ನೀತಿ ಸಂಹಿತೆ ಉಲ್ಲಂಘಿಸಿದರೆ ಕ್ರಮ
Team Udayavani, Mar 12, 2019, 11:27 AM IST
ಶಿವಮೊಗ್ಗ: ಮಾದರಿ ನೀತಿ ಸಂಹಿತೆ ಈಗಾಗಲೇ ಜಾರಿಯಲ್ಲಿದ್ದು, ನೀತಿ ಸಂಹಿತೆಯನ್ನು ಉಲ್ಲಂಘಿಸಿದರೆ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಎ. ದಯಾನಂದ ಅವರು ಎಚ್ಚರಿಕೆ ನೀಡಿದರು. ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆ ನಡೆಸಿ ಸೂಚನೆಗಳನ್ನು ನೀಡಿದರು.
ಚುನಾವಣಾ ಪ್ರಚಾರ ಕಾರ್ಯ ಸುಗಮವಾಗಿ ನಡೆಸಲು ಎಲ್ಲ ರೀತಿಯ ನೆರವನ್ನು ಒದಗಿಸಲಾಗುವುದು. ನ್ಯಾಯ ಮತ್ತು ನಿಷ್ಪಕ್ಷಪಾತ ಚುನಾವಣೆ ನಡೆಸಲು ಎಲ್ಲ ರಾಜಕೀಯ ಪಕ್ಷಗಳ ಸಹಕಾರ ಅಗತ್ಯ. ಪ್ರತಿಯೊಂದು ಚುನಾವಣಾ ಪ್ರಕ್ರಿಯೆ ಮೇಲೆ ಹದ್ದಿನ ಕಣ್ಣೀರಿಸಲಾಗುವುದು. ಇದಕ್ಕಾಗಿ ಹಲವು ತಂಡಗಳನ್ನು ಈಗಾಗಲೇ ರಚಿಸಲಾಗಿದೆ. ಚುನಾವಣಾ ಆಯೋಗದ ಮಾರ್ಗಸೂಚಿ ಪ್ರಕಾರ ಚುನಾವಣಾ ಪ್ರಚಾರ ಕಾರ್ಯಗಳನ್ನು ಕೈಗೊಳ್ಳಬೇಕು ಎಂದು ಅವರು ತಿಳಿಸಿದರು.
ಎಲೆಕ್ಟ್ರಾನಿಕ್ ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಚುನಾವಣಾ ಜಾಹೀರಾತು ಪ್ರಕಟಿಸುವ ಪೂರ್ವದಲ್ಲಿ ಪ್ರಮಾಣ ಪತ್ರ ಪಡೆಯುವುದು ಕಡ್ಡಾಯವಾಗಿದೆ. ಮತದಾನ ನಡೆಯುವ ಸಮಯದ 48 ಗಂಟೆ ಪೂರ್ವದಲ್ಲಿ ಮುದ್ರಣ ಮಾಧ್ಯಮದಲ್ಲಿ ಜಾಹೀರಾತು ಪ್ರಕಟಿಸಲು ಪೂರ್ವಾನುಮತಿ ಪಡೆಯಬೇಕಾಗಿದೆ. ಮುದ್ರಣ ಮಾಧ್ಯಮದಲ್ಲಿ ಪ್ರಕಟವಾದ ಜಾಹೀರಾತುಗಳನ್ನು ವೆಬ್‌ಸೈಟ್ ಮುಂತಾದ ಎಲೆಕ್ಟ್ರಾನಿಕ್ ಮಾಧ್ಯಮಗಳಲ್ಲಿ ಪ್ರಕಟಿಸುವ ಪೂರ್ವದಲ್ಲಿ ಅನುಮತಿಯನ್ನು ಪಡೆಯುವುದು ಕಡ್ಡಾಯ ಎಂದರು.
ಜಾಹೀರಾತುಗಳಲ್ಲಿ ಧಾರ್ಮಿಕ ಭಾವನೆಗಳನ್ನು ಕೆರಳಿಸುವಂತಹ, ಇನ್ನೊಬ್ಬರ ವೈಯಕ್ತಿಕ ಟೀಕೆ ಮಾಡುವಂತಹ ಅಂಶಗಳು ಇರಬಾರದು. ಜಾಹೀರಾತು ಪ್ರಕಟಣೆ ವಿಷಯದಲ್ಲಿ ಮಾರ್ಗಸೂಚಿ ಉಲ್ಲಂಘನೆ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.
ನ್ಯೂ ಸುವಿಧಾ: ಚುನಾವಣಾ ಪ್ರಚಾರಕ್ಕಾಗಿ ವಾಹನಗಳ ಬಳಕೆ ಇತ್ಯಾದಿಗಳಿಗೆ ಅನುಮತಿ ನೀಡುವ ಪ್ರಕ್ರಿಯೆಯನ್ನು ಆನ್‌ಲೈನ್‌ಗೊಳಿಸಲಾಗಿದ್ದು, ನ್ಯೂ ಸುವಿಧಾ ವೆಬ್ ಪೋರ್ಟಲ್‌ನಲ್ಲಿ ಅರ್ಜಿಯನ್ನು ಸಲ್ಲಿಸಬೇಕು. ನಿಗದಿತ ಅವಧಿಯೊಳಗಾಗಿ ಅನುಮತಿ ನೀಡಲಾಗುವುದು ಎಂದರು.
ವಾಹನಗಳ ಮೂಲಕ ಚುನಾವಣಾ ಪ್ರಚಾರಕ್ಕಾಗಿ ಅನುಮತಿಯನ್ನು ನೀಡಲಾಗುವುದು. ಬೆಳಗ್ಗೆ 6 ರಿಂದ ರಾತ್ರಿ 10ರವರೆಗೆ ಮೈಕ್ ಬಳಸಿ ಪ್ರಚಾರ ಕಾರ್ಯವನ್ನು ಮಾಡಬಹುದಾಗಿದೆ. ಆದರೆ ಚಲಿಸುತ್ತಿರುವ ವಾಹನದಲ್ಲಿ ಧ್ವನಿವರ್ಧಕ ಬಳಸಿ ಪ್ರಚಾರ ಮಾಡುವಂತಿಲ್ಲ ಎಂದರು.
ಅಭ್ಯರ್ಥಿಗಳು ಕನಿಷ್ಠ ಎರಡು ದಿನಗಳಿಗೊಮ್ಮೆಚುನಾವಣಾ ವೆಚ್ಚದ ಲೆಕ್ಕಾಚಾರವನ್ನು ನಿಗದಿತ ನಮೂನೆಯಲ್ಲಿ ಒದಗಿಸಬೇಕು. ಗರಿಷ್ಠ 70 ಲಕ್ಷ ರೂ. ಚುನಾವಣಾ ವೆಚ್ಚ ನಿಗದಿಪಡಿಸಲಾಗಿದೆ. ಮತದಾನದ ದಿನದಂದು ಪ್ರತಿ ಮತಗಟ್ಟೆಗಳಲ್ಲಿ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗುವುದು ಎಂದರು. ಅಪರ ಜಿಲ್ಲಾಧಿಕಾರಿ ಪೂರ್ಣಿಮಾ, ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Holehonnur: ಎರಡು ಪ್ರತ್ಯೇಕ ರಸ್ತೆ ಅಪಘಾತ
Shivamogga: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಓ ಈಶ್ವರಪ್ಪ
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Govt. Employees Association: ನನ್ನ ಸೋಲಿಸಲು ರಾಜಕೀಯ ಷಡ್ಯಂತ್ರ: ಸಿ.ಎಸ್.ಷಡಾಕ್ಷರಿ
Christmas: ಕರಾವಳಿಯಲ್ಲಿ ಸಡಗರ, ಸಂಭ್ರಮದ ಕ್ರಿಸ್ಮಸ್
Belthangady: ಸಂತ ಲಾರೆನ್ಸ್ ದೇವಾಲಯದಲ್ಲಿ ಕ್ರಿಸ್ಮಸ್ ಬಲಿಪೂಜೆ
Madikeri: ವಾಹನ ಅಪಘಾತಕ್ಕೀಡಾದ ವ್ಯಕ್ತಿ ಸಾವು
Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊಲೆ: ಡಿ. 28 ರಂದು ಕೋರ್ಟ್ ತೀರ್ಪು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.