ಮೈಸೂರು-ಕೊಡಗು ಲೋಕಸಭೆ: ನೀತಿ ಸಂಹಿತೆ ಜಾರಿ


Team Udayavani, Mar 12, 2019, 7:45 AM IST

m1-mys-kod.jpg

ಮೈಸೂರು: ಹದಿನೇಳನೇ ಲೋಕಸಭೆಗೆ ಭಾರತ ಚುನಾವಣಾ ಆಯೋಗ ಚುನಾವಣಾ ವೇಳಾಪಟ್ಟಿ ಪ್ರಕಟಿಸಿರುವುದರಿಂದ ಜಿಲ್ಲೆಯಲ್ಲಿ ತಕ್ಷಣದಿಂದಲೇ ಮಾದರಿ ನೀತಿ ಸಂಹಿತೆ ಜಾರಿಗೆ ಆದೇಶಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳಾದ ಮೈಸೂರು ಜಿಲ್ಲಾಧಿಕಾರಿ ಅಭಿರಾಮ್‌ ಜಿ.ಶಂಕರ್‌ ತಿಳಿಸಿದರು. ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಚುನಾವಣೆಗೆ ಮಾ.19ರಂದು ಅಧಿಸೂಚನೆ ಹೊರಡಿಸಲಾಗುವುದು.

ಮಾ.26 ನಾಮಪತ್ರ ಸಲ್ಲಿಸಲು ಕೊನೆಯ ದಿನ. ಮಾ.27ರಂದು ನಾಮಪತ್ರಗಳನ್ನು ಪರಿಶೀಲಿಸಲಾಗುವುದು, ಮಾ.29 ಉಮೇದುವಾರಿಕೆ ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿದ್ದು, ಏ.18ರಂದು ಮತದಾನ ನಡೆಯಲಿದೆ. ಮೇ 23ರಂದು ಮತ ಎಣಿಕೆ ನಡೆಯಲಿದೆ ಎಂದು ಹೇಳಿದರು. ಮೈಸೂರು-ಕೊಡಗು ಲೋಕಸಭಾ ಕ್ಷೇತ್ರ ಮಡಿಕೇರಿ, ವಿರಾಜಪೇಟೆ, ಪಿರಿಯಾಪಟ್ಟಣ, ಹುಣಸೂರು, ಚಾಮುಂಡೇಶ್ವರಿ, ಕೃಷ್ಣರಾಜ, ಚಾಮರಾಜ ಹಾಗೂ ನರಸಿಂಹರಾಜ ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿದೆ. 

ಕೊಡಗು ಜಿಲ್ಲೆಯ ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು 4,35,554 ಮತದಾರರು, ಮೈಸೂರು ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು 14,23,457 ಮತದಾರರು ಸೇರಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಒಟ್ಟಾರೆ 18,59,011 ಮತದಾರರು ಮತದಾನದ ಹಕ್ಕು ಹೊಂದಿದ್ದಾರೆ. ಮೈಸೂರು ಜಿಲ್ಲೆಯ ಕೆ.ಆರ್‌.ನಗರ ವಿಧಾನಸಭಾ ಕ್ಷೇತ್ರ ಮಂಡ್ಯ ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ, ಎಚ್‌.ಡಿ.ಕೋಟೆ, ನಂಜನಗೂಡು, ವರುಣಾ ಹಾಗೂ ತಿ.ನರಸೀಪುರ ವಿಧಾನಸಭಾ ಕ್ಷೇತ್ರಗಳು ಚಾಮರಾಜ ನಗರ ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಸೇರಿವೆ. 

ಮತಗಟ್ಟೆಗಳ ವಿವರ: ಪಿರಿಯಾಪಟ್ಟಣ ಕ್ಷೇತ್ರದಲ್ಲಿ ಈ ಹಿಂದೆ 225 ಮತಗಳಿದ್ದು, ಹೊಸದಾಗಿ 10 ಮತಗಟ್ಟೆ ರಚಿಸಲಾಗಿದ್ದು, ಒಟ್ಟು 235 ಮತಗಟ್ಟೆಗಳಿದೆ. ಹುಣಸೂರು ಕ್ಷೇತ್ರದಲ್ಲಿ ಈ ಹಿಂದೆ 263 ಮತಗಟ್ಟೆಗಳಿದ್ದು, ಹೊಸದಾಗಿ 11 ಮತಗಟ್ಟೆಗಳನ್ನು ರಚಿಸಲಾಗಿದ್ದು, ಒಟ್ಟು 274 ಮತಗಟ್ಟೆಗಳಿದೆ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಈ ಹಿಂದೆ 310 ಮತಗಟ್ಟೆಗಳಿದ್ದು, ಹೊಸದಾಗಿ 28 ಮತಗಟ್ಟೆ ಸ್ಥಾಪಿಸಲಾಗಿದ್ದು, ಒಟ್ಟು 338 ಮತಗಟ್ಟೆಗಳಿದೆ.

ಕೃಷ್ಣರಾಜ ವಿಧಾನಸಭಾ ಕ್ಷೇತ್ರದಲ್ಲಿ ಈ ಹಿಂದೆ 223 ಮತಗಟ್ಟೆಗಳಿದ್ದು, ಹೊಸದಾಗಿ 47 ಮತಗಟ್ಟೆಗಳನ್ನು ರಚಿಸಿದ್ದು, ಒಟ್ಟು 270 ಮತಗಟ್ಟೆಗಳಾಗಿದೆ. ಚಾಮರಾಜ ವಿಧಾನಸಭಾ ಕ್ಷೇತ್ರದಲ್ಲಿ ಈ ಹಿಂದೆ 213 ಮತಗಟ್ಟೆಗಳಿದ್ದು, ಹೊಸದಾಗಿ 32 ಮತಗಟ್ಟೆ ರಚಿಸಿದ್ದು, ಒಟ್ಟು 245 ಮತಗಟ್ಟೆಗಳಿದೆ. ನರಸಿಂಹರಾಜ ವಿಧಾನಸಭಾ ಕ್ಷೇತ್ರದಲ್ಲಿ ಈ ಹಿಂದೆ 220 ಮತಗಟ್ಟೆಗಳಿದ್ದು, ಹೊಸದಾಗಿ 62 ಮತಗಟ್ಟೆ ರಚಿಸಲಾಗಿದ್ದು, ಒಟ್ಟು 282 ಮತಗಟ್ಟೆಗಳಾಗಿದೆ. 

ಅಧಿಕಾರಿಗಳ ನೇಮಕ: ಚುನಾವಣಾ ಆಯೋಗದ ಸೂಚನೆಯಂತೆ ಪ್ರತಿ ಮತಗಟ್ಟೆಗಳಿಗೆ ಅಗತ್ಯ ಮತಗಟ್ಟೆ ಅಧಿಕಾರಿಗಳನ್ನು ಹಾಗೂ ಮೀಸಲು ಸಿಬ್ಬಂದಿ ನೇಮಕ ಮಾಡಲು, ಕೇಂದ್ರ ಸರ್ಕಾರಿ ಅಧಿಕಾರಿ ಹಾಗೂ ಸಿಬ್ಬಂದಿಯನ್ನು ಆಯ್ದ ಮತಗಟ್ಟೆಗಳಿಗೆ ಮೈಕ್ರೋ ಅಬ್ಸರ್ವರ್‌ ಆಗಿ ನೇಮಕ ಮಾಡಲು ಕ್ರಮವಹಿಸಲಾಗಿದೆ. 

ತಂಡಗಳ ರಚನೆ: ಮಾದರಿ ನೀತಿ ಸಂಹಿತೆ ಹಾಗೂ ಅಭ್ಯರ್ಥಿಗಳ ವೆಚ್ಚದ ಮೇಲೆ ನಿಗಾ ಇಡಲು ಸೆಕ್ಟರ್‌ ಅಧಿಕಾರಿ, ಪ್ಲೆ„ಯಿಂಗ್‌ ಸ್ಕ್ವಾಡ್‌, ಸ್ಟಾಟಿಕ್‌ ಸರ್ವೆಲೆನ್ಸ್‌ ಟೀಮ್‌, ವೀಡಿಯೋ ವೀವಿಂಗ್‌ ಟೀಮ್‌, ಸಹಾಯಕ ಚುನಾವಣಾ ಅಬ್ಸರ್ವರ್‌ಗಳ ತಂಡಗಳನ್ನು ರಚಿಸಲಾಗಿದ್ದು, ಈ ತಂಡಗಳಿಗೆ ಜಿಲ್ಲಾ ಮಟ್ಟದಲ್ಲಿ ತರಬೇತಿ ನೀಡಲಾಗಿದೆ ಎಂದು ತಿಳಿಸಿದರು. 

ಜಿಪಂ ಸಿಇಒ ಕೆ.ಜ್ಯೋತಿ, ಪಾಲಿಕೆ ಆಯುಕ್ತರಾದ ಶಿಲ್ಪಾನಾಗ್‌, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅಮಿತ್‌ ಸಿಂಗ್‌, ನಗರ ಪೊಲೀಸ್‌ ಆಯುಕ್ತ ಕೆ.ಟಿ.ಬಾಲಕೃಷ್ಣ, ಹೆಚ್ಚುವರಿ ಜಿಲ್ಲಾಧಿಕಾರಿ ಅನುರಾಧ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.

ಮಾಹಿತಿಗೆ ಹೆಲ್ಪ್ಲೈನ್‌ಗೆ ಕರೆ ಮಾಡಿ: ಚುನಾವಣಾ ಆಯೋಗದ ಸೂಚನೆಯಂತೆ ಮೈಸೂರು ಜಿಲ್ಲೆಯ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಮತದಾರರ ಸೌಲಭ್ಯ ಕೇಂದ್ರ 1950 ಸಹಾಯವಾಣಿ ಪ್ರಾರಂಭವಾಗಿದ್ದು, ಈ ಕೇಂದ್ರವು ದಿನದ 24 ಗಂಟೆ ಕಾರ್ಯ ನಿರ್ವಹಿಸಲಿದೆ.

ಸಾರ್ವಜನಿಕರು ಈ ಉಚಿತ ದೂರವಾಣಿಗೆ ಕರೆ ಮಾಡಿ ಮತದರರ ಪಟ್ಟಿಗೆ ಸಂಬಂಧಿಸಿದಂತೆ ಅವಶ್ಯಕ ಮಾಹಿತಿಗಳನ್ನು ಪಡೆದುಕೊಳ್ಳಬಹುದು. ಜಿಲ್ಲೆಯ ಎಲ್ಲಾ ಮತಗಟ್ಟೆಗಳಿಗೆ ಅಗತ್ಯ ಕನಿಷ್ಠ ಸೌಲಭ್ಯಗಳಾದ ಕುಡಿಯುವ ನೀರು, ಶೌಚಾಲಯ, ವಿದ್ಯುತ್‌ ಸಂಪರ್ಕ, ರ್‍ಯಾಂಪ್‌ ವ್ಯವಸ್ಥೆ ಒದಗಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳಾದ ಮೈಸೂರು ಜಿಲ್ಲಾಧಿಕಾರಿ ಅಭಿರಾಮ್‌ ಜಿ.ಶಂಕರ್‌ ತಿಳಿಸಿದರು.

ಟಾಪ್ ನ್ಯೂಸ್

supreem

Supreme Court; ಆದಾಯ ಮೀರಿದ ಆಸ್ತಿ ಪ್ರಕರಣ: ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಗೆ ನೋಟಿಸ್

BGT Series: Indians Should not forget the battle of Pujara at the Gabba

BGT Series: ಚೇತೇಶ್ವರ ಪೂಜಾರ ಅಂದು ತಿಂದ ಪೆಟ್ಟಿನ ನೋವು ಭಾರತೀಯರು ಮರೆಯುವುದುಂಟೇ?

Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ

Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ

ಹೋಟೆಲ್ ಕೊಠಡಿಯಲ್ಲೇ ಹಿರಿಯ ವೈದ್ಯ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ

Hotel Room: ಹೋಟೆಲ್ ಕೊಠಡಿಯಲ್ಲೇ ವೈದ್ಯನ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ

Cricket: ಚಾಂಪಿಯನ್ಸ್‌ ಟ್ರೋಫಿ ಪಾಕಿಸ್ತಾನದಲ್ಲೇ ಖಚಿತ; ತನ್ನ ನಿರ್ಧಾರ ತಿಳಿಸಿದ ಬಿಸಿಸಿಐ

Cricket: ಚಾಂಪಿಯನ್ಸ್‌ ಟ್ರೋಫಿ ಪಾಕಿಸ್ತಾನದಲ್ಲೇ ಖಚಿತ; ತನ್ನ ನಿರ್ಧಾರ ತಿಳಿಸಿದ ಬಿಸಿಸಿಐ

Aligarh ಮುಸ್ಲಿಮ್‌ ವಿವಿ  ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ ಹೊಸ ಪೀಠ ನಿರ್ಧರಿಸಲಿದೆ:ಸುಪ್ರೀಂ

Aligarh ಮುಸ್ಲಿಮ್‌ ವಿವಿ  ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ ಹೊಸ ಪೀಠ ನಿರ್ಧರಿಸಲಿದೆ:ಸುಪ್ರೀಂ

Rakesh Adiga in Maryade Prashne movie

Rakesh Adiga: ನಾನು ಮಿಡಲ್‌ ಕ್ಲಾಸ್‌ ಹುಡುಗ ಮರ್ಯಾದೆ ಉಳಿಸಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಡಾ ನಿವೇಶನ 50:50 ಹಂಚಿಕೆ ರದ್ದು ತೀರ್ಮಾನ

MUDA; 50:50 ಹಂಚಿಕೆ ರದ್ದು ತೀರ್ಮಾನ; ನ್ಯಾ| ದೇಸಾಯಿ ಆಯೋಗದ ವರದಿ ಬಳಿಕ ನಿವೇಶನ ವಾಪಸ್‌

Loka-SP-Udesh–CM

MUDA Case: ಉತ್ತರ ತಾಳೆಯಾಗದೆ ಇದ್ದರೆ ಮತ್ತೆ ಸಿಎಂ ವಿಚಾರಣೆ: ಲೋಕಾಯುಕ್ತ ಎಸ್ಪಿ ಉದೇಶ್‌

CM-siddu

MUDA Case: ಲೋಕಾಯುಕ್ತ ಪೊಲೀಸರು ಮತ್ತೆ ವಿಚಾರಣೆಗೆ ಬರಲು ಹೇಳಿಲ್ಲ: ಸಿಎಂ ಸಿದ್ದರಾಮಯ್ಯ

2-hunsur

Hunsur: ಗೃಹಿಣಿ ನಾಪತ್ತೆ :ದೂರು ದಾಖಲು; ಪತ್ತೆಗಾಗಿ ಮನವಿ

CM-Siddu-High-Court

MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

supreem

Supreme Court; ಆದಾಯ ಮೀರಿದ ಆಸ್ತಿ ಪ್ರಕರಣ: ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಗೆ ನೋಟಿಸ್

sirsi

Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ

Yathanaa

Waqf Property: ಸಚಿವ ಜಮೀರ್‌ ಅಶ್ವಮೇಧ ಕುದುರೆ ತಡೆದಿದ್ದೇನೆ: ಶಾಸಕ ಯತ್ನಾಳ್‌

ಐತಿಹಾಸಿಕ ಮುಡಗೇರಿ ಗ್ರಾಮ ನಿರ್ಲಕ್ಷ್ಯ; ಸೋದೆ ಅರಸರ ಕೋಟೆ ಪಳೆಯುಳಿಕೆ

ಐತಿಹಾಸಿಕ ಮುಡಗೇರಿ ಗ್ರಾಮ ನಿರ್ಲಕ್ಷ್ಯ; ಸೋದೆ ಅರಸರ ಕೋಟೆ ಪಳೆಯುಳಿಕೆ

BGT Series: Indians Should not forget the battle of Pujara at the Gabba

BGT Series: ಚೇತೇಶ್ವರ ಪೂಜಾರ ಅಂದು ತಿಂದ ಪೆಟ್ಟಿನ ನೋವು ಭಾರತೀಯರು ಮರೆಯುವುದುಂಟೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.