ಮಂಡ್ಯ ಕ್ಷೇತ್ರ ಬಿಟ್ಟು ಬೇರೆಲ್ಲೂ ಸ್ಪರ್ಧಿಸಲ್ಲ: ಸುಮಲತಾ

Team Udayavani, Mar 13, 2019, 7:50 AM IST

mandya.jpg

ಶ್ರೀರಂಗಪಟ್ಟಣ: ಜಿಲ್ಲೆಯೆಲ್ಲೆಡೆ ನನಗೆ ಅದ್ದೂರಿ ಸ್ವಾಗತ ನೀಡಿ ಪ್ರೀತಿ, ವಾತ್ಸಲ್ಯದಿಂದ ಬರ ಮಾಡಿಕೊಳ್ಳುತ್ತಿರುವ ಜನರ ಮೇಲೆ ನನಗೆ ಅಪಾರ ನಂಬಿಕೆ ಇದೆ ಎಂದು ಸುಮಲತಾ ಅಂಬರೀಶ್‌ ಹೇಳಿದರು. 

ತಾಲೂಕಿನ ಕೋಡಿಶೆಟ್ಟಿಪುರ ಗ್ರಾಮದಲ್ಲಿ ನಡೆದ ಮಾರಮ್ಮ ದೇವಿ ವಿಗ್ರಹ ಹಾಗೂ ನವಗ್ರಹ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಮಂಡ್ಯ ಲೋಕಸಭೆ ಚುನಾವಣೆ ಸಂಬಂಧ ಜನಾಭಿಪ್ರಾಯ ಸಂಗ್ರಹ ಮಾಡಲಾಗಿದೆ. ಅಂಬರೀಶ್‌ ಅಭಿಮಾನಿಗಳು, ಕಾಂಗ್ರೆಸ್‌ ಕಾರ್ಯಕರ್ತರು, ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ವಾರದಿಂದ ಪ್ರವಾಸ ಕೈಗೊಂಡಿದ್ದೇನೆ. ಎಲ್ಲೆಡೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ನೇರವಾಗಿ ಜನರನ್ನು ಭೇಟಿ ಮಾಡಿದ್ದೇನೆ. ಕಾಂಗ್ರೆಸ್‌ ಮತ್ತು ಇತರ ರಾಜಕೀಯ ಮುಖಂಡರು ಈ ಹಿಂದೆ ಅಂಬರೀಶ್‌ ಅವರನ್ನು ಹೇಗೆ ಕಾಣುತ್ತಿದ್ದರೋ ಹಾಗೆಯೇ ನನ್ನ ಮೇಲೆಯೂ ಪ್ರೀತಿ, ವಿಶ್ವಾಸ ತೋರಿ ಸಹಕಾರ ನೀಡುತ್ತಿದ್ದಾರೆ. ಇದರಿಂದ ನನಗೆ ಸಂತೋಷದ ಜೊತೆಗೆ ಆಶಾಕಿರಣ ಸಿಕ್ಕಿದಂತಾಗಿದೆ ಹೇಳಿದರು. 

ಯಾರ ಒತ್ತಡಕ್ಕೂ ಮಣಿಯಲ್ಲ: ಈಗಾಗಲೇ ಜಿಲ್ಲೆಯಲ್ಲಿ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿಯೂ ಪ್ರವಾಸ ಕೈಗೊಂಡಿದ್ದೇನೆ. ಕಾಂಗ್ರೆಸ್‌ ಪಕ್ಷದ ಮುಖಂಡರಿಗೆ  ಪಕ್ಷದ ವರಿಷ್ಠರು ಏನು ಹೇಳಿದ್ದಾರೋ  ಅದು ನನಗೆ ಗೊತ್ತಿಲ್ಲ. ಆದರೆ ಅಂಬರೀಶ್‌ ಅವರೊಂದಿಗೆ ಇದ್ದ ಕಾಂಗ್ರೆಸ್‌ ಮುಖಂಡರೆಲ್ಲರೂ ನನ್ನ ಜೊತೆ ಈಗಲೂ ಇದ್ದಾರೆ. ಇದರಿಂದ ಬೇರೆ ಅರ್ಥ ಕಲ್ಪಿಸುವ ಅಗತ್ಯವಿಲ್ಲ.

ಎಲ್ಲರ ಸಹಕಾರದಿಂದ ಈ ಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡುವ ಅವಕಾಶ ನೀಡಿ ಅವರೆಲ್ಲರೂ ನನಗೆ ಆಶೀರ್ವಾದ ಮಾಡಲಿದ್ದಾರೆ ಎಂಬ ನಂಬಿಕೆ ಇದೆ ಎಂದು ಸ್ಪಷ್ಟಪಡಿಸಿದರು. ಈ ವೇಳೆ ಮಾಜಿ ಶಾಸಕ ರಮೇಶ ಬಂಡಿಸಿದ್ದೇಗೌಡ, ಅಂಬರೀಶ್‌ ಆಪ್ತ ಲಿಂಗರಾಜು, ಮನ್ಮುಲ್‌ ನಿರ್ದೇಶಕ ಬೋರೇಗೌಡ, ಬೇಲೂರು ಸೋಮಶೇಖರ್‌, ಮಧು ಇತರರು ಉಪಸ್ಥಿತರಿದ್ದರು.

ಮಂಡ್ಯ ಜನರ ಭರವಸೆ ಮೇಲೆ ನಾನು ಮುಂದಿನ ನಿರ್ಧಾರ ಕೈಗೊಳ್ಳುತ್ತೇನೆ. ಮಂಡ್ಯ ಬಿಟ್ಟು ಬೇರೆಲ್ಲೂ ಸ್ಪರ್ಧೆ ಮಾಡಲ್ಲ. ಮಂಡ್ಯ ಜನರ ಧ್ವನಿಯಾಗಿ ಸಂಸತ್‌ನಲ್ಲಿ ಉತ್ತಮ ಕೆಲಸ ನಿರ್ವಹಿಸಿ ತೋರಿಸುತ್ತೇನೆ.
-ಸುಮಲತಾ ಅಂಬರೀಶ್‌

ಟಾಪ್ ನ್ಯೂಸ್

Punjalkatte ಸರಪಾಡಿ: ತೆಂಗಿನಮರದಿಂದ ಬಿದ್ದ ವ್ಯಕ್ತಿ ಸಾವು

Punjalkatte ಸರಪಾಡಿ: ತೆಂಗಿನಮರದಿಂದ ಬಿದ್ದ ವ್ಯಕ್ತಿ ಸಾವು

Hebri: ಕಬ್ಬಿನಾಲೆ: ಮರದಿಂದ ಬಿದ್ದು ಕೃಷಿಕ ಸಾವು

Hebri: ಕಬ್ಬಿನಾಲೆ: ಮರದಿಂದ ಬಿದ್ದು ಕೃಷಿಕ ಸಾವು

Mulki: ಮತ್ತೆ ಚಿರತೆ ಪ್ರತ್ಯಕ್ಷ, ಹೆಚ್ಚಿದ ಭೀತಿ

Mulki: ಮತ್ತೆ ಚಿರತೆ ಪ್ರತ್ಯಕ್ಷ, ಹೆಚ್ಚಿದ ಭೀತಿ

Road Mishap: ಲಾರಿ ಹರಿದು ಇಬ್ಬರು ಮಕ್ಕಳು ಸೇರಿ ಐವರು ಮೃತ್ಯು

Road Mishap: ಲಾರಿ ಹರಿದು ಇಬ್ಬರು ಮಕ್ಕಳು ಸೇರಿ ಐವರು ಮೃತ್ಯು

Kabaka: ಮನೆಯಿಂದ ಮಾದಕ ವಸ್ತು ವಶ?

Kabaka: ಮನೆಯಿಂದ ಮಾದಕ ವಸ್ತು ವಶ?

Mulki: ರೈಲು ಪ್ರಯಾಣಿಕನ ಹಂತಕ ಅಂತಾರಾಜ್ಯ ಕುಖ್ಯಾತ ಪಾತಕಿMulki: ರೈಲು ಪ್ರಯಾಣಿಕನ ಹಂತಕ ಅಂತಾರಾಜ್ಯ ಕುಖ್ಯಾತ ಪಾತಕಿ

Mulki: ರೈಲು ಪ್ರಯಾಣಿಕನ ಹಂತಕ ಅಂತಾರಾಜ್ಯ ಕುಖ್ಯಾತ ಪಾತಕಿ

Sri Kukke Subrahmanya Temple: ಚಂಪಾಷಷ್ಠಿ ಮಹೋತ್ಸವ ಆರಂಭ

Sri Kukke Subrahmanya Temple: ಚಂಪಾಷಷ್ಠಿ ಮಹೋತ್ಸವ ಆರಂಭ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya: ಕದ್ದ ಚಿನ್ನ ಮನೆ ಮುಂದೆ ಇಟ್ಟು ಹೋದ ಕಳ್ಳರು!

Mandya: ಕದ್ದ ಚಿನ್ನ ಮನೆ ಮುಂದೆ ಇಟ್ಟು ಹೋದ ಕಳ್ಳರು!

ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ

ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ

Cheluvaraya-swamy

By Election: ಮಗನ ಚುನಾವಣೆಗಾಗಿ ಎಚ್‌ಡಿಕೆ ಸಾವಿರಾರು ಕೋಟಿ ಸಂಗ್ರಹ: ಚಲುವರಾಯಸ್ವಾಮಿ

Mandya-Temple

Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!

Sumalatha

Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Udupi: ಜಿಲ್ಲಾ ಪೊಲೀಸ್‌ ವಾರ್ಷಿಕ ಕ್ರೀಡಾಕೂಟ ಸಮಾರೋಪ

Udupi: ಜಿಲ್ಲಾ ಪೊಲೀಸ್‌ ವಾರ್ಷಿಕ ಕ್ರೀಡಾಕೂಟ ಸಮಾರೋಪ

Punjalkatte ಸರಪಾಡಿ: ತೆಂಗಿನಮರದಿಂದ ಬಿದ್ದ ವ್ಯಕ್ತಿ ಸಾವು

Punjalkatte ಸರಪಾಡಿ: ತೆಂಗಿನಮರದಿಂದ ಬಿದ್ದ ವ್ಯಕ್ತಿ ಸಾವು

Hebri: ಕಬ್ಬಿನಾಲೆ: ಮರದಿಂದ ಬಿದ್ದು ಕೃಷಿಕ ಸಾವು

Hebri: ಕಬ್ಬಿನಾಲೆ: ಮರದಿಂದ ಬಿದ್ದು ಕೃಷಿಕ ಸಾವು

Mulki: ಮತ್ತೆ ಚಿರತೆ ಪ್ರತ್ಯಕ್ಷ, ಹೆಚ್ಚಿದ ಭೀತಿ

Mulki: ಮತ್ತೆ ಚಿರತೆ ಪ್ರತ್ಯಕ್ಷ, ಹೆಚ್ಚಿದ ಭೀತಿ

Sullia: ತಾಲೂಕು ಕಚೇರಿಯಲ್ಲಿ ವೃದ್ಧ ಸಾವು

Sullia: ತಾಲೂಕು ಕಚೇರಿಯಲ್ಲಿ ವೃದ್ಧ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.