ಕಾಳಾವರ ದೇವಸ್ಥಾನ ಜೀರ್ಣೋದ್ಧಾರ ಮುಂಬಯಿ ಸಮಿತಿ ಸಭೆ


Team Udayavani, Mar 12, 2019, 12:57 PM IST

1103mum01.jpg

ಮುಂಬಯಿ: ಕರ್ನಾಟಕದ ಕರಾವಳಿ ಪ್ರದೇಶ ದಕ್ಷಿಣ ಕನ್ನಡದ ತುಳು-ಕನ್ನಡಿಗರು ದೇವರ ಬಗ್ಗೆ ಅಪಾರ ಭಕ್ತಿ, ನಂಬಿಕೆ ಇಟ್ಟುಕೊಂಡವರು. ಹುಟ್ಟೂರಿನಲ್ಲಿರಲಿ ಅಥವಾ ಹೊರನಾಡ ಯಾವುದೇ ಮೂಲೆಯಲ್ಲಿ ವಾಸಿಸಲಿ, ಅವರು ತುಳುನಾಡ ಆಚಾರ, ವಿಚಾರ, ಸಂಸ್ಕೃತಿ, ಸಂಸ್ಕಾರಗಳನ್ನು ಎಂದಿಗೂ ಮರೆತವರಲ್ಲ. ಧಾರ್ಮಿಕ ಆಚಾರದ ಬಗ್ಗೆ ಅಪಾರ ಶ್ರದ್ಧೆಯನ್ನು ಇಟ್ಟುಕೊಂಡಿರುವ ನಮ್ಮವರು ದೇವಸ್ಥಾನ-ದೈವಸ್ಥಾನಗಳ ಜೀರ್ಣೋದ್ಧಾರಕ್ಕಾಗಿ ವ್ಯಯಿಸುವ ಹಣಕ್ಕೆ ಲೆಕ್ಕವಿಲ್ಲ. ಇದೆಲ್ಲವೂ ದೇವರ ಅನುಗ್ರಹದಿಂದ ಸಾಧ್ಯವಾಗಿದೆ. ಊರಲ್ಲಿರುವ ಯಾವುದೇ ದೇವಸ್ಥಾನ ಮತ್ತು ದೈವಸ್ಥಾದ ಜೀರ್ಣೋದ್ಧಾರ ಕಾರ್ಯದಲ್ಲಿ ಮುಂಬಯಿಗರ ಕೊಡುಗೆ ಅಪಾರವಾಗಿದೆ. ಹೊರನಾಡಿನಲ್ಲೂ ದೇವಸ್ಥಾನ, ದೈವಸ್ಥಾನಗಳನ್ನು ಕಟ್ಟಿರುವ ಅನೇಕ ನಿದರ್ಶನಗಳಿವೆ ಎಂದು ಬಂಟರ ಸಂಘ ಮುಂಬಯಿ ಅಧ್ಯಕ್ಷ ಪದ್ಮನಾಭ ಎಸ್‌. ಪಯ್ಯಡೆ ಇವರು ನುಡಿದರು.

ಮಾ. 9ರಂದು ಸಂಜೆ ವಾಶಿಯ ಹೊಟೇಲ್‌ ರಮಾಡ ಟೆರೇಸ್‌ ಗಾರ್ಡನ್‌ನಲ್ಲಿ ಜರಗಿದ ಕಾಳಾವರ ಶ್ರೀ ಮಹಾಲಿಂಗೇಶ್ವರ ಶ್ರೀ ಕಾಳಿಂಗ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಮುಂಬಯಿ ಇದರ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಶ್ರೀ ಕ್ಷೇತ್ರದ ಜೀರ್ಣೋದ್ಧಾರ ಕಾರ್ಯಕ್ಕೆ ತಾನು ಕೈಲಾದಷ್ಟು ಸಹಕಾರ ನೀಡುತ್ತೇನೆ. ಎಲ್ಲರೂ ದೊಡ್ಡ ಮನಸ್ಸಿನಿಂದ ಈ ಯೋಜನೆಗೆ ಕೈಜೋಡಿಸುವಂತೆ ವಿನಂತಿಸಿದರು.

ಮುಖ್ಯ ಅತಿಥಿಯಾಗಿ ಆಗಮಿಸಿದ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್‌ ಶೆಟ್ಟಿ ಅವರು ಮಾತನಾಡಿ, ದೇವಸ್ಥಾನದ ಜೀರ್ಣೋದ್ಧಾರವೆಂದರೆ ಗ್ರಾಮದ ಜೀರ್ಣೋದ್ಧಾರವಾಗಿದೆ. ಮುಂಬಯಿಯಲ್ಲಿ ರುವ ಗ್ರಾಮಸ್ಥರು ಮನಸ್ಸು ಮಾಡಿದರೆ ಈ ಯೋಜನೆ ನಿರ್ವಿಘ್ನವಾಗಿ ನಡೆಯಲು ಸಾಧ್ಯ.

ಊರಿನ ಋಣ ತೀರಿಸಲು ಪ್ರತಿಯೊಬ್ಬರಿಗೂ ಇದೊಂದು ಸುವರ್ಣಾವಕಾಶ ಎಂಬುದನ್ನು ಮರೆಯಬಾರದು. ನಮ್ಮಲ್ಲಿ ಆತ್ಮಸ್ಥೈರ್ಯ, ದೇವರಲ್ಲಿ ಬಲವಾದ ನಂಬಿಕೆ ಇದ್ದರೆ ಖಂಡಿತ ನಮ್ಮ ಬೇಡಿಕೆ ಈಡೇರಿದಂತೆ ಎಂದರು.

ದೇವಸ್ಥಾನ ಜೀರ್ಣೋದ್ಧಾರ ಸಮಿತಿ ಕಾಳಾವರ ಇದರ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ ಬೆಂಗಳೂರು ಇವರು ಮಾತನಾಡಿ, ದೇವಸ್ಥಾನದ ಜೀರ್ಣೋದ್ಧಾರಕ್ಕೆ ಆರ್ಥಿಕವಾಗಿ ಹಾಗೂ ಮನೋಸ್ಥೈರ್ಯ ನೀಡಿ ಬೆಂಬಲಿಸಿದ್ದೇನೆ. ಭಗವಂತನ ಪ್ರೇರಣೆಯಿಂದ ಇದೆಲ್ಲವೂ ಸುಲಭಸಾಧ್ಯವಾಗಲಿದೆ ಎಂಬ ಭರವಸೆ ನನ್ನಲ್ಲಿದೆ. ಮುಂಬಯಿ ನಗರದ ಉದ್ಯಮಿಗಳು, ದೇವಸ್ಥಾನ-ದೈವಸ್ಥಾನಗಳ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆ ಸಲ್ಲಿಸುತ್ತಾ ಬಂದಿದ್ದಾರೆ ಎಂದು ನುಡಿದು ಎಲ್ಲರ ಸಹಕಾರ ಬಯಸಿದರು.

ಜೀರ್ಣೋದ್ಧಾರ ಮುಂಬಯಿ ಸಮಿತಿಯ ಸಂಚಾಲಕ ಉಳೂ¤ರು ಮೋಹನ್‌ದಾಸ್‌ ಶೆಟ್ಟಿ ಅವರು ಮಾತನಾಡಿ, ದೇವರ ಸೇವೆ ಮಾಡಲು ಯೋಗಾನುಯೋಗ ಬೇಕು. ಸಮಿತಿಯಲ್ಲಿ ಉದ್ಯಮಿಗಳು, ಸಹೃದಯವಂತರು, ಗಣ್ಯ
ವ್ಯಕ್ತಿಗಳು ಅನೇಕರಿದ್ದಾರೆ. ಗ್ರಾಮಕ್ಕೆ ಸಂಬಂಧಿಸಿದ ಎಲ್ಲರೂ ಸಹಕರಿಸುವ ಜತೆಗೆ ದೇಣಿಗೆ ಸಂಗ್ರಹಿಸುವ ಕಾರ್ಯದಲ್ಲಿ ಸಮಿತಿಯೊಂದಿಗೆ ಸಹಕರಿಸುವಂತೆ ವಿನಂತಿಸಿದರು.

ಸುಬ್ರಹ್ಮಣ್ಯ ಶೆಟ್ಟಿ ಅವರು ದೇವಸ್ಥಾನದ ಹಿನ್ನೆಲೆಯನ್ನು ವಿವರಿಸಿ, ದಕ್ಷಿಣ ಕನ್ನಡದ ಜನರು ದೇವರು ಮತ್ತು ದೈವದ ಮೇಲಿಟ್ಟಿರುವ ಅಪಾರ ನಂಬಿಕೆ, ಭಕ್ತಿಯಿಂದ ಪ್ರತಿಯೊಂದು ದೇವಸ್ಥಾನ ಮತ್ತು ದೈವಸ್ಥಾನಗಳ ಅಭಿವೃದ್ಧಿಯಾಗುತ್ತಿದೆ. ಈ ಶುಭ ಕಾರ್ಯಕ್ಕೆ ಸಮಿತಿಯೊಂದಿಗೆ ಎಲ್ಲರೂ ಸಹಕರಿಸಬೇಕು ಎಂದರು.

ಕೃಷ್ಣದೇವ ಕಾರಂತ ಅವರು ಮಾತನಾಡಿ, ದೇವಸ್ಥಾನವು ಸುಮಾರು 800 ವರ್ಷಗಳಿಗೂ ಮೀರಿದ ಇತಿಹಾಸವನ್ನು ಹೊಂದಿದ್ದು, ಈ ಯೋಜನೆಗೆ ಸುಮಾರು ಮೂರೂವರೆ ಕೋ. ರೂ.ಗಳು ವ್ಯಯವಾಗಬಹುದೆಂದು ಅಂದಾಜಿಸ
ಲಾಗಿದೆ. ಈ ದೇವಸ್ಥಾನವು ಭಕ್ತರಲ್ಲಿ ಭಯ ಮತ್ತು ಭಕ್ತಿ ಹುಟ್ಟಿಸುವಂತಹ ವಿಶಿಷ್ಟ ಕ್ಷೇತ್ರವಾಗಿದೆ. ಶ್ರೀ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಂತೆ ಎರಡನೇ ಖ್ಯಾತಿ ಹೊತ್ತ ಕ್ಷೇತ್ರ ಇದಾಗಿದೆ ಎಂದರು.

ಆರಂಭದಲ್ಲಿ ಜಯಲಕ್ಷ್ಮೀ ಶೆಟ್ಟಿ ಪ್ರಾರ್ಥನೆ ಗೈದರು. ಅಧ್ಯಕ್ಷ ಪದ್ಮನಾಭ ಎಸ್‌. ಪಯ್ಯಡೆ, ಅತಿಥಿ ಐಕಳ ಹರೀಶ್‌ ಶೆಟ್ಟಿ ಅವರು ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಜೀರ್ಣೋದ್ಧಾರ ಸಮಿತಿಯ ಉಪಾಧ್ಯಕ್ಷ ಸಿಎ ಸಂಜೀವ ಶೆಟ್ಟಿ ಸ್ವಾಗತಿಸಿ ಯೋಜನೆಗೆ ಸರ್ವರ ಸಹಕಾರ ಕೋರಿದರು. ಆದ್ಯಪಾಡಿ ಬಾಲಕೃಷ್ಣ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು. ಸಮಿತಿಯ ಸಂಚಾಲಕ ಉಳೂ¤ರು ಮೋಹನ್‌ದಾಸ್‌ ಶೆಟ್ಟಿ ವಂದಿಸಿದರು.

ವೇದಿಕೆಯಲ್ಲಿ ಮುಂಬಯಿ ಸಮಿತಿಯ ಗೌರವಾಧ್ಯಕ್ಷ ಪ್ರಭಾಕರ ಎನ್‌. ಶೆಟ್ಟಿ, ಅಧ್ಯಕ್ಷ ದಿನಕರ ಎನ್‌. ಶೆಟ್ಟಿ, ಸಂಚಾಲಕ ಉಳೂ¤ರು ಮೋಹನ್‌ದಾಸ್‌ ಶೆಟ್ಟಿ, ಉಪಾಧ್ಯಕ್ಷರಾದ ಸಿಎ ಸಂಜೀವ ಶೆಟ್ಟಿ, ಸುರೇಶ್‌ ಶೆಟ್ಟಿ, ಗೌರವ ಪ್ರಧಾನ ಕಾರ್ಯದರ್ಶಿ ಗಣೇಶ್‌ ಶೆಟ್ಟಿ, ಗೌರವ ಕೋಶಾಧಿಕಾರಿ ಸಿಎ ರಮೇಶ್‌ ಶೆಟ್ಟಿ, ದೇವಸ್ಥಾನ ಸಮಿತಿ ಕಾಳಾವರ ಇದರ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ, ಮೊಕ್ತೇಸರ ರವಿರಾಜ್‌ ಶೆಟ್ಟಿ ಕಾಳಾವರ, ಕೃಷ್ಣದೇವ್‌ ಕಾರಂತ, ಸುಬ್ರಹ್ಮಣ್ಯ ಶೆಟ್ಟಿ, ಹರೀಶ್‌ ಎನ್‌. ಶೆಟ್ಟಿ, ಮುಂಬಯಿ ಕಾರ್ಯಕಾರಿ ಸಮಿತಿಯ ಸದಸ್ಯರಾದ ಜಯಪ್ರಕಾಶ್‌ ಶೆಟ್ಟಿ, ಸುರೇಶ್‌ ಶೆಟ್ಟಿ ಮರಾಠ, ಆದರ್ಶ್‌ ಶೆಟ್ಟಿ, ಅಶೋಕ್‌ ಶೆಟ್ಟಿ, ಜಗದೀಶ್‌ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು. 

ಚಿತ್ರ-ವರದಿ: ಪ್ರೇಮನಾಥ್‌ ಶೆಟ್ಟಿ ಮುಂಡ್ಕೂರು

ಟಾಪ್ ನ್ಯೂಸ್

1-world

2025 ರ ವರ್ಷ ಫಲ: ದ್ವಾದಶ ರಾಶಿಗಳ ಫ‌ಲಾಫ‌ಲ ಹೇಗಿದೆ ನೋಡಿ

KSRtc-1

New Way: ಸಾರಿಗೆ ನೌಕರರ ಸಮಸ್ಯೆ ಇತ್ಯರ್ಥಕ್ಕೆ “ತ್ರಿವಳಿ ಸೂತ್ರ’

High-Court

Criminal Case: 44 ವರ್ಷದ ಹಿಂದಿನ ಪ್ರಕರಣ ವಿಲೇವಾರಿಗೊಳಿಸಿದ ಹೈಕೋರ್ಟ್‌

Mangaluru: ಹೈನುಗಾರರಿಗೆ ಇಂದಿನಿಂದ ಪ್ರೋತ್ಸಾಹಧನ ಏರಿಕೆ

Mangaluru: ಹೈನುಗಾರರಿಗೆ ಇಂದಿನಿಂದ ಪ್ರೋತ್ಸಾಹಧನ ಏರಿಕೆ

12-udupi

Udupi: ಅಯ್ಯಪ್ಪ ಮಾಲಾಧಾರಿ ಭಕ್ತರಿಂದ ದಾಂಧಲೆ: ದೂರು

Priyank-Kharghe

ರಾಷ್ಟ್ರಮಟ್ಟದಲ್ಲೂ ಪ್ರತಿಭಟಿಸಲಿ, ಬಿಜೆಪಿಯವರೇ ಮೂಗು ಕೊಯ್ಯಿಸಿಕೊಳ್ತಾರೆ: ಪ್ರಿಯಾಂಕ್‌

Will Rohit retire after the Sydney Test?

Rohit Sharma; ಸಿಡ್ನಿ ಟೆಸ್ಟ್‌  ಬಳಿಕ ರೋಹಿತ್‌ ವಿದಾಯ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು

ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು

ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ

ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸರಣ ಘಟಕಕ್ಕೆ ಗ್ರಹಣ!

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-world

2025 ರ ವರ್ಷ ಫಲ: ದ್ವಾದಶ ರಾಶಿಗಳ ಫ‌ಲಾಫ‌ಲ ಹೇಗಿದೆ ನೋಡಿ

KSRtc-1

New Way: ಸಾರಿಗೆ ನೌಕರರ ಸಮಸ್ಯೆ ಇತ್ಯರ್ಥಕ್ಕೆ “ತ್ರಿವಳಿ ಸೂತ್ರ’

High-Court

Criminal Case: 44 ವರ್ಷದ ಹಿಂದಿನ ಪ್ರಕರಣ ವಿಲೇವಾರಿಗೊಳಿಸಿದ ಹೈಕೋರ್ಟ್‌

Mangaluru: ಹೈನುಗಾರರಿಗೆ ಇಂದಿನಿಂದ ಪ್ರೋತ್ಸಾಹಧನ ಏರಿಕೆ

Mangaluru: ಹೈನುಗಾರರಿಗೆ ಇಂದಿನಿಂದ ಪ್ರೋತ್ಸಾಹಧನ ಏರಿಕೆ

12-udupi

Udupi: ಅಯ್ಯಪ್ಪ ಮಾಲಾಧಾರಿ ಭಕ್ತರಿಂದ ದಾಂಧಲೆ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.