ಧ್ವಜ ತೆರವು ವಿವಾದ: ಆಯೋಗಕ್ಕೆ ನೋಟಿಸ್
Team Udayavani, Mar 13, 2019, 6:46 AM IST
ಬೆಂಗಳೂರು: 2015ರಲ್ಲಿ ಬಿಬಿಎಂಪಿ ಚುನಾವಣೆ ವೇಳೆ ಮತದಾನದ ದಿನ ನಗರದ ಭಾರತೀಯ ಜನತಾ ಪಕ್ಷದ ಕಚೇರಿ ಮುಂದಿರುವ ಪಕ್ಷದ ಧ್ವಜ ಹಾಗೂ ಚಿಹ್ನೆ ತೆರವುಗೊಳಿಲು ನೋಟಿಸ್ ನೀಡಿದ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಹೈಕೋರ್ಟ್ ಮಂಗಳವಾರ ನೋಟಿಸ್ ಜಾರಿಗೊಳಿಸಿದೆ.
ಈ ಕುರಿತಂತೆ ಭಾರತೀಯ ಜನತಾಪಕ್ಷ ಸಲ್ಲಿಸಿದ್ದ ಮೇಲ್ಮನವಿಯು ನ್ಯಾ. ರವಿಮಳಿ ಮಠ ಹಾಗೂ ನ್ಯಾ. ಎಸ್.ಜಿ. ಪಂಡಿತ್ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಂದಿತ್ತು. ಕೆಲಕಾಲ ವಾದ ಆಲಿಸಿದ ನ್ಯಾಯಪೀಠ, ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಚುನಾವಣಾ ಆಯುಕ್ತರು ಹಾಗೂ ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದ ವಾರ್ಡ್ ಸಂಖ್ಯೆ 64, 65, 66 ಹಾಗೂ 76ರ ಚುನಾವಣಾಧಿಕಾರಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆ ಮುಂದೂಡಿತು.
ಪ್ರಕರಣವೇನು?: 2015ರಲ್ಲಿ ನಡೆದ ಬಿಬಿಎಂಪಿ ಚುನಾವಣೆಗೆ ಮಲ್ಲೇಶ್ವರ 11ನೇ ಅಡ್ಡರಸ್ತೆಯಲ್ಲಿರುವ ಬಿಜೆಪಿ ಕೇಂದ್ರ ಕಚೇರಿಯ ಎದುರಿನ ಕೋದಂಡರಾಮಪುರ ಸರ್ಕಾರಿ ಶಾಲೆಯಲ್ಲಿ ಮತಗಟ್ಟೆ ಸ್ಥಾಪಿಸಲಾಗಿತ್ತು. ಶಾಲೆಯು ಪಕ್ಷದ ಕಚೇರಿಯ 100 ಮೀಟರ್ ವ್ಯಾಪ್ತಿಯಲ್ಲಿ ಬರುವುದರಿಂದ ಮತಗಟ್ಟೆಯನ್ನು ಬೇರೆ ಕಡೆ ಸ್ಥಳಾಂತರಿಸಬೇಕು ಎಂದು ಬಿಜೆಪಿ ಕಾರ್ಯದರ್ಶಿ ಚುನಾವಣಾಧಿಕಾರಿಗೆ ಮನವಿ ಸಲ್ಲಿಸಿದ್ದರು.
ಆದರೆ, ಮನವಿ ಪರಿಗಣಿಸುವ ಬದಲು, ಪಕ್ಷದ ಕಚೇರಿಯ ಮುಂದಿರುವ ಧ್ವಜ ಮತ್ತು ಚಿನ್ಹೆಯನ್ನು ತೆರವುಗೊಳಿಸುವಂತೆ ಚುನಾವಣಾ ಆಯೋಗ 2015ರ ಆ.16ರಂದು ನೋಟಿಸ್ ಜಾರಿಗೊಳಿಸಿತ್ತು. ಇದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ವಜಾಗೊಳಿಸಿ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ ಆದೇಶ ನೀಡಿತ್ತು. ಈ ಆದೇಶ ಪ್ರಶ್ನಿಸಿ ಹೈಕೋರ್ಟ್ ವಿಭಾಗೀಯ ನ್ಯಾಯಪೀಠಕ್ಕೆ ಮೇಲ್ಮನವಿ ಸಲ್ಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Adalat: ಲೋಕ್ ಅದಾಲತ್ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
BSY: ಬಿಎಸ್ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್ಪಿಪಿ
IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kundapura ದೊಡ್ಡಾಸ್ಪತ್ರೆಗೆ ವೈದ್ಯರ ಕೊರತೆ
Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು
Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್ ಸಿಇಒ ಸುಂದರ್ ಪಿಚೈ
Arrest Warrant: ರಾಬಿನ್ ಉತ್ತಪ್ಪ ವಿರುದ್ದ ಬಂಧನ ವಾರೆಂಟ್; ಜೈಲು ಪಾಲಾಗ್ತಾರಾ ಕ್ರಿಕೆಟಿಗ
Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.