ಡಿನೋಟಿಫಿಕೇಷನ್: ನೋಟಿಸ್
Team Udayavani, Mar 13, 2019, 6:46 AM IST
ಬೆಂಗಳೂರು: “ಐಟಿ ಕಾರಿಡಾರ್’ಗೆ ಮಾರತ್ತಹಳ್ಳಿ ಬಳಿಯ ದೇವರಬೀಸನಹಳ್ಳಿಯಲ್ಲಿ ಕೆಐಎಡಿಬಿ ಸ್ವಾಧೀನಪಡಿಸಿಕೊಂಡಿದ್ದ ಜಮೀನು ಡಿನೋಟಿಫಿಕೇಷನ್ ಮಾಡಿರುವ ಆರೋಪ ಪ್ರಕರಣದ ಸಂಬಂಧ ತಮ್ಮ ವಿರುದ್ಧದ ಖಾಸಗಿ ದೂರು ಹಾಗೂ ಎಫ್ಐಆರ್ ರದ್ದುಗೊಳಿಸುವಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಲ್ಲಿಸಿದ ಅರ್ಜಿ ವಿಚಾರವಾಗಿ ಹೈಕೋರ್ಟ್ ಮಂಗಳವಾರ ಲೋಕಾಯುಕ್ತ ಪೊಲೀಸರಿಗೆ ನೋಟಿಸ್ ಜಾರಿಗೊಳಿಸಿದೆ.
ಅರ್ಜಿ ವಿಚಾರಣೆ ನಡೆಸಿದ ನ್ಯಾ. ಅರವಿಂದ ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ಅರ್ಜಿಗೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಹಾಗೂ ದೂರುದಾರ ವಾಸುದೇವ ರೆಡ್ಡಿಗೆ ನೋಟಿಸ್ ಜಾರಿಗೆ ಆದೇಶಿಸಿ ವಿಚಾರಣೆ ಮಾ. 20ಕ್ಕೆ ಮುಂದೂಡಿತು.
ಡಿ-ನೋಟಿಫಿಕೇಷನ್ ಆರೋಪಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ಲೋಕಾಯುಕ್ತದಲ್ಲಿ ದಾಖಲಾಗಿರುವ ಖಾಸಗಿ ದೂರು ರದ್ದುಗೊಳಿಸಬೇಕು ಹಾಗೂ ಅರ್ಜಿ ಇತ್ಯರ್ಥಗೊಳ್ಳುವವರೆಗೆ ಇದಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ವಿಶೇಷ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆಗೆ ತಡೆ ನೀಡಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.
ನಗರದ ವೈಟ್‌ಫೀಲ್ಡ್ ಮತ್ತು ಎಲೆಕ್ಟ್ರಾನಿಕ್ ಸಿಟಿಯ ಜಾಗವನ್ನು “ಐಟಿ ಕಾರಿಡಾರ್’ ಎಂದು ರಾಜ್ಯ ಸರ್ಕಾರ 2000-2001ರಲ್ಲಿ ಘೋಷಿಸಿತ್ತು. ಅದರಂತೆ ಮಾರತಹಳ್ಳಿ, ಬೆಳ್ಳಂದೂರು, ಸರ್ಜಾಪುರ, ದೇವರಬೀಸನಹಳ್ಳಿ, ಕಾಡುಬೀಸನಹಳ್ಳಿ, ಕರಿಯಮ್ಮನ ಅಗ್ರಹಾರ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿನ 434 ಎಕರೆ ಪ್ರದೇಶವನ್ನು ಸ್ವಾಧೀನಕ್ಕೆ ಕೆಐಎಡಿಬಿ ಅಧಿಸೂಚನೆ ಹೊರಡಿಸಿತ್ತು.
ಆದರೆ, ಬಿ.ಎಸ್.ಯಡಿಯೂರಪ್ಪ ಉಪ ಮುಖ್ಯಮಂತ್ರಿಯಾಗಿದ್ದ ವೇಳೆ ಕೆಐಎಡಿಬಿ ವಶಪಡಿಸಿಕೊಂಡಿದ್ದ ದೇವರಬೀಸನಹಳ್ಳಿಯ ಸರ್ವೇ ನಂ 49ರ 4.30 ಎಕರೆ, ಬೆಳ್ಳಂದೂರು ಗ್ರಾಮದ ಸರ್ವೇ ನಂ 46/1ರ 1.17 ಎಕರೆ, ಸರ್ವೇ ನಂ 18ರ 1.10 ಎಕರೆ, ಸರ್ವೇ ನಂ 10ರ 33 ಗುಂಟೆ ಜಾಗವನ್ನು ಡಿನೋಟಿಫಿಕೇಷನ್ ಮಾಡಿದ್ದಾರೆ ಎಂದು ಆರೋಪಿಸಿ ವಾಸುದೇವ ರೆಡ್ಡಿ ಎಂಬುವರು 2013ರ ಜುಲೈ 10ರಂದು ಯಡಿಯೂರಪ್ಪ ವಿರುದ್ಧ ಲೋಕಾಯುಕ್ತ ವಿಶೇಷ ನ್ಯಾಯಾಲಯಕ್ಕೆ ಖಾಸಗಿ ದೂರು ದಾಖಲಿಸಿದ್ದರು.
ಅದರಂತೆ ಪೊಲೀಸರು 2015ರ ಫೆ.21ರಂದು ಎಫ್ಐಆರ್ ದಾಖಲಿಸಿ, ಯಡಿಯೂರಪ್ಪ ಅವರನ್ನು ಎರಡನೇ ಆರೋಪಿಯನ್ನಾಗಿ ಮಾಡಲಾಗಿತ್ತು. ಖಾಸಗಿ ದೂರು ಹಾಗೂ ಎಫ್ಐಆರ್ ರದ್ದುಗೊಳಿಸುವಂತೆ ಕೋರಿ ಬಿಎಸ್‌ವೈ ಹೈಕೋರ್ಟ್ ಮೆಟ್ಟಿಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ
IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ
Mangaluru: ಅಂಬೇಡ್ಕರ್ – ಸಂವಿಧಾನ ಯಾರಿಗೂ ಟೂಲ್ ಆಗಬಾರದು: ಕೈ ವಿರುದ್ದ ಸಂತೋಷ್ ಟೀಕೆ
ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Lalbagh: ಇಂದಿನಿಂದ ಕರಾವಳಿ ಉತ್ಸವ ಸಂಭ್ರಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.