ಜಯದೇವ ಫ್ಲೈಓವರ್‌ ನೆಲಸಮ ಮುಂದೂಡಿಕೆ?

Team Udayavani, Mar 13, 2019, 6:46 AM IST

jayadeva.jpg

ಬೆಂಗಳೂರು: ಲೋಕಸಭಾ ಚುನಾವಣೆ ಘೋಷಣೆ ಬೆನ್ನಲ್ಲೇ ಜಯದೇವ ಫ್ಲೈಓವರ್‌ಗೆ ಮತ್ತೊಂದು ತಾತ್ಕಾಲಿಕ ಜೀವದಾನ ಸಿಕ್ಕಿದೆ. ಈ ಮೂಲಕ ಐಟಿ ಕಾರಿಡಾರ್‌ ಎಲೆಕ್ಟ್ರಾನಿಕ್‌ ಸಿಟಿಗೆ ಸಂಪರ್ಕ ಕಲ್ಪಿಸುವ ಮೆಟ್ರೋ ಮಾರ್ಗದ ಪ್ರಗತಿಗೆ ಮತ್ತಷ್ಟು ಹಿನ್ನಡೆ ಆಗಿದೆ.

ಆರ್‌.ವಿ. ರಸ್ತೆ-ಬೊಮ್ಮಸಂದ್ರ ನಡುವೆ ನಿರ್ಮಿಸಲು ಉದ್ದೇಶಿಸಿರುವ ಮೆಟ್ರೋ ಮಾರ್ಗಕ್ಕಾಗಿ ಜಯದೇವ ಹೃದ್ರೋಗ ಆಸ್ಪತ್ರೆ ಬಳಿ ಇರುವ ಫ್ಲೈಓವರ್‌ (ಮಾರೇನಹಳ್ಳಿ ಮೇಲ್ಸೆತುವೆ) ಒಡೆಯಲು ಈಗಾಗಲೇ ಉದ್ದೇಶಿಸಲಾಗಿದೆ. ಇದಕ್ಕೆ ಈ ಮೊದಲೇ ಸಂಚಾರ ಪೊಲೀಸರಿಂದ ಅನುಮತಿಯೂ ದೊರಕಿತ್ತು. ಆದರೆ, ಮುಹೂರ್ತ ನಿಗದಿ ಆಗಿರಲಿಲ್ಲ. ಇನ್ನೇನು ಕಾಮಗಾರಿ ಚುರುಕುಗೊಳ್ಳಬೇಕು ಎನ್ನುವಷ್ಟರಲ್ಲಿ ಲೋಕಸಭಾ ಚುನಾವಣೆ ಘೋಷಣೆ ಆಯಿತು.

ಕಾಮಗಾರಿಗೆ ಚುನಾವಣೆ ಯಾವುದೇ ಅಡ್ಡಿಯಾಗದು. ಆದರೆ, ಗಂಟೆಗೆ ಸಾವಿರಾರು ವಾಹನಗಳು ಓಡಾಡುವ ಫ್ಲೈಓವರ್‌ ನೆಲಸಮಕ್ಕೆ ಕೈಹಾಕಿದರೆ, ಸರ್ಕಾರವು ಸಾರ್ವಜನಿಕರ ಕೆಂಗಣ್ಣಿಗೆ ಗುರಿ ಆಗಬಹುದು. ಇದು ಚುನಾವಣೆ ಮೇಲೂ ಪರಿಣಾಮ ಬೀರಬಹುದು ಎಂಬ ಕಾರಣಕ್ಕೆ ಸದ್ಯಕ್ಕೆ ಈ “ಸಾಹಸ’ಕ್ಕೆ ಕೈಹಾಕದಿರಲು ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿ) ತೀರ್ಮಾನಿಸಿದೆ ಎಂದು ಮೂಲಗಳು ತಿಳಿಸಿವೆ. 

ವಿಧಾನಸಭಾ ಚುನಾವಣೆಯಲ್ಲೂ ಮುಂದೂಡಿತ್ತು: ಮೆಟ್ರೋ ಮಾರ್ಗಕ್ಕಾಗಿ ಜಯದೇವ ಫ್ಲೈಓವರ್‌ ಒಡೆಯುವ ಪ್ರಕ್ರಿಯೆ ಈ ಹಿಂದೆ ಕೂಡ ಮುಂದೂಡಲ್ಪಟ್ಟಿದೆ. 2018ರಲ್ಲಿ ನೆಲಸಮಗೊಳಿಸಬೇಕು ಎನ್ನುವಷ್ಟರಲ್ಲಿ ವಿಧಾನಸಭಾ ಚುನಾವಣೆ ಬಂತು. ಪರಿಣಾಮ ತಾತ್ಕಾಲಿಕ ಬ್ರೇಕ್‌ ಬಿದ್ದಿತು. ತದನಂತರದಲ್ಲಿ ಎರಡು ಬಾರಿ ಬಿಎಂಆರ್‌ಸಿ ವ್ಯವಸ್ಥಾಪಕ ನಿರ್ದೇಶಕರು ಬದಲಾದರು.

ಈ ನಡುವೆ ಟ್ರಿನಿಟಿ ವೃತ್ತದ ಮೆಟ್ರೋ ಮಾರ್ಗದಲ್ಲಿ ಬಿರುಕು ಕಾಣಿಸಿಕೊಂಡಿತು. ಈಗ ಲೋಕಸಭಾ ಚುನಾವಣೆ ಬಂದಿದ್ದರಿಂದ ಹೆಚ್ಚುಕಡಿಮೆ ಎರಡು ತಿಂಗಳು ಮುಂದೆ ಹೋಗಿದೆ. ಉಳಿದೆಲ್ಲ ಮಾರ್ಗಗಳಿಗಿಂತ ಉದ್ದೇಶಿತ ಮಾರ್ಗವು “ನಮ್ಮ ಮೆಟ್ರೋ’ ಪಾಲಿಗೆ ಅತ್ಯಂತ ಮಹತ್ವದ್ದಾಗಿದೆ. ಯಾಕೆಂದರೆ, ಇದು ಐಟಿ ಕಾರಿಡಾರ್‌ಗೆ ಸಂಪರ್ಕ ಕಲ್ಪಿಸುತ್ತದೆ.  ಜತೆಗೆ ಆರ್‌.ವಿ. ರಸ್ತೆ- ಬೊಮ್ಮಸಂದ್ರ ಹಾಗೂ ಗೊಟ್ಟಿಗೆರೆ-ನಾಗವಾರ ಕೂಡುವ ಸ್ಥಳ ಇದಾಗಿದ್ದು,

ಇಲ್ಲಿ ಮೆಜೆಸ್ಟಿಕ್‌ ಮಾದರಿಯ ಪ್ರಮುಖ ಇಂಟರ್‌ಚೇಂಜ್‌ ನಿಲ್ದಾಣ ಬರಲಿದೆ. ಆದ್ದರಿಂದ ಆದ್ಯತೆ ಮೇರೆಗೆ ನಿರ್ಮಿಸಬೇಕು ಎನ್ನುವುದು ಬಿಎಂಆರ್‌ಸಿ ಉದ್ದೇಶ. ಇದನ್ನು 2021ರ ಮಾರ್ಚ್‌ನಲ್ಲಿ ಪೂರ್ಣಗೊಳಿಸುವ ಗುರಿ ಹೊಂದಿದೆ. ಆದರೆ, ಪ್ರಸ್ತುತ ಸ್ಥಿತಿಯಲ್ಲಿ ನಿಗದಿತ ಗುರಿಯಲ್ಲಿ ಪೂರ್ಣಗೊಳಿಸುವುದು ಅನುಮಾನ ಎನ್ನುತ್ತಾರೆ ಹೆಸರು ಹೇಳಲಿಚ್ಛಿಸದ ನಿಗಮದ ಉನ್ನತ ಅಧಿಕಾರಿ. 

ಮೆಟ್ರೋ ಎರಡನೇ ಹಂತದಲ್ಲಿ ಬರುವ ಎರಡು ಪ್ರತ್ಯೇಕ ಹೊಸ ಮಾರ್ಗಗಳ ಪೈಕಿ  ಸುಮಾರು 18.82 ಕಿ.ಮೀ. ಉದ್ದದ ಆರ್‌.ವಿ. ರಸ್ತೆ- ಬೊಮ್ಮಸಂದ್ರ ಕೂಡ ಒಂದು. 5,744.09 ಕೋಟಿ ಅಂದಾಜು ಯೋಜನಾ ವೆಚ್ಚದಲ್ಲಿ ಇದನ್ನು ನಿರ್ಮಿಸಲು ಉದ್ದೇಶಿಸಿದ್ದು, ಸಿವಿಲ್‌ ಕಾಮಗಾರಿಯ ಯೋಜನಾ ವೆಚ್ಚ 797.29 ಕೋಟಿ ರೂ. ಆಗಿದೆ.

ಟೆಂಡರ್‌ ಪ್ರಕ್ರಿಯೆ ಪೂರ್ಣಗೊಂಡು ಹೆಚ್ಚು-ಕಡಿಮೆ ಎರಡು ವರ್ಷಗಳಾದವು. ಉಳಿದ ನಿಲ್ದಾಣಗಳನ್ನು ನಿರ್ಮಿಸಿದರೂ ಅವುಗಳ ನಡುವಿನ ಸಂಪರ್ಕ ಸೇತುವೆ ಇದೇ ಜಯದೇವ ಫ್ಲೈಓವರ್‌. ಸರ್ಕಾರದ ಪಾಲಿಗೆ ಸದ್ಯಕ್ಕೆ ಈ ಸೇತುವೆ “ಪಾರಂಪರಿಕ ಕಟ್ಟಡ’. ಆದರೆ, ಬಿಎಂಆರ್‌ಸಿ ಪಾಲಿಗೆ ಮಗ್ಗಲು ಮುಳ್ಳು!

ಏನೇನು ಬರುತ್ತೆ?: ಎತ್ತರಿಸಿದ (ಎಲಿವೇಟೆಡ್‌) ಚತುಷ್ಪಥ ರಸ್ತೆ ಮೂರನೇ ಹಂತದಲ್ಲಿ ನಿರ್ಮಾಣವಾಗಲಿದೆ. ಈ ಮೂರು ರಸ್ತೆಗಳ ಮೇಲ್ಭಾಗದಲ್ಲಿ ಒಂದರ ಮೇಲೆ ಒಂದರಂತೆ ಎರಡು ಪ್ರತ್ಯೇಕ ಮೆಟ್ರೋ ಮಾರ್ಗಗಳು (ಆರ್‌.ವಿ ರಸ್ತೆ ನಿಲ್ದಾಣ ಬೊಮ್ಮಸಂದ್ರ ಮಾರ್ಗ ಹಾಗೂ ಗೊಟ್ಟಿಗೆರೆನಾಗವಾರ ಮಾರ್ಗ) ಬರಲಿವೆ. ಈ ಎರಡೂ ಮಾರ್ಗಗಳನ್ನು ಒಳಗೊಂಡು ಮೆಟ್ರೋ ಇಂಟರ್‌ಚೇಂಜ್‌ ನಿಲ್ದಾಣ ನಿರ್ಮಾಣವಾಗಲಿದೆ. ಇದು ನಗರದ ಇತರ ಮೆಟ್ರೋ ನಿಲ್ದಾಣಗಳಿಗಿಂತ ಭಿನ್ನವಾಗಿರಲಿದೆ.

ಹಿನ್ನೆಲೆ ಏನು?: ಜಯದೇವ ಬಳಿಯ 8 ಕಿ.ಮೀ. ಮೆಟ್ರೋ ಮಾರ್ಗವು ಜಯದೇವ ಆಸ್ಪತ್ರೆ ಆವರಣದಲ್ಲಿ ತೆಗೆದುಕೊಂಡು ಹೋಗಲು ನಿರ್ಧರಿಸಲಾಗಿತ್ತು. ಇದಕ್ಕೆ ಆಸ್ಪತ್ರೆ ಆಕ್ಷೇಪ ವ್ಯಕ್ತಪಡಿಸಿತು. ಪರಿಣಾಮ ಆಸ್ಪತ್ರೆಯ ವಿರುದ್ಧ ದಿಕ್ಕಿನಲ್ಲಿರುವ ಸ್ಥಳಕ್ಕೆ ವರ್ಗಾವಣೆಗೊಂಡಿತ್ತು.

ಇದಕ್ಕೂ ವಾಣಿಜ್ಯ ಕಟ್ಟಡಗಳು ಹಾಗೂ ಹಿರಿಯ ನಾಗರಿಕರ ಮನೆಗಳು ಸೇರಿದಂತೆ ಸುಮಾರು 90ಕ್ಕೂ ಹೆಚ್ಚು ಮನೆಗಳು ನೆಲಸಮಗೊಳ್ಳುತ್ತಿದ್ದವು. ಈ ಬದಲಾವಣೆಯನ್ನು ಖಂಡಿಸಿ ಜಯದೇವ ಇಂಟರ್‌ಚೇಂಜ್‌ ಮೆಟ್ರೋ ಸಂತ್ರಸ್ತರ ವೇದಿಕೆ ವಿರೋಧ ವ್ಯಕ್ತಪಡಿಸಿತ್ತು. ಎತ್ತರಿಸಿದ ಮಾರ್ಗದಿಂದ ನಿವಾಸಿಗಳಿಗೆ ತೊಂದರೆಯಾಗಲಿದ್ದು, ಈ ಮಾರ್ಗವನ್ನು ಸುರಂಗ ಮಾರ್ಗದಲ್ಲಿ ಕೊಂಡೊಯ್ಯಬೇಕು ಎಂದೂ ವೇದಿಕೆ ಆಗ್ರಹಿಸಿತ್ತು. 

ಆದರೆ, ಸುರಂಗ ಮಾರ್ಗ ನಿರ್ಮಾಣ ವೆಚ್ಚ ದುಪ್ಪಟ್ಟು ಆಗಲಿದೆ. ಈ ಹಿನ್ನೆಲೆಯಲ್ಲಿ ಎರಡೂ ಮಾರ್ಗಗಳನ್ನು ಕೈಬಿಟ್ಟು, ರಸ್ತೆ ಮಧ್ಯದಿಂದ ಮಾರ್ಗ ನಿರ್ಮಾಣಕ್ಕೆ ನಿಗಮ ನಿರ್ಧರಿಸಿತು. ಈ ಕಾಮಗಾರಿಯನ್ನು ನಿಗಮವು 36 ತಿಂಗಳಲ್ಲಿ ಪೂರ್ಣಗೊಳಿಸುವ ಗುರಿ ಹೊಂದಿದೆ.

ಚುನಾವಣೆಗೂ ಫ್ಲೈಓವರ್‌ ಒಡೆಯುವ ಕಾರ್ಯಕ್ಕೂ ಸಂಬಂಧವಿಲ್ಲ. ಈ ಮೊದಲೇ ನಿಗದಿಯಾದಂತೆ ಆರ್‌.ವಿ. ರಸ್ತೆ- ಬೊಮ್ಮಸಂದ್ರ ನಡುವಿನ ಮಾರ್ಗದಲ್ಲಿ ಕಾಮಗಾರಿ ನಡೆಯುತ್ತಿದೆ. ತಾಂತ್ರಿಕ ಕಾರಣಗಳ ಹಿನ್ನೆಲೆಯಲ್ಲಿ ಜಯದೇವ ಫ್ಲೈಓವರ್‌ ನೆಲಸಮಗೊಳಿಸುವ ಕಾರ್ಯವನ್ನು ಎರಡು ತಿಂಗಳ ನಂತರ ಕೈಗೆತ್ತಿಕೊಳ್ಳಲಾಗುವುದು.
-ಅಜಯ್‌ ಸೇಠ್, ವ್ಯವಸ್ಥಾಪಕ ನಿರ್ದೇಶಕರು, ಬಿಎಂಆರ್‌ಸಿ 

ಟಾಪ್ ನ್ಯೂಸ್

ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!

ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!

Dhanashree Verma: ಯಶ್‌ ಸಿನಿಮಾಕ್ಕೆ ಕ್ರಿಕೆಟಿಗ ಚಹಾಲ್ ಪತ್ನಿ ಹೀರೋಯಿನ್

Dhanashree Verma: ಯಶ್‌ ಸಿನಿಮಾಕ್ಕೆ ಕ್ರಿಕೆಟಿಗ ಚಹಾಲ್ ಪತ್ನಿ ಹೀರೋಯಿನ್

Re-Release: ಈ ವರ್ಷ ರೀ ರಿಲೀಸ್‌ ಆದ ಬಾಲಿವುಡ್‌ ಸಿನಿಮಾಗಳ ಬಾಕ್ಸ್‌ ಆಫೀಸ್‌ ಗಳಿಕೆ ಎಷ್ಟು?

Re-Release: ಈ ವರ್ಷ ರೀ ರಿಲೀಸ್‌ ಆದ ಬಾಲಿವುಡ್‌ ಸಿನಿಮಾಗಳ ಬಾಕ್ಸ್‌ ಆಫೀಸ್‌ ಗಳಿಕೆ ಎಷ್ಟು?

Uttara Pradesh By poll: 30 ವರ್ಷದ ಬಳಿಕ ಮುಸ್ಲಿಂ ಬಾಹುಳ್ಯದ ಕ್ಷೇತ್ರದಲ್ಲಿ ಅರಳಿದ ಕಮಲ!

Uttara Pradesh By poll: 30 ವರ್ಷದ ಬಳಿಕ ಮುಸ್ಲಿಂ ಬಾಹುಳ್ಯದ ಕ್ಷೇತ್ರದಲ್ಲಿ ಅರಳಿದ ಕಮಲ!

IPL Mega Auction: 2008-2024.. Here is the list of the most expensive players in each auction

IPL Mega Auction: 2008-2024.. ಪ್ರತಿ ಹರಾಜಿನ ದುಬಾರಿ ಆಟಗಾರರ ಪಟ್ಟಿ ಇಲ್ಲಿದೆ

Eye Surgeries: ಪದವಿ ಪೂರ್ಣಗೊಳಿಸದೆ 44 ಕಣ್ಣಿನ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯ…

Eye Surgeries: ವೈದ್ಯಕೀಯ ಪದವಿ ಪೂರ್ಣಗೊಳಿಸದೇ 44 ಕಣ್ಣಿನ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯ

Perth test: ಜೈಸ್ವಾಲ್-ರಾಹುಲ್‌ ಅಜೇಯ ಆಟ; ಪರ್ತ್‌ ನಲ್ಲಿ ಭಾರತದ ಮೇಲಾಟ

Perth test: ಜೈಸ್ವಾಲ್-ರಾಹುಲ್‌ ಅಜೇಯ ಆಟ; ಪರ್ತ್‌ ನಲ್ಲಿ ಭಾರತದ ಮೇಲಾಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-bng

Bengaluru: ಠಾಣೆಯಲ್ಲಿ ಪೊಲೀಸ್‌ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್‌

9-bng

Bengaluru: ಹನಿಟ್ರ್ಯಾಪ್‌: ಪ್ರೊಫೆಸರ್‌ಗೆ 3 ಕೋಟಿ ಸುಲಿಗೆ; ಉಡುಪಿ, ಕಾರ್ಕಳ ಮೂಲದವರ ಬಂಧನ

6-bng

Bengaluru: ಬಸ್‌ಗಳಲ್ಲಿ ಮೊಬೈಲ್‌ ಕಳ್ಳತನ: ಇಬ್ಬರು ಆರೋಪಿಗಳ ಸೆರೆ‌, 60 ಫೋನ್‌ ಜಪ್ತಿ

5-bng

Bengaluru: ಕಾರು ಅತಿವೇಗವಾಗಿ ಬಂದು ಬೇರು ಕಾರುಗಳಿಗೆ ಡಿಕ್ಕಿ: ಸರಣಿ ಅಪಘಾತ

4-bng

Bengaluru: 3.25 ಕೋಟಿ ರೂ. ಗಾಂಜಾ ಜಪ್ತಿ: ಮೂವರ ಸೆರೆ

MUST WATCH

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

ಹೊಸ ಸೇರ್ಪಡೆ

ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!

ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!

Dhanashree Verma: ಯಶ್‌ ಸಿನಿಮಾಕ್ಕೆ ಕ್ರಿಕೆಟಿಗ ಚಹಾಲ್ ಪತ್ನಿ ಹೀರೋಯಿನ್

Dhanashree Verma: ಯಶ್‌ ಸಿನಿಮಾಕ್ಕೆ ಕ್ರಿಕೆಟಿಗ ಚಹಾಲ್ ಪತ್ನಿ ಹೀರೋಯಿನ್

Re-Release: ಈ ವರ್ಷ ರೀ ರಿಲೀಸ್‌ ಆದ ಬಾಲಿವುಡ್‌ ಸಿನಿಮಾಗಳ ಬಾಕ್ಸ್‌ ಆಫೀಸ್‌ ಗಳಿಕೆ ಎಷ್ಟು?

Re-Release: ಈ ವರ್ಷ ರೀ ರಿಲೀಸ್‌ ಆದ ಬಾಲಿವುಡ್‌ ಸಿನಿಮಾಗಳ ಬಾಕ್ಸ್‌ ಆಫೀಸ್‌ ಗಳಿಕೆ ಎಷ್ಟು?

Uttara Pradesh By poll: 30 ವರ್ಷದ ಬಳಿಕ ಮುಸ್ಲಿಂ ಬಾಹುಳ್ಯದ ಕ್ಷೇತ್ರದಲ್ಲಿ ಅರಳಿದ ಕಮಲ!

Uttara Pradesh By poll: 30 ವರ್ಷದ ಬಳಿಕ ಮುಸ್ಲಿಂ ಬಾಹುಳ್ಯದ ಕ್ಷೇತ್ರದಲ್ಲಿ ಅರಳಿದ ಕಮಲ!

IPL Mega Auction: 2008-2024.. Here is the list of the most expensive players in each auction

IPL Mega Auction: 2008-2024.. ಪ್ರತಿ ಹರಾಜಿನ ದುಬಾರಿ ಆಟಗಾರರ ಪಟ್ಟಿ ಇಲ್ಲಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.