ಕೋಡಿಮಠ ಸ್ವಾಮೀಜಿ ವಿರುದ್ಧ ಕ್ರಮಕ್ಕೆ ಆಗ್ರಹ
Team Udayavani, Mar 14, 2019, 1:23 AM IST
ಶಿವಮೊಗ್ಗ: ಕೋಡಿಮಠದ ಸ್ವಾಮೀಜಿಯವರಿಂದ ಲೋಕಸಭೆ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆಯಾಗಿದ್ದು ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಕಾಂಗ್ರೆಸ್ ನ ಸ್ಥಳೀಯ ಸಮಿತಿಯಿಂದ ಬುಧವಾರ ಜಿಲ್ಲಾ ಚುನಾವಣಾಧಿಕಾರಿಗೆ ದೂರು ಸಲ್ಲಿಸಲಾಗಿದೆ.
ಮಾ.11ರಂದು ಕೋಡಿಮಠದ ಶಿವಾನಂದ ಶಿವಯೋಗಿಗಳುರಾಯಚೂರಿನಲ್ಲಿ “ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ನರೇಂದ್ರ ಮೋದಿಯವರೇ ಪ್ರಧಾನಿಯಾಗಿ ಮುಂದುವರಿಯಲಿದ್ದಾರೆ’ ಎಂದು ಭವಿಷ್ಯ ನುಡಿದಿದ್ದಾರೆ.
ಆದರೆ ಮಾ.10 ರಂದು ಕೇಂದ್ರ ಚುನಾವಣಾ ಆಯೋಗ ಲೋಕಸಭೆಗೆ ಚುನಾವಣೆ ದಿನಾಂಕ ಘೋಷಿಸಿದೆ.ಹೀಗಾಗಿ ಇದು ನೀತಿ ಸಂಹಿತೆ ಉಲ್ಲಂಘನೆಯಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಚುನಾವಣೆ ದಿನ ಘೋಷಣೆಯಾದ ಬಳಿಕ ಯಾವುದೇ ವ್ಯಕ್ತಿ ಪರವಾಗಿ ಯಾರೂ ಪ್ರೇರೇಪಿತವಾದಂತಹ ಹೇಳಿಕೆ ನೀಡಿದರೆ ಅದು ನೀತಿ ಸಂಹಿತೆ ಅಡಿ ಬರಲಿದೆ ಎಂದು ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ. ಸ್ವಾಮೀಜಿ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ. ಒಬ್ಬ ವ್ಯಕ್ತಿಯ ಪರ ಈ ರೀತಿ ಹೇಳಿಕೆ ನೀಡಿರುವುದು ಅಕ್ಷಮ್ಯ ಅಪರಾಧ. ಸಾರ್ವಜನಿಕರ ಮನಸ್ಸಿನ ಮೇಲೆ ಇದು ತೀವ್ರ ಪರಿಣಾಮ ಬೀರಲಿದೆ. ಈ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಲಾಗಿದೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.