ಪರಿವಾರ ಜನಾಂಗಕ್ಕೆ ನೀಡುತ್ತಿರುವ ಕಿರುಕುಳ ತಪ್ಪಿಸಿ
Team Udayavani, Mar 12, 2019, 7:44 AM IST
ಮೈಸೂರು: ನಾಯಕ ಜನಾಂಗದ ಪರ್ಯಾಯ ಪದವಾದ ಪರಿವಾರ ಕುರಿತು ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಈ ಜನಾಂಗಕ್ಕೆ ಆಗುತ್ತಿರುವ ಕಿರುಕುಳ ತಪ್ಪಿಸಲು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ನಗರದ ಸಿಆರ್ ಇ ಸೆಲ್ ಕಚೇರಿಯಲ್ಲಿ ಸಂಸದ ಪ್ರತಾಪ್‌ಸಿಂಹ ಅವರಿಗೆ ನಾಯಕ ಜನಾಂಗದ ಮುಖಂಡರು ಮನವಿ ಸಲ್ಲಿಸಿದರು.
ಸಂಸದ ಪ್ರತಾಪಸಿಂಹ ಅವರನ್ನು ಭೇಟಿ ಮಾಡಿದ ಮುಖಂಡರು ನಾಯಕ ಸಮುದಾಯದ ಪರ್ಯಾಯ ಪದವಾದ ಪರಿವಾರವಿನ್ನೂ° ಪರಿಶಿಷ್ಟ ಪಂಗಡಕ್ಕೆ ಸೇರಿಲ್ಲ ಎಂದು ಅಧಿಕಾರಿಗಳು ನೀಡುತ್ತಿರುವ ಕಿರುಕುಳದ ಬಗ್ಗೆ ಚರ್ಚೆ ನಡೆಸಿದರು.
ನಾಯಕ ಸಮುದಾಯಕ್ಕೆ ಜಾತಿ ಪ್ರಮಾಣಪತ್ರ ನೀಡಿಕೆ ವಿಚಾರದಲ್ಲಿ ಸಿಆರ್ ಇ ಸೆಲ್ ನೀಡುತ್ತಿರುವ ಕಿರುಕುಳವನ್ನು ತಪ್ಪಿಸಬೇಕು. ರಾಜ್ಯ ಮತ್ತು ಕೇಂದ್ರ ಸರ್ಕಾರ ಮೈಸೂರು ಮತ್ತು ಚಾಮರಾಜನಗರದ ಪರಿವಾರ ಪದ ನಾಯಕ ಜನಾಂಗದ ಪರ್ಯಾಯ ಪದವೆಂದು ಒಪ್ಪಿವೆ. ಕೇಂದ್ರ ಸಚಿವಾಲಯದವರು ಕೂಡ ಒಪ್ಪಿದ್ದಾರೆ.
ಕಳೆದ ಸಂಸತ್ ಅಧಿವೇಶನದಲ್ಲಿ ಈ ಬಗ್ಗೆ ರಾಜ್ಯಸಭೆಯಲ್ಲಿ ಮಸೂದೆ ಮಂಡಿಸಲಾಗಿದೆ. ಹೈಕೋರ್ಟ್ ನೀಡಿರುವ ಆದೇಶವನ್ನು ಸಹ ಒದಗಿಸಿ, ನಾಯಕ ಜನಾಂಗದ ಮೇಲಾಗುತ್ತಿರುವ ಕಿರುಕುಳದ ಬಗ್ಗೆ ತಿಳಿಸಿ,ಮುಂದೆ ನಾಯಕ ಜನಾಂಗಕ್ಕೆ ಕಿರುಕುಳ ನೀಡದಂತೆ ಸಿಆರ್‌ಇ ಸೆಲ್ ಎಸ್ಪಿ ಅವರಿಗೆ ಮನವರಿಕೆ ಮಾಡಿಕೊಡಲಾಯಿತು.
ವಿಧಾನ ಪರಿಷತ್ ಮಾಜಿ ಸದಸ್ಯ ಸಿದ್ದರಾಜು, ಬಿಜೆಪಿ ಎಸ್ಟಿ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಅಪ್ಪಣ್ಣ, ವಕೀಲ ಪಡುವಾರಹಳ್ಳಿ ಎಂ.ರಾಮಕೃಷ್ಣ, ದೇವಪ್ಪನಾಯಕ, ದೇವರಾಜು ಟಿ. ಕಾಟೂರು, ಗೋಪಿ, ಕ್ಯಾತನಹಳ್ಳಿ ಸಿ. ನಾಗರಾಜ್, ಹಿನಕಲ್ ಚಂದ್ರ, ಸಾಹುಕಾರಹುಂಡಿ ಮಹದೇವು,ಪ್ರಭಾಕರ್,ಶಿವಕುಮಾರ್, ಪ್ರಕಾಶ್, ಕುಮಾರಬೀಡು ರಾಜೇಂದ್ರ, ಗಂಗಡಹೊಸಹಳ್ಳಿ ಶಂಕರನಾಯಕ, ಬಿಳಿಕೆರೆ ಪಾಲಾಕ್ಷ, ರಘು ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ
MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?
Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Mysuru: ಜೆಡಿಎಸ್ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Gundlupete: ವಿದ್ಯುತ್ ತಂತಿಗೆ ಸಿಲುಕಿ ಮರಿಯಾನೆ ಸಾವು
Constitution: ಕಾಂಗ್ರೆಸ್ಸಿಗರಿಂದ ಸಂವಿಧಾನದ ರಕ್ಷಕರಂತೆ ಕಪಟ ನಾಟಕ: ಬಿ.ವೈ.ವಿಜಯೇಂದ್ರ
Sirsi: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ ಪರಾರಿ; ಆರೋಪಿ ಬಂಧನ
EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್ ಟೀಕೆ
Sirsi: ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾದ ಸಂಸದ ಕಾಗೇರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.