ವಿದ್ಯಾರ್ಥಿ ಬದುಕಿನ ತಪಸ್ಸನ್ನು ಗೆಲ್ಲಿ: ಪಾಟೀಲ


Team Udayavani, Mar 14, 2019, 10:13 AM IST

15-march-15.jpg

ಹಾರೂಗೇರಿ: ವಿದ್ಯಾರ್ಥಿ ಬದುಕು ಒಂದು ತಪಸ್ಸು. ಏಕಾಗ್ರತೆಯಿಂದ ಅಧ್ಯಯನ ಮಾಡಿ ಆ ತಪಸ್ಸನ್ನು ಗೆಲ್ಲುವುದೇ ವಿದ್ಯಾರ್ಥಿಯ ಸಾಧನೆಯಾಗಬೇಕೆಂದು ಪ್ರಗತಿಪರ ಗ್ರಾಮೀಣಾಭಿವೃದ್ಧಿ ಸಂಸ್ಥೆ ಅಧ್ಯಕ್ಷ ಈರನಗೌಡ ಪಾಟೀಲ ಹೇಳಿದರು.

ಸ್ಥಳೀಯ ಶ್ರೀ ಸಿದ್ಧೇಶ್ವರ ಗ್ರಾಮೀಣಾಭಿವೃದ್ಧಿ ಮತ್ತು ಶಿಕ್ಷಣ ಸಂಸ್ಥೆಯ ದಿ ಎಕ್ಸಲೆಂಟ್‌ ಶಾಲೆಯಲ್ಲಿ ಮಂಗಳವಾರ ಸಂಜೆ ನಡೆದ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ ಮತ್ತು ಸಹಾಯಧನ ವಿತರಣಾ ಸಮಾರಂಭದಲ್ಲಿ ಮುಖ್ಯಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಅವರು, ಇಂದಿನ ಸ್ಪರ್ಧಾತ್ಮಕ ಯುಗಕ್ಕೆ ಸ್ಪರ್ಧಿಸಲು ವಿದ್ಯಾರ್ಥಿಗಳು ಸನ್ನದ್ಧರಾಗಿರಬೇಕು ಎಂದರು.

ಸಾನ್ನಿಧ್ಯ ವಹಿಸಿದ್ದ ಶ್ರೀ ಪ್ರದೀಪಘಂಟಿ ಮಹಾರಾಜರು ಆಶೀರ್ವಚನ ನೀಡಿ, ವಿದ್ಯಾರ್ಥಿಗಳಲ್ಲಿ ಗೆಲ್ಲುವ ಹಂಬಲವಿರಬೇಕು. ಕಠಿಣ ಪರಿಶ್ರಮ, ಸತತ ಅಧ್ಯಯನ ಮತ್ತು ಚಿತ್ತಶುದ್ಧಿಯಿಂದ ಅಸಾಧ್ಯವಾದುದನ್ನು ಸಾಧಿಸಲು ಸಾಧ್ಯ ಎಂದರು. ಅಬಕಾರಿ ಎಸ್‌ಐ ಪರೀಕ್ಷೆಯಲ್ಲಿ ರಾಜ್ಯಕ್ಕೆ 4ನೇ ರ್‍ಯಾಂಕ್‌ ಪಡೆದ ದತ್ತಗುರು ಅಥಣಿ ಮತ್ತು ಖೇಲೋ ಇಂಡಿಯಾ ಯುಥ್‌ ಗೇಮ್‌ನಲ್ಲಿ ಚಿನ್ನದ ಪದಕ ಪಡೆದ ದಾನೇಶ್ವರಿ ಠಕ್ಕಣ್ಣವರ ಅವರನ್ನು ಸಂಸ್ಥೆ ವತಿಯಿಂದ ಸತ್ಕರಿಸಿ, ಗೌರವಿಸಲಾಯಿತು. ಈ ವೇಳೆ ಎಕ್ಸಲೆಂಟ್‌ ಟ್ಯಾಲೆಂಟ್‌ ಪರೀಕ್ಷೆಯಲ್ಲಿ ಅತಿಹೆಚ್ಚು ಅಂಕ ಪಡೆದ 40 ವಿದ್ಯಾರ್ಥಿಗಳಿಗೆ ಸಹಾಯಧನ ಮತ್ತು ಪ್ರಶಸ್ತಿ ನೀಡಿ ಸತ್ಕರಿಸಲಾಯಿತು.

ಸಂಸ್ಥೆ ಅಧ್ಯಕ್ಷ ಬಿ.ಜಿ. ಕಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಗೋಪಾಲ ಪೂಜೇರಿ ಸಮಾರಂಭ ಉದ್ಘಾಟಿಸಿದರು. ಪ್ರಾಚಾರ್ಯ ಮದುಸೂಧನ ಬೀಳಗಿ, ಟಿ.ಎಸ್‌.ವಂಟಗೂಡಿ, ಮುಖ್ಯಾಧ್ಯಾಪಕಿ ಕವಿತಾ ಕಶೆಟ್ಟಿ, ಭುಜಬಲಿ ಹರವಿ, ಉದಯ ಆಲಗೂರ ಸೇರಿದಮತೆ ಇತರರು ಇದ್ದರು. ಸಂಸ್ಥೆ ಕಾರ್ಯದರ್ಶಿ ಎಲ್‌.ಬಿ.ಕಶೆಟ್ಟಿ ಸ್ವಾಗತಿಸಿದರು. ಅಮಿತ್‌ ಸನದಿ ವಂದಿಸಿದರು.

ಟಾಪ್ ನ್ಯೂಸ್

uppunda1

Uppunda: ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಸಂಭ್ರಮದ ಮನ್ಮಹಾರಥೋತ್ಸವ

Govinda-pai-Book

Udupi: ಗೋವಿಂದ ಪೈಗಳ ಸಂಶೋಧನ ಬರಹಗಳು ಸಮಗ್ರತೆಯ ಹೂರಣ: ಡಾ.ವಿವೇಕ್‌ ರೈ

DK SHI NEW

MLAs 50 ಕೋಟಿ ರೂ.; ಸಾಕ್ಷಿ ಕೊಡುವ ಹೊಣೆ ಯತ್ನಾಳ್‌ದು: ಡಿಕೆಶಿ

Patla-yakshadruva

Mangaluru: ಎಲ್ಲ ವರ್ಗದ ಜನರ ಸಹಕಾರದಿಂದ ಸಾಮಾಜಿಕ ಸಾಧನೆ: ಕನ್ಯಾನ ಸದಾಶಿವ ಶೆಟ್ಟಿ

Vijayendra (2)

Congress 40 ಪರ್ಸೆಂಟ್‌ ಕಮಿಷನ್‌ ಆರೋಪ ಸುಳ್ಳೆಂದು ಸಾಬೀತು: ಬಿಜೆಪಿ

police

Belgavi; ವೇಶ್ಯಾವಾಟಿಕೆ ಆರೋಪ: ತಾಯಿ, ಮಗಳನ್ನು ರಸ್ತೆಗೆ ಎಳೆದು ಹಲ್ಲೆ!

snehamayi krishna

Snehamayi Krishna ವಿರುದ್ಧ ಕಾಂಗ್ರೆಸ್‌ನಿಂದ ಪೊಲೀಸರಿಗೆ ಮತ್ತೊಂದು ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police

Belgavi; ವೇಶ್ಯಾವಾಟಿಕೆ ಆರೋಪ: ತಾಯಿ, ಮಗಳನ್ನು ರಸ್ತೆಗೆ ಎಳೆದು ಹಲ್ಲೆ!

Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!

ಬೆಳಗಾವಿ:ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ

ಬೆಳಗಾವಿ: ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

ಎಸ್‌ಡಿಎ ರುದ್ರಣ್ಣ ಕೇಸ್:‌ ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು

Belagavi: ಎಸ್‌ಡಿಎ ರುದ್ರಣ್ಣ ಕೇಸ್:‌ ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

puttige-4

Udupi; ಗೀತಾರ್ಥ ಚಿಂತನೆ 96 : ವ್ಯಾಮೋಹ ಜಾಲ vs ಜಾಗೃತಾತ್ಮ

uppunda1

Uppunda: ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಸಂಭ್ರಮದ ಮನ್ಮಹಾರಥೋತ್ಸವ

Govinda-pai-Book

Udupi: ಗೋವಿಂದ ಪೈಗಳ ಸಂಶೋಧನ ಬರಹಗಳು ಸಮಗ್ರತೆಯ ಹೂರಣ: ಡಾ.ವಿವೇಕ್‌ ರೈ

DK SHI NEW

MLAs 50 ಕೋಟಿ ರೂ.; ಸಾಕ್ಷಿ ಕೊಡುವ ಹೊಣೆ ಯತ್ನಾಳ್‌ದು: ಡಿಕೆಶಿ

Patla-yakshadruva

Mangaluru: ಎಲ್ಲ ವರ್ಗದ ಜನರ ಸಹಕಾರದಿಂದ ಸಾಮಾಜಿಕ ಸಾಧನೆ: ಕನ್ಯಾನ ಸದಾಶಿವ ಶೆಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.