ಚುನಾವಣಾ ಪೂರ್ವ rally 2ನೇ ದಿನಕ್ಕೆ : ಸೆನ್ಸೆಕ್ಸ್ 481 ಅಂಕ ಜಂಪ್
Team Udayavani, Mar 12, 2019, 11:40 AM IST
ಮುಂಬಯಿ : ವಿದೇಶಿ ಬಂಡವಾಳದ ಹೆಚ್ಚಿದ ಒಳಹರಿವು ಮತ್ತು ಜಾಗತಿಕ ಶೇರು ಮಾರುಕಟ್ಟೆಗಳಲ್ಲಿನ ಧನಾತ್ಮಕತೆಯೊಂದಿಗೆ ಚುನಾವಣಾ ಪೂರ್ವ ರಾಲಿ ಎರಡನೇ ದಿನವೂ ಮುಂದುವರಿದಿರುವ ಕಾರಣ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಇಂದು ಮಂಗಳವಾರದ ವಹಿವಾಟನ್ನು 481 ಅಂಕಗಳ ಭರ್ಜರಿ ಏರಿಕೆಯೊಂದಿಗೆ 37,535.66 ಅಂಕಗಳ ಮಟ್ಟವನ್ನು ತಲುಪಿತು.
ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 133.15 ಅಂಕಗಳ ಏರಿಕೆಯನ್ನು ದಾಖಲಿಸಿ 11,301.20 ಅಂಕಗಳ ಮಟ್ಟವನ್ನು ತಲುಪಿ ದಿನದ ವಹಿವಾಟನ್ನು ಬಲಿಷ್ಠವಾಗಿ ಕೊನೆಗೊಳಿಸಿತು.
ಇಂದಿನ ವಹಿವಾಟಿನಲ್ಲಿ ಭಾರ್ತಿ ಏರ್ ಟೆಲ್ ಶೇರು ಶೇ.4.61ರ ಏರಿಕೆಯನ್ನು ದಾಖಲಿಸಿದರೆ ಇದನ್ನು ಅನುಸರಿಸಿ ಐಸಿಐಸಿಐ ಬ್ಯಾಂಕ್, ಇಂಡಸ್ ಇಂಡ್ ಬ್ಯಾಂಕ್, ಲಾರ್ಸನ್, ಸನ್ ಫಾರ್ಮಾ, ಆರ್‌ಐಎಲ್, ಟಾಟಾ ಮೋಟರ್ ಮೊದಲಾದ ಮುಂಚೂಣಿ ಶೇರುಗಳು ಶೇ.3.69ರ ಏರಿಕೆಯನ್ನು ದಾಖಲಿಸಿದವು.
ಮುಂಬಯಿ ಶೇರು ಪೇಟೆಯಲ್ಲಿಂದು ಒಟ್ಟು 2,862 ಕಂಪೆನಿಗಳ ಶೇರುಗಳು ವಹಿವಾಟಿಗೆ ಒಳಪಟ್ಟವು; ಈ ಪೈಕಿ 1,653 ಶೇರುಗಳು ಮುನ್ನಡೆ ಸಾಧಿಸಿದವು; 1,067 ಶೇರುಗಳು ಹಿನ್ನಡೆಗೆ ಗುರಿಯಾದವು; 142 ಶೇರುಗಳ ಧಾರಣೆ ಯಾವುದೇ ಬದಲಾವಣೆ ಕಾಣಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
2024ರಲ್ಲಿ ಆಟೋ ಮೊಬೈಲ್ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ
Share Market: ಹೊಸ ವರ್ಷದ ಮೊದಲ ದಿನ 368 ಅಂಕ ಏರಿದ ಸೆನ್ಸೆಕ್ಸ್
New Year 2025: ಜಿಎಸ್ಟಿ, ಎಲ್ಪಿಜಿ, ಯುಪಿಐ..: ಜನವರಿ 1 ರಿಂದ ಇದೆಲ್ಲಾ ನಿಯಮ ಬದಲಾವಣೆ
GST on Sale: ಹಳೆ ಕಾರು ಮಾರಾಟ: ಲಾಭಕ್ಕೆ ಮಾತ್ರ ಜಿಎಸ್ಟಿ
IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್ ಬುಕ್ಕಿಂಗ್ ಸಮಸ್ಯೆ-ಪ್ರಯಾಣಿಕರ ಆಕ್ರೋಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.