರೆ ದೂರು ನೀಡಬಹುದಾಗಿದೆ. ಜಿಲ್ಲೆಯ ಗಡಿಭಾಗದಲ್ಲಿ ಕಣ್ಗಾವಲು ಚಕ್ಷಣದಳ ಹಾಗೂ 20 ಚೆಕ್‌ಪೋಸ್ಟ್‌ ತೆರೆಯಲಾಗಿದೆ ಎಂದು ಮಾಹಿತಿ ನೀಡಿದರು.

ಹೊಸ ಕಾಮಗಾರಿ ಘೋಷಿಸುವಂತಿಲ್ಲ: ಪ್ರಸ್ತುತ ಪ್ರಗತಿಯಲ್ಲಿ ಇರುವ ಕಾಮಗಾರಿ ಹೊರತುಪಡಿಸಿದರೆ ಹೊಸ ಯೋಜನೆ ಘೋಷಿಸುವಂತಿಲ್ಲ. ಹಾಗೂ ಹೊಸ ಕಾಮಗಾರಿಗಳಿಗೆ ಟೆಂಡರ್‌ ಕರೆಯುವಂತಿಲ್ಲ. ಆದರೆ ಈಗಾಗಲೇ ಟೆಂಡರ್‌ ಪ್ರಕ್ರಿಯೆ ಪೂರ್ಣಗೊಂಡು ಕಾರ್ಯಾದೇಶ ಪಡೆದಿರುವ ಹಾಗೂ ಈಗಾಗಲೇ ಪ್ರಗತಿಯಲ್ಲಿರುವ ಕಾಮಗಾರಿಗಳು ಮುಂದುವರಿಸಲು ನೀತಿ ಸಂಹಿತೆ ಅಡ್ಡಿಯಾಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ದೂರು ಸಲ್ಲಿಸಲು ಅವಕಾಶ: ಚುನಾವಣಾ ಆಯೋಗದ ನಿರ್ದೇಶನದಂತೆ ನೀತಿ ಸಂತೆ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊಬೈಲ್ ಅಪ್ಲಿಕೇಷನ್‌ ಮೂಲಕವೂ ದೂರುಗಳನ್ನು ದಾಖ ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದರು.

ಸುವಿಧಾ ವೆಬ್‌ ಸೈಟ್ ಆರಂಭ: ರಾಜಕೀಯ ಪಕ್ಷಗಳು ಸಭೆ, ಸಮಾರಂಭ ಮಾಡಲು ಆಯಾ ಸಹಾಯಕ ಚುನಾವಣಾಧಿಕಾರಿಗಳ ಹಂತದಲ್ಲಿಯೇ ಏಕಗವಾಕ್ಷಿ ಮಾದರಿಯಲ್ಲಿ ಅನುಮತಿ ಪಡೆದುಕೊಳ್ಳಲು ಸುವಿಧಾ ಎಂಬ ವೆಬ್‌ಸೈಟ್ ತೆರೆಯಲಾಗಿದ್ದು, 

ಅಲ್ಲಿಂದ ಅರ್ಜಿ ಡೌನ್‌ಲೋಡ್‌ ಮಾಡಿಕೊಂಡು ಅರ್ಜಿ ಸಲ್ಲಿಸಿ ಅನುಮತಿ ಪಡೆಯಬಹುದಾಗಿದೆ, ಜಿಲ್ಲಾ ಮಟ್ಟದಲ್ಲಿ ಚುನಾವಣಾ ಪ್ರಚಾರಕ್ಕೆ ವಾಹನ ಬಳಕೆ ಹಾಗೂ ಹೆಲಿಕಾಫ್ಟರ್‌ ಲ್ಯಾಂಡಿಂಗ್‌ ಅನುಮತಿಯನ್ನು ಚುನಾವಣಾಧಿಕಾರಿಗಳ ಹಂತದಲ್ಲಿ ಪಡೆದುಕೊಳ್ಳಬಹುದಾಗಿದೆ ಎಂದರು. ಎಸ್ಪಿ ಪ್ರಕಾಶ್‌ಗೌಡ, ಅಪರ ಜಿಲ್ಲಾಧಿಕಾರಿ ವೈಶಾಲಿ ಅವರೂ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-jjjjj

ODI; ಟೀಮ್ ಇಂಡಿಯಾದ ಹೊಸ ಜೆರ್ಸಿ ಬಿಡುಗಡೆ ಮಾಡಿದ ಜಯ್ ಶಾ,ಹರ್ಮನ್ ಪ್ರೀತ್

1-allu

”Pushpa 2′′ ಭಾಷೆಯ ತಡೆಯನ್ನು ಮುರಿಯುತ್ತಿದೆ, ತೆಲುಗು ಜನರಿಗೆ ಹೆಮ್ಮೆ: ಅಲ್ಲು ಅರ್ಜುನ್

arrested

Indiranagar; ಅಸ್ಸಾಂ ಯುವತಿ ಹ*ತ್ಯೆ ಕೇಸ್: ಆರೋಪಿ ಬಂಧಿಸಿದ ಪೊಲೀಸರು

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

R Ashok (2)

ಚಂದ್ರಶೇಖರ ಶ್ರೀ ವಿರುದ್ಧ ಕೇಸ್‌; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-alur

Alur: ವಿದ್ಯುತ್ ಶಾರ್ಟ್ ಸರ್ಕ್ಯೂಟ್- ಆಕಸ್ಮಿಕ ಬೆಂಕಿ; ಗೃಹೋಪಯೋಗಿ ವಸ್ತುಗಳು ಬೆಂಕಿಗಾಹುತಿ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ

Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ

1-hale-beed

Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Untitled-1

Missing case: ಎರಡು ಪ್ರತ್ಯೇಕ ನಾಪತ್ತೆ ಪ್ರಕರಣ; ದೂರು ದಾಖಲು

1-jjjjj

ODI; ಟೀಮ್ ಇಂಡಿಯಾದ ಹೊಸ ಜೆರ್ಸಿ ಬಿಡುಗಡೆ ಮಾಡಿದ ಜಯ್ ಶಾ,ಹರ್ಮನ್ ಪ್ರೀತ್

de

Guttigar: ಮಾವಿನಕಟ್ಟೆ; ಮರದಿಂದ ಬಿದ್ದು ವ್ಯಕ್ತಿ ಸಾವು

9

Kaup: ಬೀಚ್‌ನಲ್ಲಿನ್ನು ಪ್ಯಾರಾ ಮೋಟರಿಂಗ್‌

8(1

Udupi: ಸ್ಥಾಪಕರು ಜೀವನ ಪಾಠ ಮಾಡಿದ್ದ ಎಂಜಿಎಂ ಕಾಲೇಜಿಗೆ ಅಮೃತೋತ್ಸವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.