ಲೋಕಸಭಾ ಚುನಾವಣೆಗೆ ಜಿಲ್ಲಾಡಳಿತ ಸಜ್ಜು 


Team Udayavani, Mar 12, 2019, 7:43 AM IST

lok-chn-chi.jpg

ಚಿಕ್ಕಬಳ್ಳಾಪುರ: ಕೇಂದ್ರ ಚುನಾವಣಾ ಆಯೋಗವು ಲೋಕಸಭೆಯ ಸಾರ್ವತ್ರಿಕ ಚುನಾವಣೆ ದಿನಾಂಕ ಘೋಷಣೆ ಮಾಡಿದ್ದು, ಆಯೋಗದ ನಿರ್ದೇಶನದಂತೆ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಚುನಾವಣೆಗೆ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದೆ ಎಂದು ಜಿಲ್ಲಾಧಿಕಾರಿ ಅನಿರುದ್ಧ್ ಶ್ರವಣ್‌ ತಿಳಿಸಿದರು.

ನಗರದ ಜಿಲ್ಲಾಧಿಕಾರಿಗಳ ನ್ಯಾಯಾಲಯ ಸಭಾಂಗಣದಲ್ಲಿ ಸೋಮವಾರ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಚುನಾವಣೆ ಘೋಷಣೆಯಾದ ಮಾ.10 ರ ಸಂಜೆಯಿಂದಲೇ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದು, ಮೇ.23ರ ವರೆಗೂ ನೀತಿ ಸಂಹಿತೆ ಇರುತ್ತದೆ. ನೀತಿ ಸಂಹಿತೆ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಅಗತ್ಯ ಕ್ರಮ ಕೈಗೊಳ್ಳಲಿದ್ದು, ನೀತಿ ಸಂಹಿತೆ ಉಲ್ಲಂಘಟನೆ ಪ್ರಕರಣಗಳಲ್ಲಿ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಮಾ.19ಕ್ಕೆ ಅಧಿಸೂಚನೆ ಪ್ರಕಟ: ರಾಜ್ಯದಲ್ಲಿ 2ನೇ ಹಂತ, ಜಿಲ್ಲೆಯಲ್ಲಿ ಏ.18 ರಂದು ಚುನಾವಣೆ ನಡೆಯಲಿದೆ. ಮಾ. 19 ರಂದು ಅಧಿಸೂಚನೆ ಪ್ರಕಟಗೊಳ್ಳಲಿದ್ದು, ನಾಮಪತ್ರ ಸಲ್ಲಿಸಲು ಮಾ.26 ಕೊನೆ ದಿನವಾಗಿರುತ್ತದೆ. ಮಾ.27 ರಂದು ನಾಮಪತ್ರಗಳ ಪರಿಶೀಲನೆ, ಹಿಂಪಡೆಯಲು ಮಾ.29 ಕೊನೆ ದಿನಾಂಕವಾಗಿರುತ್ತದೆ. ಮೇ23 ರಂದು ಮತ ಎಣಿಕೆ ನಡೆಯಲಿದೆ ಎಂದರು.

ಕ್ಷೇತ್ರದಲ್ಲಿ 17 ಲಕ್ಷ ಮತದಾರರು: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಗೌರಿಬಿದನೂರು, ಬಾಗೇಪಲ್ಲಿ, ಚಿಕ್ಕಬಳ್ಳಾಪುರ, ಯಲಹಂಕ, ಹೊಸಕೋಟೆ, ದೇವನಹಳ್ಳಿ, ದೊಡ್ಡಬಳ್ಳಾಪುರ, ನೆಲಮಂಗಲ ತಾಲೂಕುಗಳು ಬರಲಿದೆ. ಕ್ಷೇತ್ರ ವ್ಯಾಪ್ತಿಯಲ್ಲಿ ಒಟ್ಟು 17,90,408 ಮತದಾರರಿದ್ದು, ಆ ಪೈಕಿ 9,02,487 ಪುರುಷ ಹಾಗೂ 8,87,921 ಮಹಿಳಾ ಮತದಾರರಿದ್ದಾರೆ. ಒಟ್ಟು 2,284 ಮತಗಟ್ಟೆಗಳಿದ್ದು, 486 ಸೂಕ್ಷ್ಮ ಮತಗಟ್ಟೆಗಳೆಂದು ಈಗಾಗಲೇ ಗುರುತಿಸಲಾಗಿದೆ. 

ಜಿಲ್ಲೆಯಲ್ಲಿ ಒಟ್ಟು  1,285 ಮತಗಟ್ಟೆಗಳಿದ್ದು, 284 ಸೂಕ್ಷ್ಮ ಮತಗಟ್ಟೆಗಳು ಎಂದು ಗುರುತಿಸಲಾಗಿದೆ. ಈಗಾಗಲೇ ಪ್ಲೆçಯಿಂಗ್‌ ಸ್ಕ್ವಾಡ್‌, ಸಹಾಯಕ ವೆಚ್ಚ ನಿರ್ವಹಣಾಧಿಕಾರಿ, ಸೆಕ್ಟರ್‌ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಸಹಾಯಕ ಚುನಾವಣಾಧಿಕಾರಿಗಳನ್ನಾಗಿ ಅಪರ ಜಿಲ್ಲಾಧಿಕಾರಿ ಆರತಿ ಅವರನ್ನು ನೇಮಿಸಿದೆ.

ಗೌರಿಬಿದನೂರಿಗೆ ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕರಾದ ಕುಮಾರಸ್ವಾಮಿ ಎಸ್‌.ಆರ್‌, ಬಾಗೇಪಲ್ಲಿಗೆ ನಗರಾಭಿವೃದ್ಧಿ ಯೋಜನಾ ನಿರ್ದೇಶಕರಾದ ನಟರಾಜ್‌, ಚಿಕ್ಕಬಳ್ಳಾಪುರಕ್ಕೆ ಉಪ ವಿಭಾಗಾಧಿಕಾರಿ ಬಿ.ಶಿವಸ್ವಾಮಿ ಅವರನ್ನು ಸಹಾಯಕ ಚುನಾವಣಾಧಿಕಾರಿಗಳಾಗಿ ನೇಮಿಸಲಾಗಿದೆ ಎಂದರು.

ಸೂಕ್ಷ್ಮ ಮತಗಟ್ಟೆಗಳಲ್ಲಿ ವೆಬ್‌ಕಾಸ್ಟಿಂಗ್‌: ಕ್ಷೇತ್ರದಲ್ಲಿ ಅತ್ಯಂತ ಸೂಕ್ಷ್ಮ ಮತಗಟ್ಟೆಗಳಿಗೆ ವೆಬ್‌ ಕಾಸ್ಟಿಂಗ್‌ ವ್ಯವಸ್ಥೆ ಮತ್ತು ಮೈಕ್ರೋ ವೀಕ್ಷಕರನ್ನು ನೇಮಕ ಮಾಡಲು ಕ್ರಮಕೈಗೊಳ್ಳಲಾಗಿದೆ. ಜಿಲ್ಲಾ ಮಟ್ಟದಲ್ಲಿ ಎಂಸಿಎಂಸಿ ಸಮಿತಿ ಸ್ಥಾಪನೆ ಮಾಡಲಾಗಿದೆ. ಹೆಚ್ಚುವರಿಯಾಗಿ ಚುನಾವಣಾಧಿಕಾರಿಗಳ ಕಚೇರಿಗೆ ಸಹಾಯಕ ವೆಚ್ಚ ನಿರ್ವಹಣಾಧಿಕಾರಿಗಳು ಮತ್ತು ಲೆಕ್ಕಿಗರ ತಂಡವನ್ನು ನೇಮಕ ಮಾಡಲಾಗಿದೆ. 

ಜಿಲ್ಲೆಯಲ್ಲಿ ಒಟ್ಟು 10,11,717 ಮತದಾರರಿದ್ದು, ಆ ಪೈಕಿ  5,05,104 ಪುರುಷ, , 506,488 ಮಹಿಳೆ ಹಾಗೂ ಇತರೆ 125 ಮತದಾರರು ಇದ್ದಾರೆ. ಜಿಲ್ಲೆಯಲ್ಲಿ ಒಟ್ಟು 45 ಅಧಿಕಾರಿಗಳನ್ನು ಫ್ಲೆಯಿಂಗ್‌ ಸ್ಕ್ವಾಡ್‌, 106 ಸೆಕ್ಟರ್‌ ಅಧಿಕಾರಿಗಳನ್ನು 11 ವಿಎಸ್ಟಿಟಿಗೆ ಐವರನ್ನು ನೇಮಿಸಲಾಗಿದೆ ಎಂದರು.

ಅರಿವು ಮೂಡಿಸಲು ಕ್ರಮ: ಜಿಪಂ ಸಿಇಒ ಗುರುದತ್ತ ಹೆಗಡೆ ಮಾತನಾಡಿ, ಜಿಲ್ಲೆಯಲ್ಲಿ ಮತದಾನ ಪ್ರಮಾಣ ಹೆಚ್ಚಳಕ್ಕೆ ಶಾಲಾ ಕಾಲೇಜುಗಳಲ್ಲಿ, ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಜಿಲ್ಲಾದ್ಯಂತ ಗಾಯನ, ಬೀದಿ ನಾಟಕಗಳ ಪ್ರದರ್ಶನ, ರಂಗೋಲಿ, ಪ್ರಬಂಧ ಸ್ಪರ್ಧೆ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲು ರೂಪರೇಷೆಗಳನ್ನು ಸಿದ್ಧಪಡಿಸಲಾಗಿದೆ ಎಂದರು.

ಜಿಪಂ ಮೂಲಕ ಉದ್ಯೋಗ ಖಾತ್ರಿ ಹಾಗೂ ಬರ ನಿರ್ವಹಣೆಗೆ ಕುಡಿಯುವ ನೀರಿನ ಯೋಜನೆಗಳನ್ನು ಅನುಷ್ಠಾನಗೊಳಿಸಲು ನೀತಿ ಸಂಹಿತೆ ಅಡ್ಡಿಯಾಗುವುದಿಲ್ಲ ಎಂದರು. ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸಂತೋಷ ಬಾಬು, ಅಪರ ಜಿಲ್ಲಾಧಿಕಾರಿ, ಆರತಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಅಕ್ರಮಗಳಿಗೆ ಕಂಡುಬಂದರೆ 08156-1950 ಸಂಪರ್ಕಿಸಿ: ಕ್ಷೇತ್ರದಲ್ಲಿ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಅಥವಾ ಚುನಾವಣಾ ಅಕ್ರಮಗಳು ಕಂಡು ಬಂದಲ್ಲಿ ಸಾರ್ವಜನಿಕರು ಟೋಲ್‌ ಫ್ರೀ ದೂರವಾಣಿ ಸಂಖ್ಯೆ 08156-1950 ರಂತೆ 24*7 ಕಂಟ್ರೋಲ್‌ ರೂಂನ್ನು ತೆರೆಯಲಾಗಿರುತ್ತದೆ. ಅಕ್ರಮಗಳ ಬಗ್ಗೆ ಮಾಹಿತಿ ಕೊಡುವವರ ಮಾಹಿತಿಯನ್ನು ಗೌಪ್ಯವಾಗಿ ಇಡಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು. 

ತಕ್ಷಣ ದೂರಿಗೆ ಸಂಬಂಧಿಸಿ ಕ್ರಮ ವಹಿಸಲಾಗುವುದು. ಜಿಲ್ಲಾ ಮಟ್ಟದಲ್ಲಿ ಪತ್ರಿಕೆಗಳಲ್ಲಿ ಜಾಹೀರಾತು ಪ್ರಕಟಿಸಬೇಕಾದರೆ ಅನುಮತಿ ಪಡೆಯಬೇಕು. ಸಾಮಾಜಿಕ ಜಾಲತಾಣಗಳ ಮೇಲೆ ಹೆಚ್ಚಿನ ನಿಗಾ ವಹಿಸಲಾಗುವುದು. ಜಿಲ್ಲೆಯಲ್ಲಿ ಯೂಟೂಬ್‌ ಚಾನಲ್‌ಗ‌ಳಿಗೆ ಕಡಿವಾಣ ಹಾಕಲಾಗುವುದು ಎಂದು ತಿಳಿಸಿದರು.

ಕ್ಷೇತ್ರದಲ್ಲಿ 20 ಚೆಕ್‌ಪೋಸ್ಟ್‌ ಸ್ಥಾಪನೆ: ಅಕ್ರಮ ಮದ್ಯ, ಹಣ ಮತ್ತಿತರ ಚುನಾವಣೆಗೆ ಸಂಬಂಧಿಸಿದಂತೆ ನಡೆಯುವ ಅಕ್ರಮಗಳನ್ನು ತಡೆಯುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಒಟ್ಟು 20 ಚೆಕ್‌ಪೋಸ್ಟ್‌ಗಳನ್ನು ತೆರೆಯಲಾಗಿದ್ದು, ಜಿಲ್ಲೆಯ ಅಂತಾರಾಜ್ಯ ಗಡಿಯಲ್ಲಿ ಒಟ್ಟು 11 ಹಾಗೂ ಅಂತರ್‌ ಜಿಲ್ಲಾ ಗಡಿಯಲ್ಲಿ ಒಟ್ಟು 9 ಚೆಕ್‌ಪೋಸ್ಟ್‌ಗಳನ್ನು ಈಗಾಗಲೇ ಸ್ಥಾಪಿಸಲಾಗಿದೆ. ಪ್ರತಿ ಚೆಕ್‌ಪೋಸ್ಟ್‌ಗೂ ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಮದುವೆ, ಮತ್ತಿತರ ಶುಭ, ಸಮಾರಂಭಗಳಿಗೆ ಅನುಮತಿ ಪಡೆಯುವ ಅಗತ್ಯವಿಲ್ಲ. ಆದರೆ ಸಭೆ, ಸಮಾರಂಭಗಳಲ್ಲಿ ರಾಜಕಾರಣಿಗಳ ಭಾಷಣಕ್ಕೆ ಅವಕಾಶ ಇಲ್ಲ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು. 

ಬರ ನಿರ್ವಹಣೆಗೆ ನೀತಿ ಸಂಹಿತೆ ಅಡ್ಡಿ ಇಲ್ಲ: ಜಿಲ್ಲೆಯಲ್ಲಿ ತೀವ್ರ ಬರಗಾಲ ಆವರಿಸಿರುವುದರಿಂದ ಕುಡಿಯುವ ನೀರು ಸರಬರಾಜು ಸಂಬಂಧಿಸಿದಂತೆ ಕಾಮಗಾರಿ ಹಾಗೂ ಈಗಾಗಲೇ ನಡೆಯುತ್ತಿರುವ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಕಾಮಗಾರಿಗಳನ್ನು ಮುಂದುವರಿಸಬಹುದಾಗಿದೆ. ಇದಕ್ಕೆ ಯಾವುದೇ ರೀತಿ ಚುನಾವಣಾ ನೀತಿ ಸಂಹಿತೆ ಅಡ್ಡಿ ಬರುವುದಿಲ್ಲ ಎಂದು ಸುದ್ದಿಗೋಷ್ಠಿಯಲ್ಲಿ ಜಿಲ್ಲಾಧಿಕಾರಿಗಳು ಸ್ಪಷ್ಟಪಡಿಸಿದರು. 

ಈಗಾಗಲೇ ಟ್ಯಾಂಕರ್‌ ಮೂಲಕ 79 ಗ್ರಾಮಗಳಿಗೆ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ. ಜಿಲ್ಲೆಯಲ್ಲಿ ನೀರಿನ ಸಮಸ್ಯೆಯನ್ನು ಸಮರೋಪಾದಿಯಲ್ಲಿ ಪರಿಹರಿಸಬೇಕೆಂಬ ದೃಷ್ಟಿಯಿಂದ ಗ್ರಾಮೀಣ ಕುಡಿಯುವ ನೀರು ಹಾಗೂ ನೈರ್ಮಲ್ಯ ಇಲಾಖೆ ಅಧಿಕಾರಿಗಳನ್ನು ಚುನಾವಣಾ ಕರ್ತವ್ಯಕ್ಕೆ ಬಳಸಿಕೊಳ್ಳುತ್ತಿಲ್ಲ ಎಂದರು. 

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಮುಕ್ತ ಹಾಗೂ ಪಾರದರ್ಶಕ ಚುನಾವಣೆಗೆ ಜಿಲ್ಲಾಡಳಿತ ಸಕಲ ರೀತಿಯಲ್ಲಿ ಸಜ್ಜಾಗುತ್ತಿದೆ. ಅತಿ ಸೂಕ್ಷ್ಮ ಹಾಗೂ ಸೂಕ್ಷ್ಮ ಮತಗಟ್ಟೆಗಳಲ್ಲಿ ಹೆಚ್ಚಿನ ಭದ್ರತೆ ಒದಗಿಸಲಾಗುವುದು. ಮತದಾರರು ಆಸೆ, ಆಮಿಷಗಳಿಗೆ ಒಳಗಾಗದೇ ಮತದಾನದಲ್ಲಿ ಪಾಲ್ಗೊಳ್ಳಬೇಕು. 2014ರ ಚುನಾವಣೆಯಲ್ಲಿ ಒಟ್ಟು 76.06 ರಷ್ಟು ಮತದಾನವಾಗಿತ್ತು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಶೇ.84.19 ರಷ್ಟು ಮತದಾನ ನಡೆದಿತ್ತು. ಈ ಚುನಾವಣೆಯಲ್ಲಿ ಮತದಾನ ಪ್ರಮಾಣ ಹೆಚ್ಚಾಗಬೇಕು.
-ಅನಿರುದ್ಧ್ ಶ್ರವಣ್‌, ಜಿಲ್ಲಾಧಿಕಾರಿ  

ಟಾಪ್ ನ್ಯೂಸ್

supreme-Court

Editorial: ಗಿಫ್ಟ್ ಡೀಡ್‌: ಸುಪ್ರೀಂಕೋರ್ಟ್‌ನಿಂದ ಕಣ್ತೆರೆಸುವ ತೀರ್ಪು

MLA–Harish-gowda

Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್‌ ಗೌಡ

Koppal-Bjp

Overview: ಕೊಪ್ಪಳ ಜಿಲ್ಲಾಸ್ಪತ್ರೆಗೆ ಬಿಜೆಪಿ ಸತ್ಯ ಶೋಧನಾ ತಂಡ ಭೇಟಿ

1-dee

ಪ್ರಸಾರಕ ಸಂಸ್ಥೆಗಳ ಶುಲ್ಕ ಹೆಚ್ಚಳ: ಚಾನೆಲ್‌ಗ‌ಳ ದರವೂ ಹೆಚ್ಚಳ

1-dam

ಬ್ರಹ್ಮಪುತ್ರ ಅಣೆಕಟ್ಟಿಂದ ಭಾರತಕ್ಕೆ ಧಕ್ಕೆ ಆಗದು: ಚೀನ

1-ran

National Anthem Controversy:ಭಾಷಣ ಮಾಡದೆ ಹೋದ ತಮಿಳುನಾಡು ರಾಜ್ಯಪಾಲ

Udupi: ಗೀತಾರ್ಥ ಚಿಂತನೆ-148: ಹೇಳುವುದು ಸುಖವಾದರೂ ಆಗುವುದು ದುಃಖ

Udupi: ಗೀತಾರ್ಥ ಚಿಂತನೆ-148: ಹೇಳುವುದು ಸುಖವಾದರೂ ಆಗುವುದು ದುಃಖ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CKB-Sudhakar

Congress Govt: ಆರು ತಿಂಗಳಲ್ಲಿ ಡಿ.ಕೆ.ಶಿವಕುಮಾರ್‌ ಸಿಎಂ ಆಗ್ತಾರೆ: ಸಂಸದ ಡಾ.ಕೆ.ಸುಧಾಕರ್‌

JDS leader hits at Chikkaballapura

Chikkaballapura: ಮಾರಕಾಯುಧಗಳಿಂದ ಜೆಡಿಎಸ್ ಮುಖಂಡನ ಭೀಕರ ಕೊಲೆ

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

9

Dr MC Sudhakar: ‘ಹೈಕಮಾಂಡ್‌ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

badminton

Malaysia Super 1000 Badminton: ಯಶಸ್ವಿ ಆರಂಭಕ್ಕೆ ಮೊದಲ ಮೆಟ್ಟಿಲು

1-kho

Kho Kho ಇಂಡಿಯಾಕ್ಕೆ ಒಡಿಶಾ ಪ್ರಾಯೋಜಕತ್ವ

supreme-Court

Editorial: ಗಿಫ್ಟ್ ಡೀಡ್‌: ಸುಪ್ರೀಂಕೋರ್ಟ್‌ನಿಂದ ಕಣ್ತೆರೆಸುವ ತೀರ್ಪು

MLA–Harish-gowda

Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್‌ ಗೌಡ

Koppal-Bjp

Overview: ಕೊಪ್ಪಳ ಜಿಲ್ಲಾಸ್ಪತ್ರೆಗೆ ಬಿಜೆಪಿ ಸತ್ಯ ಶೋಧನಾ ತಂಡ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.