ಸೀಟು ಹಂಚಿಕೆಯಾದ್ರೂ  ಗೆಲುವು ಕಷ್ಟ


Team Udayavani, Mar 14, 2019, 1:29 AM IST

congress-jds.jpg

ಬೆಂಗಳೂರು: ಜೆಡಿಎಸ್‌ ಹಾಗೂ ಕಾಂಗ್ರೆಸ್‌ ನಡುವೆ ಅಂತೂ ಇಂತೂ ಸೀಟು ಹಂಚಿಕೆ ಬಿಕ್ಕಟ್ಟು ಬಗೆಹರಿದಿದೆಯಾದರೂ ಎಂಟು ಕ್ಷೇತ್ರ ಪಡೆದಿರುವ ಜೆಡಿಎಸ್‌ ಗೆಲುವು ಸುಲಭವಲ್ಲ.

ಮೈಸೂರು-ಕೊಡಗು ಕ್ಷೇತ್ರ ಪಡೆಯುವಲ್ಲಿ ಯಶಸ್ವಿಯಾಗದೆ ತುಮಕೂರು ಕ್ಷೇತ್ರಕ್ಕೆ ತೃಪ್ತಿ ಪಡುವಂತಾಗಿ ಮಾಜಿ ಪ್ರಧಾನಿ ಎಚ್‌ .ಡಿ.ದೇವೇಗೌಡರು ಸೋತು ಗೆದ್ದಿದ್ದರೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೊನೆಗೂ ಮೇಲುಗೈ ಸಾಧಿಸಿದ್ದಾರೆ. ಕಾಂಗ್ರೆಸ್‌ಗೆ ಸಮರ್ಥ ಅಭ್ಯರ್ಥಿಗಳು ಇಲ್ಲದ ಉಡುಪಿ-ಚಿಕ್ಕಮಗಳೂರು, ಉತ್ತರ ಕನ್ನಡ, ವಿಜಯಪುರ ಕ್ಷೇತ್ರಗಳು ಜೆಡಿಎಸ್‌ಗೆ ಬಂದಿರುವುದರಿಂದ ಕಠಿಣ ಸವಾಲು ಎದುರಾಗಿದೆ. ಸಿದ್ದರಾಮಯ್ಯ ಅವರ ಕಾರ್ಯತಂತ್ರದಿಂದ ಮೈಸೂರು -ಕೊಡಗು ಕ್ಷೇತ್ರ ಪಡೆಯಲು ಸಾಧ್ಯವಾಗದ ಬಗ್ಗೆ ಜೆಡಿಎಸ್‌ ಆಂತರಿಕ ವಲಯದಲ್ಲಿ ತೀವ್ರ ಆಕ್ರೋಶವೂ ಇದ್ದು, ಅದು ಮುಂದಿನ ದಿನಗಳಲ್ಲಿ ಯಾವ ಸ್ವರೂಪ ಪಡೆಯಲಿದೆ ಎಂಬುದು ಕುತೂಹಲ ಮೂಡಿಸಿದೆ. ಜೆಡಿಎಸ್‌ಗೆ ಬಿಟ್ಟುಕೊಟ್ಟಿರುವ ಮಂಡ್ಯದಲ್ಲಿ ಕಾಂಗ್ರೆಸ್‌ ಟಿಕೆಟ್‌ ನಿರೀಕ್ಷೆಯಲ್ಲಿರುವ ಸುಮಲತಾ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಸಾಧ್ಯತೆಯಿದೆ. ಅದೇ ರೀತಿ ಹಾಸನದಲ್ಲಿ ಎ.ಮಂಜು ಬಿಜೆಪಿ ಸೇರುವ ಸಾಧ್ಯತೆ ಹೆಚ್ಚಾಗಿದೆ. ಅಲ್ಲಿನ ಮೂಲ ಕಾಂಗ್ರೆಸ್ಸಿಗರ ಬೆಂಬಲವೂ ಅವರಿಗೆ ಸಿಗಬಹುದು.

ಇನ್ನು ತುಮಕೂರು ಜೆಡಿಎಸ್‌ಗೆ ಬಿಟ್ಟುಕೊಟ್ಟಿರುವುದರಿಂದ ಕಾಂಗ್ರೆಸ್‌ನ ಮಾಜಿ ಶಾಸಕ ಕೆ.ಎನ್‌.ರಾಜಣ್ಣ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಸಂಭವವಿದೆ. ಹೀಗಾಗಿ, ಆ ಮೂರು ಕ್ಷೇತ್ರಗಳಲ್ಲೂ ಜೆಡಿಎಸ್‌ ಕಾಂಗ್ರೆಸ್‌ನಿಂದ ಪೂರ್ಣ ಪ್ರಮಾಣದ ಸಹಕಾರ ನಿರೀಕ್ಷೆ ಸಾಧ್ಯವಿಲ್ಲ. ಶಿವಮೊಗ್ಗದಲ್ಲೂ ಅದೇ ಪರಿಸ್ಥಿತಿಯಿದೆ. ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಒಕ್ಕಲಿಗ ಸಮುದಾಯದವರು ಹೆಚ್ಚಾಗಿರುವುದರಿಂದ ಜೆಡಿಎಸ್‌ಗೆ ಗೆಲ್ಲುವ ಅವಕಾಶವಿದೆ. ಆದರೆ, ಕಾಂಗ್ರೆಸ್‌ನ ಐದು ಶಾಸಕರಿದ್ದು ಅವರು ಎಷ್ಟರ ಮಟ್ಟಿಗೆ ಮುಕ್ತ ಮನಸ್ಸಿನಿಂದ ಕೆಲಸ ಮಾಡಲಿದ್ದಾರೆಂಬ ಪ್ರಶ್ನೆಯೂ ಇದೆ. ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಜೆಡಿಎಸ್‌ 2014 ಹಾಗೂ 2009ರ ಚುನಾವಣೆಯಲ್ಲಿ ಸ್ಪರ್ಧೆ ಮಾಡಿಹೇಳಿಕೊಳ್ಳುವಂತ ಮತ ಪಡೆದಿಲ್ಲ. ವಿಜಯಪುರ, ಉಡುಪಿ-ಚಿಕ್ಕಮಗಳೂರು, ಉತ್ತರ ಕನ್ನಡದ ಸ್ಥಿತಿಯೂ ಅದೇ ಆಗಿದೆ. ಇದೆಲ್ಲದರ ನಡುವೆಯೂ ಜೆಡಿಎಸ್‌ ಮಂಡ್ಯ, ಹಾಸನ, ತುಮಕೂರು, ಬೆಂಗಳೂರು ಉತ್ತರ, ವಿಜಯಪುರ, ಶಿವಮೊಗ್ಗ ಕ್ಷೇತ್ರಗಳಲ್ಲಿ ಗೆಲ್ಲುವ ಭರವಸೆ ಹೊಂದಿದೆ.

ಹನ್ನೆರಡರಿಂದ ಎಂಟು: ಮೊದಲಿಗೆ 12 ಕ್ಷೇತ್ರ ಬೇಕೆಂದು ಬೇಡಿಕೆ ಇಟ್ಟ ಜೆಡಿಎಸ್‌ ನಂತರ 10 ಸಾಕು ಎಂದು ಹೇಳಿತು. ನಂತರ 8 ಆದರೂ ಓಕೆ, ಬೆಂಗಳೂರು ಉತ್ತರ, ಮೈಸೂರು ಜತೆಗೆ ಕಾಂಗ್ರೆಸ್‌ ಗೆದ್ದಿರುವ ತುಮಕೂರು, ಚಿಕ್ಕಬಳ್ಳಾಪುರ ನಮಗೆ ಇರಲಿ ಎಂಬ ಬೇಡಿಕೆ ಇಟ್ಟಿತು. ಅಲ್ಲಿಂದಾಚೆಗೆ ಎರಡೂ ಪಕ್ಷಗಳಲ್ಲಿ ಹಗ್ಗ ಜಗ್ಗಾಟ ಪ್ರಾರಂಭವಾಗಿ ಆರೇ ಕ್ಷೇತ್ರ ಕೊಟ್ಟರೂ ಮೈಸೂರು ಬೇಕೇ ಬೇಕು ಎಂಬ ಹಂತಕ್ಕೆ ಬಂದು ನಿಂತಿತು. ಸಿದ್ದರಾಮಯ್ಯ ಅವರು ಮೈಸೂರು ಬಿಟ್ಟುಕೊಡಲು ಒಪ್ಪದೆ ಫ್ರೆಂಡ್ಲಿ ಫೈಟ್‌ ಆದರೂ ಸೈ ಎಂಬ ನಿಲುವಿಗೆ ಬಂದಿದ್ದರಿಂದ ಅಂತಿಮವಾಗಿ 20:8 ಕ್ಕೆ ಒಪ್ಪುವಂತಾಗಿದೆ.

ಮೂಡದ ಒಮ್ಮತ: ಕ್ಷೇತ್ರ ಹಂಚಿಕೆಯಲ್ಲಿ ಜೆಡಿಎಸ್‌ ಗೆ ಸಮಾಧಾನವೇನೂ ಇದ್ದಂತಿಲ್ಲ. ಹೀಗಾಗಿ, ರಾಜ್ಯದಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಸಮ್ಮಿಶ್ರ ಸರ್ಕಾರ ರಚನೆಯಾದಾಗಿನಿಂದಲೂ ಎರಡೂ ಪಕ್ಷಗಳಲ್ಲಿ ಮೂಡದ ಒಮ್ಮತ ಇದೀಗ ಲೋಕಸಭೆ ಸೀಟು ಹಂಚಿಕೆಗೂ ಮುಂದುವರಿದಂತಾಗಿದೆ. ಜೆಡಿಎಸ್‌ ಬೆಂಬಲ ಇಲ್ಲದೆ ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಮೈಸೂರು ಕ್ಷೇತ್ರಗಳನ್ನು ಗೆಲ್ಲಲಿ, ಹಾಸನ, ಮಂಡ್ಯದಲ್ಲಿ ಕಾಂಗ್ರೆಸ್‌ ಹಾಗೂ ಬಿಜೆಪಿ ಅಭ್ಯರ್ಥಿಗಳು ಸ್ಪರ್ಧೆ ಮಾಡಿದಾಗಲೂ ಜೆಡಿಎಸ್‌ ಹೆಚ್ಚಿನ ಅಂತರದಲ್ಲೇ ಗೆದ್ದಿದೆ. ಜೆಡಿಎಸ್‌ ಪ್ರತ್ಯೇಕವಾಗಿ ಸ್ಪರ್ಧೆ ಮಾಡಿದರೂ ಹಾಸನ, ಮಂಡ್ಯ, ಮೈಸೂರು, ತುಮಕೂರು, ಬೆಂಗಳೂರು ಉತ್ತರದಲ್ಲಿ ಗೆಲ್ಲುವ ವಾತಾವರಣವಿದೆ ಎಂದು ಜೆಡಿಎಸ್‌ ನಾಯಕರು ಬಹಿರಂಗವಾಗಿಯೇ ಹೇಳುತ್ತಿದ್ದಾರೆ.

ಸರ್ಕಾರ ರಚನೆಯಾದ ದಿನದಿಂದಲೂ ಸಹಮತ ಮೂಡಿಲ್ಲ. ಸಂಪುಟ ವಿಸ್ತರಣೆಯಲ್ಲೂ ಹಗ್ಗಜಗ್ಗಾಟ, ಸಮನ್ವಯ ಸಮಿತಿ ಸಭೆಗೆ ಜೆಡಿಎಸ್‌ ರಾಜ್ಯಾಧ್ಯಕ್ಷರ ಸೇರ್ಪಡೆಗೆ ವಿರೋಧ, ನಂತರ ನಿಗಮ-ಮಂಡಳಿಗಳ ನೇಮಕ ವಿಚಾರದಲ್ಲೂ ತಿಕ್ಕಾಟ ನಡೆದು ಆಪರೇಷನ್‌ ಕಮಲ ಕಾರ್ಯಾಚರಣೆಗೆ ಕಾಂಗ್ರೆಸ್‌ ಶಾಸಕರು ಬಲಿಯಾಗಿ ಸರ್ಕಾರಕ್ಕೆ ಕಂಟಕ ತರುವ ಮಟ್ಟಕ್ಕೂ ಹೋಗಿತ್ತು. ಇದೀಗ ಕಾಂಗ್ರೆಸ್‌ನ ಕೆಲವು ನಾಯಕರೇ ಜೆಡಿಎಸ್‌ ಬೇಡಿಕೆ ಇಟ್ಟಿದ್ದ ಸೀಟು ಸಿಗದಂತೆ ಮಾಡಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.

ಉತ್ತರ ಕನ್ನಡ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಡಲು ಸಚಿವ ಆರ್‌.ವಿ.ದೇಶಪಾಂಡೆ ಹಾಗೂ ನನ್ನ ವಿರೋಧವಿದೆ. ಉತ್ತರ ಕನ್ನಡದಲ್ಲಿ ಜೆಡಿಎಸ್‌ ಗೆ ನೆಲೆ ಇಲ್ಲ. ಅನಂತಕುಮಾರ್‌ ಹೆಗಡೆಯನ್ನು ಸೋಲಿಸಲು ಜೆಡಿಎಸ್‌ ಬಳಿ ಸೂಕ್ತ ಅಭ್ಯರ್ಥಿಯಿಲ್ಲ.
● ಮಾರ್ಗರೇಟ್‌ ಆಳ್ವಾ, ಕೇಂದ್ರದ ಮಾಜಿ ಸಚಿವೆ

ಸೀಟು ಹಂಚಿಕೆಯಾದರೂ ತಳಮಟ್ಟದಲ್ಲಿ ಒಮ್ಮತ ಕಷ್ಟ. ಎರಡೂ ಪಕ್ಷಗಳಲ್ಲಿ ಪರಸ್ಪರ ಅಸಮಾಧಾನ ಪ್ರಾರಂಭವಾಗಿ ಎರಡೂ ಪಕ್ಷಗಳ ಕಾರ್ಯಕರ್ತರು ಪಕ್ಷದ ಆದೇಶ ಧಿಕ್ಕರಿಸಿ ಮೈತ್ರಿಕೂಟ ಅಭ್ಯರ್ಥಿ ಬಿಟ್ಟುಬೇರೆ ಅಭ್ಯರ್ಥಿ ಪರ ಕೆಲಸ ಮಾಡುವ ಸ್ಥಿತಿ ನಿರ್ಮಾಣವಾಗಲಿದೆ. ಒಂದೊಮ್ಮೆ ಕಾಂಗ್ರೆಸ್‌ ಕಾರ್ಯಕರ್ತರು, ಮುಖಂಡರು ಜೆಡಿಎಸ್‌ಗೆ ಬಿಟ್ಟುಕೊಟ್ಟಿರುವ ಕ್ಷೇತ್ರಗಳಲ್ಲಿ ಮನಪೂರ್ವಕವಾಗಿ ಕೆಲಸ ಮಾಡದೆ ಫ‌ಲಿತಾಂಶದಲ್ಲಿ ಏರು ಪೇರಾದರೆ ಚುನಾವಣೆ ನಂತರ ಮೈತ್ರಿ ಮುರಿದು ಬೀಳಲೂ ಬಹುದು. ಅಂತಿಮವಾಗಿ ಸರ್ಕಾರದ ಮೇಲೂ ಪರಿಣಾಮ ಬೀರಬಹುದೆಂದು ವಿಶ್ಲೇಷಿಸಲಾಗುತ್ತಿದೆ.

ಟಾಪ್ ನ್ಯೂಸ್

K L RAhul

KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಪಿಕ್ಸ್

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಫಿಕ್ಸ್

1-wewrewre

The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

K L RAhul

KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಪಿಕ್ಸ್

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಫಿಕ್ಸ್

1-wewrewre

The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ

Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ

Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.