ಶ್ರೀರಾಮ ಪ್ರೌಢಶಾಲೆ ಕಲ್ಲಡ್ಕ 10ನೇ ತರಗತಿಯ ದೀಪಪ್ರದಾನ ಕಾರ್ಯಕ್ರಮ

Team Udayavani, Mar 12, 2019, 12:52 PM IST

1103mum04.jpg

ಪುಣೆ: ಶ್ರೀ ರಾಮ ಪ್ರೌಢಶಾಲೆ ಕಲ್ಲಡ್ಕ 10ನೇ ತರಗತಿಯವರ ದೀಪ ಪ್ರದಾನ ಕಾರ್ಯಕ್ರಮವು ಮಾ.5ರಂದು ವೇದವ್ಯಾಸ ಧ್ಯಾನ ಮಂದಿರದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪುಣೆಯ ಬಂಟರ  ಸಂಘದ ಅಧ್ಯಕ್ಷರಾದ  ಸಂತೋಷ್‌ ಶೆಟ್ಟಿ ಇನ್ನಕುರ್ಕಿಲ್‌ಬೆಟ್ಟು ಉಪಸ್ಥಿತರಿದ್ದು, ಮಾತನಾಡಿ, ಜ್ಞಾನದ ಪರೀಕ್ಷೆಯಲ್ಲಿ ಜಯಶಾಲಿಯಾಗುವುದು ಮಾತ್ರ ಸಾಧನೆಯಲ್ಲ, ಜೀವನದ ಪರೀಕ್ಷೆಯಲ್ಲಿ ಯಶಸ್ಸು ಸಾಧಿಸುವುದು ನಿಜವಾದ ಸಾಧನೆ. ಶ್ರೀರಾಮ ವಿದ್ಯಾಕೇಂದ್ರದಲ್ಲಿ ಕಲಿತ ಮಕ್ಕಳು ತಮ್ಮ ಜೀವನದ ಯಾವುದೇ ಸಂದರ್ಭದಲ್ಲಿ ಬದುಕುವ ಸಾಮರ್ಥ್ಯವನ್ನು ಪಡೆದಿರುತ್ತಾರೆ ಎಂಬುದಕ್ಕೆ ಇಲ್ಲಿನ ಮಕ್ಕಳ ಕಾರ್ಯ

ಚಟುವಟಿಕೆ ಸಂಸ್ಕಾರಯುತ ನಡವಳಿಕೆಯಿಂದ ಅರಿವಾಗುತ್ತದೆ. ಇಂಗ್ಲಿಷ್‌ಮಯವಾದ ಆಧುನಿಕ ಕಾಲಘಟ್ಟದಲ್ಲಿ ಗ್ರಾಮೀಣ ಪ್ರದೇಶದಲ್ಲಿ ಕನ್ನಡ ಮಾಧ್ಯಮ ಶಾಲೆ ಅಗಾಧ ಸಂಖ್ಯೆಯಲ್ಲಿ ಸಂಸ್ಕಾರಯುತ ಶಿಕ್ಷಣ ನೀಡುತ್ತಾ ರಾಷ್ಟ್ರದಾದ್ಯಂತ ಹೆಸರು ಮಾಡಿರುವುದು ಅದ್ಭುತವಾದುದು. ಶಾಲಾ ಮಕ್ಕಳನ್ನು ಬೀಳ್ಕೊಡುವ ಕಾರ್ಯಕ್ರಮವನ್ನು ದೀಪಪ್ರದಾನ ಎಂಬ ನಾಮಾಂಕಿತದೊಂದಿಗೆ ಅರ್ಥಪೂರ್ಣವಾದ ಪರಿಕಲ್ಪನೆ ಅದ್ಭುತ ವಾದುದು ಎಂದರು.

ಹಿಂದೂ ಸ್ವಾರ್ಥಿಯಲ್ಲ ಇನ್ನೊಬ್ಬರ ಏಳಿಗೆಯಲ್ಲಿ ಬಯಸುವವನು, ಭಾರತ ಭೂಮಿಯ ಮಣ್ಣಿನಗುಣ ಭಾರತೀಯರಲ್ಲಿ ಸಂಸ್ಕಾರ, ಸಂಸ್ಕೃತಿ, ದೇಶಪ್ರೇಮ, ಆಂತರ್ಯದÇÉೆ ಅಡಗಿರಲು ಕಾರಣವಾಗಿದೆ. ತಾನು ಬೆಳಗಿದ ದೀಪವನ್ನು ಇನ್ನೊಬ್ಬರು ಬೆಳಗಿಸಿ ನಂದಾ ದೀಪವಾಗುವ ಸಂಕೇತವೇ ದೀಪಪ್ರದಾನ ಕಾರ್ಯಕ್ರಮ. ಈ ಉದ್ದೇಶ ಸಫಲವಾಗಬೇಕಾದರೆ ಈ ಸಂಸ್ಥೆಯಲ್ಲಿ ಕಲಿತ ವಿದ್ಯಾರ್ಥಿಗಳು ಭಾರತ ಕಂಡ ಮಹಾಪುರುಷರ ಸಾಲಿಗೆ ಸೇರಬೇಕು ಎಂದು ಪುತ್ತೂರು, ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ| ಪ್ರಭಾಕರ ಭಟ್‌ ಇವರು ವಿದ್ಯಾರ್ಥಿಗಳಿಗೆ ಶುಭಾಶೀರ್ವಾದ ನೀಡಿದರು.

ಶ್ರೀರಾಮ ವಿದ್ಯಾಕೇಂದ್ರದಲ್ಲಿ ಸಂಸ್ಕಾರಯುತ ಶಿಕ್ಷಣ ಕಲಿತ ವಿದ್ಯಾರ್ಥಿಗಳ ಮುಂದೆ 
ಮಹಾನ್‌ ವ್ಯಕ್ತಿಗಳಾವುದು ಸತ್ಯ ಎಂದು ದಾವಣಗೆರೆಯ ಹೋಟೆಲ್‌ ಮಾಲಕರ ಸಂಘದ ಅಧ್ಯಕ್ಷರಾದ ಪರಮೇಶ್ವರ್‌ ಅವರು  ಹರ್ಷ ವ್ಯಕ್ತಪಡಿಸಿದರು.
ಪ್ರೌಢ ವಯಸ್ಸಿನವರೆಗೆ ಕಲಿತ ಸಂಸ್ಕಾರಯುತ ಶಿಕ್ಷಣ, ಮೌಲ್ಯಗಳು ಗುರುವಂದನೆ 
ಮುಂದೊಂದು ದಿನ ಉತ್ತಮ ಮಟ್ಟಕ್ಕೆ ಕೊಂಡೊಯ್ಯುತ್ತದೆ. ಇಂತಹ ಶಿಕ್ಷಣ ಶ್ರೀರಾಮ ವಿದ್ಯಾಸಂಸ್ಥೆ ನೀಡುತ್ತದೆ. ಇಲ್ಲಿ ಕಲಿತ ವಿದ್ಯಾರ್ಥಿಗಳು ತಮ್ಮ ಪರಿಸರವನ್ನು ಬೆಳಗಬೇಕು ಎಂದು ಬಂಟ್ವಾಳ ರೋಟರಿ ಕ್ಲಬ್‌ ಉಪಾಧ್ಯಕ್ಷರಾದ  ಪಲ್ಲವಿ ಕಾರಂತ್‌ ಅವರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ 10ನೇ ತರಗತಿ ವಿದ್ಯಾರ್ಥಿಗಳು ಭಾರತಮಾತೆಗೆ ಅರ್ಚನೆಗೈದು ಹಿರಿಯರಿಂದ ತಿಲಕಧಾರಣೆ ಹಾಗೂ ಆಶೀರ್ವಾದ ಪಡೆದರು. 10ನೇ ತರಗತಿ ವಿದ್ಯಾರ್ಥಿ ಪ್ರಮುಖರು, 9ನೇ ತರಗತಿ ವಿದ್ಯಾರ್ಥಿಗಳಿಗೆ   ದೀಪ ಪ್ರದಾನಗೈದರು. ಕಾರ್ಯಕ್ರಮದಲ್ಲಿ ಸಹಶಿಕ್ಷಕಿಯಾದ ವಿಜಯ ಸ್ವಾಗತಿಸಿ, 10ನೇ ತರಗತಿಯ ಶಮಿತಾ, ಪ್ರದೀಪ್‌,  ವೈಷ್ಣವಿ, ಭವ್ಯ, ಅರ್ಚನಾ ಅವರು  ಅನಿಸಿಕೆ ವ್ಯಕ್ತಪಡಿಸಿದರು. 8ನೇ ತರಗತಿಯ ಪ್ರಕೃತಿ ಅವರಿಂದ ಹಾಡುಗಾರಿಕೆ ನಡೆಯಿತು. ಹಿರಿಯ ಶಿಕ್ಷಕಿ ಶಾಂಭವಿ ವಂದಿಸಿದರು. ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಸಹಶಿಕ್ಷಕರಾದ ಮನೋಜ್‌ ಅವರು ಅನುಗ್ರಹದ ಮಾತುಗಳನ್ನಾಡಿದರು. 9ನೇ ತರಗತಿಯ ಅನಘಾ ಕಾರ್ಯಕ್ರಮ ನಿರೂಪಿಸಿದಳು.

ಟಾಪ್ ನ್ಯೂಸ್

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

sensex

Sensex ಪತನ, ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ

train-track

Train ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.