ಮಂಗನ ಕಾಯಿಲೆಗೆ ಬಲಿ
Team Udayavani, Mar 13, 2019, 1:00 AM IST
ಸಾಗರ: ಮಾರಣಾಂತಿಕ ಮಂಗನಕಾಯಿಲೆ ಮತ್ತೂಂದು ಬಲಿ ಪಡೆದಿದೆ. ತಾಲೂಕಿನ ಕಾರ್ಗಲ್ ಸಮೀಪದ ಯಡೇಹಳ್ಳಿ ಗ್ರಾಮದ ಮಂಜಯ್ಯ ದುರ್ಗಪ್ಪ ನಾಯಕ (58) ಶಂಕಿತ ಮಂಗನ ಕಾಯಿಲೆಯಿಂದ ಮಂಗಳವಾರ ಮಣಿಪಾಲದ ಕೆಎಂಸಿಯಲ್ಲಿ ಮೃತಪಟ್ಟಿದ್ದಾರೆ.
ಮಂಜಯ್ಯ ಕಳೆದ ಮೂರ್‍ನಾಲ್ಕು ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದು, ಸೋಮವಾರ ಸಾಗರ ಉಪ ವಿಭಾಗೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಅನಂತರ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಮೆಗ್ಗಾನ್ ಆಸ್ಪತ್ರೆ ವೈದ್ಯಾಧಿಕಾರಿಗಳ ಸೂಚನೆ ಮೇರೆಗೆ ಸೋಮವಾರ ರಾತ್ರಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮಂಜಯ್ಯ ಮಂಗಳವಾರ ಕೊನೆಯುಸಿರೆಳೆದಿದ್ದಾರೆ. ಮಂಜಯ್ಯ ಅವರ ರಕ್ತಪರೀಕ್ಷೆಯ ವರದಿ ಇನ್ನಷ್ಟೇ ಬರಬೇಕಿದೆ.
ಈ ನಡುವೆ ಅರಳಗೋಡು ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯ ಸಂತೋಷ್ ಕಸಗುಪ್ಪೆ ಮತ್ತು ಪ್ರಶಾಂತ ಮುಪ್ಪಾನೆ ಅವರನ್ನು ಕೆಎಫ್‌ಡಿ ಶಂಕೆ ಹಿನ್ನೆಲೆಯಲ್ಲಿ ಮಂಗಳವಾರ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.